ಚಂ|| ಎಂಬುದುಮಾ ಮಾತಿಂಗೆ ಮಱುವಾತುಗುಡಲಱಯದೆ ಪಂದೆಯಂ ಪಾವಡರ್ದಂತು ಮ್ಮನೆ ಬೆಮರುತ್ತುವಿರ್ದ ಕರ್ಣನಂ ದುರ್ಯೋಧನಂ ಕಂಡು ದ್ರೋಣನುಮಂ ಕೃಪನುಮನಿಂತೆಂದಂ-

ಕಂ|| ಕುಲಮೆಂಬುದುಂಟೆ ಬೀರಮೆ ಕುಲಮಲ್ಲದೆ ಕುಲಮನಿಂತು ಪಿಕ್ಕದಿರಿಂ ನೀ| ಮೊಲಿದೆಲ್ಲಿ ಪುಟ್ಟ ಬಳೆದಿರೊ ಕುಲಮಿರ್ದುದೆ ಕೊಡದೊಳಂ ಶರಸ್ತಂಬದೊಳಂ|| ೮೩

ವ|| ಎಂದು ನುಡಿದು ಕರ್ಣನನೀಗಳೆ ಕುಲಜನಂ ಮಾಡಿ ತೋರ್ಪೆನೆಂದು ಕೆಯ್ಯಂ ಪಿಡಿದೊಡಗೊಂಡು ಪೋಗಿ ಕನಕಪೀಠದ ಮೇಲೆ ಕುಳ್ಳಿರಿಸಿ ಕನಕಕಳಶದಲ್ ತೀವಿದಗಣ್ಯಪುಣ್ಯ ತೀರ್ಥೋದಕಂಗಳಂ ಚತುರ್ವೇದಪಾರಗರಿಂದಭಿಷೇಕಂಗೆಯ್ಸಿ-

ಕಂ|| ಮಂಗಳವಗಳ್ ಶುಭ ವಚ
ನಂಗಳ್ ಚಮರೀರುಹಂಗಳಾ ಶ್ವೇತಚ್ಛ|
ತ್ರಂಗಳಮರ್ದೆಸಯೆ ಕರ್ಣಂ
ಗಂಗಮಹೀತಳ ವಿಭೂತಿಯಂ ನೆಯಿತ್ತಂ|| ೮೪

ವ|| ಅಂತಿತ್ತು ನಿತ್ಯದಾನಕ್ಕೆ ದೇವ ಸಬಳದ ಪದಿನೆಂಟು ಕೋಟಿ ಪೊನ್ನುಮನಿತ್ತು ನೀನೆನಗೊಂದನೀಯಲ್ವೇೞ್ದ್ದುದೆಂದು-

ಕಂ|| ಪೊಡಮಡುವರ್ ಜೀಯೆಂಬರ್
ಕುಡು ದಯೆಗೆಯ್ಯೇಂ ಪ್ರಸಾದಮೆಂಬಿವು ಪೆಱರೊಳ್|
ನಡೆಗೆಮ್ಮ ನಿನ್ನಯೆಡೆಯೊಳ್ ನಡೆಯಲ್ವೇಡೆನಗೆ ಕೆಳೆಯನೈ ರಾಧೇಯಾ|| ೮೫

ವ|| ಎಂದು ಬೇಡಿಕೊಂಡು ಕರ್ಣನಂ ಮುಂದಿಟ್ಟೊಡಗೊಂಡು ಪೋಗಿ ಧೃತರಾಷ್ಟ್ರಂಗಂ ಗಾಂಧಾರಿಗಂ ಪೊಡಮಡಿಸಿದಾಗಳ್-

ಉ|| ಇಂತು ಸುಯೋಧನಂ ನಿನಗೆ ಮಾಡಿದ ರಾಜ್ಯವಿಭೂತಿಗುಂತೆ ಮು
ಯ್ವಾಂತಿರದಿರ್ ಗುಣಾರ್ಣವನಿನಸ್ತಮಯಕ್ತಿದು ಸಾಲ್ಗುವಿಗಳೆಂ|
ಬಂತೆವೊಲಂದು ಮುಂದಱದು ತನ್ನ ಮಗಂಗೆ ಸಮಂತು ಬುದ್ಧಿವೇ ೞ್ವಂತೆವೊಲತ್ತಲಸ್ತಗಿರಿಯಂ ಮಗೊಂಡುದು ಸೂರ್ಯಮಂಡಲಂ|| ೮೬

ಮಧ್ಯೆ ಪ್ರವೇಶಿಸಿ ಕರ್ಣನಿಗೆ ಹೀಗೆ ಹೇಳಿದರು. ೮೨. ಅಸಮಾಧಾನಕ್ಕೂ ಕೋಪಕ್ಕೂ ಕಾರಣವೇನು? ನಿನ್ನ ತಾಯಿ ತಂದೆಯ ವಿಷಯವನ್ನು ವಿಚಾರಿಸಿ ಮಾತನಾಡುವುದಾದರೆ ನಿನಗೂ ಅರಿಕೇಸರಿಗೂ ಯಾವ ಸಮಾನತೆಯಿದೆ? ವ|| ಎನ್ನಲು ಆ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಮರ್ಥನಾಗದೆ ಹೇಡಿಯ ಮುಂದೆ ಹಾವು ಅಡ್ಡಬಂದ ಹಾಗೆ ಸುಮ್ಮನೆ ಬೆವರಿ ನಿಂತಿದ್ದ ಕರ್ಣನನ್ನು ದುರ್ಯೋಧನನು ನೋಡಿ ದ್ರೋಣನನ್ನೂ ಕೃಪನನ್ನೂ ಕುರಿತು ಹೀಗೆಂದನು-೮೩. ಶೌರ್ಯವೇ ಕುಲವಲ್ಲದೆ ಕುಲವೆಂಬುದು ಬೇರೆಯುಂಟೇ? ಕರ್ಣನ ಕುಲವನ್ನೂ ಬಿಡಿಸಿ (ವಿಚಾರಮಾಡಿ) ನೋಡಬೇಡಿ; ನೀವು ಪ್ರೀತಿಸಿ ಎಲ್ಲಿ ಹುಟ್ಟಿ ಬೆಳೆದಿರಿ? ಕೊಡದಲ್ಲಿಯೂ ಜೊಂಡಿನ ರಾಶಿಯಲ್ಲಿಯೂ ಕುಲವಿದ್ದಿತೆ? ವ|| ಎಂಬುದಾಗಿ ಹೇಳಿ ಕರ್ಣನನ್ನೂ ಈಗಲೇ ಕುಲಜನನ್ನಾಗಿ ಮಾಡಿ ತೋರಿಸುತ್ತೇನೆ ಎಂದು ಕರ್ಣನ ಕಯ್ಯನ್ನು ಹಿಡಿದುಕೊಂಡು ಹೋಗಿ ಚಿನ್ನದ ಪೀಠದ ಮೇಲೆ ಕುಳ್ಳಿರಿಸಿ ಚಿನ್ನದ ಕಳಶದಲ್ಲಿ ತುಂಬಿದ್ದ ಅಸಂಖ್ಯಾತವಾದ ಪುಣ್ಯತೀರ್ಥೋದಕಗಳಿಂದ ನಾಲ್ಕು ವೇದಗಳಲ್ಲಿ ಪ್ರವೀಣರಾದ ಪಂಡಿತರಿಂದ ಅಭಿಷೇಕಮಾಡಿಸಿದನು. ೮೪. ಮಂಗಳವಾದ್ಯಗಳೂ ಒಳ್ಳೆಯ ಸ್ವಸ್ತಿವಾಚನಗಳೂ ಚಾಮರಗಳೂ ಬಿಳಿಯ ಕೊಡೆಗಳೂ ಒಟ್ಟಿಗೆ ಸೇರಿ ಪ್ರಕಾಶಿಸುತ್ತಿರಲು ಕರ್ಣನಿಗೆ ಅಂಗರಾಜ್ಯದ ವೈಭವವನ್ನು ಸಂಪೂರ್ಣವಾಗಿ ಕೊಟ್ಟನು. ವ|| ಹಾಗೆ ಕೊಟ್ಟು ಪ್ರತಿನಿತ್ಯದ ದಾನಕ್ಕಾಗಿ ದೇವತೆಗಳ ಅಳತೆಯಲ್ಲಿ ಹದಿನೆಂಟುಕೋಟಿ ಸುವರ್ಣನಾಣ್ಯಗಳನ್ನೂ ಕೊಟ್ಟು ನೀನು ನನಗೊಂದನ್ನು ಅನುಗ್ರಹಿಸಬೇಕು ಎಂದನು. ೮೫. ಎಲೈ ರಾಧೇಯನೇ ಇತರರು ನನಗೆ ನಮಸ್ಕಾರ ಮಾಡುತ್ತಾರೆ; ಸ್ವಾಮಿ ಎನ್ನುತ್ತಾರೆ; ಕೊಡಿ, ದಯಪಾಲಿಸಿ, ಏನು ಪ್ರಸಾದ ಎನ್ನುತ್ತಾರೆ. ಇವೆಲ್ಲ ಇತರರಲ್ಲಿ ನಡೆಯಲಿ; ನನ್ನ ನಿನ್ನ ವ್ಯವಹಾರದಲ್ಲಿ ಬೇಡ, ನೀನು ನನಗೆ ಸ್ನೇಹಿತನು ಮಾತ್ರನಾಗಿರುತ್ತೀಯೆ. ವ|| ಎಂದು ಬೇಡಿಕೊಂಡು ಕರ್ಣನನ್ನು ಮುಂದುಮಾಡಿಕೊಂಡು ಹೋಗಿ ಧೃತರಾಷ್ಟ್ರನಿಗೂ ಗಾಂಧಾರಿಗೂ ನಮಸ್ಕಾರ ಮಾಡಿಸಿದನು. ೮೬. ‘ಹೀಗೆ ದುರ್ಯೋಧನನು ಮಾಡಿದ ರಾಜ್ಯವೈಭವಕ್ಕೆ ಸುಮ್ಮನೆ

ವ|| ಆಗಳ್ ದುರ್ಯೋಧನನಂ ಮುಂದಿಟ್ಟೊಡಗೊಂಡು ಧೃತರಾಷ್ಟ್ರ ಕರ್ಣ ಶಲ್ಯ ಶಕುನಿ ಸೈಂಧವ ಪ್ರಭೃತಿಗಳ್ ನೆಲಂ ಮೂರಿವಿಟ್ಟಂತೆ ಸಭಾಕ್ಷೋಭಮಾಗೆ ತಳರ್ದು ನಾನಾವಿಧ ವಾಹನಂಗಳನೇಱ ನಿಜನಿವಾಸಂಗಳ್ಗೆ ಪೋದರಿತ್ತ ಧರ್ಮಪುತ್ರನಂ ಮುಂದಿಟ್ಟು ಭೀಮಾರ್ಜುನ ನಕುಲ ಸಹದೇವರುಂ ಗಾಂಗೇಯ ದ್ರೋಣ ಕೃಪ ವಿದುರ ಪ್ರಭೃತಿಗಳ್ ನಾನಾವಿಧ ವಾಹನಂಗಳ ನೇಱ ಬರೆ ಪುರಜನಂಗಳೆಲ್ಲಮೋರೋರ್ವರನೆ ಪಿಡಿಯಚ್ಚುವಿಡಿದು ನುಡಿಯೆ ಕೆಲರನಾಗತಮನಱವ ಬುದ್ಧಿಯೊಡೆಯರಿಂತೆಂಬರ್-

ಚಂ|| ಅವರಿವರನ್ನರಿನ್ನರೆನವೇಡರಿಕೇಸರಿಗಾಂಪನಿಲ್ಲ ವಿ
ಱುವ ತಲೆದೋರ್ಪ ಗಂಡರಣಮಿಲ್ಲೆಡೆಯೊಳ್ ಗೆಡೆವಚ್ಚುಗೊಂಡು ಪಾಂ|
ಡವರನಕಾರಣಂ ಕೆಣಕಿದೀ ಪೊಸ ಪೊೞ್ತಳಾದ ಕಿರ್ಚು ಕೌ
ರವರ್ಗಿದು ನಾಡೆಯುಂ ತಿಣುಕನಾಗಿರದೇಂ ಗಳ ಸಯ್ತು ಪೋಕುಮೇ|| ೮೭

ವ|| ಎಂದೊರ್ವರೊರ್ವರೊಂದೊಂದನೆ ನುಡಿಯತ್ತುಂ ಪೋಗೆ ಬೆಳಗುವ ಕೈದೀವಿಗೆಗಳ್ ಕೞ್ತಲೆಯಂ ತಲೆದೋಱಲೀಯದೆ ಪ್ರಚಂಡ ಮಾರ್ತಾಂಡನ ತೇಜೋಂಕುರಂಗಳ್ ಬೆಳಗುವಂತೆ ಬೆಳಗೆ ಪಾಂಡವರ್ ನಿಜನಿವಾಸಕ್ಕೆ ಪೋದರಾಗಳ್-

ಕಂ|| ಎಸೆವ ನಿಜವಂಶಮಂ ಪೆ ರ್ಚಿಸುವ ಗುಣಾರ್ಣವನೊಳುಂತೆ ಸೆಣಸಲ್ಕೆಂದಿ|

ರ್ಪ ಸುಯೋಧನಂಗೆ ಮುಳಿಸಿಂ
ಕಿಸುಗಣ್ಣಿದ ತೆಱದಿನಮೃತಕರನುದಯಿಸಿದಂ|| ೮೮
ವ|| ಆಗಳ್ ದುರ್ಯೋಧನಂ ಭೀಮಸೇನನ ಬಲ್ಲಾಳ್ತನದಳವುಮಂ
ವಿಕ್ರಮಾರ್ಜುನನ ದಿವ್ಯಾಸ್ತ್ರ ಕೌಶಳಮುಮಂ ಕಂಡು ತನ್ನೆರ್ದೆಯುಂ
ಪೊಳ್ಳುಮರನಂ ಕಿರ್ಚಳುರ್ವಂತೊಳಗೊಳಗುಳುರೆ ಸೈರಿಸಲಾಱದೆ ಕರ್ಣನಂ
ಕರೆದಾಳೋಚಿಸಿ ತಮ್ಮಯ್ಯನಲ್ಲಿಗೆ ಪೋಗಿ ಪೊಡಮಟ್ಟು ಕಟ್ಟೇಕಾಂತದೊಳಿಂತೆಂದಂ-

ಮ|| ಪಿರಿಯರ್ ನೀಮಿರೆ ಪಾಂಡುರಾಜನೆ ವಲಂ ಮುಂ ಪಟ್ಟಮಂ ಕಟ್ಟೆ ಭೂ ಭರಮಂ ತಾಳ್ದಿದನೀಗಳಾತನ ಸುತರ್ ತಾಮಾಗಳೇ ಯೋಗ್ಯರಾ|

ಗರೆ ಪಟ್ಟಕ್ಕೆ ತಗುಳ್ದು ಪಾಲನೆವಿರ್ ಪಾವಿಂಗೆ ದಾಯಾದ್ಯರಂ ಪಿರಿಯರ್ಮಾಡಿದಿರೆಮ್ಮ ಸಾವುಮುೞವುಂ ದೈವೇಚ್ಛೆಯಾಯ್ತಾಗದೇ|| ೮೯

ಉಬ್ಬಿಹೋಗಬೇಡ. ಗುಣಾರ್ಣವನಿಂದ ನೀನು ಸಾಯುವುದಕ್ಕೆ ಈಗ ಇಷ್ಟೇ ಸಾಕು’ ಎಂದು ಸೂರ್ಯನು ಮುಂದೆ ತನಗಾಗುವುದನ್ನು ಇಂದೇ ಪೂರ್ಣವಾಗಿ ಬುದ್ಧಿ ಹೇಳುವ ಹಾಗೆ ಅಸ್ತಮಯನಾದನು (ಸೂರ್ಯಮಂಡಲವು ಅಸ್ತಪರ್ವತದ ಹಿಂದೆ ಮರೆಗೊಂಡಿತು). ವ|| ಆಗ ದುರ್ಯೋಧನನನ್ನು ಮುಂದಿಟ್ಟುಕೊಂಡು ದೃತರಾಷ್ಟ್ರ, ಕರ್ಣ, ಶಲ್ಯ, ಶಕುನಿ, ಸೈಂಧವ, ಮೊದಲಾದವರು ನೆಲ ಬಿರಿದುಹೋದ ಹಾಗೆ ಸಭಾಮಂಟಪವು ಕಲಕಿಹೋಗುವ ಹಾಗೆ ಹೊರಹೊರಟು ನಾನಾವಿಧವಾದ ವಾಹನಗಳನ್ನು ಹತ್ತಿಕೊಂಡು ತಮ್ಮ ವಾಸಸ್ಥಳಕ್ಕೆ ಹೋದರು. ಈ ಕಡೆ ಧರ್ಮರಾಜನನ್ನು ಮುಂದಿಟ್ಟುಕೊಂಡು ಭೀಮಾರ್ಜುನ ನಕುಲ ಸಹದೇವರೂ ಭೀಷ್ಮ, ದ್ರೋಣ, ಕೃಪ, ವಿದುರರೇ ಮೊದಲಾದವರೂ ಬಗೆಬಗೆಯ ವಾಹನಗಳನ್ನು ಹತ್ತಿ ಬರುತ್ತಿರಲು ಪಟ್ಟಣದವರೆಲ್ಲ ಒಬ್ಬೊಬ್ಬರನ್ನೂ ಅವರ ಪ್ರತ್ಯೇಕವಾದ ಸಂಕೇತಗಳಿಂದ ಗುರುತಿಸಿ ಮಾತನಾಡುತ್ತಿರಲು ಅವರಲ್ಲಿ ಭವಿಷ್ಯಜ್ಞಾನವುಳ್ಳ ಕೆಲವರು ಹೀಗೆಂದರು- ೮೭. ಅವರು ಇವರು ಅಂತಹವರು ಇಂತಹವರು ಎನ್ನಬೇಡ. ಅರಿಕೇಸರಿಯನ್ನೆದುರಿಸುವವರಾರೂ ಇಲ್ಲ. ಅರ್ಜುನನ ಆಜ್ಞೆಯನ್ನು ಮೀರಿ ಅವನನ್ನು ಪ್ರತಿಭಟಿಸುವ ವೀರರು ಯಾರೂ ಇಲ್ಲ. ಇಬ್ಬರಿಗೂ ಸಮಾನವಾಗಿದ್ದ ಸ್ನೇಹಭಂಗವಾಗಿ ಪಾಂಡವರನ್ನು ಕಾರಣವಿಲ್ಲದೆ ಕೆಣಕಿದ ಈ ಹೊತ್ತಿನಲ್ಲಿ ಉಂಟಾದ ಬೆಂಕಿಯು (ಮನಸ್ತಾಪವು) ಕೌರವರಿಗೆ ವಿಶೇಷವಾದ ಹಿಂಸೆಯನ್ನುಂಟುಮಾಡದೇ ಸಾಮಾನ್ಯವಾಗಿ ಹೋಗುತ್ತದೆಯೇ? ವ|| ಎಂದು ಒಬ್ಬೊಬ್ಬರು ಒಂದೊಂದನ್ನು ಆಡುತ್ತ ಹೋಗುತ್ತಿರಲಾಗಿ ಪ್ರಕಾಶಮಾನವಾಗಿದ್ದ ಕೈದೀವಿಗೆಗಳು ಕತ್ತಲೆಯ ಹರಡುವುದಕ್ಕೆ ಅವಕಾಶ ಕೊಡದೆ ಪ್ರಕಾಶಮಾನವಾದ ಸೂರ್ಯಕಿರಣಗಳ ಮೊಕಳೆಯಂತೆ ಬೆಳಗುತ್ತಿರಲು ಪಾಂಡವರು ತಮ್ಮ ನಿವಾಸಕ್ಕೆ ಹೋದರು. ಆಗ-೮೮. ಪ್ರಕಾಶಮಾನವಾದ ತನ್ನ ವಂಶವನ್ನೂ ಅಭಿವೃದ್ಧಿಗೊಳಿಸುವ ಗುಣಾರ್ಣವನಾದ ಅರ್ಜುನನಲ್ಲಿ ನಿಷ್ಕಾರಣವಾಗಿ ಜಗಳವಾಡಬೇಕೆಂದಿರುವ ದುರ್ಯೋಧನನಿಗೆ ಕೋಪದಿಂದ ತನ್ನ ಕಣ್ಣನ್ನು ಕೆರಳಿಸಿದ ರೀತಿಯಲ್ಲಿ ಚಂದ್ರನು ಕೆಂಪಗೆ ಉದಯಿಸಿದನು. ವ|| ಆಗ ದುರ್ಯೋಧನನು ಭೀಮಸೇನನ ಪರಾಕ್ರಮದ ಪ್ರಮಾಣವನ್ನೂ ಅರ್ಜುನನ ದಿವ್ಯಾಸ್ತ್ರಕೌಶಲವನ್ನೂ ನೋಡಿ ಅವನ ಹೃದಯವು ಪೊಳ್ಳುಮರವನ್ನು ಬೆಂಕಿಯು ಸುಡುವಂತೆ ಒಳಗೊಳಗೆ ಸುಡುತ್ತಿರಲು ಸಹಿಸಲಾರದೆ ಕರ್ಣನನ್ನು ಕರೆದು (ಅವನೊಡನೆ) ಯೋಚನೆಮಾಡಿ ತನ್ನ ತಂದೆಯಾದ ಧೃತರಾಷ್ಟ್ರನ ಸಮೀಪಕ್ಕೆ ಹೋಗಿ ನಮಸ್ಕಾರಮಾಡಿ ಬಹು ರಹಸ್ಯವಾಗಿ ಹೀಗೆ ಹೇಳಿದನು- ೮೯. ‘ಹೀಗೆ ಹಿರಿಯರಾದ ನೀವಿದ್ದರೂ ಪಾಂಡುರಾಜನಿಗೆ ಪಟ್ಟವನ್ನು ಕಟ್ಟಲು ಆತನು ರಾಜ್ಯಭಾರವನ್ನು ವಹಿಸಿದನು. ಈಗಲೂ ಅವರ ಮಕ್ಕಳು ತಾವಾಗಲೇ

ವ|| ಅದಲ್ಲದೆಯುಂ-

ಚಂ|| ಮಲೆ ತಲೆದೋಱದೆಂದುದನೆ ಕೊಟ್ಟುದಡಂಗಮಡಂಗಿ ಬಂದೊಡೊ ಕ್ಕಲಿಗವೆಸರ್ಗೆ ಪೂಣ್ದುದು ಕುಱುಂಬು ಕಱುಂಬದೆ ಮಿಕ್ಕ ಶತ್ರು ಮಂ|

ಡಳಿಕರೆ ಮಿತ್ರ ಮಂಡಳಿಕರಾದರನಾಕುಳಮಿಂದು ನಾಳೆ ಮಾ ರ್ಮಲೆದರನಿಕ್ಕಿ ನಮ್ಮನೆೞೆದಿಕ್ಕುಗುವಿ ನೆಲೆಯಿಂ ಗುಣಾರ್ಣವಂ|| ೯೦

ವ|| ಅಂತು ವಿಕ್ರಮಾರ್ಜುನಂ ಬಿಲ್ಗೊಳಲುಂ ಭೀಮಸೇನಂ ಗದೆಗೊಳಲುಮಾಂಪುದರಿದು ಪಾಂಶುವಧದೆ ಕೆಯ್ಗೆ ಮಾಡುವುದು ತ್ತಮಪಕ್ಷಮಂತುಮಲ್ಲದೆಯುಂ-

ಶ್ಲೋ|| ಸ್ವಾಮ್ಯಾರ್ಥಂ ಸ್ವಾಮ್ಯ ವಿಕ್ರಾಂತಂ ಮರ್ಮಜ್ಞಂ ವ್ಯವಸಾಯಿನಂ ಅರ್ಧರಾಜ್ಯಹರಂ ಭೃತ್ಯಂ ಯೋನ ಹನ್ಯಾತ್ಸ ಹನ್ಯತೇ||

ಎಂಬುದರ್ಥಶಾಸ್ತ್ರ ಸದ್ಭಾವಂ-

ಉ|| ಮೇಣ್ಕುಲಮಿಲ್ಲೆಯೋ ನಮಗೆ ದಾಯಿಗರಲ್ಲರೊ ಶಸ್ತ್ರವಿದ್ಯೆಯೊಳ್ ಪೂಣ್ಕೆಗಳಿಲ್ಲೆಯೋ ಧರೆಗೆ ಮುನ್ನವರಯ್ಯನೆ ಮುಖ್ಯನಲ್ಲನೋ| ಜಾಣ್ಕಿಱದಾಗವೇಡ ಮನದಲ್ ನಿಮಗಯ್ಯ ವಿದ್ಯಾತೃಯೋಗದಿಂ ಕಣ್ಕುರುಡಾದೊಡೇನೊ ಕುರುಡಾಗಲೆವೇಱ್ಪುದೆ ನಿಮ್ಮ ಬುದ್ಧಿಯುಂ|| ೯೧

ವ|| ಎಂದು ತನ್ನ ಮನದೊಳೊಡಂಬಡೆ ನುಡಿದ ಮಗನ ಮಾತಂ ಧೃತರಾಷ್ಟ್ರಂ ಮನದೆಗೊಂಡು-

ಉ|| ಏನೆರ್ದೆಗೊಂಡ ಕಜ್ಜಮನೆ ಪೇೞ್ದೆಯೊ ಚಿಂತಿಸುತಿರ್ಪೆನಾನುಮೇ ನಾನುಮುಪಾಯಮಂ ಬಗೆವರಂತವರ್ಗಳ್ ನಿನಗೆಂದೆ ಕಂದ ಪೇೞ್|
ನೀನಿರೆ ಪಟ್ಟಮುಂ ನೆಲನುಮಪ್ಪುದನೊಲ್ವೆನೆ ವೈರಿಗಳ್ಗೆ ನೀ ನೇನುಮದರ್ಕೆ ಚಿಂತಿಸದಿರಿಲ್ಲಿರಲೀವನೆ ಪಾಂಡುಪುತ್ರರಂ|| ೯೨

ವ|| ಎಂದು ದುರ್ಯೋಧನನಂ ಬೀಡಿಂಗೆ ಪೋಗಲ್ವೇೞ್ದು ಪಾಂಡವರಯ್ವರುಮಂ ಬರಿಸಿ ಧೃತರಾಷ್ಟ್ರಂ ತೊಡೆಯನೇಱಸಿಕೊಂಡು ದುರ್ಯೋಧನನಪ್ಪೊಡೆ ಪೊಲ್ಲ ಮಾನಸನಾತನುಂ ನೀಮುಮೊಂದೆಡೆಯೊಳಿರೆ ಕಿಸುಱುಂ ಕಲಹಮುಮೆಂದುಂ ಕುಂದದದುಕಾರಣಂ ಗಂಗಾನದಿಯ ದಕ್ಷಿಣ ತಟದೊಳ್ ವಾರಣಾವತಮೆಂಬುದು ಪೊೞಲ್ ಕುರುಜಾಂಗಣ ವಿಷಯಕ್ಕೆ ತಿಳವಮಪ್ಪಂತಿರ್ದುದಲ್ಲಿಗೆ ಪೋಗಿ

ಪಟ್ಟಕ್ಕೆ ಯೋಗ್ಯರಾಗುತ್ತಿಲ್ಲವೆ? (ನೀವು) ಬೆನ್ನಟ್ಟಿಕೊಂಡು ಹೋಗಿ ಹಾವಿಗೆ ಹಾಲನ್ನೆರೆಯುತ್ತಿದ್ದೀರಿ. ದಾಯಾದಿಗಳನ್ನು ದೊಡ್ಡವರನ್ನಾಗಿ ಮಾಡಿದಿರಿ. ನಮ್ಮ ಸಾವು ಬುದುಕುಗಳು ಈಗ ಅದೃಷ್ಟಾನವಾಗದೇ ಇರುತ್ತದೆಯೇ’ (ಅಂದರೆ ರಾಜ್ಯವು ನಮಗೆ ಬಂದೇಬರುತ್ತದೆಯೆಂಬ ನಿಷ್ಕರ್ಷೆಯಿಲ್ಲ. ಅದೃಷ್ಟವಿದ್ದರೆ ಬರಬಹುದು ಎಂಬಂತೆ ಸಂಶಯಾತ್ಮಕವಾಯಿತು ಎಂದರ್ಥ). ವ|| ಹಾಗೂ ಅಲ್ಲದೆ-೯೦. (‘ಶತ್ರುರಾಜರೆಲ್ಲ’) ಪ್ರತಿಭಟನೆಯೇ ಇಲ್ಲದೆ ಮನಸ್ಸಿನಲ್ಲಿ ಶತ್ರುತ್ವವನ್ನೂ ಅಡಗಿಸಿಕೊಂಡು ಅವರು ಕೇಳಿದ್ದನ್ನು ಕೊಟ್ಟು ಅವರಿಗೆ ಅಡಿಯಾಳಾಗುವಂತೆ ಪ್ರತಿಜ್ಞೆಮಾಡಿತು. ಸಣ್ಣ ಪಾಳೆಯಗಳೆಲ್ಲ ಅವರ ಆಜ್ಞಾನುವರ್ತಿಯಾಗಿರಲು ನಿಷ್ಕರ್ಷೆಮಾಡಿಕೊಂಡುವು. ಪ್ರತಿಭಟಿಸದೆ ಶತ್ರುಮಂಡಲವೆಲ್ಲ ಮಿತ್ರಮಂಡಳಿಕರಾದರು. ಇಂದೋ ನಾಳೆಯೋ ಗುಣಾರ್ಣವನು ಪ್ರತಿಭಟಿಸಿದವರನ್ನೆಲ್ಲ ಧ್ವಂಸಮಾಡಿ ನಮ್ಮನ್ನೂ ಈ ನೆಲೆಯಿಂದ ಎಳೆದು ಬಿಸಾಡತ್ತಾನೆ’. ವ|| ಹಾಗೆ ವಿಕ್ರಮಾರ್ಜುನನು ಬಿಲ್ಲನ್ನು ಹಿಡಿದರೂ ಭೀಮಸೇನನು ಗದೆಯನ್ನು ಧರಿಸಿದರೂ ಪ್ರತಿಭಟಿಸುವುದಸಾಧ್ಯ. ರಹಸ್ಯವಾಗಿ ಮೋಸದ ಕೊಲೆಯಿಂದ ಅನಪಡಿಸಿಕೊಳ್ಳುವುದು ಉತ್ತಮವಾದ ಮಾರ್ಗ ಹಾಗೂ ಅಲ್ಲದೆ- ವ|| ‘ಭಾಗಕ್ಕೆ ಆಶೆಪಡುತ್ತಿರುವವನೂ ಸ್ವಾಮ್ಯವನ್ನು ಪಡೆಯಲು ಶಕ್ತಿಯುಳ್ಳವನೂ ರಹಸ್ಯವನ್ನು ತಿಳಿದವನೂ ಕಾರ್ಯಶೀಲನಾದವನೂ ಅರ್ಧರಾಜ್ಯವನ್ನು ಅಪಹರಿಸುವವನೂ ಆದ ಆಳನ್ನು ಯಾವನು ಕೊಲ್ಲುವುದಿಲ್ಲವೋ ಅವನು ತಾನೇ ಹತನಾಗುತ್ತಾನೆ.” ವ|| ಎನ್ನುವುದು ಅರ್ಥಶಾಸ್ತ್ರದ ಸಾರವತ್ತಾದ ಭಾಗ. ೯೧. ‘ಅಲ್ಲದೆ ನಮಗೆ ಅವರಿಗೆ ಸಮಾನವಾದ ಕುಲವಿಲ್ಲವೇ? ರಾಜ್ಯಕ್ಕೆ ನಾವು ಭಾಗಿಗಳಲ್ಲವೆ? ನಾವು ಅವರಷ್ಟೇ ಶಸ್ತ್ರವಿದ್ಯೆಯಲ್ಲಿ ಪ್ರಸಿದ್ಧರಲ್ಲವೆ; ಈಗಾಗಲೇ ಅವರಯ್ಯ ರಾಜ್ಯಭಾರಮಾಡಿಯಾಗಲಿಲ್ಲವೆ? ನಿಮ್ಮ ಮನಸ್ಸಿನಲ್ಲಿ ಜಾಣ್ಮೆ ಕಿರಿದಾಗಬೇಕಾಗಿಲ್ಲ. ದುರದೃಷ್ಟವಶದಿಂದ ಕಣ್ಣು ಕುರುಡಾದರೆ ನಿಮ್ಮ ಬುದ್ಧಿಯೂ ಕುರುಡಾಗಬೇಕೆ?’ ವ|| ಎಂದು ತನ್ನ ಮನಸ್ಸಿಗೊಪ್ಪಿದ ಮಾತನ್ನಾಡಿದ ಮಗನ ಮಾತನ್ನು ಧೃತರಾಷ್ಟ್ರನು ಅಂಗೀಕರಿಸಿದನು. ೯೨. ನನ್ನ ಹೃದಯದಲ್ಲಿದ್ದ ಕಾರ್ಯವನ್ನೇ ನೀನು ಹೇಳಿದ್ದೀಯೆ; ಅವರು ನಿನಗೇನಾದರೂ ಕೇಡನ್ನು ಯೋಚಿಸುತ್ತಿದ್ದಾರೆಯೆ ಎಂಬುದಾಗಿಯೇ ನಾನೂ ಚಿಂತಿಸುತ್ತಿದ್ದೇನೆ. ಮಗು, ನೀನಿರುವಾಗ ಪಟ್ಟವೂ ರಾಜ್ಯವೂ ಶತ್ರುಗಳಿಗೆ ಆಗುವುದನ್ನು ನಾನು ಒಪ್ಪುತ್ತೇನೆಯೇ? ಅದಕ್ಕೆ ನೀನು ಚಿಂತಿಸಬೇಡ; ಪಾಂಡುಪುತ್ರರು ಇಲ್ಲಿರಲು ನಾನು ಅವಕಾಶಕೊಡುತ್ತೇನೆಯೇ? ವ|| ಎಂದು ದುರ್ಯೋಧನನನ್ನು ಬೀಡಿಗೆ ಹೋಗಹೇಳಿ ಧೃತರಾಷ್ಟ್ರನು ಅಯ್ದು ಮಂದಿ ಪಾಂಡವರನ್ನೂ

ಸುಖಮಿರಿಮೆಂದೊಡಂತೆಗೆಯ್ವೆಮೆಂದು ಬೀೞ್ಕೊಂಡು ಬೀಡಿಂಗೆವಂದು ಗಾಂಗೇಯ ದ್ರೋಣ ಕೃಪ ವಿದುರರ್ಕಳ್ಗಂ ಕುಂತಿಗಂ ತದ್ವೃತ್ತಾಂತಮನಱ ಪಿದರನ್ನೆಗಮಿತ್ತ ದುರ್ಯೋಧನನವರ ಪೋಗನಱದು ಪುರೋಚನನೆಂಬ ತನ್ನ ಮನದನ್ನನಪ್ಪ ಪೆರ್ಗಡೆಯೊಳ್ ಲಾಕ್ಷಾಗೃಹೋಪಾಯಮುಂ ಚರ್ಚಿಸಿವಾರಣಾವತಮನೊಂದೇ ದಿವಸದೊಳೆಯ್ದು ವಂತಾಗೆ ರಥಮಂ ಸಮಕಟ್ಟಿ ನಾಲ್ಕುಲಕ್ಕ ಬಲಮಂ ನೆರಂಬೇೞ್ದು ಕಳಿಪಿದನಾಗಳ್-

ಕಂ|| ಉದಿತೋದಿತನೈ ನೀಂ ನಿನ ಗುದಯದ ಮೇಲುದಯಮೆಂದು ನೆಗೞ್ದರಿಗಂಗ| ಭ್ಯುದಯಮನಱಪುವ ತೆಱದಿಂ ದುದಯಾಚಳಚುಂಬಿಬಿಂಬನಿನನುದಯಿಸಿದಂ|| ೯೩

ವ|| ಆ ಪ್ರಸ್ತಾವದೊಳ್ ಮಂಗಳಪಾಠಕರ ಮಂಗಳವೃತ್ತೋಚ್ಚಾರಣೆಗಳಿಂದಂ ಪಾಂಡವರಯ್ವರುಮುನ್ಮೀಲಿತನಯನರಾಗಿ ನಿತ್ಯನಿಯಮಂಗಳಂ ನಿರ್ವರ್ತಿಸಿ ಮಂಗಳವಸದನಂಗೊಂಡು ಮಹಾಬ್ರಾಹ್ಮಣರ್ ಪರಸುವ ಪರಕೆಗಳುಮನಿಕ್ಕುವ ಸೇಸೇಗಳು ಮನಾಂತುಕೊಳುತ್ತುಂ ಪಲವುಂ ತೆಱದ ಪ್ರಯಾಣ ಪಟಹಂಗಳೆಸೆಯೆ ಶುಭ ಲಕ್ಷಣ ಲಕ್ಷಿತಂಗಳಪ್ಪಾಜಾನೇಯ ಕಾಂಭೋಜ ವಾಜಿರಾಜಿಗಳೊಳ್ ಪೂಡಿದ ದಿವ್ಯರಥಂಗಳನೇಱ ದಿವ್ಯಬಾಣಾಸನ ಬಾಣಪಾಣಿಗಳಾಗಿ ನಿಜಪರಿಜನಂ ಬೆರಸು ಗಾಂಗೇಯ ದ್ರೋಣ ಕೃಪ ವಿದುರರ್ ಕಳಿಪುತ್ತುಂ ಬರೆ ಪುರಜನಂಗಳೆಲ್ಲಂ ನೆರೆದವರ ಪೋಗಿಂಗೞಲ್ದು ಸೈರಿಸಲಾಱದೆ-

ಚಂ|| ಮನದೊಳಲಂಪು ಪೊಣ್ಮೆ ನುಡಿದುಂ ನಡೆ ನೋಡಿಯುಮಾಟಪಾಟಮಂ ಬಿನದಮುಮಾರುಮಂ ಮಯಿಸುತ್ತಿರೆ ಬೀದಿಗಳೊಳ್ ವಿಳಾಸದೊ|
ಡ್ಡೆನಿಸಿ ತೊೞಲ್ವ ಪಾಂಡವರ ಪೋಗಿನೊಳುಂತೆ ಬೆಡಂಗುಗೆಟ್ಟು ಹ
ಸ್ತಿನಪುರಮಿಂದು ರಕ್ಕಸನ ತಿಂದ ಪೊೞಲ್ಗೆಣೆಯಾಗದಿರ್ಕುಮೇ|| ೯೪

ವ|| ಎಂದು ಕಣ್ಣನೀರಂ ನೆಗಪೆ-

ಚಂ|| ಪರಸುವ ಪೌರವೃದ್ಧರ ಕುಲಾಂಗನೆಯರ್ಕಳ ಸಾಧು ವಾದದೊಳ್

ಬೆರಸಿ ಸಮಂತು ಸೂಸುವ ಜಲಾರ್ದ್ರಲಸದ್ಧವಳಾಕ್ಷತಂಗಳೊಳ್| ಬೆರಸಿದ ತಣ್ಪನೆತ್ತಿ ಕವಿದೆತ್ತಿದ ಬಾಸಿಗದೊಂದು ಕಂಪಿನೊಳ್
ಪೊರೆದು ಮದಾಳಿಗಳ್ವೆರಸು ಬಂದುದದೊಂದನುಕೂಲ ಮಾರುತಂ|| ೯೫

ಬರಮಾಡಿ ತೊಡೆಯಮೇಲೆ ಕುಳ್ಳಿರಿಸಿಕೊಂಡು ‘ದುರ್ಯೋಧನನಾದರೆ ಕೆಟ್ಟ ಮನಸ್ಸುಳ್ಳವನು. ಅವನೂ ನೀವೂ ಒಂದೇ ಸ್ಥಳದಲ್ಲಿದ್ದರೆ ಕೋಪವೂ ಜಗಳವೂ ಎಂದೂ ತಪ್ಪುವುದಿಲ್ಲ. ಆದ ಕಾರಣ ಗಂಗಾನದಿಯ ದಕ್ಷಿಣದಲ್ಲಿ ಕುರುಜಾಂಗಣದೇಶಕ್ಕೆ ತಿಲಕದಂತಿರುವ ವಾರಣಾವತವೆಂಬ ಪಟ್ಟಣವಿದೆ; ಅಲ್ಲಿಗೆ ಹೋಗಿ ಸುಖವಾಗಿರಿ ಎನ್ನಲು (ಪಾಂಡವರು) ಹಾಗೆಯೇ ಮಾಡುವೆವು ಎಂದು ಅವರ ಅಪ್ಪಣೆಯನ್ನು ಪಡೆದು ಮನೆಗೆ ಬಂದು ಭೀಷ್ಮದ್ರೋಣ ಕೃಪ ವಿದುರರುಗಳಿಗೂ ಕುಂತಿಗೂ ಆ ವಿಷಯವನ್ನು ತಿಳಿಸಿದರು. ಅಷ್ಟರಲ್ಲಿ ಇತ್ತಕಡೆ ದುರ್ಯೋಧನನು ಅವರು ಹೋಗುವುದನ್ನು ತಿಳಿದು ಪುರೋಚನನೆಂಬ ತನ್ನ ಆಪ್ತನಾದ ಹೆಗ್ಗಡೆಯಲ್ಲಿ ಅರಗಿನ ಮನೆಯ ಉಪಾಯವನ್ನು ವಿಚಾರ ಚರ್ಚೆಮಾಡಿ ವಾರಣಾವತವನ್ನು ಒಂದೇ ದಿವಸದಲ್ಲಿ ಹೋಗಿ ಸೇರುವ ಹಾಗೆ ರಥವನ್ನು ಸಿದ್ಧಪಡಿಸಿ ನಾಲ್ಕು ಲಕ್ಷ ಸೈನ್ಯವನ್ನೂ ಅವನ ಸಹಾಯಕ್ಕಾಗಿ ಕಳುಹಿಸಿದನು; ಆಗ- ೯೩. ‘ನೀನು ಅಭಿವೃದ್ಧಿಯಾಗುವವನು, ನಿನಗೆ ವೃದ್ಧಿಯ ಮೇಲೆ ವೃದ್ಧಿಯಾಗುತ್ತದೆ’ ಎಂದು ಪ್ರಸಿದ್ಧನಾದ ಅರಿಕೇಸರಿಗೆ ಅವನ ಅಭಿವೃದ್ಧಿಯನ್ನು ಸೂಚಿಸುವ ರೀತಿಯಿಂದ ಉದಯಪರ್ವತಸ್ಪರ್ಶಿಯಾದ ಸೂರ್ಯನು ಉದಯಿಸಿದನು. ವ|| ಆ ಸಂದರ್ಭದಲ್ಲಿ ಹೊಗಳುಭಟರ ಮಂಗಳಪದ್ಯಪಠನಗಳಿಂದ ಪಾಂಡವರೈದು ಜನರೂ ಅರಳಿದ ಕಣ್ಣುಗಳನ್ನುಳ್ಳವರಾಗಿ ಪ್ರತಿದಿನವೂ ಮಾಡಬೇಕಾದ ನಿತ್ಯಕರ್ಮಗಳನ್ನು ಮುಗಿಸಿ ಮಂಗಳಕರವಾದ ಅಲಂಕಾರವನ್ನು ಮಾಡಿಕೊಂಡು ವೃದ್ಧಬ್ರಾಹ್ಮಣರುಗಳು ಆಶೀರ್ವದಿಸುವ ಹರಕೆಗಳನ್ನೂ ಚೆಲ್ಲುತ್ತಿರುವ ಮಂತ್ರಾಕ್ಷತೆಗಳನ್ನೂ ತಲೆಯಲ್ಲಿ ಧರಿಸಿಕೊಳ್ಳುತ್ತ ನಾನಾರೀತಿಯ ಪ್ರಯಾಣಭೇರಿಗಳು ಪ್ರಕಾಶಿಸುತ್ತಿರಲು ಶುಭಲಕ್ಷಣಗಳಿಂದ ಗುರುತಿಸಲ್ಪಟ್ಟ ಒಳ್ಳೆಯ ತಳಿಯಿಂದ ಕೂಡಿದ ಕಾಂಭೋಜದೇಶದ ಉತ್ತಮ ಕುದುರೆಗಳ ಸಮೂಹದಿಂದ ಸಿದ್ಧಪಡಿಸಿದ ದಿವ್ಯರಥಗಳನ್ನು ಹತ್ತಿ ದೇವದತ್ತವಾದ ಬಿಲ್ಲುಬಾಣಗಳನ್ನು ಕಯ್ಯಲ್ಲಿ ಹಿಡಿದವರಾಗಿ ತಮ್ಮ ಪರಿವಾರದೊಂದಿಗೆ ಸೇರಿಕೊಂಡು ಹಸ್ತಿನಾಪುರದಿಂದ ಹೊರಟರು. ಭೀಷ್ಮ ದ್ರೋಣ ಕೃಪ ವಿದುರರು ದಾರಿ ಕಳುಹಿಸಲು ಬಂದರು. ಪಟ್ಟಣಿಗರೆಲ್ಲರೂ ಸೇರಿ ಅವರು ಹೊರಟುಹೋಗುವಿಕೆಗಾಗಿ ದುಖಪಟ್ಟು ಸಹಿಸಲಾರದೆ ಶೋಕಿಸಿದರು. ೯೪. ಮನಸ್ಸಿನಲ್ಲಿ ಸಂತೋಷವುಕ್ಕುವಂತೆ ಮಾತನಾಡಿಯೂ ದೀರ್ಘದೃಷ್ಟಿಯಿಂದ ನೋಡಿಯೂ ತಮ್ಮ ಆಟಪಾಟವಿನೋದಗಳಿಂದ ಯಾರನ್ನಾದರೂ ಮೈಮರೆಯುವಂತೆ ಮಾಡಿಯೂ ಬೀದಿಗಳಲ್ಲಿ ಸೌಂದರ್ಯದ ಪುಂಜವೆಂದೆನಿಸಿಕೊಂಡು ತಿರುಗಾಡುತ್ತಿದ್ದ ಪಾಂಡವರು ಊರನ್ನು

ವ|| ಅಂತು ಪೊೞಲಂ ಪೊಱಮಡೆ ಬೞಯನೆ ತಗುಳ್ದು ಬರ್ಪ ತಮ್ಮೊಡನಾಡಿಗಳಪ್ಪ ಮೇಳದ ಸಬ್ಬವದ ನಗೆಯ ತೆಗೞನವರನೆಮ್ಮ ಬೞಯಟ್ಟಿದಂದು ಬನ್ನಿಮೆಂದು ಪ್ರಿಯಂ ನುಡಿದಿರಿಸಿ ಕಿಱದಂತರಂ ಬಂದೊಂದು ತಾವರೆಗೆಯ ಮೊದಲೊಳ್ ನಿಂದು ಭೀಷ್ಮ ದ್ರೋಣ ಕೃಪ ವಿದುರರ್ಕಳನೆಮಗೆ ತಕ್ಕ ಬುದ್ಧಿಯಂ ಪೇೞ್ದು ಮಗುೞಮೆನೆ-

ಕಂ|| ನಡಪಿಯುಮೋದಿಸಿಯುಂ ಬಿ ಲ್ವಿಡಿಯಿಸಿಯುಂ ಕೆಚ್ಚುವಿರ್ದ ಕೂರ್ಮೇಗಳೆರ್ದೆಯಂ|
ನಡೆ ಪಾಂಡುಸುತರಲ್ಕೆಗೆ
ನಿಡುಸುಯ್ದರ್ ದ್ರೋಣ ಭೀಷ್ಮ ಕೃಪ ವಿದುರರ್ಕಳ್|| ೯೬

ವ|| ಆಗಳ್ ವಿದುರಂ ಕೆಲನಱಯದಂತುಮವಂಱವಂತುಂ ಸಾಮಾನ್ಯ ಸ್ಥಿತಿಯೊಳೆ ಬಟ್ಟೆಯ ನಂಜಿನ ಕಿರ್ಚಿನ ದೆಸೆಗೆ ಕರಂ ಪ್ರಯತ್ನಪರರಾಗಿಮೆಂದೊಡಂತೆ ಗೆಯ್ವೆಮೆಂದವರನಿರಲ್ವೇೞ್ದು ಪಯಣಂಬೋಗಿ-

ಕಂ|| ಪೊಳಪಿನ ಕಿರಣದ ಗಾಳಿಯ ಪೊಳಪನೆ ಸೈರಿಸದ ಕುಸುಮದಳ ಸುಕುಮಾರರ್| ತಳರ್ದು ನೆಲೆಯಿಂದಮಾಗಳ್ ಕೊಳದಿಂ ಪೊಱಮಟ್ಟ ಹಂಸೆಗಳ್ಗೆಣೆಯಾದರ್|| ೯೭

ವ|| ಆಗಿ ತಾವಾ ದಿಗಭೇಶ್ವರರಪ್ಪುದಱಂ ತಳರ್ದೆಡೆಯೆಡೆಯ ಮರಂಗಳ ತೊಗಳ ಬಾಡಂಗಳ ಪೆಸರ್ಗಳಂ ಬೆಸಗೊಳುತ್ತುಂ ಮಹಾಗ್ರಹಾರಂಗಳ ಮಹಾಜನಂಗಳ ಕೊಟ್ಟ ಪೊನ್ನಜನ್ನವಿರಂಗಳುಮನವರ ಪರಕೆಯುಮಂ ಕೆಯ್ಕೊಳುತ್ತುಮವರ್ಗೆ ಬಾಧೆಯಾಗದಂತು ಕಾಪಂನಿಯಮಿಸುತ್ತುಂ ಕಾಲೂರ್ಗಳ ಗಂಡರ ಪೆಂಡಿರ ನಡೆಯುಡೆಯ ನುಡಿಯ ಮುಡಿಯ ಗಾಂಪಿಂಗೆ ಮುಗುಳ್ನಂಗೆ ನಗುತ್ತುಮಲ್ಲಿಗಲ್ಲಿಗೊಡೆದ ಕೆಗಮೞದಾಯತನಕ್ಕಂ ಧನಮನಿತ್ತು ಜೀರ್ಣೋದ್ಧಾರಂಗಳಂ ಮಾಡಿಸುತ್ತುಂ ಬೀಡುದಾಣಂಗಳೊಳಿಕ್ಕಿದ ಬಳ್ಳಿಗಾವಣಂಗಳೊಳಂ ನನೆಯ ಜೊಂಪಂಗಳೊಳಂ ವಿಶ್ರಮಿಸುತ್ತುಂ ಬಂದು-

ಬಿಟ್ಟು ಹೋಗುವುದರಿಂದ ಹಸ್ತಿನಾಪಟ್ಟಣವು ವೈಭವಶೂನ್ಯವಾಗಿ ತಿಂದುಳಿದ ಪಟ್ಟಣಕ್ಕೆ ಸಮಾನವಾಗುವುದಿಲ್ಲವೇ ವ|| ಎಂದು ಕಣ್ಣೀರನ್ನು ಸುರಿಸಿದರು. ೯೫. ಆಶೀರ್ವಾದವನ್ನು ಮಾಡುತ್ತಿರುವ ಊರಹಿರಿಯರ ಮತ್ತು ಕುಲಸ್ತ್ರೀಯರ ಸ್ವಸ್ತಿವಾಚನಗಳಿಂದಲೂ ವಿಶೇಷವಾಗಿ ಚೆಲ್ಲುತ್ತಿರುವ ಮನೋಹರವೂ ಧವಳವರ್ಣಯುಕ್ತವೂ ಆದ ಆರ್ದ್ರಾಕ್ಷತೆಗಳಿಂದಲೂ ತಂಪಿನಿಂದಲೂ ಕಂಪಿನಿಂದಲೂ ಎತ್ತಿ ಕಟ್ಟಿದ ಬಾಸಿಂಗದ ಸುಗಂಧದಿಂದಲೂ ಮದಿಸಿದ ದುಂಬಿಗಳಿಂದಲೂ ಕೂಡಿದ ಹಿತವಾದ ಗಾಳಿಯೊಂದು (ಪಾಂಡವರಿಗೆ ಶುಭಸೂಚಕವಾಗಿ) ಬೀಸಿತು. ವ|| ಹಾಗೆ ಪಟ್ಟಣವನ್ನು ಬಿಟ್ಟು ಹೊರ ಹೊರಡಲು ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಸಹಪಾಠಿಗಳನ್ನೂ ನಕಲಿಯವರನ್ನೂ ಹಾಸ್ಯಗಾರರನ್ನೂ ದೂಷಣೆಮಾಡುತ್ತಿದ್ದವರನ್ನೂ ಪಾಂಡವರು ‘ನಾವು ಹೇಳಿಕಳುಹಿಸಿದಾಗ ಬನ್ನಿ’ ಎಂದು ಒಳ್ಳೆಯ ಮಾತನ್ನಾಡಿ ನಿಲ್ಲಿಸಿ ಕೊಂಚ ದೂರ ಬಂದು ಒಂದು ತಾವರೆಯ ಕೆರೆಯ ಅಂಚಿನಲ್ಲಿ ನಿಂತು ಭೀಷ್ಮ, ದ್ರೋಣ ಕೃಪ ವಿದುರರುಗಳನ್ನು ‘ನಮಗೆ ಬುದ್ಧಿವಾದಗಳನ್ನು ತಿಳಿಸಿ ದಯಮಾಡಿ’ ಎಂದರು. ೯೬. ಬಾಲ್ಯದಿಂದ ಸಲಹಿಯೂ ವಿದ್ಯಾಭ್ಯಾಸ ಮಾಡಿಸಿಯೂ ಬಿಲ್ವಿದ್ಯೆಯನ್ನು ಕಲಿಸಿಯೂ ನಿಕಟವಾಗಿ ಅಂಚಿಕೊಂಡು ಗಾಢವಾಗಿದ್ದ ಪ್ರೇಮವು ಮನಸ್ಸನ್ನು ನಾಟಿರಲು ಬೀಷ್ಮದ್ರೋಣಕೃಪ ವಿದುರರು ಅವರ ಅಗಲಿಕೆಗಾಗಿ ನಿಟ್ಟುಸಿರನ್ನು ಸೆಳೆದರು. ವ|| ಆಗ ವಿದುರನು ಪಕ್ಕದವರಿಗೆ ತಿಳಿಯದಂತೆಯೂ ಅವರಿಗರ್ಥವಾಗುವಂತೆಯೂ ಸರಳವಾದ ರೀತಿಯಲ್ಲಿಯೇ ‘ದಾರಿಯಲ್ಲಿ ಪ್ರಾಪ್ತವಾಗಬಹುದಾದ ವಿಷ, ಅಗ್ನಿ ಮೊದಲಾದುವುಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ’ ಎಂದು ಹೇಳಲು ಅವರು ಹಾಗೆಯೇ ಮಾಡುತ್ತೇವೆಂದು ಹೇಳಿ ಅವರನ್ನು ಅಲ್ಲಿಯೇ ನಿಲ್ಲಿಸಿ ಮುಂದೆ ಪ್ರಯಾಣಮಾಡಿದರು. ೯೭. ಕಿರಣದ ಹೊಳಪನ್ನೂ ಗಾಳಿಯ ಸುಳಿವನ್ನೂ ಸೈರಿಸದೆ, ಹೂವಿನೆಸಳಿನಂತೆ ಕೋಮಲವಾಗಿದ್ದ ಆ ಸುಕುಮಾರರು ತಮ್ಮ ವಾಸಸ್ಥಳದಿಂದ ಹೊರಟು ಸರೋವರವನ್ನು ಬಿಟ್ಟು ಹೊರಟ ಹಂಸಗಳಿಗೆ ಸಮಾನರಾದರು. ವ|| ತಾವು ಆಗರ್ಭ ಶ್ರೀಮಂತರಾದುದರಿಂದ ಅಲ್ಲಿಂದ ಹೊರಟು ಪಕ್ಕಪಕ್ಕದಲ್ಲಿಯೇ ಸಿಕ್ಕಿದ ಮರಗಳ ನದಿಗಳ ಹಳ್ಳಿಗಳ ಹೆಸರುಗಳನ್ನು ವಿಚಾರಮಾಡುತ್ತಲೂ ಶ್ರೇಷ್ಠವಾದ ಅಗ್ರಹಾರದ ಮಹಾಜನಗಳು ಕೊಟ್ಟಂತಹ ಚಿನ್ನದ ಯಜ್ಞೋಪವೀತಗಳನ್ನೂ ಆಶೀರ್ವಾದಗಳನ್ನೂ ಸ್ವೀಕರಿಸುತ್ತಲೂ ಅವರಿಗೆ ಯಾವ ತೊಂದರೆಯೂ ಆಗದಂತೆ ರಕ್ಷಣೆಯನ್ನು ಏರ್ಪಡಿಸುತ್ತಲೂ ಸಣ್ಣ ಹಳ್ಳಿಗಳ ಗಂಡಸರ ಹೆಂಗಸರ ಆಚಾರ, ಉಡುಪು ಮಾತು ಮತ್ತು ತುರುಬುಗಳ

ಚಂ|| ಎಡಱಱಿದೀವ ಕಲ್ಪತರುವೆಂದು ವನೀಪಕಕೋಟಿ ಸಂತಸಂ
ಬಡೆ ಪೊಡೆವೊಂದಕಾಳವಿಳಯಾಶನಿಯೆಂದು ವಿರೋಗಳ್ ಮನಂ|
ಗಿಡೆ ಬಿಯಮುಂ ಪರಾಕ್ರಮಮುಮೊಪ್ಪಿರೆ ತನ್ನೊಡವುಟ್ಟಿದರ್ ಸಮಂ
ತೊಡವರೆ ವಾರಣಾವತಮನೆಯ್ದಿದನಮ್ಮನ ಗಂಧವಾರಣಂ|| ೯೮

ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರವಚನರಚನ

ಚತುರ ಕವಿತಾಗುಣಾರ್ಣವ ವಿರಚಿತಮಪ್ಪ ವಿಕ್ರಮಾರ್ಜುನ ವಿಜಯದೊಳ್ ದ್ವಿತೀಯಾಶ್ವಾಸಂ

ದಡ್ಡತನಕ್ಕೆ ಹುಸಿನಗುತ್ತಲೂ ಅಲ್ಲಲ್ಲಿ ಒಡೆದುಹೋಗಿದ್ದ ಕೆರೆಗೂ ಪಾಳಾಗಿದ್ದ ದೇವಾಲಯಗಳಿಗೂ ಹಣವನ್ನೂ ಕೊಟ್ಟು ಮೊದಲಿದ್ದ ಸ್ಥಿತಿಗೆ ತರುತ್ತಲೂ ತಾನು ಇಳಿದುಕೊಳ್ಳುವುದಕ್ಕೆ ಹಾಕಿದ್ದ ಬಳ್ಳಿಯ ಚಪ್ಪರಗಳಲ್ಲಿಯೂ ಹೂವಿನ ಗೊಂಚಲುಗಳಲ್ಲಿಯೂ ವಿಶ್ರಮಿಸಿಕೊಳ್ಳುತ್ತಲೂ ಬಂದು ೯೮. ಬಡತನದ ಸ್ವರೂಪವನ್ನು ತಿಳಿದು ದಾನಮಾಡುವ ಕಲ್ಪವೃಕ್ಷವಿದೆಂದು ಯಾಚಕಸಮೂಹವು ಸಂತೋಷಪಡುವಂತಿರುವ ದಾನಗುಣವೂ ಇದೊಂದು ಅಕಾಲದಲ್ಲಿ ಪ್ರಾಪ್ತವಾಗುವ ಪ್ರಳಯಕಾಲದ ಸಿಡಿಲೆಂದು ಶತ್ರುಗಳ ಮನಸ್ಸನ್ನು ಕೆಡಿಸುವ ಪರಾಕ್ರಮವೂ ತನ್ನಲ್ಲಿ ಪ್ರಕಾಶಿಸುತ್ತಿರಲು ತನ್ನ ಸಹೋದರರು ಜೊತೆಯಲ್ಲಿಯೇ ಕೂಡಿ ಬರುತ್ತಿರಲು ಅಮ್ಮನ ಗಂಧವಾರಣನಾದ ಅರ್ಜುನನು (ಅರಿಕೇಸರಿಯು) ವಾರಣಾವತವನ್ನು ಬಂದು ಸೇರಿದನು.