ಕಂ|| ಶ್ರೀರಮಣಿಯಂ ದ್ಪಿಷದ್ಬಳ
ಪಾರಾವಾರದೊಳುದಗ್ರ ಭುಜ ವಿಜಯ ಮಹಾ|
ಮೇರುವಿನ ಕಡೆದು ಪಡೆದಳ
ವಾರುಮನಿೞಸಿದುದುದಾತ್ತನಾರಾಯಣನಾ ೧

ವ|| ಅಂತು ದ್ರುಪದನ ಪೊೞಲೊಳ್ ಪಾಂಡವರ್ ಚಾಗಕ್ಕೆ ಬೂತುಂ ಭೋಗಕೆ ಪೊೞ್ತುಂ ನೆಯದೆನಿಸಿ ಸುಖಸಂಕಥಾವಿನೋದದಿಂ ರಾಜ್ಯಂಗೆಯ್ಯುತ್ತಿರ್ಪನ್ನೆಗಮಿತ್ತಲ್-

ಮ|| ಚರರಾಗೆಯ್ದಿದರೆಯ್ದಿ ಹಸ್ತಿನಪುರಕ್ಕಾ ಪಾಂಡವರ್ ತಮ್ಮುತ
ಯ್ವರುಮಿರ್ದರ್ ದ್ರುಪದಾರಾಜ ಪುರದೊಳ್ ಕೆಯ್ಕೊಂಡು ಪಾಂಚಾಳಿಯಂ|
ಧುರದೊಳ್ ಕರ್ಣನನಾಂತು ಗೆಲ್ದವನವಂ ಸಂದರ್ಜುನಂ ತಳ್ತು ಸಂ
ಗರದೊಳ್ ಶಲ್ಯನನಿಕ್ಕಿ ಗೆಲ್ದದಟನಾ ಭೀಮಂ ಗಡಂ ಕಾಣಿರೇ|| ೨

ವ|| ಎಂಬ ಮಾತಂ ಧೃತರಾಷ್ಟ್ರ ದುರ್ಯೋಧನಾದಿಗಳ್ ಕೇಳ್ದು ಬಿಲ್ಲುಂಬೆಱಗುಮಾಗಿ

ಕಂ|| ಕಾಯ್ವೞಲುಱ  ಜತುಗೃಹದೊಳ
ಗಯ್ವರುಮಂ ಮಂತ್ರಬಲದೆ ಸುಟ್ಟೊಡಮವರಂ|
ದೆಯ್ವಬಲಮೊಂದೆ ಕಾದುದು
ದೆಯ್ವಮನಾರಯ್ಯ ವಿಱ ಬಾೞಲ್ ನೆವರ್|| ೩

ವ|| ಎಂಬುದುಂ ಭೀಷ್ಮ ದ್ರೋಣಾದಿಗಳ್ ನಿಶ್ಚಿತಮಂತ್ರರಾಗಿ ವಿದುರನಂ ಕರೆದಾಳೋಚಿಸಿ ಪೃಥಾತನೂಜರಂ ನಿನ್ನ ಬಲ್ಲ ಮಾೞ್ಕೆಯಿಂ ನುಡಿದೊಡಂಗೊಂಡು ಬರ್ಪುದೆಂದು ಪೇೞ್ದಟ್ಟುವುದುಮಾತನಂತೆ ಗೆಯ್ವೆನೆಂದು ರಥಾರೂಢನಾಗಿ ಪಾಂಚಾಳರಾಜಪುರಕ್ಕೆ ವಂದು ಪಾಂಡುಪುತ್ರರಂ ಕಂಡು-

ಚಂ|| ಅದು ಪಿರಿದುಂ ಪ್ರಮಾದಮದುವುಂ ಕುರುರಾಜನಿನಾಯ್ತು ಪೋಯ್ತು ಸಂ
ದುದು ಮಯಲ್ಕೆ ವೇೞ್ಪುದದನಾಳ್ವುದು ತಪ್ಪದೆ ಪಾಂಡುರಾಜನಾ||
ಳ್ದುದನೆಳೆಯಂ ಮನಂ ಬಸದೆ ಬರ್ಪುದು ನೀಮೆನೆ ಪೋಪ ಕಜ್ಜಮಂ
ವಿದುರನೊಳಯ್ವರುಂ ಸಮೆದು ಪೇೞ್ವುದುಮಾ ದ್ರುಪದಂಗೆ ರಾಜದಿಂ|| ೪

೧. ಲಕ್ಷ್ಮಿದೇವಿಯನ್ನು ಶತ್ರುಸೈನ್ಯವೆಂಬ ಸಮುದ್ರದಲ್ಲಿ ತನ್ನ ಬಲಿಷ್ಠವೂ ವಿಜಯಪ್ರದವೂ ಆದ ತೋಳೆಂಬ ಮಹಾಮೇರುಪರ್ವತದಿಂದ ಕಡೆದು ಪಡೆದ ಅರ್ಜುನನ ಪರಾಕ್ರಮವು ಯಾರನ್ನೂ ತಿರಸ್ಕರಿಸಿತು, ಹಾಗೆ ದ್ರುಪದನ ಪಟ್ಟಣದಲ್ಲಿ ಪಾಂಡವರು (ತಾವು ಮಾಡುವ) ದಾನಕ್ಕೆ ಪಾತ್ರರಾದವರು ಒಬ್ಬರೂ ಉಳಿಯಲಿಲ್ಲವೆಂಬಂತೆಯೂ ಸೌಖ್ಯಪಡುವುದಕ್ಕೆ ಕಾಲಾವಕಾಶವು ಸಾಲದೆಂಬಂತೆಯೂ ಸೌಖ್ಯದಿಂದ ರಾಜ್ಯವಾಳುತ್ತಿದ್ದರು. ೨. ಗೂಢಚಾರರು ಹಸ್ತಿನಾಪಟ್ಟಣಕ್ಕೆ ಬಂದು ಆ ಪಾಂಡವರೈದುಮಂದಿಯೂ ದ್ರುಪದರಾಜನ ಪಟ್ಟಣದಲ್ಲಿ ಇದ್ದಾರೆ. ದ್ರೌಪದಿಯನ್ನು ಪಡೆದು ಯುದ್ಧದಲ್ಲಿ ಕರ್ಣನನ್ನು ಗೆದ್ದವನು ಪ್ರಸಿದ್ಧನಾದ ಅರ್ಜುನ, ಸಂಸಿ ಯುದ್ಧದಲ್ಲಿ ಶಲ್ಯನನ್ನೂ ಹೊಡೆದು ಸೋಲಿಸಿದ ಪರಾಕ್ರಮಿಯೇ ಭೀಮ ವ|| ಎಂಬ ಮಾತನ್ನು ಧೃತರಾಷ್ಟ್ರ ದುರ್ಯೋಧನನೇ ಮೊದಲಾದವರು ಕೇಳಿ ಆಶ್ಚರ್ಯಭರಿತರಾದರು. ೩. ತಮ್ಮ ಮನಸ್ಸನ್ನು ಸುಡುವ ದುಖವು ಹೆಚ್ಚಾಗುತ್ತಿರಲು ಅರಗಿನಮನೆಯಲ್ಲಿ ಅಯ್ದುಜನರನ್ನೂ ತಮ್ಮ ಮಂತ್ರಶಕ್ತಿಯಿಂದ ಸುಟ್ಟರೂ ಅವರನ್ನು ದೈವಬಲವೊಂದೇ ರಕ್ಷಿಸಿತು. ದೈವಬಲವನ್ನು ಮೀರಿ ಯಾರು ತಾನೆ ಬದುಕುಲು ಸಮರ್ಥರಾಗುತ್ತಾರೆ? ಎಂದು ವ್ಯಥೆಪಟ್ಟರು. ವ|| ಭೀಷ್ಮ, ದ್ರೋಣ ಮೊದಲಾದವರು ನಿಷ್ಕೃಷ್ಟವಾದ ಮಂತ್ರಾಲೋಚನೆಯುಳ್ಳವರಾಗಿ ವಿದುರನ್ನು ಕರೆದು ಅವನೊಡನೆ ವಿಚಾರಮಾಡಿ ಪಾಂಡವರನ್ನು ನಿನಗೆ ತಿಳಿದ ರೀತಿಯಲ್ಲಿ ಬುದ್ಧಿ ಹೇಳಿ ಒಪ್ಪಿಸಿ ಕರೆದುಕೊಂಡು ಬರುವುದು ಎಂದು ಹೇಳಿ ಕಳುಹಿಸಿದರು. ಅವನು ಹಾಗೆಯೇ ಮಾಡುತ್ತೇನೆಂದು ತೇರನ್ನು ಹತ್ತಿ ದ್ರುಪದನ ಪಟ್ಟಣಕ್ಕೆ ಬಂದು ಪಾಂಡುಪುತ್ರರನ್ನು ನೋಡಿ ೪. ಕುರುರಾಜನಿಂದ ದೊಡ್ಡ ತಪ್ಪಾಗಿಹೋಯಿತು. ಆದದ್ದಾಗಿ ಹೋಯಿತು, ಕಳೆದುಹೋದುದನ್ನು ಮರೆತು ಬಿಡಬೇಕು. ಪಾಂಡುರಾಜನು ಆಳಿದ ಭೂಮಿಯನ್ನು ಬಿಡದೆ ನೀವು ಆಳಬೇಕು. ನೀವು ದೃಢಚಿತ್ತದಿಂದ ಬರಬೇಕು ಎಂದು ಹೇಳಲು ಪ್ರಯಾಣಮಾಡುವ ಕಾರ್ಯವನ್ನು ವಿದುರನೊಡನೆಯೇ ಅಯ್ವರೂ ಕೂಡಿ ಆಲೋಚಿಸಿ ಹೊರಡುವ

ವ|| ಆತನ ಬೞವೞಗೊಟ್ಟ ಮದಕರಿ ಕರೇಣು ಜಾತ್ಯಶ್ವ ಶಶಿತಾರ ಹಾರ ವಸ್ತುಗಳಂ ಕೆಯ್ಕೊಂಡು ದ್ರುಪದಜೆಯನೊಡಗೊಂಡು ದ್ರುಪದನನಿರವೇೞ್ದ್ದು ಕತಿಪಯ ಪ್ರಯಾಣಂಗಳಿಂ ಮದಗಜಪುರಮನೆಯ್ದೆ ವಂದಾಗಳ್-

ಚಂ|| ಘನಪಥಮಂ ಪಳಂಚಲೆವ ಸೌಧಚಯಂಗಳಿನಾಡುತಿರ್ಪ ಕೇ
ತನತತಿಯಿಂ ಕರೀಂದ್ರ ಗಳಗರ್ಜನೆಯಿಂ ಪಟಹಪ್ರಣಾದಮಂ|
ಘನರವಮೆಂದೆ ನರ್ತಿಸುವ ಕೇಕಿಗಳಿಂ ಕಡುರಯ್ಯಮಪ್ಪ ಹ
ಸ್ತಿನಪುರಮಂ ಜಿತೇಂದ್ರಪುರಮಂ ಪರಮೇಶ್ವರರಾಗಳೆಯ್ದಿದರ್|| ೫

ವ|| ಆಗಳಾ ಪೊೞಲ ಬೀದಿಗಳೊಳೆಲ್ಲಂ ಗಂಧೋದಕ ಪಂಚಗವ್ಯಂಗಳಂ ತಳಿಯಿಸಿ ಗುಡಿಯಂ ತೋರಣಂಗಳುಮಂ ತುಱುಗಲುಂ ಬಂಬಲುಮಾಗೆ ಕಟ್ಟಿಸಿ ಧೃತರಾಷ್ಟ್ರರ ದುರ್ಯೋಧನ ಕರ್ಣ ಶಲ್ಯ ಶಕುನಿ ನದೀತನೂಜ ಭಾರದ್ವಾಜ ಕೃಪಾದಿಗಳ್ವೆರಸಿದಿರ್ವಂದು ಯಥೋಚಿತ ಪ್ರತಿಪತ್ತಿಗಳಿಂದಯ್ವರುಮಂ ನಿಬಿಡಾಲಿಂಗನಂಗೆಯ್ದು ಮುಂದಿಟ್ಟೊಡಗೊಂಡು ವಂದು ಪೊೞಲಂಪುಗಿಸಿ ಮುನ್ನಮೆ ಸಮೆದ ಬೀಡುಗಳೊಳ್ ಬೀಡಂ ಬಿಡಿಸಿ ಸೂೞ್ಸೂ ಳೆ ಬಿರ್ದನಿಕ್ಕಿ ವಿವಿಧ ವಿನೋದಂಗಳಂ ತೋಱ ಕೆಲವು ದಿವಸಮಿರ್ದು ದ್ರೋಣ ಭೀಷ್ಮ ಕೃಪ ವಿದುರರ್ಕಳ್ ತಮ್ಮೊಳಾಲೋಚಿಸಿಯೆನ್ನ ನಡಪಿದುದರ್ಕಂ ಕೂರ್ತುದರ್ಕಂ ಪಾಂಡುಪುತ್ರರ್ಗೆ ನೆಲನಂ ಪಚ್ಚುಕೊಟ್ಟು ಪಟ್ಟಮಂ ಕಟ್ಟುವೆನೆನೆ ದುರ್ಯೋಧನನೇಗೆಯ್ದುಮೊಡಂಬಡದಿರೆ ಭೀಷ್ಮರ್ ಮುನಿದು-

ಚಂ|| ಒಡೆಯರದೇವರೆಂದು ನಿನಗಿತ್ತೊಡೆ ಪಟ್ಟಮನುರ್ಕಿದಪ್ಪೆ ಪೇೞ್
ಪೊಡವಿಗಶರಂತವರ್ಗಳಯ್ವರುಮಂ ಕ್ರಮದಿಂದೆ ಪಟ್ಟಮಂ|
ತಡೆಯದೆ ಕಟ್ಟಿ ಭೂತಳಮನಾಳಿಸದಿರ್ದೊಡದರ್ಕೆ ಸೊರ್ಕಿ ನೀಂ
ನುಡಿಯದಿರಣ್ಣ ನಿನ್ನ ನುಡಿಗಾಂ ತಡೆದಿರ್ಪೆನೆ ಪೇೞ್ ಸುಯೋಧನಾ|| ೬

ಕ್ರಮಮಱದೆನ್ನ ಕೊಟ್ಟುದನೆ ಕೊಂಡು ಮನೋಮುದದಿಂದೆ ಬಾೞ್ವುದಂ
ತವರಿವರೆಲ್ಲರುಂ ಸಮನದಲ್ಲದೆ ಮಾರ್ಮಲೆದರ್ಕಿ ಭೀಮನೊಳ್|
ಸಮರದೆ ಗರ್ವದಿಂ ಪೊಣರಲಾರ್ಪಿರೆ ಗಾವಿಲರಿನ್ನುಮೆಲ್ಲರಂ
ಯಮಸುತನುಂ ಸುರೇಂದ್ರಸುತನುಂ ಪೊಸದೀಗಳೆ ಮುಕ್ಕಿ ತೋಱರೇ|| ೭

ವಿಷಯವನ್ನು ದ್ರುಪದನಿಗೆ ಸಂತೋಷದಿಂದ ತಿಳಿಸಿದರು. ವ|| ಅವನು ಬಳುವಳಿಯಾಗಿ ಕೊಟ್ಟ ಮದ್ದಾನೆ, ಹೆಣ್ಣಾನೆ, ಜಾತಿಯ ಕುದುರೆಗಳು ಚಂದ್ರನಂತೆ ಹೊಳೆಯುತ್ತಿರುವ ಮುತ್ತಿನ ಹಾರ ಮೊದಲಾದ ಪದಾರ್ಥಗಳನ್ನು ಸ್ವೀಕರಿಸಿ ದ್ರೌಪದಿಯೊಡಗೂಡಿ ದ್ರುಪದನನ್ನು ಅಲ್ಲಿಯೇ ಇರಹೇಳಿ ಕೆಲವು ದಿನದ ಪ್ರಯಾಣಗಳಿಂದ ಹಸ್ತಿನಾಪುರದ ಸಮೀಪಕ್ಕೆ ಬಂದರು. ೫. ಆಕಾಶವನ್ನೇ ಅಪ್ಪಳಿಸುವ ಉಪ್ಪರಿಗೆಮನೆಗಳ ಸಮೂಹದಿಂದಲೂ ಚಲಿಸುತ್ತಿರುವ ಧ್ವಜಗಳಿಂದಲೂ ಶ್ರೇಷ್ಠವಾದ ಆನೆಯ ಕೊರಳಿನ ಗರ್ಜನೆಯಿಂದಲೂ ತಮಟೆಯ (ವಾದ್ಯದ) ದೊಡ್ಡ ಶಬ್ದವನ್ನು ಗುಡುಗೆಂದೇ ತಿಳಿದು ಕುಣಿದಾಡುತ್ತಿರುವ ನವಿಲುಗಳಿಂದಲೂ ಬಹು ರಮ್ಯವಾದ ಅಮರಾವತಿಯನ್ನು ಗೆದ್ದಿರುವ ಹಸ್ತಿನಾಪುರವನ್ನು ರಾಜಶ್ರೇಷ್ಠರಾದ ಪಾಂಡವರು ಆಗ ಸೇರಿದರು. ವ|| ಆಗ ಪಟ್ಟಣದ ಬೀದಿಗಳಲ್ಲೆಲ್ಲ ಶ್ರೀಗಂಧದ ನೀರನ್ನೂ ಪಂಚಗವ್ಯವನ್ನೂ (ಹಸುವಿಗೆ ಸಂಬಂಧಪಟ್ಟ ಹಾಲು ಮೊಸರು, ತುಪ್ಪ, ಗಂಜಲ, ಸಗಣಿ ಇವುಗಳನ್ನು ಮಿಶ್ರಮಾಡಿ ಶುದ್ಧಿಗಾಗಿ ಉಪಯೋಗಿಸುವ ಪದಾರ್ಥ) ಚಿಮುಕಿಸಿ ಧ್ವಜಗಳನ್ನೂ ತೋರಣಗಳನ್ನೂ ಗುಂಪುಗುಂಪಾಗಿ ಕಟ್ಟಿಸಿ ಧೃತರಾಷ್ಟ್ರನು ದುರ್ಯೋಧನ, ಕರ್ಣ, ಶಲ್ಯ, ಶಕುನಿ, ಭೀಷ್ಮ, ದ್ರೋಣ, ಕೃಪ ಮೊದಲಾದವರನ್ನೊಳಗೊಂಡು ಎದುರಾಗಿ ಬಂದು ಯಥೋಚಿತವಾದ ಮರ್ಯಾದೆ- ಸತ್ಕಾರಗಳಿಂದ ಅಯ್ದುಜನರನ್ನೂ ಗಟ್ಟಿಯಾಗಿ ಆಲಿಂಗನ ಮಾಡಿಕೊಂಡು ಮುಂದಿಟ್ಟುಕೊಂಡು ಕರೆದುತಂದು ಪಟ್ಟಣವನ್ನು ಪ್ರವೇಶಮಾಡಿದನು. ಮೊದಲೇ ಸಿದ್ಧಮಾಡಿದ್ದ ಮನೆಗಳಲ್ಲಿ ತಂಗುವ ಹಾಗೆ ಮಾಡಿ ಸಲಸಲಕ್ಕೂ ಆತಿಥ್ಯವನ್ನು ಮಾಡಿ ನಾನಾರೀತಿಯ ವಿನೋದಗಳನ್ನು ತೋರಿಸಿ ಸಂತೋಷಪಡಿಸಿದನು. ಕೆಲವು ದಿವಸಗಳಾದ ಮೇಲೆ ದ್ರೋಣ ಭೀಷ್ಮ ಕೃಪರುಗಳು ತಮ್ಮಲ್ಲಿ ಆಲೋಚನೆ ಮಾಡಿ ನಾವು ಸಾಕಿದುದಕ್ಕೂ ಪ್ರೀತಿಸಿದುದಕ್ಕೂ (ಅನುಗುಣವಾಗಿ) ಪಾಂಡವರಿಗೆ ರಾಜ್ಯವನ್ನು ಭಾಗಮಾಡಿಕೊಟ್ಟು ಪಟ್ಟವನ್ನು ಕಟ್ಟೋಣವೆಂದು ಹೇಳಲು ದುರ್ಯೋಧನನು ಏನು ಮಾಡಿದರೂ ಒಪ್ಪಲಿಲ್ಲ. ಭೀಷ್ಮರು ಕೋಪಿಸಿಕೊಂಡು-೬. ‘ಒಡೆಯರಾದ ಪಾಂಡವರು ಏನು ಮಾಡಬಲ್ಲರು ಎಂದು ನಿನಗೆ ಪಟ್ಟವನ್ನು ಕೊಟ್ಟರೆ ಕೊಬ್ಬಿಹೋಗಿದ್ದೀಯೆ. ಹೇಳು ಭೂಮಿಗೆ ಒಡೆಯರಾದ ಆ ಆಯ್ದುಜನರಿಗೂ ಸಾವಕಾಶಮಾಡದೆ ಕ್ರಮವಾಗಿ ಪಟ್ಟವನ್ನು ಕಟ್ಟದೆ ರಾಜ್ಯವನ್ನೂ ಆಳಿಸುದಿದ್ದುದಕ್ಕಾಗಿ ಸೊಕ್ಕಿ ನೀನು ಮಾತನಾಡಬೇಡವಯ್ಯಾ, ನಿನ್ನ ಮಾತಿಗೆ (ಅಪ್ಪಣೆಗೆ) ನಾನು ಕಾದಿರುತ್ತೇನೆಯೇ ಹೇಳು ಸುಯೋಧನ’. ೭. ‘ಕ್ರಮವಾದುದು ಯಾವುದು ಎಂಬುದುನ್ನು ತಿಳಿದುಕೊಂಡು ನಾನು ಕೊಟ್ಟುದುದನ್ನು ಮನಸ್ಸಂತೋಷದಿಂದ (ತೃಪ್ತಿಯಾಗಿ) ಬಾಳುವುದು; ಹಾಗೆ ಅವರು ಇವರು

ವ|| ಅದಲ್ಲದೆಯುಂ ಪಾಂಡುಪುತ್ರರಪ್ಪೊಡೆ ಪಾಂಡುರಾಜಂಗೆ ಬೆಸಕೆಯ್ಯದುದನೆನಗೆ ಬೆಸಕೆಯ್ವರೆನ್ನೆಂದುದಂ ವಿಱುವರಲ್ಲರಾನವರ್ಗೆ ಪಟ್ಟಮಂ ಕಟ್ಟಿ ನೆಲನಂ ಪಚ್ಚುಕೊಡುವಾಗಳಡ್ಡಂ ಬರ್ಪ ಗಂಡರಂ ನೋೞ್ಪೆನೆಂದು ಬೀಷ್ಮರ್ ಬಗ್ಗಿಸಿದೊಡೆ ದುರ್ಯೋಧನನತಿ ಸಂಭ್ರಮಾಕುಳಿತನಾಗಿ ನೀಮೆಂದುದನೆಂದು ಬಾೞ್ವೆನೆಂದೊಡಪ್ಪುದೆಂದು-

ಮ|| ಧರಣೀನಾರಿಗೆ ಪಾಂಡುವಿಂ ಬೞಯಮಿಲ್ಲಾರುಂ ಪೆಱರ್ ಗಂಡರಂ
ತಿರಲೇವಂ ಬಡೆದಿರ್ದೊಡೞ್ದು ಕಿಡುಗುಂ ಸಪ್ತಾಂಗವಿ ರಾಜಕ|
ಕ್ಕರಸಂ ಧರ್ಮಜನಕ್ಕುಮೆಂದು ನಯದಿಂ ನಿಶೈಸಿ ಕಲ್ಯಾಣ ಕಾ
ರ್ಯರತರ್ ಕಟ್ಟಿದರಾ ಯುಷ್ಠಿರನೃಪಂಗುತ್ಸಾಹದಿಂ ಪಟ್ಟಮಂ|| ೮

ವ|| ಕಟ್ಟಿ ಸೇತುಬಂಧಮಂ ತಾಗೆ ಗಂಗಾನದಿಯ ತೆಂಕಣ ಪಡುವಣ ನೆಲನಂ ನೀಮಾಳ್ವುದು ಮೂಡಣ ಬಡಗಣ ನೆಲನಂ ದುರ್ಯೋಧನನಾಳ್ವುದೆಂದು ಧೃತರಾಷ್ಟ್ರಂ ಪೂರ್ವಸ್ಥಿತಿಳ್ ಪಚ್ಚುಕೊಟ್ಟು ದುರ್ಯೋಧನನಪ್ಪೊಡೆ ಪೊಲ್ಲಮಾನಸಂ ನೀಮುಂ ತಾಮುಮೊಂದೆಡೆಯೊಳಿರೆ ಕಿಸುರುಂ ಕಲಹಮುಮೆಂದುಂ ಕುಂದದದು ಕಾರಣದಿಂದಿಲ್ಲಿಗಱುವತ್ತು ಯೋಜನದೊಳಿಂದ್ರಪ್ರಸ್ಥಮೆಂಬುದು ಪೊೞಲಲ್ಲಿಗೆ ಪೋಗಿ ಸುಖದಿಂ ರಾಜ್ಯಂಗೆಯ್ಯುತ್ತಿರಿ ಮೆಂಬುದುಮಂತೆಗೆಯ್ವೆಮೆಂದು ಸಮಸ್ತ ಪರಿವಾರ ಪರಿವೃತರಾಗಿ-

ಮು|| ಒಡವರ್ಪುಗ್ರ ಮದೇಭ ವಾಜಿ ಗಣಿಕಾನರ್ಘ್ಯಾದಿ ರತ್ನಂಗಳೊಳ್
ತೊಡರ್ದೊಪ್ಪುತ್ತಿರೆ ಲಕ್ಷ್ಮಿ ದಂತಿ ತುರಗಂ ಶ್ರೀ ದಿವ್ಯಕಾಂತಾಜನಂ|
ತೊಡೆವೆಂಬೊಂದುಮನಾ ಸುರಾಸುರರಿನಾ ಗೋವಿಂದನಿಂ ಮುನ್ನೆ ಕೋ
ಳ್ಪಡೆದಂಭೋನಿಯಂತೆ ಬಂದು ನೆಗೞಂದ್ರಪ್ರಸ್ಥಮಂ ಧರ್ಮಜಂ|| ೯

ಮಟ್ಟರಗಳೆ|| ಎಯ್ದುವುದುಂ ತತ್ಪುರದುಪವನಂಗಳವಿರಳ ಮಳಯಾವಿಳಕಂಪಿತಂಗ|

ಳವಿರಳ ಕುಸುಮಾವಳಿ ಕಂಪುವೇ  ಸೊಗಯಿಪ ಕಿಱು ಮಿಡಿಗಳೊಳೊಪ್ಪಿ ತೋ| ಲವಣಾಬ್ಧಿಯೆ ಬಳಸಿದುದೆನಿಸುವಗೞ ಬಳಸೆಸೆದಿರೆ ಕೋಂಟೆಯ ಚೆಲ್ವು ಪೊಗೞ|

ಲರಿದೆನಿಸಿರೆ ನೆಗೆದುದು ನಭಮನೆಯ್ದೆ ಮಿಳಿರ್ವ ಪತಾಕಾವಳಿ ದಿವಮನೆಯ್ದೆ ಬಳಸಿದ ಕೆಂಬೊನ್ನ ಮದಿಲ್ಗಳೊಳಗೆ ಮಣಿಮಯ ಭವನಾವಳಿ ತೊಳಗಿ ಬೆಳಗೆ

ರಸ ರಸದ ಬಾವಿ ಮನೆ ಮನೆಗೆ ಬೇ ಕಿಸುಗಲ್ಗಳ ರಜದ ಕಣಿವೆರಸು ತೋ ಸುರುಕುಜದ ನೆೞಲೊಳಂಗಣದೊಳೇನುಮಲಪಿಲ್ಲದೆ ಕಟ್ಟಿರೆ ಕಾಮಧೇನು

(ಪಾಂಡವರು ಕೌರವರು) ಸಮ ಎಂಬುದನ್ನು ತಿಳಿಯದೆ ಪ್ರತಿಭಟಿಸಿ ಭೀಮನನ್ನು ಯುದ್ಧದಲ್ಲಿ ಅಹಂಕಾರದಿಂದ ದಡ್ಡರಾದ ನೀವೆಲ್ಲ ಕಾದಬಲ್ಲಿರಾ. ಧರ್ಮರಾಜನೂ ಅರ್ಜುನನೂ ಈಗಲೇ ನಿಮ್ಮನ್ನು ಹೊಸೆದು ತಿಂದು ತೋರಿಸಲಾರರೇ?’ ವ|| ಅಷ್ಟೇ ಅಲ್ಲದೆ ಪಾಂಡವರು (ತಮ್ಮ ತಂದೆಯಾದ) ಪಾಂಡುರಾಜನಿಗೆ ಮಾಡದಿದ್ದುದನ್ನು ನನಗೆ ಮಾಡುತ್ತಾರೆ. ನಾನು ಹೇಳಿದುದನ್ನು ಮೀರುವವರಲ್ಲ. ನಾನು ಅವರಿಗೆ ಪಟ್ಟವನ್ನೂ ಕಟ್ಟಿ ರಾಜ್ಯವನ್ನು ಭಾಗಮಾಡಿಕೊಡುವಾಗ ಅಡ್ಡವಾಗಿ ಬರುವ ಶೂರರನ್ನು ನೋಡಿಯೆ ಬಿಡುತ್ತೇನೆ ಎಂದು ಗದರಿಸಲು ದುರ್ಯೋಧನನು ವಿಶೇಷ ಗಾಬರಿಗೊಂಡು ನೀವು ಹೇಳಿದುದನ್ನೇ ಒಪ್ಪಿ ಬಾಳುತ್ತೇನೆ ಎಂದು ಒಪ್ಪಿಕೊಂಡನು. ೮. ಈ ಭೂದೇವಿಗೆ ಪಾಂಡುರಾಜನಾದ ಮೇಲೆ ಬೇರೆ ಒಡೆಯರಾದವರಾರೂ ಇಲ್ಲ. ಹಾಗಿರುವಾಗ ನಿಮ್ಮ ಮಾತ್ಸರ್ಯಕ್ಕೊಳಗಾದರೆ ರಾಜ್ಯದ ಸಪ್ತಾಂಗಗಳೂ ನಾಶವಾಗುತ್ತವೆ. ಈ ರಾಜ್ಯಕ್ಕೆ ಧರ್ಮರಾಯನು ರಾಜನಾಗಲಿ ಎಂದು ರಾಜನೀತಿಗನುಗುಣವಾಗಿ (ಭೀಷ್ಮಾದಿಗಳು) ಆ ಧರ್ಮರಾಜನಿಗೆ ಉತ್ಸಾಹದಿಂದ ಪಟ್ಟವನ್ನು ಕಟ್ಟಿದರು. ವ|| ರಾಮಸೇತುವಿನಿಂದ ಹಿಡಿದು ಗಂಗಾನದಿಯ ದಕ್ಷಿಣಪಶ್ಚಿಮಭಾಗದ ಭೂಮಿಯನ್ನು ನೀವು ಆಳುವುದು. ಪೂವೋತ್ತರಭಾಗದ ನೆಲವನ್ನು ದುರ್ಯೋಧನನಾಳತಕ್ಕದ್ದು ಎಂದು ಧೃತರಾಷ್ಟ್ರನು ಮೊದಲಿನ ರೀತಿಯಲ್ಲಿಯೇ ಭಾಗಮಾಡಿಕೊಟ್ಟು; ದುರ್ಯೋಧನನಾದರೆ ದುರ್ಬುದ್ಧಿಯವನು. ನೀವೂ ಅವರೂ ಒಂದೇ ಕಡೆ ಇದ್ದರೆ ಅಸೂಯೆಯೂ ಕಲಹವೂ ಎಂದೂ ತಪ್ಪುವುದಿಲ್ಲ. ಆದ ಕಾರಣದಿಂದ ಇಲ್ಲಿಗೆ ಅರವತ್ತುಯೋಜನ ದೂರದಲ್ಲಿ ಇಂದ್ರಪ್ರಸ್ಥವೆಂಬ ಪಟ್ಟಣವಿದೆ. ಅಲ್ಲಿಗೆ ಹೋಗಿ ಸುಖವಾಗಿ ರಾಜ್ಯವಾಳುತ್ತಿರಿ ಎಂದನು. ಹಾಗೆಯೇ ಮಾಡುತ್ತೇವೆ ಎಂದು ಪಾಂಡವರು ಸಮಸ್ತ ಪರಿವಾರ ಸಹಿತರಾಗಿ- ೯. ಜೊತೆಯಲ್ಲಿ ಬರುತ್ತಿದ್ದ ಭಯಂಕರವಾದ ಆನೆ, ಕುದುರೆ, ವೇಶ್ಯೆಯರು, ವಿಶೇಷ ಬೆಲೆಯುಳ್ಳ ರತ್ನ ಇವೆಲ್ಲವೂ ಜೊತೆಯಲ್ಲಿ ಪ್ರಕಾಶಿಸುತ್ತಿರಲು ಆ ಪಾಂಡವರು ದೇವದಾನವರಿಂದಲೂ ಶ್ರೀಕೃಷ್ಣನಿಂದಲೂ ಲಕ್ಷ್ಮಿ, ಐರಾವತ, ಉಚ್ಚೆ ಶ್ರವಸ್ಸು, ಅಪ್ಸರಸ್ತ್ರೀಯರು, ಚಿಂತಾಮಣಿ ಮೊದಲಾದವುಗಳು ಸೂರೆಯಾಗುವುದಕ್ಕೆ ಮೊದಲಿದ್ದ ಸಮುದ್ರದ ಹಾಗೆ ಸಂಪೂರ್ಣವಾದ ಐಶ್ವರ್ಯದಿಂದ ಬಂದು

ಪರದರ ಪಾರ್ವರ ಸೂಳೆಯರ ಮನೆಗಳವು ಧನದನ ಮನೆಯುಮನೇೞಪ ಮನೆಗಳವು ಪೊೞಲ ಬೆಡಂಗಂ ಮೆಚ್ಚಿ ಮೆಚ್ಚಿ ನೋಡಿ ದಿವಿಜೇಂದ್ರ ವಿಳಾಸದೊಳಿಂತು ಕೂಡಿ

ಪರಿತಂದಾಗಳ್ ಪಿರಿದೊಸಗೆವೆರಸಿ ಪುರಕಾಂತೆಯರಾದದಿಂದೆ ಪರಸಿ
ಸೂಸುವ ಶೇಷಾಕ್ಷತಮಂ ಸಮಂತು ಪಿರಿದುಂ ಮನ ಸಂತಸದಿಂದಮಾಂತು
ಕರುಮಾಡಮನಾದರದಿಂದಮೇಱ ಕೆಲದೊಳ್ಮಾಡಂಗಳನಱದು ತೋಱ
ಮಣಿ ಕನಕ ರಜತ ವಸ್ತುಗಳನಿತ್ತು ಬೇಡಿದ ನಾಡುಗಳನವಯವದಿಂದಮಿತ್ತು
ಕರಿ ತುರಗ ಬಲಂಗಳ್ ಪೆರ್ಚುವಂತು ಮಲೆಯುಂ ಮಂಡಲಮುಂ ಬೆರ್ಚುವಂತು
ಕೊಂಡಾಡುವ ನಾಲ್ವರುಮನುಜರೊಳಗೆ ನೆಗೞ್ದರಿಗನ ತೇಜಮೆ ತೊಳಗಿ ಬೆಳಗೆ
ನೆಲನಂ ಪ್ರತಿಪಾಲಿಸಿ ಧರ್ಮಸೂನು ಸೂಖಮಿರ್ದಂ ರಿಪುಬಳ ತಿಮಿರಭಾನು|| ೧೦

ವ|| ಅಂತಜಾತಶತ್ರು ಶತ್ರುಪಕ್ಷ ಕ್ಷಯಕರ ಕರವಾಳ ದುಷ್ಟ್ರಾಭೀಳ ಭುಜಂಗಮೂರ್ತಿ ವಿಶ್ವ ವಿಶ್ವಂಭರಾಧಾರಮಪ್ಪರಿಕೇಸರಿಯ ತೋಳ್ವಲದೊಳ್ ರಾಜ್ಯಂಗೆಯ್ಯುತಿರ್ಪನ್ನೆಗಂ ವಿಕ್ರಾಂತತುಂಗ ನೊಂದೆಡೆಯೊಳಿರ್ಪಿರವಿಂಗುಮ್ಮಳಿಸಿ ದಿಗಂಗನಾ ಮುಖಾವಲೋಕನಂಗೆಯ್ಯಲ್ ಬಗೆದು-

ಮ|| ಸ್ರ|| ಸೆಣಸುಳ್ಳುದ್ವ ತ್ತರಂ ತಳ್ತಿಱಯದೆ ಚತುರಂಭೋ ಪರ್ಯಂತಮಂ ಧಾ ರಿಣಿಯಂ ತಾಂ ಪೋಗಿ ಬಾಯ್ಕೇಳಿಸದೆ ಮುನಿಜನಕ್ಕಿಷ್ಟಿ ವಿಘ್ನಂಗಳಂ ದಾ|

ರುಣ ದೈತ್ಯರ್ ಮಾಡೆ ನೀಡಿಲ್ಲದೆ ಚಲದಾಟಂದು ಕೊಂದಿಕ್ಕದೊರ್ವಂ
ಗುಣಮುಟೆಂದುಂಡು ಪಟ್ಟರ್ಪನನಣಮೆ ನಿರುದ್ಯೋಗಿಯಂ ಭೂಪನೆಂಬರ್|| ೧೧

ವ|| ಎಂದು ವಿಜಿರ್ಗೀಷುವೃತ್ತೋದ್ಯುಕ್ತನಾಗಲ್ ಬಗೆದು-

ಧರ್ಮರಾಯನು ಇಂದ್ರಪ್ರಸ್ಥಪುರವನ್ನು ಸೇರಿದನು. ೧೦. ಆ ಪಟ್ಟಣದ ತೋಟಗಳು ದಟ್ಟವಾದ ಮಲಯಮಾರುತದಿಂದ ಅಲುಗಾಡಿಸಲ್ಪಟ್ಟು ಸಾಂದ್ರವಾದ ಪುಷ್ಪರಾಶಿಯು ಸುಗಂಧವನ್ನು ಬೀರುತ್ತಿತ್ತು. ಸೊಗಸಾಗಿ ಕಾಣುವ ಸಣ್ಣ ಹೀಚುಗಳು ಒಪ್ಪಿ ತೋರುತ್ತಿದ್ದುವು, ಉಪ್ಪಿನ ಸಮುದ್ರವೇ ಸುತ್ತುವರಿದಿದೆಯೋ ಎಂಬಂತಿದ್ದ ಕಂದಕಗಳು ಸುತ್ತಿ ಪ್ರಕಾಶಿಸುತ್ತಿರಲು ಕೋಟೆಯ ಸೌಂದರ್ಯವು ಹೊಗಳುವುದಕ್ಕೆ ಅಸಾಧ್ಯವೆನಿಸಿತ್ತು, ಆಕಾಶದವರೆಗೆ ಮೇಲಕ್ಕೆದ್ದು ಅಲುಗಾಡುತ್ತಿರುವ ಬಾವುಟಗಳ ಸಾಲು ಸ್ವರ್ಗದವರೆಗೂ ಹೋಗಿದ್ದುವು. ಸುತ್ತುವರಿದಿರುವ ಕೋಟೆಯ ಗೋಡೆಗಳೊಳಗೆ ರತ್ನಖಚಿತವಾದ ಅರಮನೆಗಳ ಸಮೂಹಗಳು ತೊಳಗಿ ಬೆಳಗುತ್ತಿದ್ದುವು, ರಸಯುಕ್ತ ಬಾವಿಗಳು ಪ್ರತಿಮನೆಯಿಂದಲೂ ಬೇರೆ ಬೇರೆ ಕೆಂಪುರತ್ನಗಳ ಧೂಳಿನ ಗಣಿಯಿಂದ ಕೂಡಿ ತೋರುತ್ತಿದ್ದುವು. ಕಲ್ಪವೃಕ್ಷದ ನೆರಳಿನಲ್ಲಿ ಕಾಮಧೇನುವು ಯಾವ ಅಲೆತವೂ ಇಲ್ಲದೆ ಸುಖವಾಗಿದ್ದಿತು. ವ್ಯಾಪಾರಿಗಳ, ಬ್ರಾಹ್ಮಣರ, ವೇಶ್ಯಾಜನರ ಮನೆಗಳು ಕುಬೇರನ ಮನೆಯನ್ನು ತಿರಸ್ಕರಿಸುತ್ತಿದ್ದುವು. ಆ ಪಟ್ಟಣದ ಬೆಡಗನ್ನು ವಿಶೇಷವಾಗಿ ಮೆಚ್ಚಿ ದೇವೇಂದ್ರನ ವೈಭವದಿಂದ ಕೂಡಿ ಪಾಂಡವರು ನಡೆದುಬಂದಾಗ ಪಟ್ಟಣದ ಸ್ತ್ರೀಜನರು ವಿಶೇಷಸಂತೋಷದಿಂದ ಕೂಡಿ ಆದರದಿಂದ ಹರಸಿದರು. ಅವರು ಚೆಲ್ಲುವ ಮಂತ್ರಾಕ್ಷತೆಗಳನ್ನೂ ಸಂಪೂರ್ಣವಾಗಿ ಮನಸ್ಸಂತೋಷದಿಂದ ಸ್ವೀಕರಿಸಿ ಉಪ್ಪರಿಗೆಯನ್ನು ಆದರದಿಂದ ಹತ್ತಿ ಸುಖವಾಗಿನೆಲಸಿದರು. ಪಕ್ಕದಲ್ಲಿದ್ದ ಮಾಡಗಳನ್ನು ಪರಿಚಯಮಾಡಿಕೊಂಡರು. ಅರ್ಥಿಗಳು ಬೇಡಿದ ಚಿನ್ನ, ಬೆಳ್ಳಿ, ರತ್ನಖಚಿತವಾದ ವಸ್ತುಗಳನ್ನೂ ರಾಜ್ಯಗಳನ್ನೂ ಶ್ರಮವಿಲ್ಲದೆ ದಾನಮಾಡಿದರು. ಆನೆ, ಕುದುರೆ, ಕಾಲಾಳಿನ ಬಲಗಳನ್ನೂ ಹೆಚ್ಚಿಸಿಕೊಂಡರು. ಬೆಟ್ಟಗುಡ್ಡಗಳೂ ಸಾಮಂತಮಂಡಲವೂ ಹೆದರುವಂತೆ ಸ್ತೋತ್ರಮಾಡಲ್ಪಟ್ಟರು. ನಾಲ್ಕು ಜನರಲ್ಲಿ ಅರ್ಜುನನ ತೇಜಸ್ಸೇ ತೊಳಗಿ ಬೆಳಗುತ್ತಿರಲು ಶತ್ರುಸೈನ್ಯವೆಂಬ ಕತ್ತಲಿಗೆ ಸೂರ್ಯನೋಪಾದಿಯಲ್ಲಿದ್ದ ಧರ್ಮರಾಯನು ರಾಜ್ಯವನ್ನು ಸುಖವಾಗಿ ಪರಿಪಾಲಿಸುತ್ತಿದ್ದನು. ವ|| ಶತ್ರುಗಳೇ ಹುಟ್ಟಿರದ ಧರ್ಮರಾಯನು ಶತ್ರುಸೈನ್ಯವನ್ನು ನಾಶಪಡಿಸುವ ಕತ್ತಿಯೆಂಬ ಹಲ್ಲಿನಿಂದ ಭಯಂಕರವಾದ ಸರ್ಪದಂತಿರುವ, ಸಮಸ್ತಭೂಮಿಗೂ ಆಶ್ರಯವಾಗಿರುವ ಅರಿಕೇಸರಿಯ ಬಾಹುಬಲದ ಆಶ್ರಯದಿಂದ ರಾಜ್ಯಭಾರಮಾಡುತ್ತಿರಲು ವಿಕ್ರಾಂತತುಂಗನಾದ ಅರ್ಜುನನು ಒಂದೇ ಸ್ಥಳದಲ್ಲಿರುವ ಸ್ಥಿತಿಗೆ ಜುಗುಪ್ಸೆಪಟ್ಟು ಜೈತ್ರಯಾತ್ರೆಯನ್ನು ಮಾಡಲು ಯೋಚಿಸಿದನು. ೧೧. ಅಸೂಯೆಯಿಂದ ಕೂಡಿ ದಾರಿತಪ್ಪಿ ನಡೆಯುವವರನ್ನು ಸಂಸಿ ಕತ್ತರಿಸದೆ ನಾಲ್ಕು ಸಮುದ್ರದಿಂದ ಸುತ್ತುವರಿಯಲ್ಪಟ್ಟ ಭೂಮಂಡಲವನ್ನು ತನ್ನ ಆಜ್ಞಾನವನ್ನಾಗಿ ಮಾಡಿಕೊಳ್ಳದೆ ಋಷಿಗಳ ಯಜ್ಞಕ್ಕೆ ವಿಘ್ನಮಾಡುತ್ತಿರುವ ದುಷ್ಟ ರಾಕ್ಷಸರನ್ನು ಸ್ವಲ್ಪವೂ ಸಾವಕಾಶವಿಲ್ಲದೆ ಪ್ರತಿಭಟಿಸಿ ಕೊಂದಿಕ್ಕದೆ ತನ್ನಲ್ಲಿ ಗುಣವುಂಟೆಂದು ಹೇಳುತ್ತ ಊಟಮಾಡಿ ಮಲಗಿರುವ ಒಬ್ಬ ನಿರುದ್ಯೋಗಿಯನ್ನು ರಾಜನೆನ್ನುತ್ತಾರೆಯೇ? ವ|| ಎಂದು ಯೋಚಿಸಿ ಜೈತ್ರಯಾತ್ರೆಗೆ

ಚಂ|| ಅಱಪಿದೊಡೆನ್ನ ಪೋಗನಿನಿಯಳ್ಗೆ ಮನಂ ಮಱುಕಕ್ಕೆ ನೀಳ್ದ ಕ ಣ್ಣೊದುಗುವಶ್ರುವಾರಿಗೆ ತೊದಳ್ನುಡಿ ಲಲ್ಲೆಗೆ ಪಕ್ಕುಗೊಟ್ಟು ಕಾ|
ಲ್ಗೆಱಗಿರೆ ಪೋಗು ಕೆಟ್ಟಪುದು ಮೋಹಮಯಂ ನಿಗಳಂ ಕಳತ್ರಮೆಂ ದಱಪದೆ ನಟ್ಟಿರುಳ್ ಮದು ಸಾರ್ಚಿದ ನಲ್ಲಳ ತಳ್ತ ತೋಳ್ಗಳಂ|| ೧೨

ವ|| ಮೆಲ್ಲಮೆಲ್ಲನೆ ಪತ್ತುವಿಡಿಸಿ ತನ್ನ ತೊಟ್ಟ ದಿವ್ಯಾಭರಣಂಗಳೆಲ್ಲಮಂ ಕಳೆದು ದಿವ್ಯಶರಗಳಂ ಬಿಗಿದುಕೊಂಡು ದಿವ್ಯಚಾಪಮಂ ಪಿಡಿದು ಪ್ರಥಮ ಚಳಿತ ದಕ್ಷಿಣ ಚರಣನಾಗಿನಿಜನಿವಾಸದಿಂ ಪೊಱಮಟ್ಟು ಖಾಂಡವಪ್ರಸ್ಥದಿಂದುತ್ತರಾಭಿಮುಖನಾಗಿ ಕಾಮ್ಯಕವನದೊಳಗನೆ ನೀಲಪರ್ವತದ ಮೇಗನೆ ಪೋಗಿ-

ಚಂ|| ಸಗರರ ಮೇಲೆ ಗಂಗೆಯನನಾಕುಲದಿಂ ತರಲಾ ಭಗೀರಥಂ
ನೆಗೞೆತಪೋನಿಯೋಗದೊಳವಂಗಮರಾಪಗೆ ಮೆಚ್ಚಿ ಪಾಯ್ವುದುಂ|
ಗಗನದಿನಂಧಕ ದ್ವಿಷ ಜಟಾಟವಿಯೊಳ್ ಬೞಕಾದ ಶೈಲದೊಳ್
ಸೊಗಯಿಸೆ ಪಾಯ್ದುದಿಂತಿದುವೆ ಬಂಧುರ ಕೂಟ ಕುಳಂ ಹಿಮಾಚಳಂ|| ೧೩

ಮ|| ಸ್ರ|| ವಿಲಸತ್ಕಲ್ಲೋಲ ನಾದಂ ನೆಗೞರೆ ನಿಜ ಕೂಟಾಗ್ರದೊಳ್ ಪಾಯ್ವ ಗಂಗಾ
ಜಲದಿಂ ಮೂರ್ಧಾಭಿಷೇಕೋನ್ನತಿ ನಿಲೆ ಚಮರೀ ಲೋಲ ಲಾಂಗೂಲಮಾಲಾ|
ವಲಿ ವಿಕ್ಷೇಪಂಗಳಿಂ ತಚ್ಚಮರರುಹ ಮಹಾಶೋಭೆ ಕೈಗಣ್ಮೆ ವಿಶ್ವಾ
ಚಲ ಚಕ್ರೇಶತ್ವಮುಂ ತಾಳ್ದಿದುದಖಿಳ ಧರಾರಮ್ಯಹೈಮಾಚಳೇ ದ್ರಂ|| ೧೪

ವ|| ಎಂದು ಮೆಚ್ಚಿ-

ಕಂ|| ಚಾರು ವಿವಿಧಾಗ್ನಿಕಾರ್ಯ
ಪ್ರಾರಂಭ ಮಹಾದ್ವಿಜನ್ಮ ಘೋಷದಿನಂಹೋ|
ದೂರಮುಮವನಿತವಾಳಂ
ಕಾರಂ ಸಂಸಾರ ಸಾರ ಗಂಗಾದ್ವಾರಂ|| ೧೫

ವ|| ಎನೆ ಸೊಗಯಿಸುವ ಗಂಗಾದ್ವಾರದೊಳ್ ಮುನಿಜನಂಗಳ ಬೇಳ್ವೆಗಳ್ಗುಪದ್ರವಂಗೆಯ್ವ ನಿಶಾಟಕೋಟಿಯಂ ನಿಶಿತ ಶರಕೋಟಿಯಿಂದಮುಚ್ಚಾಟಿಸಿ ಕೆಲವು ದಿವಸಮಿರ್ದಲ್ಲಿ ಪಡೆಮೆಚ್ಚೆ ಗಂಡನ ಗಂಡಗಾಡಿಯಂ ಕಂಡು ಫಣೀಂದ್ರನ ಕನ್ನೆ ಮದನಲತೆಯೆಂಬ ನಾಗಕನ್ನೆ ಕಣ್ಬೇಟಂಗೊಂಡು ತನ್ನ ಲೋಕಕ್ಕೊಡಗೊಂಡು ಪೋಗಲ್-

ಹೊರಡಬೇಕೆಂದು ನಿಶ್ಚಯಿಸಿದನು. ೧೨. ತನ್ನ ಜೈತ್ರಯಾತ್ರಾಪ್ರಯಾಣ ವಿಷಯವನ್ನು ಪ್ರಿಯಳಾದ ದ್ರೌಪದಿಗೆ ತಿಳಿಸಿದರೆ ಆ ಕಾರ್ಯಕ್ಕೆ ಅಡ್ಡಿಯಾಗುತ್ತದೆ. ಅವಳ ಮನಸ್ಸಿನ ದುಖದಿಂದ ಕೂಡಿದ ಕಣ್ಣೀರಿಗೂ ತೊದಳ್ನುಡಿಯ ಪ್ರಿಯವಾರ್ತೆಗೂ ಮನಸೋತು, ಅವಳು ನನ್ನ ಕಾಲಿಗೆರಗಿದರೆ ನನ್ನ ಪ್ರಯಾಣಕ್ಕೆ ವಿಘ್ನವುಂಟಾಗುತ್ತದೆ. ಹೆಂಡತಿಯು ಮೋಹಮಯವಾದ ಸರಪಣಿಯೇ ಸರಿ ಎಂದು ಅವಳಿಗೆ ತಿಳಿಸದೆಯೇ ನಡುರಾತ್ರಿಯಲ್ಲಿ ಮೈಮರೆತು ಮಲಗಿ ತನ್ನ ಸಮೀಪಕ್ಕೆ ನೀಡಿದ್ದ ಅವಳ ತೋಳುಗಳನ್ನು ವ|| ನಿಧಾನವಾಗಿ ಬಿಡಿಸಿಕೊಂಡು ತಾನು ಧರಿಸಿದ್ದ ಉತ್ತಮ ಒಡವೆಗಳನ್ನೆಲ್ಲ ಕಳೆದಿಟ್ಟು ಶ್ರೇಷ್ಠವಾದ ಬತ್ತಳಿಕೆಯನ್ನು ಬಿಗಿದುಕೊಂಡು ಉತ್ತಮವಾದ ಬಿಲ್ಲನ್ನು ಹಿಡಿದು ಬಲಗಾಲನ್ನು ಮುಂದಿಟ್ಟು ತನ್ನ ಮನೆಯಿಂದ ಹೊರಟು ಖಾಂಡವಪ್ರಸ್ಥದಿಂದ ಉತ್ತರದ ಕಡೆಗೆ ಹೊರಟು ಕಾಮ್ಯಕವನದೊಳಗಿನಿಂದಲೇ ನೀಲಪರ್ವತದ ಮೇಲಕ್ಕೆ ಬಂದನು. ೧೩. ತನ್ನ ಪಿತೃಗಳಾದ ಸಗರರ (ಭಸ್ಮರಾಶಿಯ) ಮೇಲೆ ಗಂಗೆಯನ್ನು ತರಲು ಆ ಭಗೀರಥನು ತಪಸ್ಸಿನಲ್ಲಿ ನಿರತನಾಗಲು ಅವನ ತಪಸ್ಸಿಗೆ ಮೆಚ್ಚಿ ದೇವನದಿಯಾದ ಗಂಗೆಯು ಮೊದಲು ಅಂಧಕಾಸುರನ ಶತ್ರುವಾದ ಶಿವನ ಜಟೆಯೆಂಬ ಕಾಡಿನಲ್ಲಿಯೂ ಬಳಿಕ ಅಡ್ಡವಾದ ಪರ್ವತದಲ್ಲಿಯೂ ಸೊಗಸಿನಿಂದ ಹರಿದಳು. ಅನೇಕ ಶಿಖರಗಳ ಸಮೂಹದಿಂದ ಮನೋಹರವಾಗಿರುವ ಆ ಹಿಮಾಚಲ ಪರ್ವತವೇ ಇದು. ೧೪. ಪ್ರಕಾಶಮಾನವಾದ ಅಲೆಗಳ ಧ್ವನಿಯು ಉಂಟಾಗುತ್ತಿರಲು ತನ್ನ ಶಿಖರಗಳ ತುದಿಯಲ್ಲಿ ಹರಿಯುವ ಗಂಗೋದಕದಿಂದ ಪಟ್ಟಾಭಿಷೇಕದ ಮಾನ್ಯತೆಯುಂಟಾಗಲು ಚಮರೀಮೃಗಗಳ ಮನೋಹರವಾದ ಬಾಲದ ತುದಿಯ ಕೂದಲುಗಳ ಸಮೂಹದ ಬೀಸುವಿಕೆಯಿಂದ ಚಾಮರಗಳನ್ನು ಬೀಸುವ ವೈಭವವು ಅಕವಾಗುತ್ತಿರಲು ಅಖಂಡ ಪ್ರಪಂಚದಲ್ಲಿರುವ ಎಲ್ಲ ಬೆಟ್ಟಗಳ ಚಕ್ರವರ್ತಿ ಪದವಿಯನ್ನು ಶ್ರೇಷ್ಠವಾದ ಈ ಹಿಮಾಚಲ ಪರ್ವತವು ತಾಳಿತು. ೧೫. ಗಂಗಾದ್ವಾರವೆಂಬ ಪುಣ್ಯಕ್ಷೇತ್ರವು ಮನೋಹರವೂ ನಾನಾ ವಿಧವೂ ಆದ ಮಹಾಬ್ರಾಹ್ಮಣರ ವೇದಘೋಷದಿಂದ ಪಾಪದೂರವೂ ಭೂಮಂಡಲಕ್ಕೆ ಅಲಂಕಾರ ಪ್ರಾಯವೂ ಸಂಸಾರಸಾರವೂ ಆಯಿತು. ವ|| ಇಂತಹ ಸೊಗಸಾಗಿರುವ ಗಂಗಾದ್ವಾರದಲ್ಲಿ ತಪಸ್ವಿಗಳ ಯಜ್ಞಕಾರ್ಯಕ್ಕೆ ಹಿಂಸೆಯನ್ನು ಮಾಡುವ ರಾಕ್ಷಸ ಸಮೂಹವನ್ನು ಹರಿತವಾದ ಬಾಣಗಳ ರಾಶಿಯಿಂದ ಹೊಡೆದೋಡಿಸುತ್ತ ಅಲ್ಲಿ ಕೆಲವು ದಿವಸವಿದ್ದನು. ಅಲ್ಲಿಯೇ

ಉ|| ಆಗಳುಮಿಂದು ಸೂರ್ಯರಣಮಿಲ್ಲದೆ ಕೞ್ತಲೆಯೆಂಬುದಿಲ್ಲ ತ
ದ್ಭೋಗಿ ಫಣಾಮಣಿ ದ್ಯುತಿಯೆ ಕೞ್ತಲೆಯಂ ತಲೆದೋಱಲೀಯದಾ||
ನಾಗರ ನಾಗಕನ್ನೆಯರ ರೂಪುಗಳಿಟ್ಟಳಮಾಗೆ ಬೋಗಿಗಳ್
ಬೋಗಿಗಳೆಂಬ ಭೋಗಿಗಳೆ ಭೋಗಿಗಳಲ್ಲಿಯು ಭೋಗನಾಯಕರ್|| ೧೬

ವ|| ಎಂದು ನಾಗಕನ್ನೆ ನಾಗಲೋಕದ ವಿಳಾಸಂಗಳಂ ತೋಱುತ್ತುಂ ತನ್ನ ಕೆೞಗಣ ನಾಗವಿಮಾನಕ್ಕೆ ವಂದು ನಾಗಕನ್ನೆಯರುಂ ತಾನುಂ ಮನಂಬುಗಿಸುವಂತೆ ಮಜ್ಜನಂಬುಗಿಸಿ ರಸರಸಾಯನಂಗಳನೂಡುವಂತೆ ದಿವ್ಯಾಹಾರಂಗಳನೂಡಿ-

ಉ|| ನಾಗವಿಭೂಷಣಪ್ರತತಿ ನಾಗರಖಂಡಮಪೂರ್ವಮಪ್ಪ ಪು
ನ್ನಾಗದ ಬಾಸಿಗಂ ಬಗೆದ ಬಣ್ಣದ ಪುಟ್ಟಿಗೆ ನಾಗಜಾಲಮೆಂ|
ದಾಗಡೆ ನಾಗಲೋಕ ವಿಭವಂಗಳೊಳಾೞಸಿ ನಾಗಶಯ್ಯೆಯೊಳ್
ನಾಗಿಣಿ ನಾಗಬಂಧದೊಳ್ ತಳ್ತು ಗುಣಾರ್ಣವನಂ ಮರುಳ್ಚಿದಳ್|| ೧೭

ವ|| ಅಂತಾಕೆಯ ಮುದ್ದುವೆರಸಿದ ತೊದಳ್ನುಡಿಗಂ ಪೂಮಾಲೆವೆರಸಿದ ಬೞಲ್ಮುಡಿಗಮಲಂಪುವೆರಸಿದ ನೋಟಕ್ಕಮಿಂಬುವೆರಸಿದ ಕೂಟಕ್ಕಂ ಪುರುಡುವೆರಸಿದ ಕೊಂಕಿಂಗಂ ಕದ್ದವಣಿ(?) ವೆರಸಿದ ಸೋಂಕಿಂಗಂ ಗಾಡಿವೆರಸಿದ ಹಾವಕ್ಕಂ ನಾಣ್ವೆರಸಿದ ಭಾವಕ್ಕಮೊಲ್ದು ಮೊಱಲ್ದುಮಿರೆಯಿರೆ ದೇವೇಂದ್ರಂಗಮಿಂದ್ರಾಣಿಗಂ ಜಯಂನೆಂತಂತೆ-

ಕಂ|| ಅಂತಾ ಫಣಿಕಾಂತೆಗಮರಿ
ಕಾಂತಾಳಿಕ ಫಳಕ ತಿಳಕ ಹರನೆನಿಪರಿಗಂ||
ಗಂ ತನಯನಕ ತೇಜೋ
ವಂತನಿಳಾವಂತನಿಂದುಮಂಡಳಕಾಂತಂ|| ೧೮

ವ|| ಅಂತು ಪುಟ್ಟುವುದುಮಾತನ ಬಾಲಕ್ರೀಡೆಯುಮಾಕೆಯ ಸುರತಕ್ರೀಡೆಯುಂ ತನ್ನ ನೋಟಕ್ಕಂ ಕೂಟಕ್ಕಂ ಸೊಗೆಯಿಸೆ ಕೆಲವು ದಿವಸಮಿರ್ದಲ್ಲಿಂ ಪೊಱಮಟ್ಟು ಬಂದು ಹಿಮವದ್ಗಿರೀಂದ್ರ ತಟ ನಿಕಟವರ್ತಿಗಳಪ್ಪಗಸ್ತ್ಯವಟಮುಂ ವಸಿಷ್ಠಪರ್ವತಂಗಳೆಂಬ ತೀಥಂಂಗಳೊಳೋಲಾಡುತ್ತುಮಾ ದಿಶಾಭಾಗಮನಾತ್ಮೀಯ ಶಾಸನಾಯತ್ತಂ ಮಾಡುತ್ತುಂ ಬಂದಿಂದುಬಿಂಬವಿಗಳದಮೃತಬಿಂದು ದುರ್ದಿನಾರ್ದ್ರ ಚಂದನಾನ್ವಿತಮುಮಶಿಶಿರ ಕರ ರಥ ತುರಗ ಖುರ ಶಿಖರ ನಿಖಂಡಿತ ಲವಂಗ ಪಲ್ಲವಮುಮೈರಾವತ ಕರಲೂನ ಸಲ್ಲಕೀ ಶಬಳ

ಪಡೆಮೆಚ್ಚೆಗಂಡನಾದ ಅರ್ಜುನನ ಸೌಂದರ್ಯವನ್ನು ನಾಗಕನ್ಯೆಯಾದ ಮದನಲತೆಯೆಂಬುವಳು ನೋಡಿ ಮೋಹಗೊಂಡು ಅವನನ್ನು ತನ್ನ ನಾಗಲೋಕಕ್ಕೆ ಕೊಂಡುಹೋದಳು. ೧೬. ಚಂದ್ರಸೂರ್ಯರು ಇಲ್ಲದಿದ್ದರೂ ಅಲ್ಲಿ ಕತ್ತಲೆಯೆಂಬುದೇ ಇಲ್ಲ. ಆ ಹಾವುಗಳ ಹೆಡೆಗಳಲ್ಲಿರುವ ರತ್ನಕಾಂತಿಯೇ ಕತ್ತಲೆಯು ತಲೆಹಾಕುವುದಕ್ಕೆ ಅವಕಾಶಕೊಡುವುದಿಲ್ಲ. ಆ ನಾಗರ ಮತ್ತು ನಾಗಕನ್ನಿಕೆಯರ ರೂಪಗಳು ಮನೋಹರವಾಗಿವೆ. ಆದುದರಿಂದಲೇ ಸರ್ಪಗಳು ಭೋಗಿಗಳು ಎನ್ನಿಸಿಕೊಂಡಿವೆ. ಭೋಗಿಗಳೆಂದರೆ ಭೋಗಪಾಲಕರೇ ವ|| ಎಂದು ಆ ನಾಗಕನ್ನಿಕೆ ಆ ನಾಗಲೋಕದ ವೈಭವಗಳನ್ನು ತೋರಿಸುತ್ತ ಕೆಳಭಾಗದಲ್ಲಿದ್ದ ತನ್ನ ಅಂತಪುರಕ್ಕೆ ಬಂದು ತಾನೂ ಆ ನಾಗಕನ್ನಿಕೆಯರೂ ತಮ್ಮ ಮನಸ್ಸಿಗೆ ತೃಪ್ತಿಯಾಗುವಂತೆ ಅವನಿಗೆ ಸ್ನಾನಮಾಡಿಸಿ ರಸಯುಕ್ತವಾದ ರಸಾಯನಗಳನ್ನು ತಿನ್ನಿಸುವಂತೆ ದಿವ್ಯಾಹಾರಗಳನ್ನು ಊಡಿಸಿದರು. ೧೭. ಆ ನಾಗಕನ್ನಿಕೆಯು ಅರ್ಜುನನನ್ನು ನಾಗರ ಒಡವೆಗಳ ಸಮೂಹ; ನಾಗರ ಖಂಡವೆಂಬ ಪ್ರದೇಶ, ಅಪೂರ್ವವಾದ ಪುನ್ನಾಗ ಪುಷ್ಪಗಳ ಹಾರ, ಬಗೆಬಗೆಯ ವಸ್ತ್ರಗಳು, ನಾಗದವಲ್ಲಿ (ತಾಂಬೂಲ) ಮೊದಲಾದ ನಾಗಲೋಕದ ವೈಭವಗಳಲ್ಲಿ ಮುಳುಗಿಸಿ ನಾಗಶಯ್ಯೆಯಲ್ಲಿ ನಾಗಬಂಧವೆಂಬ ರತಿಬಂಧದಲ್ಲಿ ಸೇರಿಕೊಂಡು ಮರುಳು ಮಾಡಿದಳು. ವ|| ಆಕೆಯ ಮುದ್ದಿನಿಂದ ಕೂಡಿದ ಲಲ್ಲೆಮಾತಿಗೂ (ತೊದಳ್ನುಡಿ) ಹೂಮಾಲೆಯಿಂದ ಕೂಡಿ ಜೋಲಾಡುತ್ತಿರುವ ತುರುಬಿಗೂ ಪ್ರೀತಿಯಿಂದ ಕೂಡಿದ ನೋಟಕ್ಕೂ ಸುಖಮಯವಾದ ಕೂಡುವಿಕೆಗೂ ಸ್ಪರ್ಧೆಯಿಂದ ಕೂಡಿದ ವಕ್ರತೆಗೂ ಬಿಗಿದಪ್ಪಿದ ಆಲಿಂಗನಕ್ಕೂ ಸೌಂದರ್ಯದಿಂದ ಕೂಡಿದ ಶೃಂಗಾರ ಚೇಷ್ಟೆಗೂ ನಾಯಿಕೆಯಿಂದ ಕೂಡಿದ ಭಾವಗಳಿಗೂ ಒಲಿದು ಪ್ರೀತಿಸಿರಲು ದೇವೇಂದ್ರನಿಗೂ ಶಚಿದೇವಿಗೂ ಜಯಂತನು ಹುಟ್ಟುವ ಹಾಗೆ ೧೮. ಆ ಕನ್ನಿಕೆಗೂ ಶತ್ರುಸ್ತ್ರೀಯರ ಮುಖವೆಂಬ ಹಲಗೆಯಲ್ಲಿರುವ ತಿಲಕವನ್ನು ನಾಶಪಡಿಸುವವನೆಂಬ (ಕೀರ್ತಿಯನ್ನುಳ್ಳ) ಅರಿಕೇಸರಿಗೂ ಅಕ ತೇಜಸ್ಸಿನಿಂದ ಕೂಡಿದವನೂ ಚಂದ್ರಮಂಡಳದ ಕಾಂತಿಯುಳ್ಳವನೂ ಆದ ಇಳಾವಂತನೆಂಬ ಮಗನು ಹುಟ್ಟಿದನು. ವ|| ಆತನ ಬಾಲಕ್ರೀಡೆಯು ತನ್ನ ನೋಟಕ್ಕೂ ಅವಳ ಸುರತಕ್ರೀಡೆಯು ತನ್ನ ಕೂಟಕ್ಕೂ ಸೊಗಯಿಸುತ್ತಿರಲು ಕೆಲವು ದಿವಸವಿದ್ದು ಅಲ್ಲಿಂದ ಹೊರಟುಬಂದು ಶ್ರೇಷ್ಠವಾದ ಹಿಮಾಲಯ ಪರ್ವತದ ತಪ್ಪಲಿನ ಸಮೀಪದಲ್ಲಿರುವ ಅಗಸ್ತ್ಯವಟ ಮತ್ತು ವಸಿಷ್ಠಪರ್ವತವೆಂಬ

ಮುಮಪ್ಪುದಯಗಿರಿಯಿಂ ಸೊಗಯಿಸುವ ಮೂಡಣ ದೆಸೆಗೆ ವಂದು ನಂದೆಯ ಪರನಂದೆಯಶ್ವಿನಿ ಮಹಾನಂದೆಯೆಂಬ ತೀರ್ಥಜಲಂಗಳೊಳೋಲಾಡುತ್ತುಮುದ್ವೃತ್ತ ರಿಪುನೃಪತಿಗಳನೇಸಾಡುತ್ತುಮಲ್ಲಿಂ ತಳರ್ದು ಚಪಳ ಕಪಿಬಳ ವಿಲುಪ್ತ ವಿಗಳಿತ ಲತಾಭವನ ಮುಮಕ ಬಳ ನಳ ಕರತಳಗಳಿತ ಕುಳಶೈಳ ಸಹಸ್ರ ಸಂತಾಸ ಕಳಿತ ಸೇತುಬಂಧುರಮುಮಪ್ಪ ದಕ್ಷಿಣ ಸಮುದ್ರದ ತಡಿವಿಡಿದು ಬಂದು ರಾಮಚಂದ್ರಂ ವಿಹರಿಸಿದೆಡೆಗಳಂ ನೋಡಿ-

ಉ|| ಅಂದಿದು ಸೀತೆಯೊಳ್ ನೆರೆದು ನಿಂದೆಡೆ ತತ್ಖರದೂಷಣರ್ಕಳಂ
ಕೊಂದೆಡೆ ಪೋಗಿ ಪೊಮ್ಮರೆಯನೆಚ್ಚೆಡೆ ತಪ್ಪದಿದಪ್ಪುದೆಂದು ಕಾ|
ಯ್ಪಿಂ ದಶಕಂಠನಂ ತ್ರಿದಶ ಕಂಟಕನಂ ಕೊಲಲೆಂದು ರಾಮನಾ
ದಂದಿನ ಸಾಹಸಂ ಮನದೊಳಾವರಿಸಿತ್ತಳಂಕರಾಮನಾ|| ೧೯

ವ|| ಅಂತು ರಾಮ ಜನ್ಮೋತ್ತತ್ತಿಯೊಳಾದ ತನ್ನಯ ಮುನ್ನಿನ ಸಾಹಸಂಗಳಂ ನೆನೆಯುತ್ತುಂ ಬಂದಗಸ್ತ್ಯತೀರ್ಥಮಂ ಕಂಡು-

ಮ|| ಬಳೆಯಲ್ಕಣ್ಮಿದುದಿಲ್ಲ ವಿಂಧ್ಯಗಿರಿಯುಂ ತನ್ನಾಜ್ಞೆಯಿಂದೊರ್ಮೆ ಮು
ಕ್ಕುಳಿಸಲ್ಕಂಬು ಸಾಲ್ದುದಿಲ್ಲ ಜಗಮಂ ತಿಂದಿರ್ದ ವಾತಾಪಿ ಪೊ|
ಕ್ಕಳುರ್ವಾತ್ಮೋದರ ವಹ್ನಿಯಿಂ ಪೊಱಮಡಲ್ ತಾನಾರ್ತನಿಲ್ಲೞ್ದುದಿ
ಲ್ಲೆಳೆ ತೇಂಕಿರ್ದುದು ಭಾರದಿಂ ಬಡಗೆನಲ್ ಪೆಂಪಾರ್ಗಗಸ್ತ್ಯಂಬರಂ|| ೨೦

ವ|| ಎಂದಗಸ್ತ್ಯತೀರ್ಥ ಸೌಭದ್ರ ಪೌಳೋಮ ಕಾಂಭೋಜ ಭಾರದ್ವಾಜಮೆಂಬಯ್ದು ತೀಥಂಗಲೊಳ್ ವರ್ಧಮಾನನೆಂಬ ಋಷಿಯ ಶಾಪದೊಳುಗ್ರಗ್ರಾಹ ಸ್ವರೂಪದೊಳಿರ್ದಚ್ಚರಸೆ ಯರುಮಂ ವಿಶಾಪೆಯರ್‌ಮಾಡಿ ಮಳಯಪರ್ವತಮನೆಯ್ದೆವಂದು-

ಚಂ|| ಇದು ಮಳಯಾಚಳಂ ಮಳಯಜಂ ಮಳಯಾನಿಳನೆಂದು ಪೆಂಪುವೆ
ತ್ತುದು ಸಿರಿಕಂಡಮುಂ ಪದೆದು ತೀಡುವ ಗಾಳಿಯುಮಿಲ್ಲಿ ಪುಟ್ಟಿ ಪೋ|
ಗದು ಪೊಸ ಸುಗ್ಗಿ ಮೂಗುವಡದಿಲ್ಲಿಯ ಕೋಗಿಲೆ ಬಂದಮಾವು ಬೀ
ಯದು ಕುಸುಮಾಸ್ತ್ರನಾಜ್ಞೆ ತವದೆಲ್ಲಿಯುಮಿಲ್ಲಿಯ ನಂದನಂಗಳೊಳ್|| ೨೧