Categories
ಮಾಧ್ಯಮ ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ

ಪಿ.ಎಂ. ಮಣ್ಣೂರ

ನಾಲ್ಕು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿರುವ ಪಿ.ಎಂ. ಮಣ್ಣೂರ ಕಲಬುರ್ಗಿಯಲ್ಲಿ ಸತ್ಯಕಾಮ ಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪಿ.ಎಂ. ಮಣ್ಣೂರ ಅವರ ಕವನ ಸಂಕಲನ ಮತ್ತು ಸಂಪಾದಕೀಯ ಸಂಗ್ರಹವೂ ಪ್ರಕಟವಾಗಿದೆ.
ಮಣ್ಣೂರ ಅವರು ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಪತ್ರಕರ್ತರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ಕಲಬುರ್ಗಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಕಲಬುರ್ಗಿಯಲ್ಲಿ ಕಲಾವಿದರ ಸಂಘ ಸ್ಥಾಪಿಸಿ ಸಕ್ರಿಯರಾಗಿರುವ ಮಣ್ಣೂರ ಅವರ ಸೇವೆಯನ್ನು ಗುರುತಿಸಿ ಹಲವು ಸಂಘಟನೆಗಳು ಸನ್ಮಾನಿಸಿವೆ. ಕರ್ನಾಟಕ ಪತ್ರಿಕಾ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಗಳ ಗೌರವಗಳು ಇವರಿಗೆ ಸಂದಿವೆ.