ಇದುವರೆಗೆ ಕನ್ನಡ ಭಾಷೆಯಲ್ಲಿ ಬರುವ ಲೋಪ, ಆಗಮ, ಆದೇಶ ಸಂಧಿಗಳ ಬಗೆಗೆ ತಿಳಿದಿರಿ. ಸ್ವರದ ಮುಂದೆ ಸ್ವರ ಬಂದರೆ ಲೋಪ ಅಥವಾ ಆಗಮ ಸಂಧಿಗಳಾಗುತ್ತವೆ. ಸ್ವರದ ಮುಂದೆ ವ್ಯಂಜನ ಅಥವಾ ವ್ಯಂಜನದ ಮುಂದೆ ವ್ಯಂಜನ ಬಂದರೆ ಆಗುವ ಆದೇಶ ಸಂಧಿಗಳ ಸ್ಥೂಲಪರಿಚಯ ಮಾಡಿಕೊಂಡಿರಿ. ಅನಂತರ ಸ್ವರದ ಮುಂದೆ ಸ್ವರ ಬಂದರೂ ಸಂಧಿಯಾಗದೆ ಇರುವ ಪ್ರಕೃತಿಭಾವವನ್ನೂ ಅರಿತಿರಿ. ಇದನ್ನು ಕೆಳಗೆ ಸೂಚಿಸಿರುವ ರೇಖಾ ಚಿತ್ರಗಳ ಮೂಲಕ ಸ್ಥೂಲವಾಗಿ ನೆನಪಿನಲ್ಲಿ ಇಟ್ಟುಕೊಳ್ಳಿರಿ.

() ಕನ್ನಡ ಸಂಧಿಗಳು
ಲೋಪ ಸ್ವರ+ಸ್ವರ-ಪೂರ್ವದ ಸ್ವರಕ್ಕೆ ಅರ್ಥಹಾನಿಯಾಗದಾಗ ಲೋಪ ಆಗಮ

ಸ್ವರ+ಸ್ವರ-ಮಧ್ಯದಲ್ಲಿ

ಯಕಾರ ಅಥವಾ

ವಕಾರಾಗಮ         

ಆದೇಶ  ಸ್ವರ+ವ್ಯಂಜನ, ವ್ಯಂಜನ+ವ್ಯಂಜ

೧. ಉತ್ತರಪದದ ಆದಿಯ ಕ ತ ಪ ಗಳು ಗ ದ ಬ ಗಳಾಗುತ್ತವೆ.

೨.  ಪ ಬ ಮ ಗಳಿಗೆ ವಕಾರ ಆದೇಶವಾಗುತ್ತದೆ.

೩.  ಸ ಕಾರಕ್ಕೆ ಚ ಜ ಛ ಗಳು ಆದೇಶವಾಗುತ್ತವೆ.

() ಸ್ವರದ ಮುಂದೆ ಸ್ವರ ಬಂದರೂ ಸಂಧಿಯಾಗದಿರುವುದು ಪ್ರಕೃತಿಭಾವ