ವ|| ಅದಲ್ಲದೆಯುಂ-

ಉ|| ಆ ನವ ಮಾಳಿಕಾ ಕುಸುಮ ಕೋಮಳೆ ರಾಗ ರಸ ಪ್ರಪೂರ್ಣಂ ಚಂ
ದ್ರಾನನ ಲಕ್ಷ್ಮಿಯಿಂ ನಭದೊಳಿರ್ದಮೃತಾಂಶುವಿನುದ್ಘಕಾಂತಿ ಸಂ|
ತಾನಮನಾವಗಂ ತನಗೆ ಮಾಡಿದಳೆಂದೊಡೆ ತದ್ಗ ಹಾಂತರೋ
ದ್ಯಾನಸರಸ್ಸರೋಜರುಚಿಯೆಂಬುದಿದಾಕೆಯ ಕೆಯ್ಯದೆನ್ನಿರೇ|| ೭೧

ವ|| ಎಂದು ತನ್ನ ಮನಮುಮನೆರ್ದೆಯುಮನು ಸೆವಿಡಿದಿರ್ದಪೂರ್ವ ರೂಪೆಯ ರೂಪಮಂ ಮನದೊಳೆ ಬಗೆದು ಭಾವಿಸಿ ಮತ್ತಮಿಂತೆಂದಂ-

ಚಂ|| ಕುಸುರಿಯ ರೂಪನೆಯ್ದೆ ಪೊಗೞಲ್ಕಱಯೆಂ ನಡು ಪುರ್ವು ಬಾಸೆ ಕ
ಣ್ಗೊಸಗೆಯನುಂಟುಮಾೞ್ಪ ಜಘನಂ ಬೆಳರ್ವಾಯ್ ಮೊಲೆಗಳ್ ಕದಂಪುಗು|
ರ್ವಸಿಱನೆ ನೋಡೆ ಮೊಕ್ಕಳಮದಾರ್ ನಡೆ ನೋೞ್ಪೊಡಮಂತುಮಿಂತುಂ ಮೂ
ಱಸಿಯವು ಮೂಱು ದೊಡ್ಡಿದುವು ಮೂಡೆ ತೆಳ್ಳಿದುವಂಬುಜಾಕ್ಷಿಯಾ|| ೭೨

ಕಂ|| ಮೃಗಶಿಶುನೇತ್ರೆಯ ನಡುವೆರ್ದೆ
ಯುಗುರ್ಗಳ್ ಕರಮಸಿದು ಕನಕ ಕಾಂಚೀ ನಿನದ|
ಪ್ರಗಣಿತಮಗಲ್ದ ನಲ್ಲಳ
ಜಗನಮಿದೆನ್ನೆರ್ದೆಯನೆಂತು ಪೊಕ್ಕಳಿಪುವುದೋ|| ೭೩

ವ|| ಎಂದು ಸೈರಿಸದೆ-

ಮ|| ಮೊಲೆಗಳ್ ಬಟ್ಟಿದುವಾಗಿ ಕರ್ಗಿದ ಕುರುಳ್ ಕೊಂಕಾಗಿ ಕಣ್ಗೆಯ್ದೆ ನೀ
ಳ್ದರ್ಗಣ್ಗಳ್ ಚಪಳಂಗಳಾಗಿ ಜಘನಂ ಕಾಂಚೀ ಕಳಾಪ ಪ್ರಭೋ|
ಜ್ಜ ಲಮುಧ್ವ ತ್ತಮುಮಾಗಿ ತಾಮಲೆಗೆ ಮಧ್ಯಸ್ಥಂಗಳಾಗಿರ್ದುವ
ಕ್ಕಲೆಯಲ್ ತಕ್ಕುದೆ ಕೆನ್ನಮಾ ತ್ರಿವಳಿಗಳ್ಗೆನ್ನಂ ಸರೋಜಾಕ್ಷಿಯಾ|| ೭೪

ಸಂದೇಹವಾಗಿದೆ. ಕನ್ನೆ ದಿಲೆಯ ತೋಟದ ಸೌಂದರ್ಯವೆಂಬುದು ಲಂತಾಗಿಯಾದ ಆ ಸುಭದ್ರೆಯ ಕಡೆಗಣ್ಣುಗಳ ಬಿಳಿಯ ಕಾಂತಿಯಲ್ಲಿ ಸಿಕ್ಕಿ ಹೆಣೆದುಕೊಂಡಿರುವ ಬಿಡಿಸಲಾಗದ ಸಿಕ್ಕಲ್ಲವೇ? ವ|| ಅದೂ ಅಲ್ಲದೆ- ೭೧. ಆ ಹೊಸದಾದ ಪುಷ್ಪಮಾಲಿಕೆಯ ಹೂವಿನಂತೆ ಕೋಮಲವಾಗಿರುವ ಆ ಸುಭದ್ರೆಯು ತನ್ನ ಪ್ರೀತಿರಸದಿಂದ (ಕೆಂಪು ಬಣ್ಣದಿಂದ) ತುಂಬಿದ ಮುಖಚಂದ್ರನ ಕಾಂತಿಯಿಂದ ಆಕಾಶದಲ್ಲಿರುವ ಚಂದ್ರನ ಉತ್ತಮವಾದ ಕಾಂತಿಯ ಸಮೂಹವನ್ನು ತನ್ನದ್ದನ್ನಾಗಿ ಮಾಡಿಕೊಂಡಿದ್ದಾಳೆ ಎನ್ನುವಾಗ ಅವಳಿರುವ ಮನೆಯ ಉದ್ಯಾನದಲ್ಲಿರುವ ಕೊಳಗಳ ತಾವರೆಯ ಕಾಂತಿಯು ಆಕೆಯ ಅನದಲ್ಲಿರುವ ವಸ್ತು ಎಂದು ಹೇಳಲಾಗುವುದಿಲ್ಲವೇ? ವ|| ಎಂದು ತನ್ನ ಮನಸ್ಸನ್ನೂ ಹೃದಯವನ್ನೂ ಪೂರ್ಣವಾಗಿ ಸೆರೆಹಿಡಿದಿದ್ದ ಅಪೂರ್ವ ಸೌಂದರ್ಯದಿಂದ ಕೂಡಿದ ಆಕೆಯ ರೂಪವನ್ನು ತನ್ನ ಮನಸ್ಸಿನಲ್ಲಿ ಯೋಚಿಸಿಕೊಂಡು ಪುನ ಭಾವಿಸಿ ಹೀಗೆಂದನು- ೭೨. ಹೂವಿನ ಸೂಕ್ಷ್ಮಕೇಸರಗಳಂತಿರುವ ಅವಳ ಸೌಂದರ್ಯವನ್ನು ಹೊಗಳಲು ನನಗೆ ಶಕ್ಯವಿಲ್ಲ. ಇಷ್ಟುಮಾತ್ರ ಹೇಳಬಲ್ಲೆ : ಅವಳ ಸೊಂಟ, ಹುಬ್ಬು, ಹೊಟ್ಟೆಯ ಮೇಲಿನ ಕೂದಲಿನ ಸಾಲು, ಕಣ್ಣು, ಹಬ್ಬವನ್ನುಂಟುಮಾಡುವ ಪಿರ್ರೆಗಳು, ಬೆಳ್ಳಗಿರುವ ಬಾಯಿ, ಮೊಲೆಗಳು, ಕೆನ್ನೆ, ಉಗುರು, ಹೊಟ್ಟೆ ಇವುಗಳನ್ನು ಯಾರಾದರೂ ದೃಷ್ಟಿಸಿ ನೋಡಿದರೂ ಕಮಲಾಕ್ಷಿಯಾದ ಆ ಸುಭದ್ರೆಯ (ಮೇಲೆ ನಿರೂಪಿಸಿರುವ) ಅಂಗಗಳಲ್ಲಿ ಮೂರು ಕೃಶವಾದುವು, ಮೂರು ದಪ್ಪವಾದುವು, ಮೂರು ತೆಳುವಾದುವು. ೭೩. ಹುಲ್ಲೆಯ ಮರಿಯ ಕಣ್ಣುಗಳಂತೆ ಕಣ್ಣುಳ್ಳ ಸುಭದ್ರೆಯ ಸೊಂಟ, ಎದೆ, ಉಗುರುಗಳು ವಿಶೇಷ ತೆಳುವಾಗಿರುವುವು. ಚಿನ್ನದ ಡಾಬಿನ ಸದ್ದಿನ ಸಮೂಹವಿಲ್ಲದ ಪ್ರಿಯೆಯ ಜಘನಗಳು ನನ್ನ ಹೃದಯವನ್ನು ಪ್ರವೇಶಿಸಿ ಪ್ರೀತಿಯನ್ನುಂಟುಮಾಡುತ್ತಿವೆಯೋ? ವ|| ಎಂಬುದಾಗಿ ಸೈರಿಸಲಾರದೆ- ೭೪. ಅವಳ ದುಂಡುಮೊಲೆಗಳು ಕಪ್ಪಾದ ಕುರುಳುಗಳು ಕಣ್ಣಿನವರೆಗೆ ಕೊಂಕಾಗಿಯೂ ಉದ್ದವಾಗಿಯೂ ಬೆಳೆದು ಹೂವಿನಂತಿರುವ ಚಂಚಲವಾದ ಕಣ್ಣುಗಳು ಡಾಬಿನ ಕಾಂತಿಯ ಸಮೂಹದಿಂದ ಕೊಬ್ಬಿ ಬೆಳೆದ ಜಘನಗಳು ನನ್ನನ್ನು ಪೀಡಿಸುವುದಂತಿರಲಿ; ಕಮಲದಂತಿರುವ ಆ ಸುಭದ್ರೆಯ ಮಧ್ಯಪ್ರದೇಶದ ತ್ರಿವಳಿಗಳು ನನ್ನ ಮನಸ್ಸನ್ನು ವಿಶೇಷವಾಗಿ ಕಲಕಲು ಯೋಗ್ಯವಾಗಿವೆ. ಎಂಬುದಾಗಿ ಸ್ವಲ್ಪ ಹೊತ್ತು ಜ್ಞಾನಶೂನ್ಯನಾದಂತೆ ಹಲುಬಿ ಹಂಬಲಿಸಿ ಪುನ ಹಾವ, ಭಾವ, ವಿಳಾಸ, ವಿಭ್ರಮ, ಕಟಾಕ್ಷ ದೃಷ್ಟಿಗಳ ಮನಸ್ಸನ್ನು ಒಲಿಸಿಯೂ ಎದೆಯನ್ನು ಕಲಕಿಯೂ ಮನ್ಮಥನೆಂಬ ಆನೆಯಿಂದ

ವ|| ಎಂದು ಕಿಱದುಂ ಬೇಗಮಱಮರುಳಂತು ಪಲುಂಬಿ ಪಂಬಲಿಸಿ ಮತ್ತಮಾಕೆಯ ಹಾವ ಭಾವ ವಿಳಾಸ ವಿಭ್ರಮ ಕಟಾಕ್ಷೇಕ್ಷಂಗಳ್ ಮನಮನೊನಲಿಸೆಯುಮೆರ್ದೆಯಂ ಕನಲಿಸೆಯು ಮನಂಗ ಮತಂಗಜ ಕೋಳಾಹಳಾಕುಳೀಕೃತಾಂತರಂಗನಾಗಿ-

ವ|| ಜಂಗಮಂ ಮಾಡಿದ ಪದ್ಮಜಂ ಪಡೆದನಿಲ್ಲೀ ಕನ್ನೆಯಂ ಮಾಡುವ
ಲ್ಲಿಗೆ ಚಂದ್ರಂ ಮಳಯಾನಿಳಂ ಮಳಯಜಂ ನೀರೇಜಮಿಮ್ಮಾವು ಮ|
ಲ್ಲಿಗೆಯೆಂದಿಂತಿವನೞ್ಕಱಂದಮರ್ದಿನೊಳ್ ತಾನೞಯಿಂ ತೊಯ್ದು ಮೆ
ಲ್ಲಗೆ ಸಂದಂಗಜನೆಂಬಜಂ ಪಡೆದನಂತಾ ಕಾಂತಿಯಿಂ ಕಾಂತೆಯಂ|| ೭೫

ವ|| ಅಂತಲ್ತಪ್ಪಂದಾ ಕಾಂತೆಯಂ ವಿಧಾತ್ರಂ ಮಾಡುವಂದು ಕೊಸಗಿನ ಕೇಸರಂಗಳನಮೃತರಸದೊಳಂ ಶೃಂಗಾರರಸದೊಳಂ ಭಾವಿಸಿ ರಸಸಿದ್ಧಮಪ್ಪ ಪೊನ್ನ ಲತೆಯ ಮೆಯ್ಯುಮಂ ನೀಲದ ತಲೆನವಿರುಮಂ ಪವಳದ ಬಾಯ್ದೆಯುಮಂ ಮುತ್ತಿನ ಪಲ್ಲುಮಂ ರಾಜಾವರ್ತದ ಸೆಳ್ಳುಗುರುಮಂ ಧೂಪದ ಸುಯ್ಯುಮಂ ರತಿಯ ಸೌಭಾಗ್ಯಮುಮಂ ಸೀತೆಯ ಸೈರಣೆಯುಮನದ್ರಿಜಾತೆಯ ಶೃಂಗಾರಮುಮಂ ಮನೋಮಥನ ಮದನ ಮೋಹನ ಸಂತಾಪನ ವಶೀಕರಣಂಗಳೆಂಬ ಕಾಮದೇವನಯ್ದಲರಂಬಿನ ಶಕ್ತಿಗಳುಮನೊಂದುಮಾಡಿ ಲೋಕಮೆಲ್ಲಂ ಮರುಳ್ಮಾಡಲೆಂದು ಪೆಣ್ಮಾಡಿದನಕ್ಕುಮೆಂದು ಮತ್ತಮಾಕೆಯ ನೋಡಿದ ನೋಟಮಂ ಭಾವಿಸಿ

ಚಂ|| ನೆಗೊಳೆ ಗಾಡಿ ನೋೞ್ಪ ಬಗೆ ಬರ್ಪುದುಮಾನೆ ದಲಂದು ದಂತಿಯಂ
ನಿಱಸಿ ಮರಲ್ದು ನೋಡುವುದುಮೆನ್ನುಮನಾ ಸತಿ ಸೋಲದತ್ತ ಮ|
ತ್ತೆಱಗಿ ಬೞಲ್ದು ಜೋಲ್ದಳಿಪಿ ನೋಡಿದಳಿಂತೆಲೆ ಸತ್ತ ಪೊತ್ತ ಕ
ಣ್ಣಱಯದ ಬೆಳ್ಳನಲ್ಲೆನಱದೆಂ ಧವಳಾಕ್ಷಿಯ ನೋಟದಂದಮಂ|| ೭೬

ಹರಣೀಪ್ಲುತ || ದಳಿತ ಕಮಲಚ್ಛಾಯಾಟೋಪಂ ಮನೋಜ ರಸ ಪ್ರಭಾ
ವಳಯ ನಿಳಯಂ ಪ್ರೋದ್ಯದ್ಭ್ರೂವಿಭ್ರಮಂ ಮುಕುಳೀಕೃತಂ||
ಲಳಿತ ಮಧುರಂ ಲಜ್ಜಾಳೋಳಂ ಸ್ಮರಾಕುಳಿತಂ ಮನಂ
ದಳಿತಮಪಸನ್ಮುಗ್ಧಂ ಸ್ನಿಗ್ಧಂ ವಿಳೋಕನಮೋಪಳಾ|| ೭೭

ಚಂ|| ಉಡಮೊಗಮೆಂಬ ತಾವರೆಯ ನೀಳ್ದೆಸೞೊಳ್ ಮಱದುಂಬಿ ಪಾಯ್ದೊಡಂ
ಬಡನೊಳಕೊಂಡು ಕಣ್ಮಲರ ಬೆಳ್ಪುಗಳಾಲಿಯ ಕೞನೊಳ್ ಪೊದ|
ಳ್ದೊಡನೊಡನೋಡುವಟ್ಟೆನಗೆ ಸಂತಸಮಂ ಮಱುಕಕ್ಕೆ ಮಾಣ್ದೊಡೀ
ನಡೆಗಿಡೆ ಸತ್ಯಮಂ ತಮಮುಮಂ ಕಡೆಗಣ್ಣೊಳೆ ಕಂಡೆನೋಪಳಾ|| ೭೮

 

ಕೋಳಾಹಳ ಮಾಡಲ್ಪಟ್ಟ ಮನಸ್ಸುಳ್ಳವನಾಗಿ ೭೫. ಲೋಕವನ್ನೇ ಸೃಷ್ಟಿಸಿದ ಬ್ರಹ್ಮನು ಈ ಕನ್ಯೆಯನ್ನು ಸೃಷ್ಟಿಸಿರಲಾರ; ಇಷ್ಟು ಕಾಂತಿಯುಕ್ತಳಾದ ಈ ಕನ್ಯೆಯನ್ನು ಮನ್ಮಥನೆಂಬ ಬ್ರಹ್ಮನು ಸೃಷ್ಟಿಸುವಾಗ ಚಂದ್ರ, ಮಲಯಮಾರುತ, ಶ್ರೀಗಂಧ, ತಾವರೆ, ಸಿಹಿಮಾವು, ಮಲ್ಲಿಗೆ ಇವುಗಳನ್ನು ತನಗೆ ತೃಪ್ತಿಯಾಗುವವರೆಗೆ ಒಟ್ಟುಗೂಡಿಸಿ ಪ್ರೀತಿಯಿಂದ ಅಮೃತದಲ್ಲಿ ನೆನೆಯಿಸಿ ಅವಳನ್ನು ಸೃಷ್ಟಿಸಿರಬೇಕು. ವ|| ಹಾಗಿಲ್ಲದ ಪಕ್ಷದಲ್ಲಿ ಈ ಕಾಂತೆಯನ್ನು ಬ್ರಹ್ಮನು ಮಾಡುವರೆ ಬೆಟ್ಟದಾವರೆಯ ಎಸಳುಗಳನ್ನು ಅಮೃತರಸದಲ್ಲಿಯೂ ಶೃಂಗಾರರಸದಲ್ಲಿಯೂ ನೆನೆಯಿಸಿ ರಸವಿದ್ಯೆಯಿಂದ ಸಿದ್ಧವಾಗಿರುವ ಚಿನ್ನದ ಬಳ್ಳಿಯಂತಿರುವ ಮೈಯನ್ನೂ ಕಪ್ಪಗಿರುವ ತಲೆಗೂದಲನ್ನೂ ಹಳವದಂತಿರುವ ತುಟಿಯನ್ನು ಮುತ್ತಿನಂತಿರುವ ಹಲ್ಲನ್ನೂ ಎಳೆನೀಲದಂತಿರುವ ತೆಳುವಾದ ಉಗುರುಗಳನ್ನೂ ಧೂಪದ ವಾಸನೆಯಿಂದ ಕೂಡಿದ ಉಸಿರನ್ನೂ ಸೀತಾದೇವಿಯ ಸಹನ ಸ್ವಭಾವವನ್ನೂ ಗೌರೀದೇವಿಯ ಶೃಂಗಾರವನ್ನೂ ಮನ್ಮಥನ ಮನೋಮಥನ (ಮನಸ್ಸನ್ನು ಕಲಕುವಿಕೆ) ಮದನ (ಕಾಮೋದ್ರೇಕವನ್ನುಂಟು ಮಾಡುವಿಕೆ) ಮೋಹನ (ಪರವಶವನ್ನಾಗಿಸುವಿಕೆ) ಸಂತಾಪನ (ದುಖನ್ನುಂಟುಮಾಡುವಿಕೆ) ವಶೀಕರಣ (ತನ್ನದನ್ನಾಗಿ ಮಾಡಿಕೊಳ್ಳುವಿಕೆ) ಎಂಬ ಅಯ್ದು ಪುಷ್ಪಬಾಣಗಳ ಶಕ್ತಿಗಳನ್ನು ಒಂದುಗೂಡಿಸಿ ಲೋಕವನ್ನೆಲ್ಲ ಹುಚ್ಚು ಮಾಡುವುದಕ್ಕೋಸ್ಕರ ಸ್ತ್ರೀಮೂರ್ತಿಯನ್ನಾಗಿ ಮಾಡಿರಬೇಕು ಎಂದು ಭಾವಿಸಿ ಪುನ ಆಕೆಯ ನೋಟದ ನೋಟವನ್ನು ಮನಸ್ಸಿನಲ್ಲಿ ಭಾವಿಸಿಕೊಂಡು ೭೬. ಅವಳ ಸೌಂದರ್ಯವು ನನ್ನನ್ನು ಪೂರ್ಣವಾಗಿ ಆಕರ್ಷಿಸಿತು. ನಾನೇ ಆ ಆನೆಯನ್ನು ನಿಲ್ಲಿಸಿ (?) ಪುನ ಅವಳನ್ನು ನೋಡಿದೆನು. ಆ ಸ್ತ್ರೀಯು ನನ್ನನ್ನೂ ಪ್ರೇಮದ ಕಡೆಗೆ ಬಾಗಿಸಿ ತಾನೂ ನನಗೆ ಸೋತು ಪ್ರೀತಿಯಿಂದ ನೋಡಿದಳು. ಬೆಳ್ಳಗಿರುವ ಕಣ್ಣುಳ್ಳ ಆ ಸುಭದ್ರಯ ದೃಷ್ಟಿಯ ಮರ್ಮವನ್ನು ತಿಳಿಯದ ಜ್ಞಾನ ಶೂನ್ಯನಾದ ಬೆಪ್ಪನು ನಾನಲ್ಲ, ೭೭. ಪ್ರಿಯಳಾದ ಸುಭದ್ರೆಯ ನೋಟವು ಅರಳಿದ ಕಮಲದ ಬಣ್ಣವುಳ್ಳದ್ದು ; ಪ್ರೇಮರಸದ ಕಾಂತಿಸಮೂಹಕ್ಕೆ ಆವಾಸಸ್ಥಾನವಾದುದು. ಎತ್ತಿದ ಹುಬ್ಬಿನ ವೈಭವವುಳ್ಳದ್ದು ; ಮೊಗ್ಗಾಗಿ ಮಾಡಲ್ಪಟ್ಟುದು; ಸುಂದರವೂ ಮಧುರವೂ ಆದುದು; ಲಜ್ಜೆಯಲ್ಲಿ ಆಸಕ್ತವಾದುದು; ಮನ್ಮಥನಿಂದ ಬಾಸಲ್ಪಟ್ಟುದು; ಮನಸ್ಸನ್ನು ಸೀಳಿರುವುದು; ಮುಗ್ಧತೆಯಿಲ್ಲದುದು (ಸರಳವಾದುದು) ನಯವಾದುದು. ೭೮. ಬಾಗೆಯ ನಕ್ಷತ್ರದ ಮುಖ ಎಂಬಂತಿರುವ ಅವಳ

ಚಂ|| ಒದವಿದ ಬೇಟವಪ್ಪೊಡೆನಗತ್ತಳಗಂ ಬಗೆವೇೞ್ವೊಡೆನ್ನ ಮೇ
ಳದ ಕೆಳೆಯರ್ಕಳಿಲ್ಲವಳುಮಪ್ಪೊಡೆ ಜವ್ವನಮತ್ತೆ ನಾಣ ಕಾ|
ಪದು ಪಿರಿದೋತು ಮಾತಡಕಲೊಂದಿದ ದೂದವರಿಲ್ಲ ನೆಟ್ಟನ
ಪ್ಪುದಱನದಿಂತರಣ್ಯರುದಿತಂ ವಲವೆನ್ನೊಲವಿಂದುವಕ್ತ್ರೆಯಾ|| ೭೯

ವ|| ಎಂದಿಂತು ನಲ್ಲಳಂ ನೆನೆದು ಕಣ್ಗಾಪನೆ ಕಾದು ಚಿಂತಾಸಮುದ್ರಾಂತರ ಪರಿವೃತನಾಗಿ ಸೈರಿಸಲಾಱದೆ ಪೊೞಲಂ ತೊೞಲ್ದು ನೋೞೞ ಬಗೆದಂದು ರಾಜಮಂದಿರದಿಂ ಪೊಱಮಟ್ಟು ಬರೆ ತನ್ನಂ ಕಾಣಲೊಡಮಱದು ನುಡಿಯಿಸಿ ಮೆಚ್ಚಿ ಮೇಳದ ನಾಗರಿಕ ವಿಟ ವಿದೂಷಕ ಪೀಠಮರ್ದಕರ್ಕಳ್ವೆರಸು ಕಾಮದೇವನೋಲಗಕ್ಕೆ ಬರ್ಪಂತೆ ಸೂಳೆಗೇರಿಯೊಳಗನೆ ಬರ್ಪುದುಮಲ್ಲಿ-

ಮ|| ಮೃಗಭೂಋದ್ಧ ವಿಳಾಸಿನೀ ಕಬರಿಕಾ ಬಂಧಂಗಳಂ ಪೊತ್ತು ಮ
ಲ್ಲಿಗೆಯೊಳ್ ಭಾವಿಸಿ ಧೂಪದೊಳ್ ಪೊರೆದು ತತ್ಕಾಂತಾ ರತಿ ಸ್ವೇದ ಬಿಂ|
ದುಗಳೊಳ್ ನಾಂದು ಕುರುಳ್ಗಳೊಳ್ ಸುೞದು ಮುಂದೊಂದಿರ್ದ ಸೌಭಾಗ್ಯ ಘಂ
ಟೆಗಳೊಂದಿಂಚರದೊಳ್ ಪಳಂಚಿ ಸುೞದತ್ತಂದೊಂದು ಮಂದಾನಿಳಂ|| ೮೦

ವ|| ಆಗಳಾಱುಂ ಋತುಗಳ ಪೂಗಳನೊಂದುಮಾಡಿ ಪೂವಿನಂಬುಗಳಂ ಪಣ್ಣಲೆಂದು ಕಾಮದೇವಂ ಮಾಡಿದೋಜನ ಸಾಲೆಯಿರ್ಪಂತಿರ್ದ ಪೂವಿನ ಸಂತೆಯೊಳ್ ವಸಂತಕಾಂತೆಯರಂತೆ-

ವ|| ಎತ್ತಿದ ತೋಳ ಮೊತ್ತಮೊದಲಂಗಜ ಲಂಪಟ ವಿದ್ದೆಗೆತ್ತಿದಂ
ತೆತ್ತಮಪೂರ್ವಮಾಗೆ ಪೊಸವಾಸಿಗಮಂಗಜ ಚಕ್ರವರ್ತಿಗೆಂ|
ದೆತ್ತಿದ ವಿನಕೇತನಮನೋತ್ತರಿಸುತ್ತಿರೆ ಚಲ್ಲವಾಡಿ ಪೂ
ವೆತ್ತುವ ಮಾಲೆಗಾರ್ತಿಯರನೆಂದರಿಕೇಸರಿ ನಿಂದು ನೋಡಿದಂ|| ೮೧

ಮುಖವೆಂಬ ತಾವರೆಯ ದೀರ್ಘವಾದ ಎಸಳುಗಳಲ್ಲಿ ಮರಿದುಂಬಿಯು ಹೋಗಿ ಸೇರಿ ಸಮನ್ವಯಗೊಂಡಿರುವಂತೆ ಹೂವಿನಂತಿರುವ ಅವಳ ಕಣ್ಣಿನ ಬಿಳಿಯ ಬಣ್ಣವು ಗುಡ್ಡೆಯ ಕಪ್ಪು ಬಣ್ಣದಲ್ಲಿ ಹೊಂದಿಕೊಂಡು ಅವಳನ್ನೇ ನೋಡುತ್ತಿರುವ ನನಗೆ ಸಂತೋಷವನ್ನೂ ದುಖವನ್ನೂ ಸ್ಥಿರೀಕರಿಸಿರುವುದರಿಂದ ನಾನು ಅವಳ ಕಡೆಗಣ್ಣಿನಲ್ಲಿ ಸತ್ವತಮೋಗುಣಗಳನ್ನು ಏಕತ್ರ ನೋಡುತ್ತಿದ್ದೇನೆ.  ೭೯. ನನಗೆ ಈಗ ಉಂಟಾಗಿರುವ ಪ್ರೇಮವಾದರೋ ಸಹಿಸಲಶಕ್ಯವಾದುದು. ಮನಸ್ಸನ್ನವಳಿಗೆ ತಿಳಿಸೋಣವೆಂದರೆ ಆಪ್ತ ಸ್ನೇಹಿತರಿಲ್ಲ ; ಸುಭದ್ರೆಯಾದರೋ ಯವ್ವನದಿಂದ ಮದಿಸಿರುವವಳು; ಅವಳಿಗೆ ಲಜ್ಜೆಯ ತಡೆ ವಿಶೇಷವಾಗಿದೆ. ಪ್ರೀತಿಸಿ ಸಂವಾದ ಸರಣಿಯನ್ನುಂಟುಮಾಡೋಣವೆಂದರೆ ಮಧ್ಯವರ್ತಿಗಳಾದ ಸಖಿಯರಿಲ್ಲ. ಆದುದರಿಂದ ಸುಭದ್ರೆಗೆ ಸಂಬಂಸಿದ ನನ್ನ ಪ್ರೇಮವು ನಿಜವಾಗಿಯೂ ಕಾಡಿನಲ್ಲಿ ಅತ್ತಂತೆಯೇ ಆಗಿದೆ. ವ|| ಹೀಗೆ ಅರ್ಜುನನು ಪ್ರಿಯಳನ್ನು ಜ್ಞಾಪಿಸಿಕೊಂಡು ಅವಳು ತನ್ನನ್ನು ನೋಡುವುದನ್ನು ನಿರೀಕ್ಷಿಸುತ್ತಾ ಚಿಂತಾಸಮುದ್ರದ ಮಧ್ಯದಿಂದ ಸುತ್ತುವರಿಯಲ್ಪಟ್ಟವನಾಗಿ ಸಹಿಸಲಾರದೆ (ಮನಶಾಂತಿಗಾಗಿ) ನಗರವನ್ನಾದರೂ ಸುತ್ತ ನೋಡಿ ಬರೋಣವೆಂದು ಮನಸ್ಸು ಮಾಡಿದನು. ಅರಮನೆಯಿಂದ ಹೊರಟು ಬರುತ್ತಿದ್ದಂತೆಯೇ ತನ್ನನ್ನು ಕಂಡು ತಕ್ಷಣವೇ ಗುರುತಿಸಿ ಮಾತನಾಡಿ ಮೆಚ್ಚಿದ ಜೊತೆಗಾರರಾದ ನಾಗರಿಕ (ಜಾಣನಾದ ಪಟ್ಟಣದವನು) ವಿಟ (ಸ್ತ್ರೀಲೋಲರಾದ ರಾಜಕುಮಾರರ ಸ್ನೇಹಿತ) ವಿದೂಷಕ (ಹಾಸ್ಯಗಾರ) ಪೀಠಮರ್ದಕ (ಸ್ತ್ರೀ ಸಂಪಾದನೆಯಲ್ಲಿ ರಾಜಕುಮಾರರಿಗೆ ಸಹಾಯ ಮಾಡುವವನು) ರೊಡಗೂಡಿ ಮನ್ಮಥನ ಸಭಾಸ್ಥಾನಕ್ಕೆ ಬರುವಂತೆ ಸೂಳೆಗೇರಿಯೊಳಭಾಗದಲ್ಲಿ ಬಂದನು. ೮೦. ಅಲ್ಲಿಯ ಸುಂದರ ಸ್ತ್ರೀಯರ ತುರುಬಿನಲ್ಲಿ ವಿಶೇಷವಾಗಿ ಲೇಪಿಸಿಕೊಂಡಿದ್ದ ಕಸ್ತೂರಿಯ ಕಂಪನ್ನು ಧರಿಸಿ ಮಲ್ಲಿಗೆಯ ಹೂವಿನ ಸುಗಂಧದಲ್ಲಿ ಸೇರಿಕೊಂಡು ಧೂಪಗಂಧದಲ್ಲಿ ವ್ಯಾಪಿಸಿ ಆ ಸ್ತ್ರೀಯರ ರತಿಕ್ರೀಡೆಯಿಂದಾದ ಬೆವರ ಹನಿಯಲ್ಲಿ ತೊಯ್ದು ಮುಂಗುರುಳುಗಳಲ್ಲಿ ಸುತ್ತಾಡಿ ವೇಶ್ಯಾಗೃಹದ ಮುಂದೆ ಕಟ್ಟಿದ ಇಂಪಾದ ಘಂಟಾನಾದವನ್ನು ತಗುಲಿ ಒಂದು ಮಂದಮಾರುತವು ಸುಳಿದಾಡಿತು. ವ|| ಆಗ ಆರು ಋತುಗಳ ಹೂವುಗಳನ್ನೂ ಒಟ್ಟುಗೂಡಿಸಿ ತನ್ನ ಪುಷ್ಪಬಾಣಗಳನ್ನು ಸಿದ್ಧಪಡಿಸಬೇಕೆಂದು ಕಾಮದೇವನು ಮಾಡಿದ ಅಕ್ಕಸಾಲೆಯ ಮನೆಯ ಹಾಗಿದ್ದ ಹೂವಿನ ಸಂತೆಯು ಕಂಡಿತು. ಹೂವಿನ ಸಮೂಹದ ಮಧ್ಯೆ ಇರುವ ವಸಂತ ಋತುವಿನ ಅದೇವತೆಯಂತೆ ಮಾಲೆಗಾತಿಯರು ೮೧. ಎತ್ತಿದ ಬಾಹುಮೂಲವು ಮನ್ಮಥನು ಗಾಳಿಪಟವಾಡಿಸುವಂತೆ ಆಡಿಸಲು ಎತ್ತಿದ ಅಪೂರ್ವ ಸೌಂದರ್ಯದಿಂದ ಕೂಡಿರಲು ಹೊಸದಾಗಿ ಕಟ್ಟಿದ ಹಾರವು ಮನ್ಮಥ ಚಕ್ರವರ್ತಿಗೆಂದೆತ್ತಿದ ಮೀನಧ್ವಜವನ್ನು ತಿರಸ್ಕರಿಸುತ್ತಿರಲು ಸರಸಸಲ್ಲಾಪಗಳಿಂದ ಹೂವನ್ನು ಎತ್ತಿ ತೋರಿಸುತ್ತಿರುವ ಅವರನ್ನು

(ಈ ಪದ್ಯದ ಅನ್ವಯವೂ ಅರ್ಥವೂ ಕ್ಲಿಷ್ಟವಾಗಿದೆ)

ವ|| ನೋಡಿ ನಾಡಾಡಿಯಲ್ಲದಾಕೆಗಳ ಜೋಡೆಗೆಯ್ತಂಗಳಂ ಕಂಡಿದು ಮನೆಯಾಣ್ಮನಂ ಮಾರುವಂದಮಲ್ಲದೆ ಪೂ ಮಾರುವಂದಮಲ್ತೆಂದು ಮುಗುಳ್ನಗೆ ನಗುತುಂ ಬರ್ಪನೊಂದೆಡೆಯೊಳ್ ಮನೆಯಾಣ್ಮನ ಕಣ್ಣೆಮೆಯೆ ಕಾಂಡಪಟಮಾಗೆಯುಂ ಬಗೆಯಾಣ್ಮನ ಕಣ್ಣೆಮೆಯೆ ದೂದವಿಯಾಗೆಯುಂ ಬಗೆದೆಡೆಯನೆಯ್ದಿ ಬಗೆದ ಬಗೆಯಂ ಬಗೆದಂತೆ ತೀರ್ಚಿ ಪೋಪ ಜೋಡೆಯರಂ ಕಂಡು ವಿಕ್ರಮಾರ್ಜುನನಿಂತೆಂದಂ-

ಮ|| ಕುಱುಪಂ ಪುರ್ವಿನ ಜರ್ವೆ ತೋ ಬಗೆಯಂ ಕಣ್ಸನ್ನೆಗಳ್ ಪೇೞೆ ತ
ನ್ನೆಱಕಂ ತನ್ನ ಮನಕ್ಕೆ ಕೂಡೆ ಕೆಲಕಂ ಗಂಡಂಗಮೊಳ್ಪಂ ಕರಂ|
ಮೆವಾ ಪ್ರೌಢೆಯ ಜೋಡೆಯಕ್ಕುಮೆಡೆಯೊಳ್ ದೂಂಟಿಂದೆ ದೂರಟಿಂಗೆ ಪೆ
ರ್ವಯಂ ಪೊಯ್ಸಿ ಕೆಲಕ್ಕೆ ನಾಣ್ಚಿ ತಲೆಗುತ್ತಿರ್ಪಾಕೆಯೇಂ ಜೋಡೆಯೇ|| ೮೨

ಉ|| ಕೂರಿದುವಪ್ಪ ಕಣ್ಮಲರ್ಗಳಳ್ಳೆರ್ದೆಯೊಳ್ ತಡಮಾಡೆ ತಾಮೆ ಕಣ್
ಪೇರಿಸೆ ಪುರ್ವು ನಾಲಗೆವೊಲಾಗೆ ಮನಂಬುಗಿಸಲ್ಕೆ ಬಲ್ಲೊಡಾ|
ಜಾರೆಯೆ ಜಾರೆ ಪಾನೆ ಕರಂ ಪಿರಿದುಂ ಗೞಪುತ್ತುಮಿರ್ಪಳಂ
ಸಾರಿಕೆಯೆಂಬರಲ್ಲದಭಿಸಾರಿಕೆಯೆಂಬರೆ ಬುದ್ಧಿಯುಳ್ಳವರ್| | ೮೩

ವ|| ಎಂದು ಪಾಣ್ಬರಂಕುಸನಾ ಪಾಣ್ಬೆಯರ ಗೆಯ್ವ ಗೆಯ್ತಂಗಳುಮಂ ತೋರ್ಪ ಸನ್ನೆಗಳುಮಂ ಆಡುವ ಮಿೞ್ತುಗೊಡ್ಡಂಗಳುಮಂ ಕಂಡು ಚೋದ್ಯಂಬಟ್ಟು-

ಮ|| ಅಲರ್ಗಣ್ಣೊಳ್ ಸ್ಮರನಿರ್ದನಕ್ಕುಮೆಡೆವೋಪಾ ಜೋಡೆ ಕಾಮಂಗೆ ಕಾ
ದಲೆಯಕ್ಕುಂ ಪೆಱತೇನೊ ಪಾರದರದೊಳ್ ಸಂಸಾರ ಸರ್ವಸ್ವಮಂ|
ಗೆಲೆವಂದಿಂಪಿನಲಂಪನಾಳ್ದ ಸವಿಯುಂಟಕ್ಕುಂ ಸಮಂತಾವಗಂ
ತಲೆಯಂ ಮೂಗುಮನೊತ್ತೆಯಿಟ್ಟು ನೆರೆವಂತುಂತೇನವರ್ ಗಾಂಪರೇ|| ೮೪

ವ|| ಎನತ್ತುಂ ಬರ್ಪನೊಂದೆಡೆಯೊಳ್ ಮನಸಿಜನ ನಡಪಿದ ಜಂಗಮಲತೆಗಳಂತೆ ಮನೋಜನ ಕಾಪಿನ ಕಲ್ಪಲತೆಗಳಂತೆ ಮನೋಜನೆಂಬ ದೀವಗಾಱನ ಪುಲ್ಲೆಗಳಂತೆ ತಂತಮ್ಮ ಮನೆಯ ಮುಂದಣ ಪಚ್ಚೆಯ ಜಗುಲಿಗಳೊಳಂ ಮಣಿಮಯ ಮತ್ತವಾರಣಂಗಳೊಳಮಳವಿಗೞದ ವಿಳಾಸಂಗಳೊಳಂ ತಂಡತಂಡದೆ ನೆರೆದಿರ್ದ ಪೆಂಡವಾಸದೊಳ್ವೆಂಡಿರಂ ಕಂಡು-

ಅರಿಕೇಸರಿಯು ನಿಂತು ನೋಡಿದನು. ವ|| ಸಾಮಾನ್ಯರಲ್ಲದ ಅವರ ಜಾರಕೃತ್ಯವನ್ನು ಕಂಡು ಇದು ಮನೆಯ ಗಂಡನನ್ನು ಮಾರುವ ರೀತಿಯಲ್ಲದೆ ಹೂವನ್ನು ಮಾರುವ ರೀತಿಯಲ್ಲವೆಂದು ಹುಸಿನಗೆಯನ್ನು ನಗುತ್ತ ಮುಂದೆ ನಡೆದನು. ಒಂದು ಕಡೆಯಲ್ಲಿ ಮನೆಯೊಡೆಯನ ಕಣ್ಣರೆಪ್ಪೆಯನ್ನು ತೆರೆಯನ್ನಾಗಿಯೂ ಮನದೊಲವಿನ ಮಿಂಡನ ಕಣ್ಣ ದೃಷ್ಟಿಯನ್ನೇ ಸಖಿಯನ್ನಾಗಿಯೂ ಭಾವಿಸಿಕೊಂಡು ಸಂಕೇತಸ್ಥಳವನ್ನು ಸೇರಿ ಇಷ್ಟಾರ್ಥವನ್ನು ಯೋಚಿಸಿದಂತೆಯೇ ತೀರಿಸಿಕೊಂಡು ಹೋಗುವ ಜಾರೆಯರನ್ನು ಕಂಡು ವಿಕ್ರಮಾರ್ಜುನನು ಹೀಗೆಂದನು- ೮೨. ತಮ್ಮ ಸಂಕೇತಸ್ಥಳವನ್ನು ಹುಬ್ಬುಹಾರಿಸುವುದರಿಂದಲೂ ತಮ್ಮ ಮನಸ್ಸಿನ ಬಗೆಯನ್ನು (ಇಷ್ಟಾರ್ಥವನ್ನು) ಕಣ್ಣಿನ ಸನ್ನೆಗಳಿಂದಲೂ ಪ್ರಕಾಶಪಡಿಸುತ್ತ ತನ್ನ ಪ್ರೀತಿಯು ತನ್ನ ಮನಸ್ಸಿಗೆ ತೃಪ್ತಿಯಾಗಿರಲು ತನ್ನ ಪಕ್ಕದವರಲ್ಲಿಯೂ ತನ್ನ ಗಂಡನಲ್ಲಿಯೂ ಸದ್ಭಾವವನ್ನೂ ಪ್ರಕಾಶಪಡಿಸುತ್ತಿರುವ ಆ ಚತುರಳೇ ನಿಜವಾದ ಜಾರೆಯಾಗುವವಳು. ಪಕ್ಕಪಕ್ಕಗಳಲ್ಲಿ ಹೆಜ್ಜೆ ಹೆಜ್ಜೆಗೂ ಡಂಗುರ ಬಡಿಯಿಸಿಕೊಂಡು ಅಕ್ಕಪಕ್ಕದವರಿಗೆ ನಾಚಿಕೊಂಡು ತಲೆತಗ್ಗಿಸುವಾಕೆ ಜಾರೆಯಾಗಬಲ್ಲಳೇ? ೮೩. ತನ್ನ ತೀಕ್ಷ್ಣವಾದ ಕಣ್ಣೆಂಬ ಹೂವುಗಳು ವಿಟನ ದುರ್ಬಲವಾದ ಎದೆಯನ್ನು ನಿಧಾನವಾಗಿ ತನ್ನಷ್ಟಕ್ಕೆ ತಾನೆ ಚಲಿಸುವಂತೆ ಮಾಡಿ ಹುಬ್ಬುಗಳು ನಾಲಗೆಯಂತೆ ಮಾತನಾಡಿಸಿ ಅವನ ಮನಸ್ಸನ್ನು ಪ್ರವೇಶಿಸುವಂತೆ ಮಾಡಲು ಬಲ್ಲವಳು ನಿಜವಾದ ವೇಶ್ಯೆ. ಜಾರತ್ವವನ್ನು ಕುರಿತು ವಿಶೇಷವಾಗಿ ಹರಟುತ್ತಿರುವಳನ್ನು ಗಿಣಿಯೆನ್ನುವರಲ್ಲದೆ ಅಭಿಸಾರಿಕೆ (ಪ್ರಿಯವನ್ನು ರಹಸ್ಯವಾಗಿ ಹುಡುಕಿಕೊಂಡು ಹೋಗುವ ಜಾತಿ)ಯೆಂದು ಬುದ್ಧಿಯುಳ್ಳವರು ಅನ್ನುತ್ತಾರೆಯೆ? ವ|| ಎಂದು ಜಾರೆಯರಿಗೆ ಅಂಕುಶಪ್ರಾಯನಾದ ಅರಿಕೇಸರಿಯ ಆ ಚಾರೆಯರು ಮಾಡುವ ಕಾರ್ಯವನ್ನೂ ತೋರುವ ಸನ್ನೆಗಳನ್ನೂ ಆಡುವ ಮೃತ್ಯುವಿನಂತಹ ಚೇಷ್ಟೆಯ ಮಾತುಗಳನ್ನೂ ಕಂಡು ಆಶ್ಚರ್ಯಪಟ್ಟು ೮೪. (ಜಾರಸ್ತ್ರೀಯರ) ಹೂವಿನಂತಿರುವ ಕಣ್ಣಿನಲ್ಲಿ ಮನ್ಮಥನಿದ್ದಿರಬೇಕು. ಸಂಕೇತಸ್ಥಾನವನ್ನು ಹುಡುಕಿಕೊಂಡು ಹೋಗುವ ಆ ಜಾರೆಯರು ಮನ್ಮಥನ ಪ್ರೀತಿಗೆ ಪಾತ್ರರಾಗಿದ್ದಿರ ಬೇಕು. ಹಾದರದಲ್ಲಿ ಸಂಸಾರಸಾರಸರ್ವಸ್ವವನ್ನೂ ಮೀರಿರುವ ಸುಖದ ಸೊಂಪನ್ನು ಹೊಂದಿರುವ ರುಚಿಯಿದ್ದಿರಬೇಕು. ಹಾಗಿಲ್ಲದ ಪಕ್ಷದಲ್ಲಿ ಯಾವಾಗಲೂ ಅವರು ತಲೆಯನ್ನೂ ಮೂಗನ್ನೂ ಒತ್ತೆಯಿಟ್ಟು ಸುಮ್ಮನೆ ವಿಟರಲ್ಲಿ ಕೂಡುವಷ್ಟು ದಡ್ಡರೆ? ವ|| ಎಂದುಕೊಂಡು ಬರುತ್ತಿದ್ದವನು ಒಂದು ಸ್ಥಳದಲ್ಲಿ ಮನ್ಮಥನು ಸಾಕಿದ ಜಂಗಮಲತೆಗಳಂತೆಯೂ ಕಾಮನ ರಕ್ಷಣೆಯಲ್ಲಿರುವ ಕಲ್ಪಲತೆಗಳಂತೆಯೂ ಮನೋಜನೆಂಬ

ಚಂ|| ಮನಸಿಜನೀಕೆಗಂಡು ರತಿಯಂ ಬಿಸುಟಂ ಹರನೀಕೆಗಂಡು ನೂ
ತನ ಗಿರಿಜಾತೆಯಂ ತೊದನಾ ನರಕಾಂತಕನೀಕೆಗಂಡು ತೊ|
ಟ್ಟನೆ ನಿಜಲಕ್ಷ್ಮಿಯಂ ಮದನೆಂಬ ನೆಗೞ್ತೆಯನಪ್ಪುಕೆಯ್ದು ಜ
ವ್ವನದ ವಿಳಾಸದಂದದ ಬೆಡಂಗಿನ ಪೆಂಡಿರೆ ಪೆಂಡಿರಲ್ಲಿಯಾ|| ೮೫

ತಿಸರಮಿದಾವುದಕ್ಕ ಧರಣೀಂದ್ರನ ಕೊಟ್ಟುದು ವಜ್ರದಾಳಿ ಕ
ಣ್ಗೆಸೆವುದಿದಾವುದೊಲ್ಲದುೞದಟ್ಟಿದೊಡಂದು ಕುಬೇರನಿತ್ತುದೆ|
ಕ್ಕಸರಮಿದಾವುದಾಂ ಮುಳಿಯೆ ಕಾಲ್ವಿಡಿದಿಂದ್ರನ ಕೊಟ್ಟುದಲ್ತೆ ಪೋ
ಪುಸಿಯದಿರೆಂಬ ಸೂಳೆಯರೆ ಸೂಳೆಯರಲ್ಲಿಯ ಪೆಂಡವಾಸದಾ|| ೮೬

ವ|| ಎಂಬುದಂ ಕೇಳುತ್ತುಂ ಬರೆವರೆ ಮತ್ತಮಾ ಪೆಂಡವಾಸಗೇರಿಯೊಳಗೆ ಸೌಭಾಗ್ಯದ ಭೋಗದ ಚಾಗದ ರೂಪುಗಳ್ ಮಾನಸರೂಪಾದಂತೆ-

ಉ|| ಸೀಗುರಿ ಚಾಪಿ ನಾಣ್ಕುಣಿದು ಮೆಟ್ಟುವ ಗುಜ್ಜರಿಗೞ ಬೀರಮಂ
ಚಾಗದ ಪೆಂಪುಮಂ ಪೊಗೞ್ವ ಸಂಗಡವರ್ಪವರೊಳ್ಪಿನಿಂದೆ ಮೆ|
ಯ್ಯೋಗಮಳುಂಬಮಪ್ಪ ಬಿಯಮಾಗೆರ್ದೆಗಂ ಬರೆ ಬರ್ಪ ಪಾಂಗಗು
ರ್ವಾಗಿರೆ ಚೆಲ್ವನಾಯ್ತುರಬೊಜಂಗರ ಲೀಲೆ ಸುರೇಂದ್ರ ಲೀಲೆಯಿಂ|| ೮೭

ವ|| ಮತ್ತಮಲ್ಲಿ ಕೋಟಿ ಪೊಂಗೆ ಘಂಟೆಯಲುಗುವ ಕಿಱುಕುಳ ಬೊಜಂಗರುಮಂ ಸುಣ್ಣದೆಲೆಯನೊತ್ತೆಯಿಟ್ಟು ಮದದಾನೆಯುಮಂ ಮಾಣಿಕಮುಮನೊತ್ತೆವಿಡಿಸಲಟ್ಟುವ ಚಿಕ್ಕ ಪೋರ್ಕುಳಿ ಬೊಜಂಗರುಮಂ ಕತ್ತುರಿ ಬಿಯಮಂ ಮೆದು ಕತ್ತುರಿಯೊಳ್ ಪೂೞ್ದು ಕತ್ತುರಿಮಿಗದಂತಿರ್ಪ ಕತ್ತುರಿ ಬೊಜಂಗರುಮಂ ನೋಡಿ ಪೊೞಲ ಬೊಜಂಗರ ಬಿಯದಳವಿಗೆ ಮನದೊಳ್ ಮೆಚ್ಚುತ್ತುಂ ಬರ್ಪನೊಂದೆಡೆ ಯೊಳ್‌ರ್ದು ಕಳ್ಳೊಳಮಮರ್ದಿನೊಳಂ ಪುಟ್ಟಿದ ಪೆಂಡಿರಂತೆ ಸೊಗಯಿಸುವ ಪಲರು ಮೊಳ್ವೆಂಡಿರೊಂದೆಡೊಯೊಳಿರ್ದು ಕಾಮದೇವನೆಂಬ ಬಳಮರ್ದುಕಾಱನ ಮಾಡಿದ ಮರ್ದಿನಂತೆ ಬಳೆದು ದಳಂಬಡೆದು ಮೂನೂಱಱುವತ್ತು ಜಾತಿಯ ಕಳ್ಗಳಂ ಮುಂದಿಟ್ಟು ಮಧುಮಂತ್ರದಿಂ ಮಧುದೇವತೆಗಳನರ್ಚಿಸಿ ಪೊನ್ನ ಬೆಳ್ಳಿಯ ಪದ್ಮರಾಗದ ಪಚ್ಚೆಯ ಗಿಳಿಯ ಕೋಗಿಲೆಯ ಕೊಂಚೆಯಂಚೆಯ ಕುಂತಳಿಕೆಯ ಮಾೞ್ಕೆಯ ಸಿಪ್ಪುಗಳೊಳ್ ತೀವಿ ಮಧುಮಂತ್ರಂಗಳಿಂ ಮಂತ್ರಿಸಿ ನೆಲದೊಳೆದು ತಲೆಯೊಳ್ ತಳಿದು ಕಳ್ಳೊಳ್ ಬೊಟ್ಟನಿಟ್ಟುಕೊಂಡು ಕೆಲದರ್ಗೆಲ್ಲಂ ಬೊಟ್ಟಿಟ್ಟು ಕಿಱಯರ್ ಪಿರಿಯರಱದು ಪೊಡವಟ್ಟು ಧರ್ಮಗಳ್ಗುಡಿವರ್ಗೆಲ್ಲಂ ಮೀಸಲ್ಗಳ್ಳನೆದು ಪೊನ್ನ ಬೆಳ್ಳಿಯ ಸಿಪ್ಪುಗಳೊಳ್ ಕಿಱಕಿಱದನೆದು ಕುಡಿಬಿದಿರ ಕುಡಿಯ ಮಾವಿನ ಮಿಡಿಯ ಮಾರುದಿನ ಮೆಣಸುಗಡಲೆಯ ಪುಡಿಯೊಳಡಸಿದಲ್ಲವಲ್ಲಣಿಗೆಯ ಚಕ್ಕಣಂಗಳಂ ಸವಿಸವಿದು-

ಬೇಟೆಗಾರನ ದೀಹದ (ಒಂದು ಮೃಗವನ್ನು ಹಿಡಿಯುವುದಕ್ಕಾಗಿ ಉಪಯೋಗಿಸುವ ಮತ್ತೊಂದು ಮೃಗ) ಹುಲ್ಲೆಯಂತೆಯೂ ತಮ್ಮ ತಮ್ಮ ಮನೆಯ ಮುಂದಿನ ಪಚ್ಚೆಯ ರತ್ನದಿಂದ ನಿರ್ಮಿತವಾದ ಜಗಲಿಗಳಲ್ಲಿಯೂ ರತ್ನಖಚಿತವಾದ ಮನೆಯ ಮುಂದಿನ ಕೈಸಾಲೆಗಳಲ್ಲಿಯೂ ಅಳತೆಮೀರಿದ (ಅತ್ಯಕವಾದ) ವೈಭವಗಳಿಂದ ಕೂಡಿ ಗುಂಪು ಗುಂಪಾಗಿ ಕೂಡಿದ್ದ ವೇಶ್ಯಾವಾಟಿಯ (ಸೂಳೆಗೇರಿಯ) ಉತ್ತಮ ಸ್ತ್ರೀಯರನ್ನು ನೋಡಿದನು. ೮೫. ಇವಳ ಸೌಂದರ್ಯವನ್ನು ನೋಡಿ ಮನ್ಮಥನು (ತನ್ನ ಪ್ರಿಯಪತ್ನಿಯಾದ) ರತಿಯನ್ನು ಬಿಸುಟಿದ್ದಾನೆ. ಈಶ್ವರನ್ನು ಇವಳನ್ನು ನೋಡಿ ನೂತನವಧುವಾದ ಪಾರ್ವತಿಯನ್ನು ತೊರೆದಿದ್ದಾನೆ. ಆ ನರಕಾಸುರನಿಗೆ ಮೃತ್ಯುವಾದ ವಿಷ್ಣುವು ಇದಕ್ಕಿದ್ದ ಹಾಗೆ ತನ್ನ ಲಕ್ಷ್ಮಿಯನ್ನೂ ಮರೆತಿದ್ದಾನೆ ಎಂಬ ಪ್ರಸಿದ್ಧಿಯನ್ನು ಪಡೆದು ಯವ್ವನದ ವಿಳಾಸದ ಬೆಡಗಿನಿಂದ ಕೂಡಿದ ಸ್ತ್ರೀಯರೇ ಅಲ್ಲಿರುವ ಸ್ತ್ರೀಯರೆಲ್ಲ. ಮುಂದಿನ ಅವರ ಸಂಭಾಷಣೆಯು ಈ ರೀತಿಯಲ್ಲಿದ್ದಿತು. ೮೬. ಈ ಮೂರೆಳೆಯ ಹಾರವಾವುದಕ್ಕ? ಧರಣೀಂದ್ರನೆಂಬ ಸರ್ಪರಾಜನು ಕೊಟ್ಟುದು; ಕಣ್ಣಿಗೆ ಪ್ರಕಾಶಮಾನವಾಗಿರುವ ಈ ವಜ್ರದ ತಾಲಿ ಯಾವುದು? ನೀನು ಒಪ್ಪದೆ ತಿರಸ್ಕರಿಸಿ ಕಳುಹಿಸಲು ಆ ದಿನ ಕುಬೇರನು ಕೊಟ್ಟುದು. ಈ ಒಂದೆಳೆಯ ಸರ ಯಾವುದು? ನಾನು ಕೋಪಿಸಿಕೊಳ್ಳಲು ನನ್ನ ಕಾಲನ್ನು ಕಟ್ಟಿಕೊಂಡು ಇಂದ್ರನು ಕೊಟ್ಟುದಲ್ಲವೇ? ಹೋಗು ಸುಳ್ಳು ಹೇಳಬೇಡ ಎಂಬ ಪ್ರಸಿದ್ಧಿಯನ್ನು ಪಡೆದಿರುವ ಸೂಳೆಯರೇ ಆ ಸೂಳೆಗೇರಿಯ ಎಲ್ಲ ಕಡೆಯೂ. ವ|| ಎನ್ನುವುದನ್ನು ಕೇಳುತ್ತ ಬರುತ್ತಿರಲು ಪುನ ಆ ಸೂಳೆಗೇರಿಯೊಳಗೆ ಸೌಭಾಗ್ಯದ, ಭೋಗದ, ತ್ಯಾಗದ ರೂಪಗಳು ಮನುಷ್ಯಾಕಾರವನ್ನು ತಾಳಿದಂತೆ- ೮೭. ಸೀಗುರಿಯೆಂಬ ಛತ್ರಿ, ಅಂಗರಕ್ಷಕರು, ನೆಗೆದು ಹಾರುತ್ತ ಬರುತ್ತಿರುವ ಗುರ್ಜರದೇಶದ ಕತ್ತೆ, ತಮ್ಮ ವೀರದ ಮತ್ತು ತ್ಯಾಗದ ವೈಭವವನ್ನು ಹೊಗಳುತ್ತ ಬರುತ್ತಿರುವ ಸಂಗಡಿಗಳು, ಸರಿಯಾದ ರೀತಿಯಲ್ಲಿ

ಮಾಡಿಕೊಂಡಿರುವ ದೇಹಾಲಂಕಾರ ಅತ್ಯತಿಶಯವಾದ ದ್ರವ್ಯವ್ಯಯ- ಇವು ಹೃದಯಸ್ಪರ್ಶಿಯಾಗಿರಲು ಆಶ್ಚರ್ಯಕರವಾದ ರೀತಿಯ ಠೀವಿಯಿಂದ ಬರುತ್ತಿರುವ ರಾಜವಿಟರ ಲೀಲೆಯು ದೇವೇಂದ್ರನ ಲೀಲೆಗಿಂತ ಸುಂದರವಾಗಿದ್ದಿತು. ವ|| ಪುನ ಅಲ್ಲಿ ಕೋಟಿಹೊನ್ನುಗಳನ್ನು ಕೊಡುತ್ತೇವೆ ಎಂದು ಸೂಳೆಯರ ಮನೆಯ ಮುಂದಿನ ಗಂಟೆಯನ್ನು ಬಾರಿಸುವ ಸಾಮಾನ್ಯವಿಟರನ್ನೂ ಸುಣ್ಣದೆಲೆಯನ್ನು ಒತ್ತೆಯಿಟ್ಟು

ಮ|| ಮಧು ಸೀತುಂ ಕಟು ಸೀದು ಪೋ ಪುಳಿತ ಕಳ್ಳಲ್ತುಂ ಕರಂ ಕಯ್ತು ಬ
ರ್ಪುದು ಮಾರೀಚಿ ತೊಡರ್ಪುಳಿಂದೆ ಸರದಿಂ ಕಂಪಿಲ್ಗ ಸೊರ್ಕಿಪ್ಪಲಾ|
ಱದು ಚಿಂತಾಮಣಿಗೇವುದಕ್ಕ ದಳಮಿಲ್ಲೀ ಕಕ್ಕರಕ್ಕಿಂತುಟ
ಪ್ಪುದು ಕಳ್ಳಪ್ಪುದು ತಪ್ಪದೆಂದು ಕುಡಿದರ್ ಕಾಮಾಂಗಮಂ ಕಾಂತೆಯರ್|| ೮೮

ವ|| ಅಂತು ಕುಡಿಯೆ ಕಕ್ಕರಗೆಯ್ತದಿಂ ತುದಿನಾಲಗೆಯೊಳ್ ತೊದಳ್ವೆರಸು ನುಡಿವ ನುಡಿಗಳುಂ ಪೊಡರ್ವ ನಿಡಿಯ ಪುರ್ವುಗಳುಂ ನಿಡಿಯಲರ್ಗಣ್ಗಳೊಳ್ ವಿಕಾರಂ ಬೆರಸು ನೆಗೞ್ದಭಿನಯಂಗಳುಂ ಮಳಮಳಿಪ ರೂಪು ಕಣ್ಗಳೊಳ್ ಬೆಳ್ಪನೞಯೆ ಸೋಂಕುವ ಕೆಂಪುಗಳುಂ ತಮ್ಮ ಕೆಂಪಂ ಕಣ್ಗಳ್ಗೆ ಕೊಟ್ಟು ಕಣ್ಗಳ ಬೆಳ್ಪಂ ತಮಗೆ ಮಾಱುಗೊಂಡಂತೆ ತನಿಗೆತ್ತುವರೆಸು ಬತ್ತಿ ಸೊಗಯಿಸುವ ಬೆಳರ್ವಾಯ್ಗಳೊಳಿಂಪಂ ತಾಳ್ದಿ ಪೊಱಮಡುವ ತಣ್ಗಂಪುಗಳುಮಮೃತಬಿಂದುಗಳಂತೆ ನೆಗೞ್ವ ಬೆಮರ ಬಿಂದುಗಳುಮಳವಲ್ಲದೊಪ್ಪೆ ಪಲರುಮೊಳ್ವೆಂಡಿರೊಂದೆಡೆ ಯೊಳಿರ್ದಲ್ಲಿ ಯೊರ್ವಳ್-

ಪೃಥ್ವಿ|| ಬೆಳರ್ತ ಬೆಳರ್ವಾಯ್ ಕರಂ ಪೊಳೆವ ಪಾಂಗೆ ಕಣ್ಣಿಂದಳು
ರ್ತುಳುಂಕೆ ನಿಡುವುರ್ವುಗಳ್ ಪೊಡರೆ ಬಾಯ ಕಂಪಿಂಗೆ ಸಾ|
ರ್ವಳಿಪ್ರಕರಮಂದು ಸೀಗುಡಿವೊಲಾಗೆ ನಾಣ್ಗೆಟ್ಟು ಮೊ
ಕ್ಕಳಂ ಜತಿಗೆ ಮೆಟ್ಟುವಳ್ ಪಿಡಿದು ಮೆಟ್ಟುವಳ್ ನೋೞ್ಪರಂ|| ೮೯

ವ|| ಮತ್ತಮೊರ್ವಳೂರ್ವಶಿಯನೆ ಪೋಲ್ವಾಕೆ ತನ್ನ ಗಂಭೀರನವಯೌವನ ಮದದೊಳಂ ಮದಿರಾಮದದೊಳಮಳವಿಗೞಯೆ ಸೊರ್ಕಿ-

ಮದ್ದಾನೆಯನ್ನೂ ಮಾಣಿಕ್ಯವನ್ನೂ ಒತ್ತೆಯಾಗಿಡಲು ಹೇಳಿಕಳುಹಿಸುವ ಚಿಕ್ಕ ಜಗಳಗಂಟಿ ವಿಟರನ್ನೂ ತಾವು ವಿಶೇಷವಾಗಿ ಕಸ್ತೂರಿಯನ್ನು ಲೇಪನ ಮಾಡಿಕೊಂಡು ಅದರಲ್ಲಿಯೇ ಅದ್ದಿ ಮುಳುಗಿ ಆ ಕಸ್ತೂರಿಯ ವ್ಯಯವನ್ನೇ ಒತ್ತೆಯನ್ನಾಗಿ ತೋರಿಸುತ್ತ ಕಸ್ತೂರಿಯ ಮೃಗದಂತೆ ಕರ್ರಗಿರುವ ಕಸ್ತೂರಿ ವಿಟರನ್ನೂ ನೋಡಿ ಆ ಪಟ್ಟಣದ ವಿಟರ ವ್ಯಯದ (ಖರ್ಚು ಮಾಡುವ ದ್ರವ್ಯದ) ಪ್ರಮಾಣಕ್ಕೆ ಮನಸ್ಸಿನಲ್ಲಿ ಮೆಚ್ಚುತ್ತ ಮುಂದೆ ಬರಲು ಪಾನಶಾಲೆಯು ಕಣ್ಣಿಗೆ ಬಿದ್ದಿತು. ಒಂದೆಡೆಯಲ್ಲಿ ಕಳ್ಳಿನಲ್ಲಿಯೂ ಅಮೃತದಲ್ಲಿಯೂ ಹುಟ್ಟಿದ ಸ್ತ್ರೀಯರಂತೆ – ಸುರಾದೇವಿ ಮತ್ತು ಲಕ್ಷ್ಮೀದೇವಿಯರಂತೆ ಸೊಗಯಿಸುವ ಅನೇಕ ಸುಂದರಿಯರು ಒಂದು ಕಡೆ ಸೇರಿ ಕಾಮದೇವನೆಂಬ ಮದ್ದುಗಾರನು (ತುಬಾಕಿಯ ಮದ್ದನ್ನು ಮಾಡುವವನು) ಮಾಡಿದ ಮದ್ದಿನಂತೆ ಅಭಿವೃದ್ಧಿಯಾಗಿ ಪುಷ್ಟಿಗೊಂಡಿರುವ ಮುನ್ನೂರರುವತ್ತು ಜಾತಿಯ ಕಳ್ಳುಗಳನ್ನು (ಹೆಂಡಗಳನ್ನು) ತಮ್ಮ ಮುಂದೆ ಇಟ್ಟುಕೊಂಡು ಮಧುಮಂತ್ರದಿಂದಲೇ ಮಧುದೇವತೆಗಳನ್ನು ಪೂಜಿಸಿದರು. ಚಿನ್ನ ಬೆಳ್ಳಿ ಮತ್ತು ಪದ್ಮರಾಗಗಳಿಂದ ಗಿಳಿ, ಕೋಗಿಲೆ, ಕ್ರೌಂಚ, ಹಂಸ ಮತ್ತು ಕುಂತಳಿಕೆಯೆಂಬ ಹಕ್ಕಿಗಳ ಮಾದರಿಗಳಲ್ಲಿ ಮಾಡಿರುವ ಚಿಪ್ಪುಗಳಲ್ಲಿ ತುಂಬಿ (ಮಧುಮಂತ್ರಗಳಿಂದಲೇ ಮಂತ್ರಿಸಿ ನೆಲದಲ್ಲಿ ಸ್ವಲ್ಪ ಸ್ವಲ್ಪ ಚೆಲ್ಲಿ ತಲೆಯಲ್ಲಿ ಪ್ರೋಕ್ಷಿಸಿಕೊಂಡು,) ಕಳ್ಳಿನಿಂದ ಮುಖಕ್ಕೆ ಬೊಟ್ಟನ್ನಿಟ್ಟು ಕಿರಿಯರಾದವರು ಹಿರಿಯರಾದವರನ್ನು ಗುರುತಿಸಿ ಅವರಿಗೆ ನಮಸ್ಕಾರ ಮಾಡಿ ಉಚಿತವಾಗಿ ದಾನಮಾಡಬೇಕಾದವರಿಗಾಗಿ ಮೀಸಲಾದುದನ್ನು ಅವರಿಗೆ ದಾನಮಾಡಿದರು. ಚಿನ್ನದ ಮತ್ತು ಬೆಳ್ಳಿಯ ಚಿಪ್ಪುಗಳಲ್ಲಿ ಸ್ವಲ್ಪ ಸ್ವಲ್ಪವಾಗಿ ತುಂಬಿಕೊಂಡು ಎಳೆಯ ಬಿದಿರಿನ ಕಳಕೆ, ಮಾವಿನ ಮಿಡಿ, ಬಿಲ್ಪತ್ರೆಯ ಕಾಯಿನ ತಿರುಳು, ಕಾರದ ಕಡಲೆಯ ಪುಡಿಯಿಂದ ಕೂಡಿದ ಹಸಿಯ ಶುಂಠಿಯ ಮಿಶ್ರಣವನ್ನುಳ್ಳ ಚಕ್ಕಣಗಳೆಂಬ ನಂಜಿಕೊಳ್ಳುವ ಪದಾರ್ಥಗಳನ್ನು ಸವಿಸವಿದು ಕಳ್ಳುಕುಡಿದರು. ೮೮. ಮಧುವೆಂಬ ಮದ್ಯವು ಸಿಹಿಯಾಗಿದ್ದರೂ ಕಟುವಾದುದು; ಸೀದುವೆಂಬುದು ಹುಳಿಯ ಹೆಂಡವಲ್ಲ; ವಿಶೇಷವಾಗಿ ಸಿಹಿಯಾಗಿರುತ್ತದೆ. ಮಾರೀಚಿ ತೊಡರ್ಪುಳ್ ಎಂಬ ಮದ್ಯಗಳಿಗಿಂತ ಶರದೆಯೆಂಬುದು ಹೆಚ್ಚು ವಾಸನೆಯಿಲ್ಲ; ಅಷ್ಟು ಸೊಕ್ಕಿಸಲಾರದು; ಚಿಂತಾಮಣಿಯೆಂಬ ಮದ್ಯದ ಸೇವನೆಗೆ ಅಡಿಕೆಯೇಕಕ್ಕ, ಕಕ್ಕರವೆಂಬ ಮದ್ಯಕ್ಕೂ ಹಾಗೆಯೇ (ಬೇಕಿಲ್ಲ) ಇಂತಹವೇ ಸರಿಯಾದ ಹೆಂಡವೆಂಬುದು ಎಂದು ಆ ಸ್ತ್ರೀಯರು ಕಾಮೋದ್ರೇಕವಾದ ಮದ್ಯವನ್ನು ಪಾನಮಾಡಿದರು. ವ|| ಹಾಗೆ ಕುಡಿಯಲು ಕಕ್ಕರವೆಂಬ ಮದ್ಯಪಾನದ ಸೊಕ್ಕಿನಿಂದ ತುದಿನಾಲಗೆಯಲ್ಲಿ ತೊದಳುಗಳಿಂದ ಕೂಡಿದ ಮಾತುಗಳುಂಟಾದುವು. ದೀರ್ಘವಾದ ಹುಬ್ಬುಗಳು ಅಲುಗಾಡುತ್ತಿದ್ದವು. ಉದ್ದವಾದ ಹೂವಿನಂತಿರುವ ಕಣ್ಣುಗಳಲ್ಲಿ ವಿಕಾರದಿಂದ ಕೂಡಿದ ಚೇಷ್ಟೆಗಳು ಮೂಡಿದವು. ಕೆರಳಿ ಕೆಂಪಾದ ರೂಪವು ಕಣ್ಣುಗಳ ಬಿಳುಪನ್ನು ಸಂಪೂರ್ಣವಾಗಿ

ಹೋಗಲಾಡಿಸಿತು. ಆವರಿಸುತ್ತಿರುವ ಕೆಂಪುಬಣ್ಣದ ತುಟಿಗಳು ತಮ್ಮ ಕೆಂಪನ್ನು ಕಣ್ಣುಗಳಿಗೆ ಕೊಟ್ಟು ಅದರ ಬಿಳುಪನ್ನು ತಾವು ಪ್ರತಿಯಾಗಿ ಕೊಂಡಂತೆ ತೋರಿದವು. ವಿಶೇಷವಾಗಿ ಅಲುಗಾಡುತ್ತ ಬತ್ತಿದ ಬಿಳುಪಾದ ಬಾಯಿಗಳಲ್ಲಿ ಇಂಪಿನಿಂದ ತಂಪಾದ ವಾಸನೆಗಳು ಸೂಸಿದವು. ಅಮೃತಬಿಂದುಗಳಂತೆ ಬೆವರ ಹನಿಗಳು ಪ್ರಕಾಶಿಸಿದುವು. ಅಳತೆಯಿಲ್ಲದ ಸೌಂದರ್ಯದಿಂದ ಕೂಡಿದ ಅನೇಕ ಉತ್ತಮ ಸ್ತ್ರೀಯರು ಒಂದೆಡೆ ಸೇರಿದರು. ಆ ಸ್ಥಳದಲ್ಲಿ ಒಬ್ಬಳು- ೮೯. ಬಿಳಿಚಿಕೊಂಡ ತುಟಿಯನ್ನೂ ವಿಶೇಷವಾಗಿ ಹೊಳೆವ ಕಡೆಗಣ್ಣಿನ ನೋಟವನ್ನೂ

ಚಂ|| ಮುಡಿ ಮಕರಧ್ವಜಂಬೊಲೆೞಲುತ್ತಿರೆ ಬೆಂಬಿಡಿದೊಯ್ಯನೊಯ್ಯನು
ಳ್ಳುಡೆ ಕಟಿಸೂತ್ರದೊತ್ತಿನೊಳೆ ಜೋಲ್ದಿರೆ ನಾಣ್ ತಲೆದೋ ಕೂಡೆ ಕೂ|
ಕಿಡುವ ಕುಕಿಲ್ವ ಬಿಕ್ಕುಳಿಪ ತೇಗುವ ತನ್ನ ತೊಡಂಕದೆಯ್ದೆ ನೂ
ರ್ಮಡಿ ಮನದೊಳ್ ಪಳಂಚಲೆಯೆ ಡಕ್ಕೆಯೊಳೞ್ಕಜವಾಗೆಯಾಡಿದಳ್|| ೯೦

ವ|| ಅಂತಾಕೆಗಳ್ ತೂಗಿ ತೊನೆವ ತೊನೆಪಂಗಳುಮಂ ಮರಸರಿಗೆವಿಡಿದು ಬಿಲ್ವಿಡಿದಾಡುವ ಬೂತಾಟಂಗಳುಮಂ ನೋಡಿ ಗಂಧೇಭವಿದ್ಯಾಧರನಿಂತೆಂದಂ-

ಚಂ|| ನುಡಿವರೆ ನೋಡ ಕಳ್ಗುಡಿವರೆಂಬುದಿದಾಗದ ಸೂರುಳಂತದಂ
ಕುಡಿವನುಮಂತೆ ಕಳ್ಗುಡಿವರೆಂದೊಡೆ ನಾಣ್ಚುವರಂತುಟಪ್ಪುದಂ|
ಕುಡಿದುಮಿವಂದಿರಾರೆರ್ದೆಯುಮಂ ಸೆಗೆಯ್ದಪರೆಯ್ದೆ ದೋಷದೊಳ್
ತೊಡರ್ವುದುಮೊಂದುಪಾಶ್ರಯವಿಶೇಷದೊಳೊಳ್ಪನೆ ತಳ್ವುದಾಗದೇ|| ೯೧

ವ|| ಎನುತುಂ ಬರ್ಪನೊಂದೆಡೆಯೊಳೊರ್ವಂ ಪೞಕೆಯ್ದ ನಲ್ಲಳನುೞಯಲಾಱದೆ ಸುೞಯೆ ಮುಳಿದಾತನ ಕೆಳೆಯನಿಂತೆಂದಂ-

ಚಂ|| ಬಸನದೊಡಂಬಡಿಂಗಲಸಿ ಮಾಣ್ದೊಡಮಿಂತಿದನೀವೆನೆಂದನಂ
ಪುಸಿದೊಡಮಾಸೆದೋಱ ಬಗೆದೋಱದೊಡಂ ನೆರದಿರ್ದೊಡಂ ಸಗಾ|
ಟಿಸದೊಡಮಾಯಮುಂ ಚಲಮುಮುಳ್ಳೊಡೆ ಪೇಸದವಳ್ಗೆ ಮತ್ತಮಾ
ಟಿಸುವುದೆ ಮತ್ತಮಂಜುವುದೆ ಮತ್ತಮೞಲ್ವುದೆ ಮತ್ತವಿವುದೇ|| ೯೨

ವ|| ಎಂದು ನುಡಿದು ಬಿಸುಡಿಸಿದಂ ಮತ್ತೊರ್ವಂ ತನಗೆರಡಱಯದೊಲ್ದ ನಲ್ಲಳನೇತಳಪ್ಪೊಡಮೇವಮಂ ಮಾಡದೆ ಬೇಟಮಂ ಸಲಿಸುವುದರ್ಕೆ ಸಂತಸಂಬಟ್ಟು ಮುಂತಣ್ಗೆ ಕಾಪನಿಟ್ಟಿಂತೆಂದಂ-