Categories
ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ ವಿಜ್ಞಾನ

ಪ್ರೊ. ಅಬ್ದುಲ್ ಅಜೀಜ್

ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜ ಶಿಕ್ಷಣದಲ್ಲಿ ಮಹತ್ವದ ಕೊಡುಗೆ ನೀಡುತ್ತಿರುವ ಸಮಾಜ ವಿಜ್ಞಾನಿಗಳಲ್ಲಿ ಡಾ|| ಅಬ್ದುಲ್ ಅಜೀಜ್ ಅವರು ಅಗ್ರಮಾನ್ಯರು. ಕೋಲಾರದವರಾದ ಇವರು ಅರ್ಥಶಾಸ್ತ್ರವನ್ನು ಅಭ್ಯಾಸ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ.
ಬೆಂಗಳೂರಿನಲ್ಲಿರುವ ಐಸೆಕ್ (ಭಾರತೀಯ ಸಾಮಾಜಿಕ ಮತ್ತು ಆರ್ಥಿಕ ಅಧ್ಯಯನ ಸಂಸ್ಥೆಯಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡಿದ ಅಬ್ದುಲ್ ಅಜೀಜ್ ಅವರು ಹಲವು ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಲ್ಲಿಯೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಐದು ದಶಕಗಳಿಂದ ಗ್ರಾಮೀಣಾಭಿವೃದ್ಧಿ, ಪ್ರಾದೇಶಿಕ ಅಸಮಾನತೆ, ಅಭಿವೃದ್ಧಿ ವಿಕೇಂದ್ರೀಕರಣ ಮೊದಲಾದ ವಿಷಯಗಳ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ನಡೆಸುತ್ತ ಬಂದಿರುವ ಅಬ್ದುಲ್ ಅಜೀಜ್ ಅವರು ಕರ್ನಾಟಕ ಸರ್ಕಾರದ ಅನೇಕ ಕಾರ್ಯಕ್ರಮಗಳಿಗೆ ಪ್ರಮುಖ ನೀತಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿರುವ ಇವರು ಇಪ್ಪತ್ತೇಳು ಕೃತಿಗಳನ್ನು ರಚಿಸಿದ್ದಾರೆ.