ಈ ಯೋಜನೆಯನ್ನು ಕೈಗೆತ್ತಿಕೊಂಡ ಸಂದರ್ಭದಲ್ಲಿ ಎಲ್ಲ ರೀತಿಯ ನೆರವನ್ನು ನೀಡಿದ ಕುಲಪತಿಗಳಾಗಿದ್ದ ಡಾ. ಎಂ.ಎಂ. ಕಲಬುರ್ಗಿಯವರಿಗೆ, ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಹಾಯ ಮಾಡಿದ ಕುಲಪತಿಗಳಾಗಿದ್ದ ಡಾ. ಎಚ್.ಜೆ. ಲಕ್ಕಪ್ಪಗೌಡ ಮತ್ತು ಡಾ. ಕೆ.ವಿ. ನಾರಾಯಣ ಅವರಿಗೆ, ಯೋಜನೆಯನ್ನು ಪುಸ್ತಕ ರೂಪದಲ್ಲಿ ಹೊರತರಲು ಎಲ್ಲ ರೀತಿಯ ಸಹಾಯವನ್ನು ಮಾಡಿದ ಮಾನ್ಯ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಈ ಪುಸ್ತಕದ ಹಸ್ತಪ್ರತಿಯನ್ನು ಕೂಲಂಕಷವಾಗಿ ಓದಿ ಸೂಕ್ತ ಸಲಹೆ ನೀಡಿದ ಮಂಗಳೂರು ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರೊ. ಬಿ. ಸುರೇಂದ್ರರಾವ್ ಹಾಗೂ ಡಾ. ಕೇಶವನ್ ವೆಲುತೆಟ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಈ ಕೃತಿಯನ್ನು ಸಿದ್ಧತೆಯಲ್ಲಿ ಸಹಕಾರ ನೀಡಿದ ನನ್ನ ಸಹೋದ್ಯೋಗಿಗಳಾದ ಪ್ರೊ. ಲಕ್ಷ್ಮಣ್ ತೆಲಗಾವಿ, ಪ್ರೊ. ಟಿ.ಪಿ. ವಿಜಯ್, ಡಾ. ಸಿ.ಆರ್. ಗೋವಿಂದರಾಜು, ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಮತ್ತು ಡಾ. ಎನ್.ಚಿನ್ನಸ್ವಾಮಿ ಸೋಸಲೆ ಅವರಿಗೆ ಕೃತಜ್ಞನಾಗಿದ್ದೇನೆ. ಪುಸ್ತಕವನ್ನು ಅಂದವಾಗಿ ಪ್ರಕಟಿಸಿದ ಪ್ರಸಾರಾಂಗದ ನಿರ್ದೇಶಕರಾದ ಡಾ. ಹಿ.ಚಿ. ಬೋರಲಿಂಗಯ್ಯ ಅವರಿಗೆ, ಪುಸ್ತಕ ವಿನ್ಯಾಸವನ್ನು ಮಾಡಿದ ಶ್ರೀ ಸುಜ್ಞಾನಮೂರ್ತಿ ಹಾಗೂ ಶ್ರೀ. ಕೆ.ಎಲ್. ರಾಜಶೇಖರ್ ಅವರಿಗೆ, ಮುಖಪುಟ ವಿನ್ಯಾಸವನ್ನು ಮಾಡಿದ ಶ್ರೀ. ಕೆ.ಕೆ. ಮಕಾಳಿ ಅವರಿಗೆ ಮತ್ತು ಅಕ್ಷರ ಸಂಯೋಜನೆ ಮಾಡಿದ ಶ್ರೀಮತಿ ಎ. ನಾಗವೇಣಿ ಅವರಿಗೆ ನನ್ನ ಕೃತಜ್ಞತೆಗಳು.

ಡಾ. ಕೆ. ಮೋಹನ್‍ಕೃಷ್ಣ ರೈ