ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!
ಸತ್ತಂತಿಹರನು ಬಡಿದೆಚ್ಚರಿಸು;
ಕಚ್ಚಾಡುವರನು ಕೂಡಿಸಿ ಒಲಿಸು,
ಹೊಟ್ಟೆಯಕಿಚ್ಚಿಗೆ ಕಣ್ಣೀರ್ ಸುರಿಸು;
ಒಟ್ಟಿಗೆ ಬಾಳುವ ತೆರದಲಿ ಹರಸು!
ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!
ಕ್ಷಯಿಸೆ ಶಿವೇತರ ಕೃತಿಕೃತಿಯಲ್ಲಿ
ಮೂಡಲಿ ಮಂಗಳ ಮತಿಮತಿಯಲ್ಲಿ;
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ!
ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!
೨೮ – ೦೪ – ೧೯೬೦
* ‘ಮಾನಸ ಗಂಗೊತ್ರಿ’ಯ ಪ್ರಾರಂಭೋತ್ಸವ ಸಂದರ್ಭದಲ್ಲಿ.
Leave A Comment