ಉದಾತ್ತ ನಾರಾಯಣನ ಎರಡು ತೊಡೆಗಳು ಸ್ತ್ರೀಯರ ಮನಸ್ಸೆಂಬ ಆನೆಗಳನ್ನೂ ಕಟ್ಟುವ ಕಂಬಗಳಾದುವು, ಹಾಗೆಯೇ ಅಪೂರ್ವವಾಗಿ ಪ್ರಕಾಶಿಸುವ ಕಿರುದೊಡೆಗಳು ಉಡುಹತ್ತಿದಂಥವು – ಆರೂಢಸರ್ವಜ್ಞನ ತೊಡೆಯ ಕಿಣ ಅಥವಾ ಜಡ್ಡುಗಳು (ಕುದುರೆ ಸವಾರಿ ಮಾಡುವಾಗ ಒತ್ತಿ ಆದ ಜಡ್ಡು) ಎಳೆಯ ಬಾಳೆಯ ದಿಂಡಿನಲ್ಲಿ ಸಾಣೆಯಕಲ್ಲನ್ನು ಕಟ್ಟಿದ ಹಾಗಾದುವು; ಗೂಢವಾದ ಕಾಲಿನ ಹರಡನ್ನು ಹೊಂದಿರುವ ಮನುಜಮಾಂಧಾತನ ಅಡಿಯ ಹೊರಭಾಗಗಳು ಶತ್ರುರಾಜರನ್ನು ಕಾಲಿಗೆ ಬೀಳುವಂತೆ ಮಾಡಿದ ಸಂತೋಷದಲ್ಲಿ ಎತ್ತರವಾದಂತೆ ಹಾಗೆಯೇ ಆಮೆಯ ಚಿಪ್ಪಿನ ಮೇಲುಭಾಗದಂತೆ ಉಬ್ಬಿಕೊಂಡವು. ಮುಖವನ್ನು ಸುಟ್ಟಿ ತೋರಿಸುವಂತಿರುವ ಕಾಲಿನ ಬೆರಳುಗಳಲ್ಲಿ ಸ್ವಲ್ಪ ನೆಟ್ಟಿರುವ ಹಾಗೆ ಪ್ರಕಾಶಮಾನವಾಗಿರುವ ಪ್ರಚಂಡಮಾರ್ತಾಂಡನ ಕಾಲಿನ ಉಗುರುಗಳು ವೀರಪತ್ನಿಯರು ಹೆದರಿದ ತಮ್ಮ ಮುಖವನ್ನು ನೋಡುವುದಕ್ಕೆ (ಉಪಯೋಗಿಸುವ) ಕನ್ನಡಿಯಂತಾದುವು. ಹೊಸದಾಗಿ ಅರಳಿರುವ ಕೆಂಪುದಾವರೆಯಂತೆ ಕೆಂಪುಬಣ್ಣವನ್ನೂ ಬಿಳಿಯಬಣ್ಣವನ್ನೂ ತಿರಸ್ಕರಿಸುವ ಅರಿಕೇಸರಿಯ ಪಾದತಳಗಳು ಕಾಲಿಗೆ ಬಿದ್ದ ಶತ್ರುರಾಜರ ಕಿರೀಟದಲ್ಲಿರುವ ಮಾಣಿಕ್ಯ ಸಮೂಹದ ಕೆಂಬಿಸಿಲನ್ನು ಹಿಯ್ಯಾಳಿಸಿ ಕೆಂಪಾದಂತಾದುವು. ಹೆಸರುಕಾಳಿನ ಹೊಸಮೊಳಕೆಯ ಬಣ್ಣದಂತೆ ಸೊಗಯಿಸುವ ಸಾಮಂತಚೂಡಾಮಣಿಯ ಶರೀರದ ಬಣ್ಣವು ಬ್ರಹ್ಮನೆಂಬ ಬಣ್ಣಗಾರನು ಬಣ್ಣಗಳನ್ನು ಕಲಸಿಮಾಡಿದ ಬಾಳೆಯ ಹೂವಿನ ಮೋತೆಯಂತೆ ಕೆಂಪುಮಿಶ್ರವಾದ ಕಪ್ಪುಬಣ್ಣದಿಂದ ಕೂಡಿತು. ೪೦. ಗುಣಾರ್ಣವನು ದಿಟ್ಟರಾದ ಸ್ತ್ರೀಯರು ತನ್ನನ್ನು ಮನಸ್ಸಿನಲ್ಲಿ ಪ್ರೀತಿಸಿ ತನಗೆ ಅನವಾಗಿ ಸೋತು ಆಶೆಯಿಂದ ನೋಡಲು ಅವರ ಕಣ್ಣನ್ನೂ ಮನಸ್ಸನ್ನೂ ಮನ್ಮಥನ ಪುಷ್ಪಬಾಣದಿಂದ ಸೆರೆಹಿಡಿದು ಅವರಿಗೆ ಮೋಹವುಂಟಾಗುವ ಹಾಗೆ ಮಾಡಿ ಫಲಭರಿತವಾದ ಮಾವಿನ ತೋಟದಲ್ಲಿ ಸೇರಿಸಿ ಪ್ರಕಾಶಮಾನವಾದ ಬೆಳುದಿಂಗಳಿಂದ ಉರುಳಿಸಿ ಹೂವಿನ ಹಾಸಿಗೆಯಲ್ಲಿ ಹೊರಳುವ ಹಾಗೆ ಮಾಡಿದನು. (ಅವನನ್ನು ನೋಡಿದ ರಸ್ತ್ರೀಯರೂ ವಿಧವಿಧವಾದ ಕಾಮಬಾಧೆಗೊಳಗಾಗುತ್ತಿದ್ದರು ಎಂದು ಭಾವ). ವ|| ಹೀಗೆ ನಕುಲ ಸಹದೇವರೊಡನೆ ಅಯ್ದು ಜನರೂ ಹೊಸಪ್ರಾಯದ ಉತ್ತಮಸುಖವನ್ನು ಹೊಂದಿ ಸಂತೋಷದಿಂದಿದ್ದರು. ಈ ಕಡೆ ಗಂಗಾದ್ವಾರದಲ್ಲಿ ಭರದ್ವಾಜನೆಂಬ ನಿಯಮಿಷ್ಠನಾದ ಋಷಿಯು- ೪೧. ಸ್ನಾನಕ್ಕಾಗಿ ಒಂದು ಕೊಡವನ್ನು ಕೆಳಗೆ ಜೋಲುಬೀಳುವ ಹಾಗೆ ಹಿಡಿದು ಪರಿಶುದ್ಧವಾದ ಗಂಗಾನದಿಗೆ ಬಂದು ಸಂಭೋಗಸುಖಕ್ಕೆ ಆವಾಸಸ್ಥಾನಳಾದ ದೇವವೇಶ್ಯೆಯೊಬ್ಬಳನ್ನು ನೋಡಿದನು. ವ|| ಹಾಗೆ ನೋಡಲಾಗಿ ಅಮೃತಾಬ್ಧಿಯೆಂಬ ಹೆಸರಿನ ಆ ಅಪ್ಸರಸ್ತ್ರೀಯ

ಕಂ|| ಆದೆಲರ ಸೋಂಕಿನೊಳ್ ತೆಱ
ಪಾದೊಡೆ ಬೆಳ್ಪೆಸೆಯೆ ಮಸೆದ ಮದನನ ಬಾಳಂ|
ತಾದುವು ಪೊಳೆವೊಳ್ದೊಡೆ ತೆಱ
ಪಾದೆರ್ದೆಯಂ ನಟ್ಟುವಂದು ತನ್ಮುನಿಪತಿಯಾ|| ೪೨

ವ|| ಅಂತು ಕಂತುಶರಪರವಶನಾಗಿ ಧೈರ್ಯಕ್ಷರಣೆಯುಮಿಂದ್ರಿಯ ಕ್ಷರಣೆಯುಮೊಡನೊಡನಾಗೆ-

ಕಂ|| ಮಾಣದೆ ಸೋರ್ವಿಂದ್ರಿಯಮಂ
ದ್ರೋಣದೊಳಾಂತಲ್ಲಿಯೊಗೆದ ಶಿಶುವಂ ಕಂಡೀ|
ದ್ರೋಣದೊಳೆ ಪುಟ್ಟಿದೀತಂ
ದ್ರೋಣನೇ ಪೋಗೆಂದು ಪೆಸರನಿಟ್ಟಂ ಮುನಿಪಂ|| ೪೩

ವ|| ಅಂತು ಭರದ್ವಾಜನಾತ್ಮತನೂಜಂಗೆ ಪೆಸರನಿಟ್ಟು ತನ್ನ ಕೆಳೆಯಂ ಪಾಂಚಾಳ ದೇಶದರಸಂ ಪೃಷತನೆಂಬನಾತನ ಮಗಂ ದ್ರುಪದನುಮಂ ದ್ರೋಣನುಮನೊಡಗೂಡಿ ಯಜ್ಞಸೇನನೆಂಬ ಬ್ರಹ್ಮಋಷಿಯ ಪಕ್ಕದೊಳ್ ಬಿಲ್ವಿದ್ದಯಂ ಕಲಲ್ವೇೞ್ದೊಡೆ ದ್ರೋಣನುಂ ದ್ರುಪದನುಂ ಧನುರ್ಧರಾಗ್ರಗಣ್ಯರಾಗೆ ಭರದ್ವಾಜಂ ದ್ರೋಣಂಗೆ ಕೃಪನ ತಂಗೆಯಪ್ಪ ಶಾರದ್ವತೆಯಂ ತಂದು ಮದುವೆಯಂ ಮಾಡಿದೊಡಾತಂಗ ಮಾಕೆಗಂ ತ್ರಿಣೇತ್ರನಂಶದೊಳೊರ್ವ ಮಗಂ ಪುಟ್ಟಿ-

ಕಂ|| ದಿವಿಜಾಶ್ವತ್ಥಾಮದೊಳೀ
ಭುವನಂಗಳ್ ನಡುಗೆ ಶಿಶು ಸರಂಗೆಯ್ದೊಡೆ ನ|
ಕ್ಕವಯವದೆ ಕುಂಭಸಂಭವ
ನಿವನಶ್ವತ್ಥಾಮನೆಂದು ಪೆಸರಿಡೆ ನೆಗೞ್ದಂ|| ೪೪

ವ|| ಅಂತು ನೆಗೞ್ದು ತಮ್ಮಯ್ಯನ ಕೈಯೊಳ್ ಧನುರ್ವಿದ್ಯೋಪದೇಶದೊಳ್ ಧನುರ್ಧ ರಾಗ್ರಗಣ್ಯನುಮಾಗಿ ಸಂದಂ ದ್ರುಪದನುಂ ತನ್ನ ರಾಜ್ಯದೊಳ್ ನಿಂದಂ ದ್ರೋಣನುಂ ತನಗೆ ಬಡತನಮಡಸೆ ಅಶ್ವತ್ಥಾಮನನೊಡಗೊಂಡು ನಾಡು ನಾಡಂ ತೊೞಲ್ದು ಪರಶುರಾಮನಲ್ಲಿಗೆ ವಂದಂ-

ಚಂ|| ಕ್ಷಿತಿಯೊಳಗುಳ್ಳ ಭೂಭುಜರ ಬಿತ್ತು ಮೊದಲ್ಗಿಡೆ ಮುನ್ನಮೇಕವಿಂ
ಶತಿ ಪರಿಸಂಖ್ಯೆಯಿಂ ತವಿಸಿ ಸರ‍್ವನಿವೇದಕಮೆಂಬ ಯಜ್ಞದೊಳ್|
ಕ್ಷಿತಿ ಪೊಗೞ್ವನ್ನಮಿತ್ತು ಗುರುದಕ್ಷಿಣೆಯಾಗಿರೆ ಕಶ್ಯಪ ಪ್ರಜಾ
ಪತಿಗೆ ಸಮುದ್ರಮುದ್ರಿತಧರಿತ್ರಿಯನೊಂದೞಯೂರನೀವವೋಲ್|| ೪೫

ಚಿನ್ನದ ನಡುಪಟ್ಟಿಯಲ್ಲಿ ಸಿಕ್ಕಿಕೊಂಡಿದ್ದ ರೇಷ್ಮೆಯ ವಸ್ತ್ರದ ಒಳ ಉಡುಪಿನಲ್ಲಿ ಶಬ್ದಮಾಡುವ ಗೆಜ್ಜೆಯ ಕುಚ್ಚಿನ ನೂಲಗೊಂಚಲ ಸಮೇತವಾಗಿ ಇಳಿಬಿದ್ದಿರುವ ಮುಂಭಾಗದ ಸೆರಗು ಮಳೆಗಾಲದ ನವಿಲಿನಂತೆ ಸೊಗಯಿಸಿತು. ೪೨. ಆಗುಂಟಾದ ಗಾಳಿಯ ಸ್ಪರ್ಶದಿಂದ ವಸ್ತ್ರವು ಓಸರಿಸಲು ಅವಳ ಸುಂದರವಾದ ತೊಡೆಯು ಮನ್ಮಥನ ಕತ್ತಿಯ ಹಾಗಾಗಿ ಆ ಋಷಿಯ ತೆರೆದ ಹೃದಯವನ್ನು ನಾಟಿತು. ವ|| ಹಾಗೆ ಮನ್ಮಥನ ಬಾಣಗಳಿಗೆ ಅನನಾಗಿ ಅವನ ಧೈರ್ಯವೂ ರೇತಸ್ಸೂ ಒಟ್ಟಿಗೆ ಸೋರಿಹೋದವು. ೪೩. ನಿಲ್ಲದೆ ಸೋರುವ ಆ ರೇತಸ್ಸನ್ನು (ವೀರ್ಯವನ್ನು) ಆ ಋಷಿಯು ಒಂದು ದೊನ್ನೆಯಲ್ಲಿ ಹಿಡಿದು ಅದರಿಂದ ಹುಟ್ಟಿದ ಶಿಶುವನ್ನು ನೋಡಿ ದೊನ್ನೆಯಲ್ಲಿ ಹುಟ್ಟಿದ ಮಗುವು ದ್ರೋಣನೆಂಬ ಹೆಸರಿನವನೇ ಸರಿ, ಹೋಗು ಎಂದು ಆ ಹೆಸರನ್ನೇ ಅವನಿಗೆ ಇಟ್ಟನು. ವ|| ಭಾರದ್ವಾಜನು ಹಾಗೆ ತನ್ನ ಮಗುವಿಗೆ ಹೆಸರಿಟ್ಟು ತನ್ನ ಸ್ನೇಹಿತನೂ ಪಾಂಚಾಳದೇಶದ ರಾಜನೂ ಪೃಷತನ ಮಗನೂ ಆದ ದ್ರುಪದನನ್ನೂ ದ್ರೋಣನನ್ನೂ ಒಟ್ಟುಗೂಡಿಸಿ ಯಜ್ಞಸೇನನೆಂಬ ಬ್ರಹ್ಮಋಷಿಯ ಪಕ್ಕದಲ್ಲಿ ಬಿಲ್ವಿದ್ಯೆಯನ್ನು ಕಲಿಯಲು ಹೇಳಲಾಗಿ ದ್ರೋಣನೂ ದ್ರುಪದನೂ ಬಿಲ್ಗಾರರಲ್ಲಿ ಮೊತ್ತಮೊದಲಿಗರಾದರು. ಹೀಗಾಗಲು ಭಾರದ್ವಾಜನು ದ್ರೋಣನಿಗೆ ಕೃಪನ ತಂಗಿಯಾದ ಶಾರದ್ವತೆಯನ್ನು ತಂದು ಮದುವೆಮಾಡಲಾಗಿ ಆತನಿಗೂ ಆಕೆಗೂ ಮುಕ್ಕಣ್ಣನಾದ ರುದ್ರನ ಅಂಶದಿಂದ ಒಬ್ಬ ಮಗನು ಹುಟ್ಟಿದನು. ೪೪. ಆ ಮಗುವು ಧ್ವನಿಮಾಡಿದ ತಕ್ಷಣವೇ ಕೂಗಿಕೊಂಡ ದೇವಲೋಕದ ಉಚ್ಛೆ ಶ್ರವವೆಂಬ ಕುದುರೆಯ ಕೆನೆತದಿಂದ ಲೋಕಗಳೆಲ್ಲ ನಡುಗಲು ಅದನ್ನು ನೋಡಿ ದ್ರೋಣನು ನಕ್ಕು ನಿರಾಯಾಸದಿಂದ ಇವನಿಗೆ ಅಶ್ವತ್ಥಾಮನೆಂದು ಹೆಸರಿಡಲು ಅವನು ಪ್ರಸಿದ್ಧನಾದನು. ವ|| ಹಾಗೆ ಪ್ರಸಿದ್ಧನಾಗಿ ತಮ್ಮಯ್ಯನ ಕಯ್ಯಲ್ಲಿ ಧನುರ್ವಿದ್ಯೋಪದೇಶವನ್ನು ಪಡೆದು ಬಿಲ್ಗಾರರಲ್ಲಿ ಅಗ್ರೇಸರನಾದನು. ದ್ರುಪದನೂ ತನ್ನ ರಾಜ್ಯದಲ್ಲಿ ನಿಂತನು. ದ್ರೋಣನು ತನಗೆ ಬಡತನವುಂಟಾಗಲು ಅಶ್ವತ್ಥಾಮನನ್ನೂ ಕರೆದುಕೊಂಡು ದೇಶದೇಶಗಳಲ್ಲೆಲ್ಲ ಸುತ್ತಿ ಪರಶುರಾಮನ ಬಳಿಗೆ ಬಂದನು.

೪೫. ಭೂಮಿಯಲ್ಲಿರುವ ಕ್ಷತ್ರಿಯರು ಬೇರುಸಹಿತ ಹಾಳಾಗುವಂತೆ ಮೊದಲು ಇಪ್ಪತ್ತೊಂದು ಸಲ ನಾಶಪಡಿಸಿ ಲೋಕವೇ ಹೊಗಳುವ

ವ|| ಅಂತು ವಲ್ಕಲಾವೃತ ಕಟಿತಟನುಮಾಗಿರ್ದ ಜಟಾಕಲಾಪನುಮಾಗಿ ತಪೋವನಕ್ಕೆ ಪೋಪ ಭಾರ್ಗವಂ ದ್ರವ್ಯಾರ್ಥಿಯಾಗಿ ಬಂದ ಕುಂಭಸಂಭವನಂ ಕಂಡು ಕನಕ ಪಾತ್ರಕ್ಕುಪಾಯಮಿಲ್ಲಪ್ಪುದಱಂ ಮೃತ್ಪಾತ್ರದೊಳರ್ಘ್ಯಮೆತ್ತಿ ಪೂಜಿಸಿ-

ಚಂ|| ಒಡವೆಯನರ್ಥಿಗಿತ್ತೆನವನೀತಳಮಂ ಗುರುಗಿತ್ತೆನೀಗಳೊಂ
ದಡಕೆಯುಮಿಲ್ಲ ಕೈಯೊಳೆರೆದಂ ಶ್ರುತಪಾರಗನೆಂತು ಸಂತಸಂ
ಬಡಿಸುವೆನಿನ್ನಿದೊಂದು ಧನುವಿರ್ದುದು ದಿವ್ಯಶರಾಳಿಯಿರ್ದುದಿ
ಲ್ಲೊಡಮೆ ಸಮಂತು ಪೇೞವಳಾವುದನೀವುದೊ ಕುಂಭಸಂಭವಾ|| ೪೬

ವ|| ಎಂಬುದು ದ್ರೋಣನೆನಗೆ ವಿದ್ಯಾಧನಮೆ ಧನಮಪ್ಪುದಱಂ ದಿವ್ಯಾಸ್ತ್ರಂಗಳಂ ದಯೆಗೆಯ್ವುದೆನೆ ವಾರಣ ವಾಯವ್ಯಾಗ್ನೇಯ ಪೌರಂದರಾದಿ ಪ್ರಧಾನಾಸ್ತ್ರಂಗಳಂ ಕುಡೆ ಕೊಂಡು ಪರಶುರಾಮನಂ ಬೀೞ್ಕೊಂಡು ತನ್ನೊಡನಾಡಿಯಪ್ಪ ಕೆಳೆಯಂ ದ್ರುಪದಂ ಛತ್ರಾವತಿಯೊಳರಸು ಗೆಯ್ದಪನೆಂದು ಕೇಳ್ದಾ ಪೊೞಲ್ಗೆವಂದು ದ್ರುಪದನರಮನೆಯ ಬಾಗಿಲೊಳ್ ನಿಂದು ಪಡಿಯಱನಂ ಕರೆದು ನಿಮ್ಮೊಡನಾಡಿದ ಕೆಳೆಯಂ ದ್ರೋಣನೆಂಬ ಪಾರ್ವಂ ಬಂದನೆಂದು ನಿಮ್ಮರಸಂಗಱಯೆ ಪೆೞೆಂಬುದುಮಾತನಾ ಮಾೞ್ಕೆಯೊಳೆ ಬಂದಱಪುವುದುಂ ದ್ರುಪದಂ ರಾಜ್ಯಮದಿರಾ ಮದೋನ್ಮತ್ತನುಂ ಗರ್ವಗ್ರಹ ವ್ಯಗ್ರಚಿತ್ತನುಮಾಗಿ ಮೇಗಿಲ್ಲದೆ-

ಕಂ|| ಅಂತೆಂಬನಾರ್ಗೆ ಪಿರಿದುಂ
ಭ್ರಾಂತು ದಲೇಂ ದ್ರೋಣನೆಂಬನೇಂ ಪಾರ್ವನೆ ಪೇ|
ೞೆಂತೆನಗೆ ಕೆಳೆಯನೇ ನೂಂ
ಕಂತಪ್ಪನನಱಯೆನೆಂದು ಸಭೆಯೊಳ್ ನುಡಿದಂ|| ೪೭

ವ|| ಅಂತು ನುಡಿದುದಂ ಪಡಿಯಱಂ ಬಂದಾ ಮಾೞ್ಕೆಯೊಳಱಪೆ ದ್ರೋಣನೊತ್ತಂಬದಿಂದೊಳಗಂ ಪೊಕ್ಕು ದ್ರುಪದನಂ ಕಂಡು-

ಚಂ|| ಅಱಯಿರೆ ನೀಮುಮಾಮುಮೊಡನೋದಿದೆವೆಂಬುದನಣ್ಣ ನಿನ್ನನಾ
ನಱಯೆನದೆಲ್ಲಿ ಕಂಡೆಯೊ ಮಹೀಪತಿಗಂ ದ್ವಿಜವಂಶಜಂಗಮೇ|
ತಱ ಕೆಳೆಯಿಂತು ನಾಣಿಲಿಗರಪ್ಪರೆ ಮಾನಸರೆಂಬ ಮಾತುಗಳ್
ನೆಱಗೊಳೆ ಕುಂಭಸಂಭವನನಾ ದ್ರುಪದಂ ಕಡು ಸಿಗ್ಗು ಮಾಡಿದಂ|| ೪೮

ಹಾಗೆ ಸರ್ವನಿವೇದಕವೆಂಬ ಯಜ್ಞವನ್ನು ಮಾಡಿ ಕಶ್ಯಪ ಪ್ರಜಾಪತಿಯೆಂಬ ಬ್ರಹ್ಮಋಷಿಗೆ ಸಮುದ್ರದಿಂದ ಸುತ್ತುವರಿಯಲ್ಪಟ್ಟ ಅಖಂಡ ಭೂಮಂಡಲವನ್ನು ಒಂದು ಸಾಮಾನ್ಯವಾದ ಗ್ರಾಮವನ್ನು ಕೊಡುವಂತೆ ಗುರುದಕ್ಷಿಣೆಯಾಗಿ ಕೊಟ್ಟನು. ವ|| ಈಗ ನಾರುಮಡಿಯಿಂದ ಕೂಡಿದ ನಡುವನ್ನುಳ್ಳವನೂ ಜಟಾಸಮೂಹದಿಂದ ಕೂಡಿದವನೂ ಆದ ಆ ಪರಶುರಾಮನು ದ್ರವ್ಯವನ್ನು ಬೇಡುವುದಕ್ಕಾಗಿ ಬಂದ ದ್ರೋಣನನ್ನು ಚಿನ್ನದ ಪಾತ್ರೆಗಳಿಲ್ಲದುದರಿಂದ ಮಣ್ಣಿನ ಪಾತ್ರೆಯಲ್ಲಿಯೇ ಅರ್ಘ್ಯವನ್ನು ಕೊಟ್ಟು ಪೂಜಿಸಿದನು. ೪೬. ನನ್ನ ಪದಾರ್ಥಗಳನ್ನೆಲ್ಲ ಬೇಡಿದವರಿಗೆ ಕೊಟ್ಟೆನು. ಭೂಮಂಡಲವನ್ನು ಗುರುಗಳಿಗೆ ಕೊಟ್ಟೆನು. ಈಗ ನನ್ನಲ್ಲಿ ಒಂದಡಕೆಯೂ ಇಲ್ಲ. ಬೇಡುವವನಾದರೋ ವೇದಪಾರಂಗತ. ಹೇಗೆ ಅವನನ್ನು ಸಂತೋಷಪಡಿಸಲಿ? ‘ಎಲೈ ದ್ರೋಣನೆ ಈಗ ಇದೊಂದು ಬಿಲ್ಲೂ ಇದೊಂದು ದಿವ್ಯಾಸ್ತ್ರಗಳ ಸಮೂಹವೂ ಇದೆ. ಬೇರೆ ಆಸ್ತಿಯಿಲ್ಲ. ಇವುಗಳಲ್ಲಿ ನಿನಗೆ ಯಾವುದನ್ನು ಕೊಡಲಿ? ಚೆನ್ನಾಗಿ ಯೋಚಿಸಿ ಹೇಳು. ವ|| ಎಂಬುದಾಗಿ ಹೇಳಲು ದ್ರೋಣನು ನನಗೆ ವಿದ್ಯಾಧನವೇ ಧನವಾಗಿರುವುದರಿಂದ ಆ ದಿವ್ಯಾಸ್ತ್ರಗಳನ್ನು ದಯಪಾಲಿಸಬೇಕು ಎನ್ನಲು ವಾರುಣ, ವಾಯುವ್ಯ, ಆಗ್ನೇಯ, ಐಂದ್ರಾದಿ ಅಸ್ತ್ರಗಳನ್ನು ಕೊಡಲು ಅದನ್ನು ತೆಗೆದುಕೊಂಡು ಪರಶುರಾಮನಿಂದ ಅಪ್ಪಣೆ ಪಡೆದು ತನ್ನ ಒಡನಾಡಿಯೂ ಸ್ನೇಹಿತನೂ ಆದ ದ್ರುಪದನು ಛತ್ರಾವತಿಯಲ್ಲಿ ರಾಜ್ಯಭಾರ ಮಾಡುತ್ತಿದ್ದಾನೆಂದು ಕೇಳಿ ಆ ಪಟ್ಟಣಕ್ಕೆ ಬಂದು ದ್ರುಪದನರಮನೆಯ ಬಾಗಿಲಲ್ಲಿ ನಿಂತು ಬಾಗಿಲು ಕಾಯುವವನನ್ನು ಕರೆದು ನಿಮ್ಮ ಜೊತೆಯಲ್ಲಾಟವಾಡಿದ ಸ್ನೇಹಿತನಾದ ದ್ರೋಣನೆಂಬ ಬ್ರಾಹ್ಮಣನು ಬಂದಿದ್ದಾನೆಂದು ನಿಮ್ಮ ರಾಜನಿಗೆ ತಿಳಿಯಪಡಿಸು ಎಂದನು. ಅವನು ಆ ರೀತಿಯಲ್ಲಿಯೇ ಬಂದು ತಿಳಿಸಲಾಗಿ ದ್ರುಪದನು ರಾಜ್ಯವೆಂಬ ಮದ್ಯದಿಂದ ಸೊಕ್ಕಿದವನೂ ಅಹಂಕಾರವೆಂಬ ಗ್ರಹದಿಂದ ಪೀಡಿತನಾದ ಮನಸ್ಸುಳ್ಳವನೂ ಆಗಿ ಒಳ್ಳೆಯ ನಡತೆಯಿಲ್ಲದೆ

೪೭. ‘ಹಾಗೆನ್ನುವವನು ಯಾರ ಸಂಬಂ? ಇದು ವಿಶೇಷ ಭ್ರಮೆಯಲ್ಲವೆ? ದ್ರೋಣನೆಂಬುವವನು ಬ್ರಾಹ್ಮಣನೇ ಹೇಗೆ? ನನಗೆ ಸ್ನೇಹಿತನೇ ಹೇಳು? ಅಂತಹವನನ್ನು ನಾನು ತಿಳಿದಿಲ್ಲ ; ಅವನನ್ನು ಹೊರಕ್ಕೆ ತಳುಘಿ’ಈಆ’ ಎಂದು ಸಭಾಮಧ್ಯದಲ್ಲಿ ಕೆಟ್ಟಮಾತನಾಡಿದನು. ವ|| ಹಾಗೆ ಹೇಳಿದುದನ್ನು ದ್ವಾರಪಾಲಕನು ಬಂದು ಆ ರೀತಿಯಲ್ಲಿ ತಿಳಿಸಲಾಗಿ ದ್ರೋಣನು ಬಲಾತ್ಕಾರದಿಂದ ಒಳಕ್ಕೆ ಪ್ರವೇಶಿಸಿ ದ್ರುಪದನನ್ನು ನೋಡಿ ೪೮. ‘ಅಣ್ಣಾ ನೀನೂ ನಾನೂ ಜೊತೆಯಲ್ಲಿ ವಿದ್ಯಾಭ್ಯಾಸ ಮಾಡಿದುದನ್ನು ತಿಳಿದಿಲ್ಲವೇ’ ಎನ್ನಲು ದ್ರುಪದನು

ವ|| ಅಂತು ಮಾಡಿದುದುಮಲ್ಲದೀ ನಾಣಿಲಿ ಪಾರ್ವನೆೞೆದು ಕಳೆಯಿಮೆಂಬುದುಂ ದ್ರೋಣ ನಿಂತೆಂದಂ-

ಚಂ|| ನುಡಿ ತಡವಪ್ಪುದೊಂದು ಮೊಗದೊಳ್ ಮುಱುಕಂ ದೊರೆಕೊಳ್ವುದೊಂದು ನಾ
ಣ್ಗೆಡೆಗುಡದಿರ್ಪುದೊಂದು ನುಡಿಗಳ್ ಮೊಯಂ ಮಯಿಪ್ಪುದೊಂದು ಕ|
ಳ್ಗುಡಿದವರಂದಮಿಂತು ಸಿರಿ ಸಾರ್ತಕೆ ಸಾರ್ವುದದರ್ಕೆ ಸಂದೆಯಂ
ಬಡದೆ ಜಗಕ್ಕನೀಗಳಱದೆಂ ಸಿರಿ ಕಳ್ಳೊಡವುಟ್ಟಿತೆಂಬುದಂ|| ೪೯

ವ|| ಎಂದು ಸೈರಿಸದೆ-

ಚಂ|| ಖಳ ನೊಳವಿಂಗೆ ಕ್ಪುಪೆ ವರಮೆಂಬವೊಲಾಂಬರಮುಂಟೆ ನಿನ್ನದೊಂ
ದಳವೊಡನೋದಿದೊಂದು ಬೆರಗಿಂಗೆ ಕೊಲಲ್ಕೆನಗಾಗದೀ ಸಭಾ|
ವಳಯದೊಳೆನ್ನನೇೞಸಿದ ನಿನ್ನನನಾಕುಳಮೆನ್ನ ಚಟ್ಟರಿಂ
ತಳವೆಳಗಾಗೆ ಕಟ್ಟಿಸದೆ ಮಾಣ್ದೊಡೆ ಕೆಮ್ಮನೆ ವಿಸೆವೊತ್ತೆನೇ|| ೫೦

ವ|| ಎಂದಾರೂಢಪ್ರತಿಜ್ಞನಾಗಿ ನಾಗಪುರಕ್ಕೆ ವಂದು ತಮ್ಮ ಭಾವಂ ಕೃಪನ ಮನೆಯೊಳಪ ಗತಪರಿಶ್ರಮನಾಗಿರ್ದೊಂದು ದಿವಸಂ ಪಾಂಡವರುಂ ಕೌರವರುಂ ಪೊಱಪೊೞಲೊಳ್-

ಕಂ|| ನೆರೆದಿಸುತಿರೆ ತೋಲ್ವುಲ್ಲೆಯ
ನಿರದದು ಬಿೞ್ದೊಡೆ ಪುರಾಣ ಕೂಪದೊಳದನಿ|
ನ್ನರಿದು ತೆಗೆವಂದಮೆಂದವ
ರಿರೆ ಬಳಸಿಯುಮಲ್ಲಿ ಕಂಡು ನಕ್ಕಂ ದ್ರೋಣಂ|| ೫೧

ಭರತಕುಳತಿಳಕರಿರ್ ವರ
ಶರಾಸನ ವ್ಯಗ್ರಹಸ್ತರಿರ್ ಬಳಯುತರಿರ್|
ನೆರೆದಿನಿಬರುವಿ ಲಕ್ಷ್ಯಮ
ನಿರದಕ್ಕಟ ಸರದೆ ತೆಗೆಯಲಾರ್ತಿರುಮಿಲ್ಲಾ|| ೫೨

ವ|| ಎಂದು ತನ್ನ ಮಗನಪ್ಪಶ್ವತ್ಥಾಮನಂ ಕರೆದೀ ಲಕ್ಷ್ಯಮಂ ತೆಗೆಯೆಂಬುದುಮಾತನಂತೆ ಗೆಯ್ವೆನೆಂದು ನೈಷ್ಠಿಕಮೆಂಬ ಮುಷ್ಟಿಯೊಳಂ ಪುಂಖಾನುಪುಂಖಮೆಂಬ ಶರಸಂಧಾನದೊಳವಯವದೊಳೆ ತೆಗೆದೊಡನಿಬರುಂ ಚೋದ್ಯಂಬಟ್ಟು ಗಾಂಗೇಯ ಧೃತರಾಷ್ಟ್ರರ್ಗಱಪಿದೊಡೆ

ನಿನ್ನನ್ನು ನಾನು ತಿಳಿದಿಲ್ಲ (ನೀನು ನನಗೆ ಅಪರಿಚಿತನು) ನೀನು ನನ್ನನ್ನು ಅದೆಲ್ಲಿ ಕಂಡಿದ್ದೆಯೊ? ರಾಜನಿಗೂ ಬ್ರಾಹ್ಮಣನಿಗೂ ಯಾವ ವಿಧವಾದ ಸ್ನೇಹ? ಮನುಷ್ಯರಾದವರು ಇಷ್ಟು ನಾಚಿಕೆಗೆಟ್ಟವರೂ ಆಗುತ್ತಾರೆಯೇ? ಎಂಬ ಮಾತುಗಳಿಂದ ದ್ರೋಣನಿಗೆ ಮರ್ಮಭೇದಕ ವಾಗುವಂತೆ ಹೀಯ್ಯಾಳಿಸಿದನು. ವ|| ಹಾಗೆ ಮಾಡಿದುದೂ ಅಲ್ಲದೆ ಈ ನಾಚಿಕೆಗೆಟ್ಟ ಬ್ರಾಹ್ಮಣನನ್ನು ಎಳೆದು ನೂಕು ಎನ್ನಲು ದ್ರೋಣನು ಹೀಗೆಂದನು- ೪೯. ಐಶ್ವರ್ಯ ಬರಲು ಮದ್ಯಪಾನ ಮಾಡಿದವರಂತೆ ಮಾತು ತೊದಲುವುದು; ಮುಖದಲ್ಲಿ ವಕ್ರಚೇಷ್ಟೆಯುಂಟಾಗುವುದು; ಮಾತುಗಳು ನಾಚಿಕೆಯಿಲ್ಲದಾಗುವುವು; ಸಂಬಂಧವನ್ನು ಮರೆಯುವಂತೆ ಮಾಡುವುದು; ಆದುದರಿಂದ ಐಶ್ವರ್ಯವು ಕಳ್ಳಿನೊಡನೆ ಹುಟ್ಟಿತು ಎಂಬುದನ್ನು ನಿಸ್ಸಂಶಯವಾಗಿ ಈಗ ವಿಶದವಾಗಿ ತಿಳಿದೆನು’ ವ|| ಎಂದು ಹೇಳಿ ಸಹಿಸಲಾರದೆ. ೫೦. ‘ಎಲೋ ಖಳನೇ ನೊಣಕ್ಕೆ ಕಸವೇ ಶ್ರೇಷ್ಠವಾದುದು’ ಎನ್ನುವ ಗಾದೆಯ ಹಾಗೆ ನಿನ್ನ ಯೋಗ್ಯತೆ ನನ್ನವರೆಗೂ ಉಂಟೆ? ಜೊತೆಯಲ್ಲಿ ವಿದ್ಯಾಭ್ಯಾಸ ಮಾಡಿದೆವೆಂಬ ಒಂದು ಕಾರಣದಿಂದ ನಿನ್ನನ್ನು ಕೊಲ್ಲಲಾರೆ. ಈ ಸಭಾಮಂಡಲದಲ್ಲಿ ನನ್ನನ್ನು ಹಿಯ್ಯಾಳಿಸಿದ ನಿನ್ನನ್ನು ನಿರಾಯಾಸವಾಗಿ ನನ್ನ ಶಿಷ್ಯರಿಂದ ನೀನು ಗಾಬರಿಪಡುವಂತೆ ಕಟ್ಟಿಸದೆ ಬಿಟ್ಟರೆ ನಾನು ಮೀಸೆಯನ್ನು ಹೊತ್ತಿರುವುದು ವ್ಯರ್ಥವಲ್ಲವೆ? ವ|| ಎಂದು ಪಣತೊಟ್ಟವನಾಗಿ ಹಸ್ತಿನಾಪುರಕ್ಕೆ ಬಂದು ತನ್ನ ಭಾವನಾದ ಕೃಪನ ಮನೆಯಲ್ಲಿ ಶ್ರಮಪರಿಹಾರಮಾಡಿಕೊಂಡನು. ಒಂದು ದಿನ ಪಾಂಡವರೂ ಕೌರವರೂ ಪಟ್ಟಣದ ಹೊರಭಾಗದಲ್ಲಿ ೫೧. ಒಟ್ಟುಗೂಡಿ ಚಕ್ಕಳದ ಜಿಂಕೆಯೊಂದನ್ನು ಬಾಣಗಳಿಂದ ಹೊಡೆಯುತ್ತಿರಲು ಅದು ಹಳೆಯ ಬಾವಿಯಲ್ಲಿ ಬಿದ್ದುಬಿಟ್ಟಿತು. ಅದನ್ನು ತಿಳಿದು ಮೇಲಕ್ಕೆ ತೆಗೆಯುವ ರೀತಿ ಸಾಧ್ಯವಿಲ್ಲವೆಂದವರಿರಲಾಗಿ ಅಲ್ಲಿ ಸುತ್ತಾಡುತ್ತಿದ್ದ ದ್ರೋಣನು ಅದನ್ನು ಕಂಡು ನಕ್ಕನು. ೫೨. ‘ಭರತವಂಶತಿಲಕರಾಗಿದ್ದೀರಿ; ಬಿಲ್ವಿದ್ಯೆಯಲ್ಲಿ ಪರಿಣತರಾಗಿದ್ದೀರಿ; ಬಲಿಷ್ಠರಾಗಿದ್ದೀರಿ; ಅಯ್ಯೋ ಒಟ್ಟುಗೂಡಿದ ನೀವಿಷ್ಟು ಜನರೂ ಈ ಗುರಿಯನ್ನು (ಚಕ್ಕಳದ ಜಿಂಕೆಯನ್ನು) ಬಾಣದಿಂದ ಮೇಲಕ್ಕೆ ತೆಗೆಯಲು ಸಮರ್ಥರಾಗಲಿಲ್ಲವೆ? ವ|| ಎಂದು ತನ್ನ ಮಗನಾದ ಅಶ್ವತ್ಥಾಮನನ್ನು ಕರೆದು ಈ ಲಕ್ಷ್ಯವನ್ನು ತೆಗೆ ಎಂದನು. ಅವನು ‘ಹಾಗೆಯೇ ಮಾಡುತ್ತೇನೆ’ ಎಂದು ನೈಷ್ಠಿಕವೆನ್ನುವ ಮುಷ್ಟಿಯಿಂದ ಬಾಣದ ಒಂದು ಗರಿಯನ್ನನುಸರಿಸಿ ಮತ್ತೊಂದು ಬಾಣಬಿಡುವ ಪ್ರಯೋಗದಿಂದ

ನದೀತನೂಜಂ ಭಾರದ್ವಾಜಂಗೆ ಬೞಯನಟ್ಟಿ ಬರಿಸಿ ಪೂರ್ವ ಸಂಭಾಷಣಾರ್ಘ್ಯಮೆತ್ತಿ ಮಧುಪರ್ಕ ವೇತ್ರಾಸನ ತಾಂಬೂಲದಾನಿಗಳಿಂ ಸಂತಸಂಬಡಿಸಿ ತದೀಯ ಕುಲ ವಿದ್ಯಾವೃತ್ತಿಗಳಂ ಬೆಸಗೊಂಡು-

ಮ|| ಮದಮಂ ಮುಕ್ಕುಳಿಸಿರ್ದಿಭಂಗಳನುದಗ್ರಾಶ್ವಂಗಳಂ ತಕ್ಕಿನ
ಗ್ಗದ ಬಾಡಂಗಳನಾಯ್ದು ಕೊಟ್ಟು ತಣಿದೆಂ ಪೋ ಸಾಲ್ಗುಮೆಂಬನ್ನಮಂ|
ದಿದಿರೊಳ್ ನೂಱಱುವರ್ ಕುಮಾರರುಮನಿಟ್ಟೀ ಕೂಸುಗಳ್ ಯೋಗ್ಯರ
ಪ್ಪುದನಿನ್ನೊಲ್ವೊಡೆ ಶಸ್ತ್ರವಿದ್ಯೆಗೊವಜಂ ನೀನಾಗು ಕುಂಭೋದ್ಭವಾ|| ೫೩

ವ|| ಎಂಬುದುಮಂತೆಗೆಯ್ವೆನೆಂದು ಕಲಶಜನನಿಬರ ಮೊಗಮಂ ನೋಡಿ-

ಕಂ|| ಈ ನೆರೆದಿನಿಬರುಮೆಂದುದ
ನೇನೀವರೆ ಪೇೞಮೆಂದೊಡನಿಬರುಮಿರ್ದರ್|
ಮೌನವ್ರತದೆ ಗುಣಾರ್ಣವ
ನಾನೀವೆಂ ನಿಮ್ಮ ಬಯಸಿ ಬೇೞ್ಪುದನೆಂದಂ|| ೫೪

ವ|| ಎಂಬುದುಮಾ ಮಾತಿಂಗೆ ಮೆಚ್ಚಿ ಜಗದೇಕಮಲ್ಲನಂ ತೊಡೆಯನೇಱಸಿಕೊಂಡು ಕುಂಭಸಂಭವಂ ಗಾಂಗೇಯನನಿಂತೆದಂ-

ಕಂ|| ಇನಿಬರೊಳಗೀತನೊರ್ವನೆ
ಧನುರಾಗಮದೆಡೆಗೆ ಕುಶಲನಕ್ಕುಮದರ್ಕೇಂ|
ಕಿನಿಸದಿರಿಂ ಮುನ್ನಱಪಿದೆ
ನೆನೆ ಭೀಷ್ಮನಲಂಪು ಮಿಗೆ ಮುಗುಳ್ನಗೆ ನಕ್ಕಂ|| ೫೫

ವ|| ಅಂತು ದ್ರೋಣಾಚಾರ‍್ಯಾನಾಚಾರ‍್ಯಪದವಿಯಂ ಕೈಕೊಂಡು ಪಾಂಡವ ಕೌರವರ್ಗೆ ಚತುರಂಗ ಧನುರ್ವೇದಮುಮಂ ದಿವ್ಯಾಸ್ತ್ರಂಗಳುಮಂ ಶಕ್ತಿ ತೋಮರ ಮುಸಲ ಮುಸುಂಡಿ ಭಿಂಡಿವಾಳ ಮುದ್ಗರ ಗದಾದಿ ವಿವಿಧಾಯುಧಂಗಳುಮಂ ಗಜ ರಥ ತುರಗ ಪದಾತಿ ಯುದ್ಧಂಗಳುಮನುಪದೇಶಂಗೆಯ್ಯುತ್ತುಮಿರೆಯಿರೆ-

ಕಂ|| ಯಾದವ ವಂಶಜರುಂ ನಾ
ನಾ ದೇಶ ನರೇಂದ್ರರುಂ ಘಟೋದ್ಭವನ ಧನು|
ರ್ವೇದಮನೆ ಕಲಲ್ ಬಂದಾ
ಳಾದರ್ ವಿದ್ಯಾಪ್ರಭಾವಮಾ ದೊರೆತೆ ವಲಂ|| ೫೬

ನಿರಾಯಾಸವಾಗಿ ಮೇಲಕ್ಕೆತ್ತಿದನು. ಅಷ್ಟುಮಂದಿಯೂ ಆಶ್ಚರ್ಯಪಟ್ಟು (ಆ ವಿಷಯವನ್ನು) ಭೀಷ್ಮ ಧೃತರಾಷ್ಟ್ರರಿಗೆ ತಿಳಿಸಿದರು. ಭೀಷ್ಮನು ದ್ರೋಣಾಚಾರ್ಯರಿಗೆ ಹೇಳಿ ಕಳುಹಿಸಿ ಬರಮಾಡಿ ಕುಶಲ ಸಂಭಾಷಣಾಪೂರ್ವಕ ಅರ್ಘ್ಯವನ್ನು ಕೊಟ್ಟು ಮಧುಪರ್ಕ, ವೇತ್ರಾಸನ, ತಾಂಬೂಲದಾನಾದಿಗಳಿಂದ ಸಂತೋಷಪಡಿಸಿ ಆತನ ಕುಲ, ವಿದ್ಯೆ ಮತ್ತು ವೃತ್ತಿಗಳನ್ನು ಪ್ರಶ್ನೆಮಾಡಿ ತಿಳಿದುಕೊಂಡನು. ೫೩. ಮದವನ್ನು ಉಗುಳುತ್ತಿರುವ ಆನೆಗಳನ್ನೂ (ಮದ್ದಾನೆಗಳನ್ನು) ಉತ್ತಮವಾದ ಕುದುರೆಗಳನ್ನೂ ಯೋಗ್ಯವೂ ಶ್ರೇಷ್ಠವೂ ಆದ ಗ್ರಾಮಗಳನ್ನೂ ‘ತೃಪ್ತನಾದೆ, ಸಾಕು, ಹೋಗು’ ಎನ್ನುವಷ್ಟು ಕೊಟ್ಟು ಅಂದು ಆ ನೂರಾರು ಮಕ್ಕಳನ್ನು ಅವರಿಗೆ ಒಪ್ಪಿಸಿ ‘ಈ ಮಕ್ಕಳು ಯೋಗ್ಯರಾಗಬೇಕು ಎಂಬ ಇಷ್ಟ ನಿಮಗಿರುವುದಾದರೆ ಎಲೈ ದ್ರೋಣನೇ ನೀನು ಇವರಿಗೆ ಶಸ್ತ್ರವಿದ್ಯೆಯ ಉಪಾಧ್ಯಾಯನಾಗು’

ವ|| ಎನ್ನಲು ದ್ರೋಣನು ಹಾಗೆಯೇ ಮಾಡುತ್ತೇನೆಂದು ಕೇಳಿ ಅವರೆಲ್ಲರ ಮುಖವನ್ನು ನೋಡಿ- ೫೪. ‘ಇಲ್ಲಿ ಸೇರಿರುವ ಇಷ್ಟುಜನರೂ ನಾನು ಕೇಳಿದ್ದನ್ನು ಕೊಡಬಲ್ಲಿರಾ ಹೇಳಿ’ ಎನ್ನಲು ಎಲ್ಲರೂ ಮೌನವಾಗಿದ್ದರು. ಗುಣಾರ್ಣವನು ‘ನೀವು ಆಶೆಪಟ್ಟು ಬೇಡಿದುದನ್ನು ನಾನು ಕೊಡುತ್ತೇನೆ’ ಎಂದನು. ವ|| ಹಾಗೆನ್ನಲಾಗಿ ಆ ಮಾತಿಗೆ ಮೆಚ್ಚಿ ಜಗದೇಕಮಲ್ಲನಾದ ಅರ್ಜುನನನ್ನು ತೊಡೆಯ ಮೇಲೇರಿಸಿಕೊಂಡು ದ್ರೋಣನು ಬೀಷ್ಮನಿಗೆ ಹೀಗೆ ಹೇಳಿದನು- ೫೫. ‘ಇಷ್ಟು ಮಕ್ಕಳಲ್ಲಿ ಇವನೊಬ್ಬನೇ ಬಿಲ್ವಿದ್ಯೆಯಲ್ಲಿ ಪಾರಂಗತನಾಗುತ್ತಾನೆ. ಅದಕ್ಕೆ ಕೋಪಿಸಬೇಡಿ; ಮೊದಲೇ ತಿಳಿಸಿದ್ದೇನೆ’ ಎನ್ನಲು ಭೀಷ್ಮನು ಸಂತೋಷಾತಿಶಯದಿಂದ ಮುಗುಳ್ನಗೆ ನಕ್ಕನು. ವ|| ಹಾಗೆ ದ್ರೋಣಾಚಾರ್ಯನು ಆಚಾರ್ಯಪದವಿಯನ್ನು ಅಂಗೀಕಾರ ಮಾಡಿ ಪಾಂಡವ ಕೌರವರುಗಳಿಗೆ ನಾಲ್ಕು ಭಾಗವಾಗಿರುವ ಬಿಲ್ವಿದ್ಯೆಯನ್ನೂ ದಿವ್ಯಾಸ್ತ್ರಗಳ ಪ್ರಯೋಗಗಳನ್ನೂ ಶಕ್ತಿ, ತೋಮರ, ಮುಸಲ, ಮುಸುಂಡಿ, ಭಿಂಡಿವಾಳ, ಮುದ್ಗ, ಗದೆಯೇ ಮೊದಲಾದ ಬಗೆಬಗೆಯ ಆಯುಧ ಪ್ರಯೋಗಗಳನ್ನೂ ಆನೆ, ತೇರು, ಕುದುರೆ ಮತ್ತು ಕಾಲಾಳುಗಳ ಯುದ್ಧದ ರೀತಿಯನ್ನೂ ಹೇಳಿಕೊಟ್ಟನು. ೫೬. ಯಾದವ ವಂಶದವರೂ ನಾನಾ ದೇಶದ ರಾಜರೂ ದ್ರೋಣಾಚಾರ್ಯರ ಧನುರ್ವಿದ್ಯೆಯನ್ನು ಕಲಿಯಲು ಬಂದು ಆತನ ಶಿಷ್ಯರಾದರು. ದ್ರೋಣನ ವಿದ್ಯಪ್ರಭಾವವು

ದ್ರೋಣಂ ಗಡಮಿಷುವಿದ್ಯೆಗೆ
ಜಾಣಂ ಗಡಮೆಂದು ಕೇಳ್ದು ಕೌರವರ್ಗೆಲ್ಲಂ|
ಪ್ರಾಣಂ ಬರ್ಪಾಕೃತಿಯೊಳೆ
ಬಾಣಾಸನ ಬಾಣಪಾಣಿ ಕರ್ಣಂ ಬಂದಂ|| ೫೭

ವ|| ಅಂತು ಬಂದು ವೈರಿಗಜಘಟಾವಿಘಟನನೊಳ್ ವಿಘಟಿಸಿ ಬಿಲ್ಗಲ್ತು-

ಕಂ|| ಕೆಳೆಯುಂ ಗುಱಯುಂ ಗೊಟ್ಟಿಯು
ಮಳವಿಗೆ ಪಿದಾಗೆ ತನಗೆ ದುರ್ಯೋಧನನೊಳ್|
ಮುಳಿಸುಂ ನೋವುಂ ಕಲುಷಮು
ಮಳುಂಬಮೆನೆ ತನಗರಾತಿಕಾಳಾನಳನೊಳ್|| ೫೮

ವ|| ಅಂತು ಕರ್ಣಂ ಗುಣಾರ್ಣವನೊಳ್ ಸೆಣಸಿ ಪಗೆಯನಭ್ಯಾಸಂಗೆಯ್ವಂತೆ ವಿದ್ಯಾಭ್ಯಾಸಂಗೆಯ್ಯೆ-

ಕಂ|| ಮನದೊಳೊಗೆದನ್ಯಜನ್ಮದ
ಮುನಿಸದು ಕಣ್ಣಿಂ ತುಳುಂಕೆ ಸೈರಿಸದವನು|
ರ್ವಿನಕ ಲಿತನಕ್ಕೆ ದುರ್ಯೋ
ಧನನುಂ ಭೀಮನೊಳೆ ಸೆಣಸಿ ಗದೆಯಂ ಕಲ್ತಂ|| ೫೯

ವ|| ಅಂತು ಭಾರದ್ವಾಜನಾಗಾಮಿಕ ಸಂಗ್ರಾಮರಂಗಕ್ಕೆ ಪಾತ್ರಂಗಳಂ ಸಮೆಯಿಸುವ ಸೂತ್ರಧಾರನಂತೆ ಶಸ್ತ್ರವಿದ್ಯಾಭ್ಯಾಸಂಗೆಯ್ಸುತ್ತಿರೆ ದೇಶಾಶ್ವರರಪ್ಪ ಪಲಂಬರ್ ರಾಜಕುಮಾರರ ನಡುವೆ ತಾರಾಗಣಂಗಳ ಸಕಳ ಕಳಾಧರನಂತೆ ಶಸ್ತ್ರಕಳಾಧರನಾಗಿ ತನ್ನುಮಂ ಗೆಲೆವಂದ ಸಾಮಂತ ಚೂಡಾಮಣಿಯ ಶರಪರಿಣತಿಯನಾರಯಲೆಂದು-

ಕಂ|| ಛಾಯಾಲಕ್ಷ್ಯಮನೊಡ್ಡಿಯು
ಮಾಯದ ನೀರೊಳಗೆ ತನ್ನನಡಸಿದ ನೆಗೞಂ|
ಬಾಯೞವಿನಮಿಸಿಸಿಯುಮರೆ
ಹೋಯಜ ಬಾಪ್ಪೆಂದು ಹರಿಗನಂ ಗುರು ಪೊಗೞ್ದಂ|| ೬೦

ವ|| ಅಂತು ಪೊಗೞ್ದು ತನ್ನ ಪಗೆವನಪ್ಪ ದ್ರುಪದನನೀತನಮೋಘಂ ಗೆಲಲ್ ನೆಗು ಮೆಂದು ನಿಶ್ಚೈಸಿ-

ಅಂತಹ ಮಹಿಮೆಯುಳ್ಳದ್ದಲ್ಲವೆ? ೫೭. ದ್ರೋಣನಲ್ಲವೆ ! ಬಾಣವಿದ್ಯೆಯಲ್ಲಿ ಜಾಣನಲ್ಲವೆ! ಎಂಬ ಪ್ರಶಂಸೆಯನ್ನು ಕೇಳಿ ಕೌರವರಿಗೆಲ್ಲ ಪ್ರಾಣ ಬರುವ ರೀತಿಯಲ್ಲಿ ಬಿಲ್ಲುಬಾಣಗಳನ್ನು ಹಿಡಿದು ಕರ್ಣನೂ ಅಲ್ಲಿಗೆ ಬಂದು ಕೂಡಿದನು. ವ|| ಹಾಗೆ ಬಂದು ಶತ್ರುರಾಜರ ಆನೆಗಳ ಸಮೂಹವನ್ನು ಭೇದಿಸಲು ಸಮರ್ಥನಾದ ಅರ್ಜುನನಲ್ಲಿ (ಅರಿಕೇಸರಿಯಲ್ಲಿ) ರ್ಸ್ಪಸಿ ಬಿಲ್ವಿದ್ಯೆಯನ್ನು ಕಲಿತನು.

೫೮. ಕಾಲಕಳೆದಂತೆಲ್ಲ ಕರ್ಣನಿಗೆ ದುರ್ಯೋಧನನಲ್ಲಿ ಸ್ನೇಹವೂ ಗುರಿಯೂ (ಸಹಪಾಠಿತ್ವವೂ) ಅಳತೆಗೆ ಮೀರಿದಂತೆ ಅರಾತಿ ಕಾಲಾನಲನಾದ ಅರ್ಜುನನಲ್ಲಿ ಕೋಪವೂ ವ್ಯಥೆಯೂ ಅಸೂಯೆಯೂ ಅಕವಾಯಿತು. ವ|| ಕರ್ಣನು ಗುಣಾರ್ಣವನಲ್ಲಿ ರ್ಸ್ಪಸಿ ಹಗೆತನವನ್ನಭ್ಯಾಸಮಾಡುವಂತೆಯೇ ವಿದ್ಯೆಯನ್ನು ಅಭ್ಯಾಸಮಾಡಿದನು. ೫೯. ಮನಸ್ಸಿನಲ್ಲಿ ಹುಟ್ಟಿದ ಪೂರ್ವಜನ್ಮದ ಕೋಪವು ಕಣ್ಣಿನಲ್ಲಿ ತುಳುಕುತ್ತಿರಲು ಅವನ ಅಭಿವೃದ್ಧಿಯಾಗುತ್ತಿರುವ ಶೌರ್ಯಕ್ಕೆ ಸಹನೆಯಿಲ್ಲದೆ ದುರ್ಯೋಧನನೂ ಭೀಮನಲ್ಲಿ ರ್ಸಸಿ ಗದೆಯ ಪ್ರಯೋಗವನ್ನು ಕಲಿತನು. ವ|| ಹಾಗೆ ದ್ರೋಣಾಚಾರ್ಯನು ಮುಂದೆ ಬರುವ ಯುದ್ಧರಂಗಕ್ಕೆ ಪಾತ್ರಗಳನ್ನು ಸಿದ್ಧಪಡಿಸುವ ಸೂತ್ರಧಾರನ ಹಾಗೆ ಶಸ್ತ್ರವಿದ್ಯಾಭ್ಯಾಸವನ್ನು ಮಾಡಿಸುತ್ತಿರಲು ಅನೇಕ ದೇಶದ ಒಡೆಯರಾದ ಹಲವು ರಾಜಕುಮಾರರ ಮಧ್ಯದಲ್ಲಿ ನಕ್ಷತ್ರಸಮೂಹದ ಮಧ್ಯದ ಪೂರ್ಣಚಂದ್ರನ ಹಾಗೆ ಶಸ್ತ್ರಕಲೆಯನ್ನು ಧರಿಸಿ ತನ್ನನ್ನೂ ಗೆದ್ದಿರುವ ಸಾಮಂತಚೂಡಾಮಣಿಯಾದ ಅರ್ಜುನನ (ಅರಿಕೇಸರಿಯ) ಬಾಣಪ್ರಯೋಗ ಪಾಂಡಿತ್ಯವನ್ನು ಪರೀಕ್ಷಿಸಬೇಕೆಂದು- ೬೦. ಪ್ರತಿಬಿಂಬದ ಗುರಿಯನ್ನು ಒಡ್ಡಿಯೂ ಆಳವಾದ ನೀರಿನಲ್ಲಿ ತನ್ನನ್ನು ಹಿಡಿದಿದ್ದ ಮೊಸಳೆಯನ್ನು ಅದು ಅರಚಿಕೊಂಡು ಸಾಯುವ ಹಾಗೆ ಬಾಣ ಪ್ರಯೋಗಮಾಡಿಸಿಯೂ ನೋಡಿ ‘ಅರೆ, ಹೋ, ಅಜ, ಭಾಪು, ಎಂಬ ಮೆಚ್ಚಿಕೆಯ ಮಾತುಗಳಿಂದ ಗುರುವು ಅರ್ಜುನನನ್ನು ಶ್ಲಾಘಿಸಿದನು. ವ|| ಹಾಗೆ ಹೊಗಳಿ ತನ್ನ ಲ

ಚಂ|| ಅಣುಗಿನೊಳೆನ್ನ ಚಟ್ಟರೊಳಗೀತನೆ ಜೆಟ್ಟಿಗನೆಂದು ವಿದ್ದೆಯಂ
ಗುಣಕಱುಗೊಂಡು ಕೊಟ್ಟೆನಗೆ ಸಂತಸಮಪ್ಪಿನವಿವ ನಿನ್ನ ದ|
ಕ್ಷಿಣೆಯದು ಬೇಗಮಾ ದ್ರುಪದನಂ ಗಡ ಕೋಡಗಗಟ್ಟುಗಟ್ಟಿ ತಂ
ದಣಿಯರಮೊಪ್ಪಿಸಿಂತಿದನೆ ಬೇಡಿದೆನಾಂ ಪರಸೈನ್ಯಭೈರವಾ|| ೬೧

ವ|| ಎಂಬುದುವಿ ಬೆಸನದಾವುದು ಗಹನಮೆಂದು ಪೂಣ್ದು ಪೋಗಿ-

ಮ|| ಒಡವಂದಂಕದ ಕೌರವರ್ ದ್ರುಪದನಂಬೇಱಂಗೆ ಮೆಯ್ಯೊಡ್ಡದೊ
ಡ್ಡೊಡೆತೋಡುತ್ತಿರೆ ಸೂಸೆ ಬೀೞ್ವ ತಲೆಗಳ್ ಸೂೞ್ಪಟ್ಟನಾಗಳ್ ಜವಂ|
ಪಿಡಿದೀಡಾಡುವ ಮಾೞಯಂತೆ ಪಲರಂ ಕೊಂದಿಕ್ಕಿ ಮೆಯ್ಯುಟ್ಟೆವಂ|
ದೆಡೆಯೊಳ್ ಮಾಣದುರುಳ್ಚಿ ಕಟ್ಟಿ ರಿಪುವಂ ಮುಂದಿಕ್ಕಿದಂ ದ್ರೋಣನಾ|| ೬೨

ವ|| ಆಗಳಾ ಕುಂಭಸಂಭವಂ ಪರಾಕ್ರಮಧವಳನ ಪರಾಕ್ರಮಕ್ಕೆ ಮೆಚ್ಚಿ ಕದಂಪಂ ಕರ್ಚಿ ದ್ರುಪದನಂ ತನ್ನ ಮಂಚದ ಕಾಲೊಳ್ ಕಟ್ಟವೇೞ್ದು ತಲೆಯ ಮೇಲೆ ಕಾಲನವಷ್ಟಂಭದಿಂ ನೀಡಿ-

ಕಂ|| ಸಿರಿಮೆಯ್ಯೊಳಗಂದಱವಿರೆ
ನೆರವಿಯೊಳಾರಱವರೊರ್ಮೆ ಕಂಡರನಱಯ|
ಲ್ಕರಿದೆಮ್ಮಂ ಬಡ ಪಾರ್ವರ
ನರಸರೆ ನೀವಿಗಳಱವಿರಱಯಿರೊ ಪೇೞಂ|| ೬೩

ವ|| ಎಂದು ಸಾಯೆ ಸರಸಂ ನುಡಿದು ಮತ್ತಮಿಂತೆಂದಂ-

ಕಂ|| ಆದಿ ಕ್ಷತ್ರಿಯರೇ ನೀ
ಮಾದಿತ್ಯನನಿಳಿಪ ತೇಜರಿರ್ ಪಾರ‍್ವನ ಕಾಲ್|
ಮೋದೆ ನಡುತಲೆಯಲಿರ್ಪುದು
ಮಾದುದು ನಿಮಗೆಂದು ನುಡಿದು ಕಾಯ್ಪಿನೊಳೊದೆದಂ|| ೬೪

ವ|| ಒದೆದು ನಿನ್ನನಿನಿತು ಪರಿಭವಂಬಡಿಸಿದುದು ಸಾಲ್ಗುಂ ನಿನ್ನಂ ಕೊಲಲಾಗದು ಕೊಂದೊಡೆ ಮೇಲಪ್ಪ ಪಗೆಗಂಜಿ ಕೊಂದಂತಾಗಿರ್ಕುಮೆಂದು ಕಟ್ಟಿದ ಕಟ್ಟುಗಳೆಲ್ಲಮಂ ತಾನೆ ಬಿಟ್ಟು ಕಳೆದು ಪೋಗೆಂಬುದುಂ ದ್ರುಪದಂ ಪರಿಭವಾನಳನಳವಲ್ಲದಳುರೆ

ಶತ್ರುವಾದ ದ್ರುಪದನನ್ನು ಈತನು ಸಂಪೂರ್ಣವಾಗಿ ಗೆಲ್ಲಲ್ಲು ಸಮರ್ಥನಾಗುತ್ತಾನೆಂದು ನಿಷ್ಕರ್ಷಿಸಿ ಅವನನ್ನು ಕುರಿತು ೬೧. ‘ಅರ್ಜುನಾ ಭಕ್ತಿಯುಳ್ಳ ನನ್ನ ಶಿಷ್ಯರಲ್ಲಿ ಇವನೇ ಪರಾಕ್ರಮಶಾಲಿ ಎಂದು ವಿದ್ಯೆಯನ್ನು ಪ್ರೀತಿಯಿಂದ ದಾನಮಾಡಿದ ನನಗೆ ಸಂತೋಷವಾಗುವ ಹಾಗೆ ನೀನು ಕೊಡುವ ಗುರುದಕ್ಷಿಣೆಯಾಗಿ ಜಾಗ್ರತೆಯಾಗಿ ಆ ದ್ರುಪದನನ್ನು ಕೋಡಗಗಟ್ಟು ಕಟ್ಟಿ ತಂದು ಅತಿಶಯವಾದ ರೀತಿಯಲ್ಲಿ ಒಪ್ಪಿಸು. ಎಲೈಪರಸೈನ್ಯಭೈರವನೇ ಇದನ್ನೇ ನಾನು ನಿನ್ನಿಂದ ಬೇಡಿದುದು, ವ|| ಎನ್ನಲು ಈ ಆಜ್ಞಾಕಾರ್ಯ ಏನು ಮಹಾದೊಡ್ಡದು ಎಂದು ಪ್ರತಿಜ್ಞೆಮಾಡಿ ಹೋಗಿ-೬೨. ಒಡನೆ ಬಂದ ಪ್ರಸಿದ್ಧರಾದ ಕೌರವರು ದ್ರುಪದನ ಬಾಣದ ಪೆಟ್ಟಿಗೆ ಶರೀರವನ್ನು ಒಡ್ಡಲಾರದೆ ಚದುರಿ ಓಡುತ್ತಿರಲು, ಬೀಳುವ ತಲೆಗಳು ಚೆದುರಾಡುತ್ತಿರಲು ತನ್ನ ಸರದಿಯನ್ನು ಪಡೆದ ಅರ್ಜುನನು ಹಲಬರನ್ನು ಯಮನು ಹಿಡಿದು ಬಿಸಾಡುವ ರೀತಿಯಲ್ಲಿ ಸಾಯಿಸಿ, ಶರೀರವನ್ನು ಮುಟ್ಟುವಷ್ಟು ಹತ್ತಿರಕ್ಕೆ ಬಂದವರನ್ನೂ ಉರುಳಿಸಿ ಶತ್ರುವನ್ನು ಕಟ್ಟಿತಂದು ದ್ರೋಣನ ಮುಂದೆ ಇಟ್ಟನು. ವ|| ಆಗ ದ್ರೋಣನು ಪರಾಕ್ರಮಧವಳನಾದ ಅರ್ಜುನನ ಶೌರ್ಯಕ್ಕೆ ಸಂತೋಷಪಟ್ಟು ಕೆನ್ನೆಗೆ ಮುತ್ತಿಟ್ಟು ದ್ರುಪದನನ್ನು ತನ್ನ ಮಂಚದ ಕಾಲಿಗೆ ಕಟ್ಟ ಹೇಳಿ ಅವನ ತಲೆಯ ಮೇಲೆ ತನ್ನ ಕಾಲನ್ನು ಗರ್ವದಿಂದ ನೀಡಿ- ೬೩. ‘ಐಶ್ವರ್ಯಸ್ಥಿತಿಯಲ್ಲಿ ಅಂದು ನೀವು ನಮ್ಮನ್ನು ತಿಳಿಯುತ್ತೀರಾ (ಗುರುತಿಸುತ್ತೀರಾ). ಒಂದು ಸಲ ಗುಂಪಿನಲ್ಲಿ ಕಂಡವರನ್ನೂಯಾರು ತಾನೆ ಗುರುತಿಸಬಲ್ಲರು. ಬಡಬ್ರಾಹ್ಮಣರಾದ ನಮ್ಮನ್ನೂ ಗುರುತಿಸಲಸಾಧ್ಯ. ರಾಜರೇ ಈಗಲಾದರೂ ಗುರುತಿಸುತ್ತೀರೋ ಇಲ್ಲವೋ ಹೇಳಿ. ವ|| ಎಂದು ಪ್ರಾಣಹೋಗುವಷ್ಟು ಪರಿಹಾಸ್ಯ ಮಾಡಿ ಪುನ ಹೀಗೆಂದನು- ೬೪. ‘ನೀವು ಆದಿಕ್ಷತ್ರಿಯರಾಗಿದ್ದೀರಿ; ಸೂರ್ಯನನ್ನೂ ತಿರಸ್ಕರಿಸುವ ತೇಜಸ್ಸುಳ್ಳವರಾಗಿದ್ದೀರಿ. ಹಾರುವನು ಒದ್ದ ಕಾಲು ನಡುನೆತ್ತಿಯಲ್ಲರುವದಾಯಿತಲ್ಲಾ’ ಎಂದು ಹೇಳಿ ಕೋಪದಿಂದ ಒದೆದನು-