ನಿನ್ನ ಅನ; ಇದಕ್ಕೆ ವಿರೋಧವಾಗಿ ಬೇರೆ ಬೇರೆ ರೀತಿಯಲ್ಲಿ ಹಂಬಲಿಸಬೇಡ ವ|| ಎಂದು ತಪೋವನದ ಋಷಿಗಳೂ ವನದೇವತಾಸಮೂಹವೂ ತನ್ನ ಸಾಹಸವನ್ನು ಹೊಗಳುತ್ತಿರಲು ಮಾದ್ರಿಯು ದಾಹೋತ್ತರದಂತೆ (?) ತನ್ನನ್ನು ಬೆಂಕಿಗೆ ಅರ್ಪಿಸಿಕೊಂಡು (ಸಹಗಮನ ಮಾಡಿ) ಕುಲದಲ್ಲಿಯೂ ಛಲದಲ್ಲಿಯೂ ಸ್ವಲ್ಪವೂ ದೋಷವೂ ನ್ಯೂನತೆಯೂ ಇಲ್ಲದೆ ತನಗೆ ಸಮಾನರಾದವರಾರೂ ಇಲ್ಲ ಎನ್ನಿಸಿದಳು. ಇತ್ತ ಕುಂತಿಯು ದುಖದಿಂದ ಕೂಡಿದವಳಾಗಿರಲು ತಪೋವನದಲ್ಲಿದ್ದ ವೃದ್ಧ ತಾಪಸರು ಅವಳನ್ನು ಹೀಗೆಂದು ಸಮಾಧಾನಮಾಡಿದರು. ೨೭. ಸತ್ತವರು ಏಳುವ ಪಕ್ಷದಲ್ಲಿ ಅವರಿಗಾಗಿ ಅಳಬೇಕು. ಇಲ್ಲ ಅವರಾದ ಮೇಲೆ ಉಳಿದ ನಾವು ಉಳಿಯುವ ಪಕ್ಷದಲ್ಲಿಯೂ (ನಾವು ಅಳಬೇಕು). ಹಾಗೆ ಸತ್ತ ಅವರು ಏಳುವುದಿಲ್ಲ. ನಮಗೂ ಬಾಳುವೆಯಿಲ್ಲ ; ಧರ್ಮಸಂಗ್ರಹ ಮಾಡುವುದೊಂದೇ ಜಾಣತನ. ಇಂತಹುದೇ ಸಂಸಾರಧರ್ಮ. ಹೀಗಿರುವಾಗ ಗೋಳಿಡುವುದೇಕೆ? ಚಿಂತಿಸುವುದೇಕೆ? ಹಲುಬುವುದೇಕೆ? ವ್ಯಥೆಪಡುವುದೇಕೆ? ವ|| ಹಾಗೂ ಅಲ್ಲದೆ ೨೮. ನಿರಂತರವಾಗಿ ಅಳುವ ಬಂಧುಜನಗಳ ಕಣ್ಣೀರಿನ ಪ್ರವಾಹವು ಆ ಪ್ರೇತವನ್ನು ಅಸಹ್ಯಪಡುವ ರೀತಿಯಲ್ಲಿ ಸುಡುವುದಿಲ್ಲವೆ? ಕಮಲಪತ್ರದಂತೆ ಕಣ್ಣುಳ್ಳ ಎಲೈ ಕುಂತಿಯೇ ಇನ್ನು ಈ ದುಖವನ್ನು ನಿಲ್ಲಿಸತಕ್ಕದ್ದು. ವ|| ನೀನು ಸಂಸಾರಸ್ಥಿತಿಯನ್ನು ತಿಳಿಯದ ಜ್ಞಾನಿಯಂತೆ ದುಖಾಕ್ರಾಂತಳಾಗಿ ವಿಶೇಷವಾಗಿ ಹಲುಬಿದರೆ ಮಕ್ಕಳು ಉತ್ಸಾಹಶೂನ್ಯರಾಗಿಯೂ ಅಧೈರ್ಯರಾಗಿಯೂ ಕೆಟ್ಟುಹೋಗುವರು ಎಂದು ಅನೇಕ ವಿಧವಾದ ಸಮಾಧಾನದ ಮಾತುಗಳಿಂದ ಆಕೆಯ ಉದ್ವೇಗವು ಕಡಮೆಯಾಗುವ ಹಾಗೆ ನುಡಿದುದಲ್ಲದೆ ಅಲ್ಲಿಯ ಋಷಿಸಮೂಹವೆಲ್ಲ ಆ ಮಕ್ಕಳನ್ನೂ ಕುಂತಿಯನ್ನೂ ಮುಂದಿಟ್ಟುಕೊಂಡು ಜೊತೆಯಲ್ಲಿ ಕರೆದುಕೊಂಡು ಹಸ್ತಿನಾಪಟ್ಟಣಕ್ಕೆ ಬಂದು ಭೀಷ್ಮ, ಧೃತರಾಷ್ಟ್ರ, ವಿದುರರಿಗೂ ಅಂಬಾಲೆಗೂ ಪಾಂಡುರಾಜನ ವೃತ್ತಾಂತವನ್ನು ತಿಳಿಸಿದರು.

೨೯. ದಟ್ಟವಾಗಿ ಬೀಳುವ ಮಂಜಿನಹನಿಗಳಿಂದ (ಬಗ್ಗಿರುವ) ಆವರಿಸಲ್ಪಟ್ಟ ಹೊಸತಾವರೆಯ ತೋಟದಂತೆ ಬಂಧುಜನಗಳ ಮುಖವೆಂಬ ಕಮಲದ ವನವು ಅಂದು ದುಖದಿಂದ ಸ್ರವಿಸುತ್ತಿರುವ ಕಣ್ಣಿನ ಹನಿಗಳಿಂದ ಒಟ್ಟಿಗೇ ಬಗ್ಗಿದುವು. ವ|| ಆಗ ಮಗನ ಮೇಲಿನ ಪ್ರೀತಿಯಿಂದ ಗೋಳಿಡುತ್ತಿದ್ದ ಅಂಬಾಲೆಯನ್ನೂ ನೆಂಟರನ್ನೂ ನೋಡುವುದರಿಂದ ಪುನ ಕಾಣಿಸಿಕೊಂಡ ದುಖದಿಂದ ಬಾಯಿ ಬಿಟ್ಟು

ಜಳದಾನಾದಿಕ್ರಿಯೆಗಳಂ ನಿರ್ವರ್ತಿಸಿ ತದನಂತರದೊಳದುವೆ ನಿರ್ವೇಗಮಾಗೆ ವ್ಯಾಸವಚನದೊಳ್ ಸತ್ಯವತಿಯುಮಂಬಿಕೆಯುಮಂಬಾಲೆಯುಂ ಸಂಸಾರವಿಶೀರ್ಣೆಯರಾಗಿ ಮುನಿವನಮನಾಶ್ರಯಿಸಿದರಿತ್ತ ಗಾಂಗೇಯನಯ್ವರ್ ಕೂಸುಗಳುಮಂ ತನ್ನ ತೊಡೆಯೆ ತೊಟ್ಟಲಾಗಿ ನಡುಪುತ್ತುಮಿರೆ ದುರ್ಯೋಧನ ಪ್ರಭೃತಿಗಳ್ ನೂರ್ವರುಂ ಧರ್ಮಪುತ್ರಾದಿಗಳಯ್ವರುಂ ಸಹಪಾಂಸುಕ್ರೀಡಿತರಾಗಿ-

ಕಂ|| ಒಡನಾಡಿಯುಮೊಡನೋದಿಯು
ಮೊಡವಳೆದುಂ ಗುಳ್ಳೆಗೊಟ್ಟಿ ಬಟ್ಟುಳಿಸೆಂಡುಂ|
ಪೊಡೆಸೆಂಡೆಂಬಿವನಾಡು
ತ್ತೊಡವಳೆದರ್ ತಮ್ಮೊಳೆಳಸೆ ತಂತಂಗೆಡೆಗಳ್|| ೩೦

ವ|| ಅಂತಾ ಕೂಸುಗಳ್ ಕೂಸಾಟವಾಡುತ್ತಿರ್ದೊಂದು ದಿವಸಂ ಮರಗೆರಸಿಯಾಡಲೆಂದು ಮುಂದೆ ತಮ್ಮ ಪಗೆ ಪರ್ವುವಂತೆ ಪನ್ನಿರ್ಮತ್ತರ್ ಪರ್ವಿದಾಲದ ಮರದ ಮೊದಲ್ಗೆ ವಂದು ಭೀಮನಂ ಮಮಾಡಿ ಕೋಲನೀಡಾಡಿ ಪಲವು ಸೂೞು ಕಾಡಿ-

ಕಂ|| ಪರಿದನಿಬರುಮೊಡನಡರ್ದಿರೆ
ಮರನಂ ಮುಟ್ಟಲ್ಕೆ ಪಡೆಯದನಿಬರ್ಗಂ ಕಿಂ|
ಕಿರಿವೋಗಿ ಭೀಮಸೇನಂ
ಮರನಂ ಪಿಡಿದಲ್ಗೆ ಪಣ್ವೊಲನಿಬರುಮುದಿರ್ದರ್|| ೩೧

ವ|| ಅಂತು ಬಿೞ್ದು ಸುಲಿದ ಮೊೞಕಾಲ್ಗಳುಂ ಕೞಲ್ದ ಪಲ್ಗಳುಮೆಲ್ವಡಗಾದ ಮೈಯ್ಗಳು ಮುಡಿದ ಕೆಯ್ಗಳುಮಾಗಿ ಬೆರಸೞುತ್ತುಂ ಬಂದು ಗಾಂಗೇಯ ಧೃತರಾಷ್ಟ್ರರ್ಗೆ ಕಾರಣಂಬೇೞ್ದೊಡವರಿಂದಿತ್ತ ಭೀಮನೊಡನಾಡದಿರಿಮೆಂದು ಮುದುಗಣ್ಗಳ್ ಬಾರಿಸೆ ತಮ್ಮ ನೊಂದು ಸಿಗ್ಗಿಂಗನಿಬರುಮೊಂದಾಗಿ ಪೋಗಿ ಪೊಱವೊೞಲ ಮರದ ಕೆಳಗೆ ಮಱಸೊಂದಿದ ಭೀಮನನಡಸಿ ಪಿಡಿದು ನೂರ್ವರುಂ ಗಂಟಲಂ ಮೆಟ್ಟಿ-

ಕಂ|| ಪಾವುಗಳಂ ಕೊಳಿಸಿ ಮಹಾ
ಗ್ರಾವಮನುಱದಡಸಿ ಕಟ್ಟಿ ಕೊರಲೊಳ್ ಗಂಗಾ|
ದೇವಿಯ ಮಡುವಿನೊಳೞದ
ರಾವರಿಸದೆ ತಮ್ಮ ಕುಲಮನಡಿಗೞವವೋಲ್|| ೩೨

ಅಳುತ್ತಿದ್ದ ಕುಂತಿ, ಭೀಷ್ಮ, ಧೃತರಾಷ್ಟ್ರ, ವಿದುರರುಗಳನ್ನೂ ಸತ್ಯವತಿದೇವಿಯನ್ನೂ ಸಮಾಧಾನಮಾಡಿ ಪಾಂಡುರಾಜನಿಗೆ ತರ್ಪಣಾದಿ ಕ್ರಿಯೆಗಳನ್ನು ಮಾಡಿ ಮುಗಿಸಿ ಆಮೇಲೆ ಆ ದುಖವೇ ವಿರಕ್ತಿಗೆ ಕಾರಣವಾಗಲು ವ್ಯಾಸರ ಉಪದೇಶದಂತೆ ಸತ್ಯವತಿಯೂ ಅಂಬೆ ಅಂಬಾಲೆಯರೂ ಸಂಸಾರ ತ್ಯಾಗಮಾಡಿ ತಪೋವನವನ್ನು ಆಶ್ರಯಿಸಿದರು. ಈ ಕಡೆ ಭೀಷ್ಮನು ಅಯ್ದು ಮಕ್ಕಳನ್ನೂ ತನ್ನ ಮಡಿಲೇ ತೊಟ್ಟಿಲಾಗಿರುವಂತೆ ಸಾಕುತ್ತಿರಲು ದುರ್ಯೋಧನನೇ ಮೊದಲಾದ ನೂರು ಮಂದಿಯೂ ಧರ್ಮರಾಜನೇ ಮೊದಲಾದ ಅಯ್ದು ಜನಗಳೂ ಒಟ್ಟಿಗೆ ಧೂಳಾಟವನ್ನಾಡುತ್ತಿರುವವರಾದರು. ೩೦. ಒಡನೆ ಆಡಿಯೂ ಒಡನೆ ಓದಿಯೂ ಜೊತೆಯಲ್ಲಿಯೇ ಬೆಳೆದೂ ಗೊಳ್ಳೆಗೊಟ್ಟಿ, ಬಟ್ಟಿ, ಉಳಿಸೆಂಡು, ಪೊಡೆಸೆಂಡು ಎಂಬ ಈ ಆಟಗಳನ್ನಾಡುತ್ತಲೂ ತಮ್ಮ ತಮ್ಮಲ್ಲಿ ಪ್ರತ್ಯೇಕವಾದ ಸ್ನೇಹವನ್ನು ಬೆಳೆಸುತ್ತ ಜೊತೆಯಲ್ಲಿಯೇ ಬೆಳೆದರು. ವ|| ಆ ಮಕ್ಕಳು ಮಕ್ಕಳಾಟವನ್ನಾಡುತ್ತಿದ್ದು ಒಂದು ದಿನ ಮರಗೆರಸಿಯೆಂಬ ಆಟವನ್ನು ಆಡಲೆಂದು (ಬಂದು) ಮುಂದಿನ ತಮ್ಮ ಹಗೆತನ ಹಬ್ಬುವುದನ್ನು (ಇಂದೇ) ಸೂಚಿಸುವಂತೆ ಹನ್ನೆರಡು ಮತ್ತರಷ್ಟು ಅಗಲವಾಗಿ ಬೆಳೆದ ಆಲದಮರದ (ಕೆಳಭಾಗಕ್ಕೆ) ಬಂದ ಭೀಮನನ್ನು ಕಾಣದ ಹಾಗೆ ಇರಿಸಿ ಕೋಲನ್ನೆಸೆದು ಅನೇಕ ಸಲ ಕಾಡಿದನು. ೩೧. ಓಡಿದ ಅಷ್ಟಮಂದಿಯೂ ಒಟ್ಟಿಗೆ ಮರವನ್ನು ಹತ್ತಿರಲು ಅವರನ್ನು ಮುಟ್ಟುವುದಕ್ಕಾಗದೆ ಅಷ್ಟು ಜನರ ಮೇಲೆಯೂ ರೇಗಿ ಕೋಪಿಸಿಕೊಂಡು ಭೀಮನು ಮರವನ್ನು ಹಿಡಿದು ಅಳ್ಳಾಡಿಸಲು ಹಣ್ಣಿನ ಹಾಗೆ ಅಷ್ಟು ಜನವೂ ಕೆಲಗೆ ಉದುರಿದರು (ಬಿದ್ದರು). ವ|| ಹಾಗೆ ಬಿದ್ದು ತರೆದುಹೋದ ಮೊಣಕಾಲುಗಳಿಂದಲೂ ಕಳೆದುಹೋದ ಹಲ್ಲುಗಳಿಂದಲೂ ಜಜ್ಜಿಹೋದ ಶರೀರದಿಂದಲೂ ಮುರಿದ ಕಯ್ಯಿಂದಲೂ ಕೂಡಿ ಅಳುತ್ತಾ ಬಂದು ಭೀಷ್ಮ ಧೃತರಾಷ್ಟ್ರರಿಗೆ ಹಾಗಾಗುವುದಕ್ಕೆ ಕಾರಣವನ್ನು ತಿಳಿಸಲು ಅವರು ಅಂದಿನಿಂದ ಮುದೆ ಭೀಮನೊಡ ನಾಡಬೇಡಿ ಎಂದು ವೃದ್ಧರು (ಮುದಿಕಣ್ಣುಗಳು) ನಿವಾರಿಸಲು ತಾವು ನೊಂದ ನಾಚಿಕೆಗಾಗಿ ಅಷ್ಟು ಜನವೂ ಒಟ್ಟುಗೂಡಿಹೋಗಿ ಪಟ್ಟಣದ ಹೊರಭಾಗದಲ್ಲಿ ಮರದ ಕೆಳಗೆ ಮೈಮರೆತು ನಿದ್ದೆಮಾಡುತ್ತಿದ್ದ ಭೀಮನ ಮೇಲೆ ಬಿದ್ದು ಹಿಡಿದು ನೂರುಜನರೂ ಅವನ ಕತ್ತನ್ನು ತುಳಿದು ೩೨. ಹಾವುಗಳಿಂದ ಕಚ್ಚಿಸಿ ದೊಡ್ಡಕಲ್ಲನ್ನು ಕುತ್ತಿಗೆಗೆ ಬಿಗಿಯಾಗಿ ಕಟ್ಟಿ ತಮ್ಮ ವಂಶವನ್ನೇ ತಳಕ್ಕೆ ಅದ್ದುವ ಹಾಗೆ

ವ|| ಅಂತೞ್ದುವುದುಂ ಗಂಗಾದೇವಿಯ ವರಪ್ರಸಾದದೊಳ್ ವಿಷಮ ವಿಷಧರಂಗಳ್ ಪರಿಯೆ ಕೊರಲೊಳ್ ತೊಡರ್ದ ಶಿಲೆಯಂ ಪಱದೀಡಾಡಿ ಗಂಗೆಯ ನೀರಂ ತೋಳೊಳ್ ತುಳುಂಕಿ ಮಗುೞ್ದು ಬಂದಂಗೆ ವಿಷದ ಲಡ್ಡುಗೆಯನಿಕ್ಕಿಯುಮೆನಿತಾನುಮುಪ ದ್ರವಂಗಳೊಳ್ ತೊಡರಿಕ್ಕಿಯುಂ ಗೆಲಲಾಱದೆ ಮನಮಿಕ್ಕಿಯುಮೆರ್ದೆಯಿಕ್ಕಿಯುಮಿರ್ದರಂತಯ್ವರ್ ಕೂಸುಗಳ್ಗಂ ಗಾಂಗೇಯಂ ಚೌಲೋಪನಯನಾದಿ ಕ್ರಿಯೆಗಳಂ ಮಾಡಿ ಸುಖಮಿರ್ಪನ್ನೆಗಮಿತ್ತ ಗಂಗಾದ್ವಾರದೊಳ್ ಮಾಯಾಪುರಮೆಂಬ ಋಷ್ಯಾಶ್ರಮದೊಳ್ ಗೌತಮನೆಂಬಂ ಬ್ರಹ್ಮಋಷಿ ತಪಂ ಗೆಯ್ಯುತಿರ್ಪಿನಮಾ ಋಷಿಗೆ ಬಿಲ್ಲುಮಂಬುಂವೆರಸೊರ್ವ ಮಗಂ ಪುಟ್ಟಿದನಾತಂಗೆ ಶರದ್ವತನೆಂದು ಪೆಸರನಿಟ್ಟು ನಡಪೆ ಬಳೆದು ತಪಂಗೆಯ್ವಾತನಲ್ಲಿಗೆ ಜಲಕ್ರೀಡಾ ನಿಮಿತ್ತದಿಂದಿಂದ್ರನಚ್ಚರಸೆ ಜಲಚರೆಯೆಂಬವಳ್ ಬಂದೊಡಾಕೆಯಂ ಕಂಡು ಕಾಮಾಸಕ್ತಚಿತ್ತನಾಗಿ ಕೂಡಿ-

ಕಂ|| ಒಗೆದ ಶರಸ್ತಂಬದೊಳಿ
ರ್ಬಗಿಯಾಗಿ ಮನೋಜ ರಾಗರಸಮುಗುತರೆ ತೊ|
ಟ್ಟಗೆ ಬಿಸುಟು ಬಿಲ್ಲನಂಬುಮ
ನಗಲ್ದನಾಶ್ರಮದಿನುದಿತ ಲಜ್ಜಾವಶದಿಂ|| ೩೩

ವ|| ಅನ್ನೆಗಮಾ ತಪೋವನಕ್ಕೆ ಬೇಂಟೆಯಾಡಲ್ಬಂದ ಶಂತನುವಿನೊಡನೆಯವರಾ ಶರಸ್ತಂಬದೊಳ್ ಪರಿಕಲಿಸಿರ್ದ ಮುನೀಂದ್ರನಿಂದ್ರಿಯ ದೊಳೊಗೆದ ಪೆಣ್ಗೂಸುಮಂ ಗಂಡುಗೂಸುಮನವಱ ಕೆಲದೊಳಿರ್ದ ದಿವ್ಯ ಶರಾಸನ ಶರಂಗಳುಮಂ ಕಂಡು ಕೊಂಡುಪೋಗಿ ಶಂತನುಗೆ ತೋಱದೊಡಾತನುಮಾ ಶಿಶುದ್ವಯಮಂ ನಿಜ ಗಜಪುರಕ್ಕುಯ್ದು ಕೃಪೆಯಿಂ ನಡಪಿದನಪ್ಪುದಱಂ ಕೃಪನುಂ ಕೃಪೆಯುಮೆಂದು ಪೆಸರನಿಟ್ಟು ನಡಪುತ್ತಿರ್ಪನ್ನೆಗಮವರಯ್ಯಂ ಶರದ್ವತನಲ್ಲಿಗೆ ಬಂದು ಕಿಱಯಾತಂಗೆ ಚೌಲೋಪನಯನಾದಿ ಕ್ರಿಯೆಗಳಂ ಮಾಡಿ ಧನುರ್ವಿದ್ಯೋಪದೇಶಂಗೆಯ್ಯೆ ಸರ್ವವಿದ್ಯಾವಿಶಾರದನಾದನಾ ಕೃಪಾಚಾರ್ಯರ ಪಕ್ಕದೊಳ್ ಕೂಸುಗಳಂ ವಿದ್ಯಾಭ್ಯಾಸಂಗೆಯ್ಸೆ-

ಚಂ|| ಬರೆಯದೆ ಬಂದ ಸುದ್ದಗೆಯೆ ಸೂತ್ರಮನೊಂದೆ ಮುಹೂರ್ತಮಾತ್ರದಿಂ
ಬರಿಸಿದುದುಂತು ಸೂತ್ರಿಸಿದ ಸೂತ್ರದ ವೃತ್ತಿ ನಿಜಾತ್ಮವೃತ್ತಿವೋಲ್|
ಪರಿಣಮಿಸಿತ್ತು ಮತ್ತುೞದ ವಿದ್ಯೆಗಳೋಜರೆ ಚಟ್ಟರೆಂಬಿನಂ
ನೆರೆದುವು ತನ್ನೊಳಾರ್ ಗಳ ಗುಣಾರ್ಣವನಂತು ಕುಶಾಗ್ರಬುದ್ಧಿಗಳ್|| ೩೪

ವಿಚಾರಮಾಡದೆ ಗಂಗಾನದಿಯ ಮಡುವಿನಲ್ಲಿ ಮುಳುಗಿಸಿದರು. ವ|| ಹಾಗೆ ಮುಳುಗಿಸಿದರೂ ಗಂಗಾದೇವಿಯ ವರಪ್ರಸಾದದಿಂದ ವಿಷಯುಕ್ತವಾದ ಹಾವುಗಳು ಹರಿದುಹೋದವು. ಕೊರಳಿನಲ್ಲಿ ಕಟ್ಟಿದ್ದ ಕಲ್ಲನ್ನು ಕಿತ್ತು ಬಿಸಾಡಿ ಗಂಗೆಯ ನೀರನ್ನು ತೋಳಿನಿಂದ ಕಲಕಿ ತಳ್ಳಿ ಪುನ ಹಿಂತಿರುಗಿದವನಿಗೆ ವಿಷದ ಲಾಡುಗಳನ್ನು ತಿನ್ನಿಸಿಯೂ ಇನ್ನೂ ಅನೇಕ ವಿಧವಾದ ಕಷ್ಟಗಳಲ್ಲಿ ಸಿಕ್ಕಿಸಿಯೂ ಗೆಲ್ಲಲಾರದೆ ಉತ್ಸಾಹಶೂನ್ಯರಾಗಿಯೂ ಧೈರ್ಯಕುಗ್ಗಿದವವಾಗಿಯೂ ಇಧ್ದರು. (ಈ ಕಡೆ) ಭೀಷ್ಮನು ಅಯ್ದು ಜನ ಮಕ್ಕಳಿಗೂ ಚೌಲೋಪನಯನಾದಿ ಕರ್ಮಗಳನ್ನು ಮಾಡಿ ಸುಖನಾಗಿದ್ದನು. (ಈ ಕಡೆ) ಗಂಗಾದ್ವಾರದಲ್ಲಿ ಮಾಯಾಪುರವೆಂಬ ಋಷ್ಯಾಶ್ರಮದಲ್ಲಿ ಗೌತಮನೆಂಬ ಬ್ರಹ್ಮಋಷಿಯು ತಪಸ್ಸು ಮಾಡುತ್ತಿರಲು ಆ ಋಷಿಗೆ ಬಿಲ್ಲುಬಾಣಗಳಿಂದ ಕೂಡಿದ ಒಬ್ಬ ಮಗನು ಹುಟ್ಟಿದನು. ಅವನಿಗೆ ಶರದ್ವತನೆಂದು ಹೆಸರನ್ನಿಟ್ಟು ಸಲಹಿದನು. ಅಭಿವೃದ್ಧಿಯಾದ (ಬೆಳೆದ) ಆ ಋಷಿಯ ಬಳಿಗೆ ಜಲಕ್ರೀಡೆಯ ನೆಪದಿಂದ ಇಂದ್ರನ ಅಪ್ಸರಸ್ತ್ರೀಯಾದ ಜಲಚರೆಯೆಂಬುವಳು ಬರಲು (ಆ ಋಷಿಯು) ಆಕೆಯನ್ನು ನೋಡಿ ಕಾಮಾಸಕ್ತನಾಗಿ ಅವಳೊಡನೆ ಕೂಡಿ- ೩೩. ಆ ಜೊಂಡುಹುಲ್ಲಿನಲ್ಲಿ ಚೆಲ್ಲಿದ ರೇತಸ್ಸು ಎರಡು ಭಾಗವಾಗಿ ಸುರಿಯಲು ಆ ಶರದ್ವತನು ತನಗೊದಗಿದ ನಾಚಿಕೆಯಿಂದ ಬಿಲ್ಲುಬಾಣಗಳನ್ನು ಕೂಡಲೆ ಬಿಸಾಡಿ ಋಷ್ಯಾಶ್ರಮವನ್ನು ಬಿಟ್ಟು ಹೋದನು. ವ|| ಅಷ್ಟರಲ್ಲಿ ಆ ತಪೋವನಕ್ಕೆ ಬೇಟೆಯಾಡುವುದಕ್ಕಾಗಿ ಬಂದಿದ್ದ ಶಂತನುವಿನೊಡನಿದ್ದವರು ಆ ಜೊಂಡುಹುಲ್ಲಿನಲ್ಲಿ ಚೆಲ್ಲಿದ್ದ ಋಷಿಶ್ರೇಷ್ಠನ ವೀರ್ಯದಿಂದ (ರೇತಸ್ಸಿನಿಂದ) ಹುಟ್ಟಿದ ಹೆಣ್ಣು ಕೂಸನ್ನೂ ಗಂಡುಕೂಸನ್ನೂ ಅವುಗಳ ಪಕ್ಕದಲ್ಲಿ ಬಿಲ್ಲುಬಾಣಗಳನ್ನೂ ನೋಡಿ ಅವುಗಳನ್ನು ತೆಗೆದುಕೊಂಡು ಹೋಗಿ ಶಂತುನುವಿಗೆ ತೋರಿಸಿದರು. ಅವನು ಆ ಎರಡು ಮಕ್ಕಳನ್ನೂ ತನ್ನ ಹಸ್ತಿನಾಪುರಕ್ಕೆ (ಕರೆದು) ಕೊಂಡುಹೋಗಿ ಕೃಪೆಯಿಂದ ಕೃಪೆ ಮತ್ತು ಕೃಪ ಎಂದು ಹೆಸರಿಟ್ಟು ಸಾಕಿದನು. ಅವರ ತಂದೆಯಾದ ಶರದ್ವತನು ಅಲ್ಲಿಗೆ ಬಂದು ಚಿಕ್ಕವನಿಗೆ ಚೌಳೋಪನಯನವೇ ಮೊದಲಾದ ಕರ್ಮಗಳನ್ನೂ ಮಾಡಿ ಬಿಲ್ಲಿನ ವಿದ್ಯೆಯನ್ನೂ ಹೇಳಿಕೊಡಲು ಅವನು ಸರ್ವವಿದ್ಯಾವಿಶಾರದನಾದನು. ಭೀಷ್ಮನು ಆ ಕೃಪಾಚಾರ್ಯರ ಬಳಿ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸಿದನು. ೩೪. ಗುಣಾರ್ಣವನ ಹಾಗೆ (ಅರ್ಜುನ-ಅರಿಕೇಸರಿ) ಕುಶಾಗ್ರಬುದ್ಧಿಗಳಾಗಿರುವವರು ಯಾರಿದ್ದಾರೆ? ಏಕೆಂದರೆ ಶುದ್ಧವರ್ಣಮಾಲೆಯ ಸೂತ್ರವನ್ನೂ ಅಭ್ಯಾಸ ಮಾಡದೆಯೇ ಕ್ಷಣಮಾತ್ರದಲ್ಲಿ ಅಕ್ಷರಗಳನ್ನೂ ಕಲಿತನು. ಹಾಗೆಯೇ ಸೂತ್ರರೂಪದಲ್ಲಿ ಹೇಳಿದವುಗಳು ಅರ್ಥವಿವರಣೆಯಿಲ್ಲದೆಯೇ ತನ್ನ ಸಹಜ ಸ್ವಭಾವದಿಂದಲೇ ಅವನಿಗೆ ಅನವಾದುವು. ಉಳಿದ ಅನೇಕ ವಿದ್ಯೆಗಳು ಉಪಾಧ್ಯಾಯರೇ ಶಿಷ್ಯರಾದಂತೆ ಅವನಲ್ಲಿ

ವ|| ಅಂತು ಪಂಚಾಂಗ ವ್ಯಾಕರಣದ ವೃತ್ತಿಭೇದಮಪ್ಪ ಛಂದೋವೃತ್ತಿಯೊಳಂ ಶಬ್ದಾಲಂಕಾರ ನಿಷ್ಠಿತಮಪ್ಪಲಂಕಾರದೊಳಂ ವ್ಯಾಸ ವಾಲ್ಮೀಕಿ ಕಶ್ಯಪಪ್ರಭೃತಿ ವಿರಚಿತಂಗಳಪ್ಪ ಮಹಾಕಾವ್ಯಂಗಳೊಳಂ ನಾಂದೀಪ್ರರೋಚನಾಪ್ರಸ್ತಾವನೇತಿವೃತ್ತ ಸಂ ಪ್ರವೇಶ ವಿಷ್ಕಂಭ ಕಪೋತಿಕಾ ವ್ಯಾಳಿಕಾದಿ ಲಕ್ಷಣೋಪೇತಂಗಳಪ್ಪ ನಾಟಕಂಗಳೊಳಂ ಪದಿನೆಂಟು ಧರ್ಮಶಾಸ್ತ್ರಂಗಳೊಳಂ ನಾಲ್ಕು ವೇದದೊಳಮಾಱಂಗ ದೊಳಮಯ್ದು ತೆಱದ ಮಂತ್ರಂಗಳೊಳಮಾಱುಂ ದರ್ಶನದೊಳಂ ಪ್ರತ್ಯಕ್ಷಾನುಮಾನ ಪ್ರಮಾಣಂಗಳೊಳಂ ಭರತಪ್ರಣೀತ ನೃತ್ಯಶಾಸ್ತ್ರದೊಳಂ ನಾರದಾದಿ ಪ್ರಣೀತ ಗಾಂಧರ್ವವಿದ್ಯಾವಿಶೇಷಂಗಳೊಳಂ ಗಜಾಗಮಜ್ಞ ರಾಜಪುತ್ರ ಗೌತಮ ವಾದ್ವಾಕಿ ಪಾಳ ಕಶ್ಯಪ ಸುಪತಿ ಶ್ರೀಹರ್ಷಾದಿ ಪುರಾಣಪುರುಷವಿರಚಿತಂಗಳಪ್ಪ ಹಸ್ತಿಶಾಸ್ತ್ರಂಗಳೊಳಂ ಚಿತ್ರಕರ್ಮ ಪತ್ರಚ್ಛೇದ ಗ್ರಹಗಣಿತ ರತ್ನಪರೀಕ್ಷೆಗಳೊಳಂ ದಾರುಕರ್ಮ ವಾಸ್ತುವಿದ್ಯಾ ಪೂರ್ವಯಂತ್ರ ಪ್ರಯೋಗ ವಿಷಾಪಹರಣ ಸರಭೇದ ರತಿತಂತ್ರೇಂದ್ರಜಾಲ ವಿವಿಧ ವಿದ್ಯೆಗಳೊಳಮನೇಕಾಕ್ಷರ ಸ್ವರೂಪಂಗಳೊಳಂ ಚಾಪ ಚಕ್ರ ಪರಶು ಕೃಪಾಣ ತೋಮರ ಮುಸಲ ಮುಸುಂಡಿ ಭಿಂಡಿವಾಳ ಮುದ್ಗರ ಗದಾದಿ ವಿವಿಧಾಯುಧಂಗಳೊಳತಿಮತಿ ಪ್ರವೀಣನುಮಾರೂಢಸರ್ವಜ್ಞ ಮಹೇಂದ್ರ ಜಾಣ(?)ನುಮಾಗಿ-

ಕಂ|| ಉಳ್ಳೋದುಗಳೊಳಗನಿತಱ
ವುಳ್ಳರ್ಗಂ ತಿಳಿಪಲರಿಯದೆನಿಪೆಡೆಗಳುಮಂ|
ತೆಳ್ಳಗಿರೆ ತಿಳಿಪುಗುಂ ಬೆಸ
ಗೊಳ್ಳ ಗುಣಾರ್ಣವನ ಲೆಕ್ಕಮಂ ಪೊಕ್ಕಮುಮಂ|| ೩೫

ವ|| ಎಂದು ಲೋಕಮೆಲ್ಲಂ ಪೊಗೞೆ ನೆಗೞ್ದ ಪೊಗೞ್ತೆಗಂ ನೆಗೞ್ತೆಗಂ ತಾನೆ ಗುಱಯಾಗಿ-

ಕಂ|| ಮಾನಸದೊಳ್ ಹಂಸೆಯವೋಲ್
ಮಾನಸ ವಾಗ್ವನಿತೆ ತನ್ನ ಮಾನಸದೊಳಿವಂ|
ಮಾನಸನೆಂದಗಲದೆ ನಿಲೆ
ಮಾನಸನಾದಂ ಸರಸ್ವತೀ ಕಳಹಂಸಂ|| ೩೬

ವ|| ಅಂತಯ್ಯರುಂ ಸಮಸ್ತ ಶಸ್ತ್ರ ಶಾಸ್ತ್ರ ಪ್ರಯೋಗ ಪ್ರವೀಣರಾಗೆ ಧರ್ಮಪುತ್ರಂ ಧರ್ಮಶಾಸ್ತ್ರಂಗಳೊಳಂ ಶ್ರುತಿಸ್ಮೃತಿಗಳೊಳಂ ಪ್ರವೀಣನಾದಂ ಭೀಮಸೇನಂ ವ್ಯಾಕರಣದೊಳಾರಿಂದ ಮಗ್ಗಳಂ ಕುಶಲನಾದಂ ನಕುಲಂ ಕುಂತಶಸ್ತ್ರದೊಳತಿ ಪ್ರವೀಣನುಮಾಗಿ ಅಶ್ವವಿದ್ಯೆಯೊಳಾರಿಂದಂ ಪಿರಿಯನಾದಂ ಸಹದೇವಂ ಜ್ಯೋತಿರ್ಜ್ಞಾನದೊಳತಿ ಪರಿಣತನಾದಂ

ಸೇರಿಕೊಂಡವು. ವ|| ಹಾಗೆ ಅಯ್ದು ಅಂಗಗಳಿಂದ ಕೂಡಿದ ವ್ಯಾಕರಣಶಾಸ್ತ್ರ ಮತ್ತು ವೃತ್ತಿಭೇದದಿಂದ ಕೂಡಿದ ಛಂದಶ್ಶಾಸ್ತ್ರಗಳಲ್ಲಿಯೂ ಶಬ್ದಾಲಂಕಾರದಿಂದ ಕೂಡಿದ ಅಲಂಕಾರಶಾಸ್ತ್ರದಲ್ಲಿಯೂ ವ್ಯಾಸ ವಾಲ್ಮೀಕಿ ಕಶ್ಯಪ ಮೊದಲಾದವರಿಂದ ರಚಿತವಾದ ಮಹಾಕಾವ್ಯಗಳಲ್ಲಿಯೂ ನಾಂದಿ, ಪ್ರರೋಚನ, ಪ್ರಸ್ಥಾವನ, ಇತಿವೃತ್ತ, ಸಂಪ್ರವೇಶ, ನಿಷ್ಕಂಭ, ಕಪೋತಿಕಾ, ವ್ಯಾಳಿಕಾ ಮೊದಲಾದ ಲಕ್ಷಣಗಳಿಂದ ಕೂಡಿದ ನಾಟಕಶಾಸ್ತ್ರದಲ್ಲಿಯೂ ಹದಿನೆಂಟು ಧರ್ಮಶಾಸ್ತ್ರಗಳಲ್ಲಿಯೂ ನಾಲ್ಕು ವೇದಗಳಲ್ಲಿಯೂ ಆರು ಅಂಗಗಳಲ್ಲಿಯೂ ಅಯ್ದು ರೀತಿಯ ಮಂತ್ರಗಳಲ್ಲಿಯೂ ಆರು ದರ್ಶನಗಳಲ್ಲಿಯೂ ಭರತಪ್ರಣೀತವಾದ ನಾಟ್ಯ ಶಾಸ್ತ್ರದಲ್ಲಿಯೂ ನಾರದನೇ ಮೊದಲಾದವರಿಂದ ರಚಿತವಾದ ಸಂಗೀತ ವಿದ್ಯಾವಿಶೇಷಗಳಲ್ಲಿಯೂ ಹಸ್ತಿಶಾಸ್ತ್ರಜ್ಞರಾಜ ರಾಜಪುತ್ರ ಗೌತಮ, ವಾದ್ವಾಕಿ, ಪಾಳಕಾಪ್ಯ, ಸುಗತಿ, ಶ್ರೀಹರ್ಷನೇ ಮೊದಲಾದ ಪ್ರಾಚೀನರಿಂದ ವಿರಚಿತವಾದ ಹಸ್ತಿಶಾಸ್ತ್ರದಲ್ಲಿಯೂ ಚಿತ್ರಕರ್ಮ, ಪತ್ರಚ್ಛೇದ, ಗ್ರಹಗಣಿತ, ರತ್ನಪರೀಕ್ಷೆಗಳಲ್ಲಿಯೂ ದಾರುಕರ್ಮ, ವಾಸ್ತು – ವಿದ್ಯೆಗಳಿಂದ ಕೂಡಿದ ಯಂತ್ರೋಪಯೋಗದಲ್ಲಿಯೂ ವಿಷಾಪಹರಣ, ಸ್ವರಭೇದ, ರತಿತಂತ್ರ, ಇಂದ್ರಜಾಲ ಮೊದಲಾದ ಬಗೆಬಗೆಯ ವಿದ್ಯೆಗಳಲ್ಲಿಯೂ ಅನೇಕಾಕ್ಷರ ಸ್ವರೂಪದಲ್ಲಿಯೂ ಚಾಪ, ಚಕ್ರ, ಪರಸು, ಕೃಪಾಣ, ಶಕ್ತಿ, ತೋಮರ, ಮುಸಲ, ಮುಸುಂಡಿ, ಭಿಂಡಿವಾಳ, ಮುದ್ಗರ, ಗದೆಯೇ ಮೊದಲಾದ ವಿಧವಿಧವಾದ ಆಯುಧಗಳ ಪ್ರಯೋಗದಲ್ಲಿಯೂ ಅತಿಪ್ರವೀಣನೂ ಸರ್ವಜ್ಞತ್ವವುಳ್ಳವನೂ ಇಂದ್ರನಂತೆ ಜಾಣನೂ ಆದನು. ೩೫. ಇರುವ ವಿದ್ಯೆಗಳಲ್ಲೆಲ್ಲ ಪೂರ್ಣಪಾಂಡಿತ್ಯಪಡೆದವರಿಗೂ ತಿಳಿಸುವುದಕ್ಕೆ ಅಸಾಧ್ಯವಾದ ಸ್ಥಳಗಳಲ್ಲಿಯೂ ಅರ್ಜುನನು (ಅರಿಕೇಸರಿಯು) ಸರಳವಾಗಿ ತಿಳಿಸುತ್ತಾನೆ. ಅರ್ಜುನನ ಲೆಕ್ಕಪೊಕ್ಕಗಳನ್ನು ವಿಚಾರಮಾಡಿ ನೋಡಯ್ಯಾ ವ|| ಎಂದು ಲೋಕದ ಜನರೆಲ್ಲ ಹೊಗಳುವ ಹಾಗೆ ಪ್ರಸಿದ್ಧಿಪಡೆದ ಹೊಗಳಿಕೆಗೂ ಪ್ರಸಿದ್ಧಿಗೂ ತಾನೆ ಗುರಿಯಾದನು. ೩೬. ಇವನ ಮನಸ್ಸಿನಲ್ಲಿ ಹುಟ್ಟಿದ ವಾಗ್ದೇವತೆಯು ಇವನು ಮನುಷ್ಯನೆಂದು ಬಿಟ್ಟು ಹೋಗದೆ ಮಾನಸ ಸರೋವರದಲ್ಲಿರುವ ಹಂಸಪಕ್ಷಿಯ ಹಾಗೆ ಸ್ಥಿರವಾಗಿ ನಿಲ್ಲಲು ಸರಸ್ವತಿಯ ವಾಹನವಾದ ಹಂಸದ ಹಾಗಿರುವ ಅರ್ಜುನನು ಮನುಷ್ಯಮಾತ್ರನಾಗಿದ್ದಾನೆ. ವ|| ಹಾಗೆ ಅಯ್ದು ಜನರೂ ಸಮಸ್ತಶಸ್ತ್ರಶಾಸ್ತ್ರಪ್ರಯೋಗಗಳಲ್ಲಿಯೂ ನಿಪುಣರಾದರು. ಧರ್ಮರಾಜನು ಧರ್ಮಶಾಸ್ತ್ರಗಳಲ್ಲಿಯೂ ಶ್ರುತಿಸ್ಮೃತಿಗಳಲ್ಲಿಯೂ ಪ್ರವೀಣನಾದನು. ಭೀಮಸೇನನು ವ್ಯಾಕರಣದಲ್ಲಿ ಎಲ್ಲರಿಗಿಂತಲೂ ಮೇಲಾದ ಬುದ್ಧಿವಂತನಾದನು. ನಕುಲನು ಕುಂತಶ್ಶಾಸ್ತ್ರದಲ್ಲಿ ಪ್ರವೀಣನಾಗಿ ಅಶ್ವವಿದ್ಯೆಯಲ್ಲಿ ಎಲ್ಲರಿಗಿಂತಲೂ ಹಿರಿಯನಾದನು. ಸಹದೇವನು

ಚಂ|| ಬಳೆದುವು ತೋಳ್ಗಳೆಕ್ಕೆಯಿನಮಳ್ ಬಳೆವಂತಿರೆ ಮುಯ್ವುಗಳ್ ಕುಳಾ
ಚಳ ಶಿಖರಂಗಳಂ ಮಸುಳೆವಂದುವು ಪರ್ವಿದ ವಕ್ಷವಿ ಕ್ಷಮಾ|
ತಳ ಕುಳಲಕ್ಷ್ಮಿಗಾಯ್ತು ಕುಳಮಂದಿರಮೆಂದು ಮಹೀತಳಂ ಮನಂ
ಗೊಳೆ ನೆದತ್ತುದಾತ್ತ ನವಯೌವನಮೊರ್ಮೆಯೆ ಧರ್ಮಪುತ್ರನಾ|| ೩೭

ವ|| ಅಂತು ಸೊಗಯಿಸುವ ರೂಪಿನೊಳ್ ಪೊನ್ನ ಬಣ್ಣದಂತಪ್ಪ ತನ್ನ ಮೆಯ್ಯ ಬಣ್ಣ ಮಳವಲ್ಲದೊಪ್ಪೆ-

ಚಂ|| ಕುಳಗಿರಿಯಂ ಸರೋಜನಿಲಯಂ ಮನುಜಾಕೃತಿಯಾಗೆ ಮಾಡಿದಂ
ತೊಳವೆನಿಪಂತುಟಪ್ಪ ಪೊಸ ಬಣ್ಣದೊಳೊಂದಿದ ಪಾರಿಜಾತಮ|
ಗ್ಗಳಮೆಸೆದೊಪ್ಪುವಂತೆ ತಳಿರಿಂ ಮುಗುಳಿಂ ನವಯೌವನಂ ಮನಂ
ಗೊಳೆ ಕರಮೊಪ್ಪಿದಂ ದಶ ಸಹಸ್ರ ಮದೇಭ ಬಳಂ ವೃಕೋದರಂ|| ೩೮

ವ|| ಅಂತೊಪ್ಪುವ ಗಂಡಗಾಡಿಯೊಳಿಂದ್ರನೀಲದಂತಪ್ಪ ಬಣ್ಣಂ ಕಣ್ಗೆವರೆ-

ಚಂ|| ಶರದದ ಚಂದ್ರನಂ ವಿಮಲ ಚಂದ್ರಿಕೆ ಬಾಳದಿನೇಶನಂ ತಮೋ
ಹರಕಿರಣಂ ಕಿಶೋರ ಹರಿಯಂ ನವಕೇಸರ ರಾಜಿ ಮಿಕ್ಕ ದಿ|
ಕ್ಕರಿಯನನೂನ ದಾನ ಪರಿಶೋಭೆ ಮನಂಗೊಳೆ ಪೊರ್ದುವಂತೆ ಸುಂ
ದರ ನವಯೌವನಂ ನೆಯೆ ಪೊರ್ದೆ ಗುಣಾರ್ಣವನೊಪ್ಪಿ ತೋಱದಂ|| ೩೯

ವ|| ಅಂತು ನವಯೌವನಂ ನೆಯೆ ನಿಱನಿಱಗೊಂಡ ಗುಣಾರ್ಣವನ ತಲೆ ನವಿರ್ಗಳ್ ಲಾವಣ್ಯರಸಮನಿಡಿದಿಡಿದು ತೀವಿದ ಕಮಲಾಸನನ ಬೆರಲಚ್ಚುಗಳನ್ನವಾದುವು ಮೂಱುಂ ಲೋಕದ ಮೂಱು ಪಟ್ಟಮನಾಳಲ್ಕೆ ತಕ್ಕ ಲಕ್ಷಣ ಸಂಪೂರ್ಣಮಪ್ಪ ಸಹಜಮನೋಜನ ಲಲಾಟಂ ಪಟ್ಟಂಗಟ್ಟಿದ ನೊಸಲ್ಗೆ ಲಕ್ಷಣಮನಱಸಲ್ವೇಡೆಂಬಂತಾದುದು ಕರ್ಬಿನ ಬಿಲ್ಲ ಕೊಂಕಿನಂತೆ ಕೊಂಕಿಯುಂ ಪರವನಿತೆಯರೆರ್ದೆಗೆ ಕೊಂಕಿಲ್ಲದೆಯುಂ ಸೊಗಯಿಸುವ ಸುರತ ಮಕರಧ್ವಜನ ಪುರ್ವುಗಳ್ ಕಾಮದೇವನ ವಿಜಯ ವೈಜಯಂತಿಗಳಂತಾದುವು ನೀಳ್ಪಂ ಬೆಳ್ಪುಮಂ ತಾಳ್ದಿ ಪರವನಿತೆಯರ ದೆಸೆಗೆ ಕಿಸುಗಣ್ಣಿದಂತೆ ಕಿಸು ಸೆರೆವರಿದು ಸೊಗಯಿಸುವ ಶೌಚಾಂಜನೇಯನ ಕಣ್ಗಳೆಂಬಲರಂಬುಗಳ್ ಗಣಿಕಾಜನಂಗಳೆರ್ದೆಯಂ ನಟ್ಟು ಕೆಂಕಮಾದಂತಾದುವು ರಿಪುಜನದ ಪೆರ್ಚಿಂಗಂ ಪರಾಂಗನಾಜನದ ಮೆಚ್ಚಿಂಗಂ ಮೂಗಿಱವಂತೆ

ಜ್ಯೋತಿಶ್ಶಸ್ತ್ರದಲ್ಲಿ ಪಂಡಿತನಾದನು. ೩೭. ಧರ್ಮ ರಾಜನ ಎರಡು ತೋಳುಗಳೂ ಅವಳಿಗಳೂ ಬೆಳೆದಂತೆ ಜೊತೆಯಲ್ಲಿಯೇ ಬೆಳೆದುವು. ಹೆಗಲುಗಳು ಕುಲಪರ್ವತಗಳ ಶಿಖರಗಳನ್ನು ತಿರಸ್ಕರಿಸಿದುವು (ಕಾಂತಿಹೀನವನ್ನಾಗಿ ಮಾಡಿದುವು). ವಿಸ್ತಾರವಾದ ಅವನ ಎದೆಯು ಅಸಮಾನಳಾದ ಈ ಭೂದೇವಿಗೆ ವಂಶಪಾರಂಪರ್ಯವಾಗಿ ಬಂದ ನಿವಾಸವಾಯಿತು ಎಂದು ಲೋಕದ ಜನ ಸಂತೋಷಿಸುವ ಹಾಗೆ ಧರ್ಮರಾಜನ ಉದಾತ್ತವಾದ ಹೊಸಯೌವನವು ಒಟ್ಟಿಗೆ ತುಂಬಿ ಬಂದಿತು. ವ|| ಹಾಗೆ ಸೊಗಯಿಸುವ ಆಕಾಶದಲ್ಲಿ ಚಿನ್ನದ ಬಣ್ಣದ ಹಾಗಿರುವ ತನ್ನ ಶರೀರದ ಬಣ್ಣವು ಅಳತೆಯಿಲ್ಲದೆ ಪ್ರಕಾಶಿಸಿತು. ೩೮. ಬ್ರಹ್ಮನು ಕುಲಪರ್ವತವನ್ನು ಮನುಷ್ಯನ ರೂಪದಲ್ಲಿ ಮಾಡಿದ್ದಾನೆ ಎನಿಸಿಕೊಂಡು ಭೀಮನು ಅದೇ ಬಣ್ಣದ ಪಾರಿಜಾತವು ಚಿಗುರಿನಿಂದಲೂ ಮೊಗ್ಗುಗಳಿಂದಲೂ ಕೂಡಿ ಪ್ರಕಾಶಮಾನವಾಗಿ ಒಪ್ಪುವಂತೆ ಅವನ ಹೊಸಪ್ರಾಯವು ಆಕರ್ಷಕವಾಗಿರಲು ಹತ್ತುಸಾವಿರ ಮದ್ದಾನೆಗಳ ಬಲವುಳ್ಳವನಾಗಿ ಒಪ್ಪಿ ತೋರಿದನು. ವ|| ಹಾಗೆ ಒಪ್ಪುವ ಸೌಂದರ್ಯದಲ್ಲಿ ಇಂದ್ರನೀಲಮಣಿಯ ಹಾಗಿರುವ ಬಣ್ಣವು ಮನೋಹರವಾಗಿರಲು ೩೯. ಶರತ್ಕಾಲದ ಚಂದ್ರನನ್ನು ನಿರ್ಮಲವಾದ ಬೆಳದಿಂಗಳೂ ಬಾಲಸೂರ್ಯನನ್ನು ಕತ್ತಲೆಯನ್ನು ಹೋಗಲಾಡಿಸುವ ಕಿರಣಗಳೂ ಸಿಂಹದಮರಿಯನ್ನು ಹೊಸದಾಗಿ ಹುಟ್ಟಿದ ಅದರ ಕತ್ತಿನ ಕೂದಲರಾಶಿಯೂ ಉಳಿದ ದಿಗ್ಗಜಗಳನ್ನೂ ಸ್ವಲ್ಪವೂ ಕಡಿಮೆಯಿಲ್ಲದ ಮದೋದಕದ ಕಾಂತಿಯೂ ಆಕರ್ಷಿಸುವ ರೀತಿಯಲ್ಲಿ ಸೇರಿಕೊಳ್ಳುವಂತೆ ಸುಂದರವಾದ ಹೊಸಯೌವನವು ಪೂರ್ಣವಾಗಿ ಬಂದು ಕೂಡಲು ಗುಣಾರ್ಣವನು ಒಪ್ಪಿ ತೋರಿದನು.

ವ|| ಹಾಗೆ ನವಯೌವನವು ಸಂಪೂರ್ಣವಾಗಲು ಗುಂಗುರುಗುಂಗುರಾದ ಗುಣಾರ್ಣವನ ತಲೆಯ ಕೂದಲು ಸೌಂದರ್ಯರಸವನ್ನು ಮಿದಿದುಮಿದಿದು ತುಂಬಿದ ಬ್ರಹ್ಮನ ಬೆರಳಚ್ಚುಗಳಂತಾದುವು; ಸ್ವರ್ಗ, ಮರ್ತ್ಯ ಪಾತಾಳಗಳೆಂಬ ಮೂರುಲೋಕಗಳ ಮೂರು ರಾಜ್ಯಭಾರವನ್ನು ಮಾಡುವುದಕ್ಕೂ ಯೋಗ್ಯವಾದ ಲಕ್ಷಣಗಳಿಂದ ತುಂಬಿರುವ ಸಹಜಮನೋಜನಾದ ಅರ್ಜುನನ ಹಣೆಯ ಪಟ್ಟಾಭಿಷೇಕ ಮಾಡಿದ ಹಣೆಗೆ ಯಾವ ಲಕ್ಷಣವಿರಬೇಕೆಂಬುದನ್ನು (ಅನ್ಯಥಾ) ಹುಡುಕಬೇಡ ಎನ್ನುವಂತಾಯಿತು; (ಅಂದರೆ ಆ ಎಲ್ಲ ಲಕ್ಷಣಗಳೂ ಈ ಹಣೆಯಲ್ಲಿಯೇ ಇವೆ ಎಂದರ್ಥ). ಮನ್ಮಥನ ಕಬ್ಬಿನ ಬಿಲ್ಲಿನ ವಕ್ರತೆಯಂತೆ ಬಗ್ಗಿದ್ದರೂ ಅನ್ಯಸ್ತ್ರೀಯರ ಪ್ರೀತಿಗೆ ಬಗ್ಗದೆ ಸೊಗಯಿಸುವ ಸುರತಮಕರಧ್ವಜನ ಹುಬ್ಬುಗಳು ಮನ್ಮಥನ ವಿಜಯದಂತಾದುವು; ದೀರ್ಘತ್ವವನ್ನೂ ಬಿಳಿಯ ಬಣ್ಣವನ್ನೂ ಹೊಂದಿ ಅನ್ಯಸ್ತ್ರೀಯರ ವಿಷಯದಲ್ಲಿ ಕೋಪಿಸಿಕೊಂಡಂತೆ ಕೆಂಪಾದ ರಕ್ತನಾಳಗಳಿಂದ ಕೂಡಿ ಸೊಗಯಿಸುವ ಶೌಚಾಂಜನೇಯನ ಕಣ್ಣುಗಳೆಂಬ ಪುಷ್ಪಬಾಣಗಳು

ಸೊಗಯಿಸುವ ಗಂಧೇಭ ವಿದ್ಯಾಧರನ ಮೂಗು ತನ್ನ ಸುಯ್ಯ ಕಂಪನಲ್ಲದೆ ಪೆಱರ ಕಂಪನಾಸೆವಡದಂತಾದುದು ಪೊಸ ಜವ್ವನದ ಮುಂಬಣ್ಣದಂತೆ ಕರ್ಪಂ ಕೈಕೊಂಡು ಕತ್ತುರಿಯಲ್ ಬರೆದಂತಪ್ಪ ವಿಕ್ರಾಂತ ತುಂಗನ ವಿಸೆಗಳಾತನ ತೀವ್ರ ಪ್ರತಾಪಾನಳ ಧೂಮಲೇಖೆ ಯಂತಾದುವು ಪುಳಿಯೊಳಲೆದ ಪವಳದ ಬಟ್ಟಿನಂತೆ ಸೊಗಯಿಸುವ ಸಂಸಾರಸಾರೋದಯನ ಬಿಂಬಾಧರಮನಂಗರಾಗರಸದುರುಳಿ ಯಂತಾದುದು ರಸದಾಡಿಮದ ಬಿತ್ತುಮಂ ಪೊಸ ಮುತ್ತುಮಂ ಮುಕ್ಕುಳಿಸಿದಂತಪ್ಪ ವಿಬುಧವನಜವನ ಕಳಹಂಸನ ದಂತಪಙ್ತಿಗಳ ಮೃತಕಿರಣನ ಕಾಂತಿಗಳನಿಳಿಸುವಂತಾದುವು ಮಡಿದು ತಂದಿಟ್ಟ ಪೊಸನೆಯ್ದಿಲ ಕಾವನಾವಗಂ ಗೆಲ್ದ ರತ್ನಕುಂಡಲಂಗಳ ಪೊಳಪನೊಳ ಕೊಂಡಂತೆ ನಸುನೇಲ್ವ ಕರ್ಣಾಟೀ ಕರ್ಣಪೂರನ ಪಾಲೆಗಳುಂ ಸರಸ್ವತಿಯಾಡುವ ಲೀಲಾಂದೋಳದಂತಾದುವು ಬಳ್ವಳ ಬೆಳೆದೆಳಗೌಂಗಿನಂತೆ ಲೋಕದ ಚೆಲ್ವೆಲ್ಲಮನೊಳಕೊಂಡು ರೇಖೆಗೊಂಡ ಲಾಟೀ ಲಲಾಮನ ಪರಿಣದ್ಧ ಕಂಧರಂ ಯುವರಾಜ ಕಂಠಿಕಾಭರಣಮಂ ಕಟ್ಟುವುದರ್ಕೆ ನೋಂತು ತನ್ನ ಚೆಲ್ವನಲ್ಲದೆ ಪೆಱರ ಚೆಲ್ವನಾಸೆವಡದಂತಾದುದು ಕುಲದ ಚಲದ ಮೈಮೆಯೊಳ್ ತನ್ನನೆ ನೋಡಿದ ಸಂತೋಷದೊಳುತ್ಸಾಹ ಮಾದಂತೆ ಸೊಗಯಿಸುವ ಸಮರೈಕಮೇರುವಿನ ಭುಜಶಿಖರಂಗಳ್ ಕುಲಶಿಖಿರಿ ಶಿಖರಂಗಳಂತಾದುವು ವ್ಯಾಳ ಗಜಂಗಳು ಮನಂಕದ ಬರ್ದೆಯರುಮನುಗಿಬಗಿಮಾಡಿದ ಸಂತೋಷದೊಳ್ ಬಳ್ವಳ ಬಳೆದ ವಿಕ್ರಾಂತತುಂಗನ ನಿಡುದೋಳ್ಗಳ್ ಗಣಿಕಾಜನಕ್ಕೆ ಕಾಮಪಾಶಂಗಳು ಮರಾತಿಜನಕ್ಕೆ ಯಮಪಾಶಂಗಳುಮಾದುವು ರಕ್ತಾಶೋಕಪಲ್ಲವದಂತೆ ತೊಳತೊಳಗುವಾಂ ಕುಚಕಲಶ ಪಲ್ಲವನ ಕರತಳಪಲ್ಲವಂಗಳ್ ಸಮದ ಗಜಕುಂಭಸ್ಥಳಾಸಾಳನ ಕರ್ಕಶಂಗಳಾದುವು ಪೊಡರ್ವ ಪಗೆವರನುಱದೆ ಕೊಂಡ ಸಂತೋಷದೊಳಂ ಶ್ರೀಯನೊಳಕೊಂಡ ಸಂತೋಷದೊಳಂ ತೆಕ್ಕನೆ ತೀವಿದ ಕೇರಳೀ ಕೇಳಿ ಕಂದರ್ಪನಗಲುರಂ ಲಕ್ಷ್ಮಿಗೆ ಕುಲಭವನಮುಂ ನಿವಾಸಭವನಮುಮಾದುದು ಪೊಡರ್ವ ಮಂಡಳಿಕರ ಮನದಂತೆ ಕರಮಸಿದಾದ ಪರಾಕ್ರಮಧವಳನ ಮಧ್ಯಪ್ರದೇಶಂ ನಾರಾಯಣಂ ತನ್ನಾಳ್ದಂ ಮಾಡಿ ತಾನಾಳ್ಮಾಡಿಯುಂ ತಾನಳ್ಳಾಡೆಯುಂ ಬರ್ದೆಯರ ಮನವನಳ್ಳಾಡಿಸುವಂತಾದುದು ಗಂಭೀರಗುಣದೊಳಮಾವರ್ತನ ಸಿದ್ಧಿಯೊಳಂ ಜಳನಿಯನೆ ಪೋಲ್ವ ಶರಣಾಗತ ಜಳನಿಯ ನಿಮ್ನನಾಭಿ ಚೆಲ್ವಿಂಗೆ ತಾನೆ ನಾಭಿಯಾದುದು ಸಿಂಹಕಟಿತಟಮನಿಳಿಸುವ ರಿಪುಕುರಂಗ ಕಂಠೀರವನ ಕಟಿತಟಮೊಲು

ವೇಶ್ಯಾಸ್ತ್ರೀಯರ ಎದೆಯಲ್ಲಿ ನಾಟಿ ಕೆಂಪಾದಂತಾದುವು; ಶತ್ರುಜನಗಳ ಅಭಿವೃದ್ಧಿಗೂ ಪರಾಂಗನೆಯರ ಮೆಚ್ಚಿಕೆಗೂ ಜುಗುಪ್ಸೆ ಪಡುವ ಹಾಗೆ ಸೊಗಯಿಸುವ ಗಂದೇಭವಿದ್ಯಾಧರನ ಮೂಗು ತನ್ನ ಉಸಿರಿನ ವಾಸನೆಯಲ್ಲದೆ ಇತರರ ವಾಸನೆಗೆ ಆಸೆಪಡದಂತಾಯಿತು ! ಹೊಸಪ್ರಾಯದ ಮೊದಲ ಬಣ್ಣದಂತೆ ಕಪ್ಪಾಗಿ ಕಸ್ತೂರಿಯಿಂದ ಬರೆದಂತಿರುವ ವಿಕ್ರಾಂತತುಂಗನ ಮೀಸೆಗಳು ಅವನ ಭಯಂಕರವಾದ ಪ್ರಾತಾಪಗ್ನಿಯ ಹೊಗೆಯ ರೇಖೆಯಂತಾದುವು; ಹುಳಿಯಿಂದ ತೊಳೆದ ಹವಳದ ಬಟ್ಟಿನಂತೆ ಸೊಗಯಿಸುವ ಸಂಸಾರಸಾರೋದಯನ ಕೆಂಪಾದ ತುಟಿಯು ಕಾಮರಸದ ಉಂಡೆಯಂತಾಯಿತು; ದಾಳಿಂಬದ ಬೀಜಗಳನ್ನೂ ಹೊಸಮುತ್ತುಗಳನ್ನೂ ಉಗುಳುವಂತಿದ್ದ ವಿಬುಧವನಜವನಕಳಹಂಸನ ಹಲ್ಲಿನ ಸಾಲುಗಳು ಚಂದ್ರನ ಕಾಂತಿಯನ್ನು ತಿರಸ್ಕರಿಸುವಂತಾದುವು; ಮಡಿಸಿ ತಂದಿರಿಸಿದ ಹೊಸನೆಯ್ದಿಲೆಯ ಕಾವನ್ನು ಯಾವಾಗಲೂ ಗೆದ್ದಿರುವ ರತ್ನದ ಹತ್ತು ಕಡುಕುಗಳ ಹೊಳಪನ್ನೊಳಕೊಂಡು ಹಾಗೆಯೇ ಸ್ವಲ್ಪ ಜೋಲಾಡುತ್ತಿರುವ ಕರ್ಣಾಟೀಕರ್ಣಪೂರನ ಕಿವಿಯ ಹಾಲೆಗಳು ಸರಸ್ವತಿಯು ತೂಗುತ್ತಿರುವ ಆಟದುಯ್ಯಾಲೆಯಂತಾದುವು; ಬಳಬಳನೆ (ಸೊಂಪಾಗಿ) ಬೆಳೆದ ಎಳೆ ಅಡಿಕೆಯಂತೆ ಲೋಕಸೌಂದರ್ಯವನ್ನೆಲ್ಲ ತನ್ನಲ್ಲಿ ಸೇರಿಸಿಕೊಂಡು ಗೆರೆಯನ್ನು ಹೊಂದಿದ ಲಾಟೀಲಲಾಮನ ತುಂಬುಗೊರಳು ಯುವರಾಜಪಟ್ಟಾಭಿಷೇಕಕ್ಕೆ ಯೋಗ್ಯವಾದ ಒಡವೆಯನ್ನು ಧರಿಸುವುದಕ್ಕೆ ವ್ರತಮಾಡಿ ತನ್ನ ಸೌಂದರ್ಯವನ್ನೇ ಅಲ್ಲದೆ ಇತರ ಸೌಂದರ್ಯಕ್ಕೂ ಆಸೆಪಡುವಹಾಗಾಯಿತು. ಕುಲ ಮತ್ತು ಛಲದ ಮಹಿಮೆಯಲ್ಲಿ ತನ್ನನ್ನೇ ನೋಡಿದ ಸಂತೋಷವು ಉತ್ಸಾಹವಾದ ಹಾಗೆ ಸೊಗಯಿಸುವ ಸಮರೈಕಮೇರುವಿನ ಭುಜದ ಮೇಲುಭಾಗಗಳು ಕುಲಪರ್ವತದ ಶಿಖರಗಳ ಹಾಗೆ ಆದುವು; ದುಷ್ಟ ಆನೆಗಳನ್ನೂ ಸುಪ್ರಸಿದ್ಧರಾದ ಸುಮಂಗಲಿಯರನ್ನೂ (ಕುಲಸ್ತ್ರೀಯರನ್ನೂ) ಹೆದರಿಸಿದ ಸಂತೋಷದಲ್ಲಿ ಸುಪುಷ್ಟವಾಗಿ ಬೆಳೆದ ವಿಕ್ರಾಂತತುಂಗನ ದೀರ್ಘವಾದ ತೋಳುಗಳು ವೇಶ್ಯಾಸ್ತ್ರೀಯರಿಗೆ ಕಾಮಪಾಶವೂ ಶತ್ರುರಾಜರಿಗೆ ಯಮಪಾಶವೂ ಆದುವು; ಕೆಂಪು ಮುಳ್ಳುಮುತ್ತುಗದ ಚಿಗುರಿನ ಹಾಗೆ ಪ್ರಕಾಶಮಾನವಾಗಿರುವ ಆಂಕುಚಕಲಶಪಲ್ಲವನ ಚಿಗುರಿನಂತಿರುವ ಅಂಗೈಗಳು ಮದ್ದಾನೆಗಳ ಕುಂಭಸ್ಥಳವನ್ನು ಅಪ್ಪಳಿಸುವುದರಿಂದ ಒರಟಾದುವು; ಉದ್ಧತರಾದ ಶತ್ರುಗಳನ್ನು ಶೀಘ್ರವಾಗಿ ಸೋಲಿಸಿದ ಸಂತೋಷದಿಂದಲೂ ಐಶ್ವರ್ಯವನ್ನು ಪಡೆದ ಸಂತೋಷದಿಂದಲೂ ಇದ್ದಕ್ಕಿದ್ದ ಹಾಗೆ ತುಂಬಿಕೊಂಡ ಕೇರಳೀಕೇಳೀಕಂದರ್ಪನ ವಿಶಾಲವಾದ ಎದೆಯು ಲಕ್ಷ್ಮೀದೇವಿಗೆ ವಂಶಪಾರಂಪರ್ಯವಾಗಿ ಬಂದ ನೆಲೆಯೂ ನಿತ್ಯವಾಸಸ್ಥಳವೂ ಆಯಿತು; ಉದ್ವ ತ್ತರಾದ (ಮೇಲೆ ಬೀಳುವ) ಸಾಮಂತರಾಜರ ಮನಸ್ಸಿನಂತೆ ಬಹಳ ಕೃಶವಾದ ಪರಾಕರ್ಮಧವಳನ ಸೊಂಟವು ಶ್ರೀಮನ್ನಾರಾಯಣನು ತಾನೇ ಯಜಮಾನನಾಗಿಯೂ ತನ್ನನ್ನೇ ಆಳಾಗಿಯೂ ಮಾಡಿಕೊಂಡೂ ತಾನೇ ನರ್ತನಮಾಡಿ ಕುಲಸ್ತ್ರೀಯರ ಮನಸ್ಸನ್ನು ವಿಚಲಿತವನ್ನಾಗಿ ಮಾಡುವಂತಾಯಿತು. ಗಂಭೀರಗುಣದಲ್ಲಿಯೂ ಸುಳಿಸುಳಿಯಾಗಿರುವ ಇತರ ಗುಣದಲ್ಲಿಯೂ ಸಮುದ್ರವನ್ನು ಹೋಲುವ ಶರಣಾಗತ ಜಲನಿಯ ಆಳವಾದ ಹೊಕ್ಕುಳು ಸೌಂದರ್ಯಕ್ಕೆ ತಾನೆ ಕೇಂದ್ರವಾಯಿತು; ಸಿಂಹದ ಸೊಂಟದ ಭಾಗವನ್ನೂ ಹಿಯ್ಯಾಳಿಸುವ ರಿಪುಕುರಂಗಕಂಠೀರವನ ಸೊಂಟದ ಭಾಗವು ಪ್ರೀತಿಯಿಂದ ನೋಡುವ ಸುಂದರ ಸ್ತ್ರೀಯರ ಕಣ್ಣಿಗೆ ಕಾಮನ ಗುರಾಣಿಯಂತೆ ದೊಡ್ಡದಾಗಿ ಬೆಳೆದು ಅತಿಶಯವಾದ ದಪ್ಪವನ್ನು ತಾಳಿದಂತೆ ವಿಶೇಷ ಗುಂಡಾಗಿ ಬೆಳೆದುವು;

ನೋಡುವ ಗಾಡಿಕಾರ್ತಿಯರ ಕಣ್ಗೆ ಕಾಮನಡ್ಡಣದಂತೆದೊಡ್ಡಿತ್ತಾಗಿ ವಿಱುವುದ್ವೃತ್ತ ವೃತ್ತತೆಯ ನೀೞ್ದುಕೊಂಡಂತುದ್ವೃತ್ತಂಗಳಾದುವು ಉದಾತ್ತನಾರಾಯಣನೂರುಯುಗ್ಮಂಗಳ್ ಮಾನಿನಿಯರ ಮನೋಗಜಂಗಳಂ ಕಟ್ಟಲ್ಕಾಲಾನ ಸ್ತಂಭಂಗಳಾದುವು ಅಂತಪೂರ್ವಂಗಳಾಗಿ ತೊಳಗುವ ಕಿಱುದೊಡೆಗಳುಡುವಡರ್ದನ್ನಮಾರೂಢ ಸರ್ವಜ್ಞನ ದೊಡ್ಡ ಮಾರ್ಗಂಳೆಳವಾೞೆಯ ದಿಂಡಿನೊಳ್ ಸಾಣೆಗಟ್ಟಿದಂತಾದುವು ಗೂಢಗುಲಪಾರ್ಷ್ಣಿಗಳನೊಳಕೊಂಡ ಮನುಜಮಾಂಧಾತನ ಪೊಱ ಅಡಿಗಳ್ ವಿರೋ ಭೂಪಾಳರನಡಿಗೆಱಗಿಸಿದ ಸಂತೋಷದೊಳುನ್ನತಂ ಗಳಾದಂತೆ ಕೂರ್ಮೋನ್ನತಂಗಳಾದುವು ನೊಸಲಂ ಸುಟ್ಟಿ ತೋರ್ಪನ್ನವಪ್ಪುಂಗುಟಂಗಳೊಳ್ ಮಿಂಚಂ ಕೀಲಿಸಿದಂತೆ ತೊಳಗಿ ಪೊಳೆವ ಪ್ರಚಂಡ ಮಾರ್ತಾಂಡನ ಪಾದನಖಂಗಳ್ ಗಂಡರ ಪೆಂಡಿರಂಜಿದಳ್ಕಿದ ಮೊಗಮಂ ನೋಡಲ್ಕೆ ಕನ್ನಡಿಗಳನ್ನವಾದುವು ಪೊಸತಲರ್ದ ಕೆಂದಾವರೆಯ ಕೆಂಪುಮಂ ಮೆಲ್ಪುಮನಿೞ್ಕುಳಿಗೊಂಡು ತೊಳಗುವರಿಕೇಸರಿಯ ಪಾದತಳಂಗಳಡಿಗೆಱಗಿದರಿನರಪಾಲರ ಮಕುಟಮಾಣಿಕ್ಯ ಮರೀಚಿಜಾಲ ಬಾಳಾತಪಂಗಳನೆಲೆದು ಕೆಂಕಮಾದಂತಾದುವು ಪೊಸವೆಸಱಗೆಯ ಬಣ್ಣದಂತೆ ಸೊಗಯಿಸುವ ಸಾಮಂತಚೂಡಾಮಣಿಯ ಮೆಯ್ಯ ಬಣ್ಣಂ ವಿಧಾತ್ರನೆಂಬ ಚಿತ್ತಾರಿಯ ವರ್ಣಕ್ರಮಂಗೆಯ್ದ ಕದಳೀಗರ್ಭಶ್ಯಾಮಮೆಂಬ ಬಣ್ಣದಂತಾದುದು-

ಚಂ|| ಮನದೊಳೊಱಲ್ದು ಜೋಲ್ದಳಿಪಿ ನೋಡಲೊಡಂ ಸೆಗೆಯ್ದು ಕಣ್ಣುಮಂ
ಮನಮುಮನಂಗಜನ್ಮನರಲಂಬುಗಳಿಂದೆ ಮರುಳ್ಚಿ ಬಂದ ಮಾ|
ವಿನ ಬನದೊಳ್ ತೆರಳ್ಚಿ ಪೊಳೆವಿಂದುಮರೀಚಿಗಳಿಂದುರುಳ್ಚಿ ಪೂ
ವಿನ ಪಸೆಯೊಳ್ ಪೊರಳ್ಚಿದನಳುರ್ಕೆಯ ಬರ್ದೆಯರಂ ಗುಣಾರ್ಣವಂ|| ೪೦

ವ|| ಅಂತು ನಕುಲ ಸಹದೇವರ್ ಸಹಿತಮಯ್ವರುಂ ನವಯೌವನದ ಪರಮಸುಖಮನೆಯ್ದಿ ಸಂತೋಷದಿನಿರ್ದರಿತ್ತ ಗಂಗಾದ್ವಾರದೊಳ್ ಭರದ್ವಾಜನೆಂಬ ಬ್ರಹ್ಮಋಷಿ-

ಕಂ|| ಸ್ನಾನಾರ್ಥಮೊಂದು ಕಳಶಮ
ನಾ ನಿಯಮ ನಿಧಾನನೆೞಲೆ ಪಿಡಿದಮಳಿನ ಗಂ|
ಗಾ ನದಿಗೆ ವಂದು ಸುರತ ನಿ
ಧಾನಿಯನಮರೇಂದ್ರ ಗಣಿಕೆಯಂ ಮುನಿ ಕಂಡಂ|| ೪೧

ವ|| ಅಂತು ಕಾಣ್ಬುದುಮಮೃತಾಬ್ಧಿಯೆಂಬಚ್ಚರಸೆಯ ಕನಕ ಕಾಂಚೀಕಳಾಪದೊಳ್ ತೊಡರ್ದ ದೇವಾಂಗ ವಸ್ತ್ರದುಳ್ಳುಡೆಯೊಳುಲಿವ ಸೂಸಕದ ನೂಲ ತೊಂಗಲ್ವೆರಸೆೞಲ್ವ ಮುಂದಣ ಸೋಗೆ ಕಾರ್ಗಾಲದ ಸೋಗೆಯಂತೆ ಸೊಗಯಿಸೆ-