ಭಾರತದ ಹೆಸರಾಂತ ವಿಜ್ಞಾನಿ ಡಾ.ೊಶಾಂತಿಸ್ವರೂಪ್ ಭಟ್ನಾಗರ್ ನಡೆಸಿದ ಪ್ರಮುಖ ಸಂಶೋಧನೆಗಳು ಕಲಾಯ್ಡ ಮತ್ತು ದ್ಯುತಿ ರಾಸಾಯನ ವಿಜ್ಞಾನಕ್ಕೆ (colloid & photochemistry) ಸಂಬಂಧಿಸಿವೆ. ಸುಲಭ ಬೆಲೆಯಲ್ಲಿ ಆಕರ್ಷಕ ಕೃತಕ ಆಭರಣಗಳನ್ನು ತಯಾರಿಸಿದರು. ಕಬ್ಬಿನ ನಾರು, ವನಸ್ಪತಿ ನಾರುಗಳ ಬಗ್ಗೆ ಸಂಶೋಧನೆ ನಡೆಸಿದರು. ಕೃತಕ ರಾಳಗಳನ್ನು ತಯಾರಿಸಿದರು. ತೈಲ ಬಾವಿಗಳಿಂದ ಶುದ್ಧ ರೂಪದಲ್ಲಿ ಎಣ್ಣೆ ತೆಗೆಯಲು ಉಪಕರಣವನ್ನು ನಿರ್ಮಿಸಿ ತೈಲ ಶುದ್ದೀಕರಣವನ್ನು ಸರಳಗೊಳಿಸಿದರು.

ಕಾಂತೀಯ ರಾಸಾಯನಿಕ ವಸ್ತುಗಳ ಬಗ್ಗೆ ಸಂಶೋಧನೆ ನಡೆಸಿ ಉದ್ಗ್ರಂಥವನ್ನು ರಚಿಸಿದರು. ಬ್ರಿಟಿಷ್ ಸರ್ಕಾರ ಇವರಿಗೆ ನೈಟ್‌ಹುಡ್ ಪ್ರಶಸ್ತಿಯನ್ನು ನೀಡಿತು. ಭಾರತ ಸರ್ಕಾರ CSIR ಸಂಸ್ಥೆಗೆ ಅಧ್ಯಕ್ಷರನ್ನಾಗಿ ಮಾಡಿತು. 2ನೇ ಮಹಾಯುದ್ಧದಲ್ಲಿ ಬಳಕೆಯಾದ ವಿಷಾನಿಲದಿಂದ ತಪ್ಪಿಸಿಕೊಳ್ಳಲು ರಾಸಾಯನಿಕ ದ್ರವ್ಯವೊಂದನ್ನು ಕಂಡು ಹಿಡಿದರು. ಏರ್‌ಫೋಮ್ ಲೋಷನ್ ಎಂಬ ಬಟ್ಟೆಯ ವಾರ್ನಿಷನ್ನು ಕಂಡು ಹಿಡಿದರು. ಹೀಗೆ ಅನೇಕ ವಸ್ತುಗಳನ್ನು ಅವರು ಕೃತಕವಾಗಿ ತಯಾರಿಸಿದರು.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದ ದಿನಗಳಲ್ಲಿ ಹಲವಾರು ವೈಜ್ಞಾನಿಕ ಸಂಶೋಧನಾಲಯಗಳನ್ನು ಸ್ಥಾಪಿಸಿದ ಇವರು ಸ್ವತಂತ್ರ ಭಾರತದ ಪ್ರಪ್ರಥಮ ‘ವೈಜ್ಞಾನಿಕ ಶಿಲ್ಪಿ’ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 1954ರಲ್ಲಿ ಇವರ ಮರಣಾನಂತರ ಇವರ ನೆನಪಿನಲ್ಲಿ ‘ಶಾಂತಿ ಸ್ವರೂಪ ಭಟ್ನಾಗರ್’ ಪ್ರಶಸ್ತಿಯನ್ನು ಪ್ರತಿವರ್ಷ ಪ್ರಮುಖ ರಸಾಯನ ವಿಜ್ಞಾನಿಗಳಿಗೆ ನೀಡಲಾಗುತ್ತಿದೆ.