ಕರ್ನಾಟಕ ವಿಶ್ವವಿದ್ಯಾಲಯವು ತನ್ನ ಪ್ರಸಾರಾಂಗದ ಮುಖಾಂತರ ಕೈಕೊಂಡು ನಡೆಸುತ್ತಿರುವ ಜ್ಞಾನಪ್ರಸಾರದ ಯೋಜನೆಗಳಲ್ಲಿ ಈ ಉಪನ್ಯಾಸ ಗ್ರಂಥಮಾಲೆ ಅತ್ಯಂತ ಮುಖ್ಯವೂ, ಜನಪ್ರಿಯವೂ ಆಗಿರುವದು ಹೆಮ್ಮೆಯ ಮಾತಾಗಿದೆ. ವಿಶ್ವವಿದ್ಯಾಲಯ ಆಡಳಿತ ಕ್ಷೇತ್ರದಲ್ಲಿರುವ ಏಳು ಜಿಲ್ಲೆಗಳಲ್ಲಿಯೂ ಉಪನ್ಯಾಸ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ವಿಶ್ವವಿದ್ಯಾಲಯದ ಮತ್ತು ಇದಕ್ಕೆ ಸೇರಿದ ಕಾಲೇಜುಗಳ ಪ್ರಾಧ್ಯಾಪಕರು ಸಾಹಿತ್ಯ, ವಿಜ್ಞಾನ, ಸಾಮಾಜಿಕಶಾಸ್ತ್ರ ಮೊದಲಾದ ಶಾಖೆಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಆಯ್ದುಕೊಂಡು ಶಾಸ್ತ್ರಸಮ್ಮತವಾದ ಸರಣಿಯಲ್ಲಿ ಜನಸಾಮಾನ್ಯರಿಗೆ ತಿಳಿಯುವ ಶೈಲಿಯಲ್ಲಿ ಈ ಶಿಬಿರಗಳಲ್ಲಿ ಉಪನ್ಯಾಸಗಳನ್ನು ಕೊಡುತ್ತಾರೆ. ವಿಶ್ವವಿದ್ಯಾಲಯದ ಜ್ಞಾನ ಭಂಡಾರದ ಅಲ್ಪಾಂಶವನ್ನಾದರೂ ಮಹಾಜನರ ಮನೆ ಬಾಗಿಲಿಗೆ ಒಯ್ದು ಮುಟ್ಟಿಸಬೇಕೆಂದು ಮಾಡಿದ ಈ ಪ್ರಯತ್ನಕ್ಕೆ ನಮ್ಮ ನಿರೀಕ್ಷೆಗೆ ಮೀರಿದ ಮೆಚ್ಚಿಕೆಯೂ ಪ್ರೋತ್ಸಾಹವೂ ದೊರೆಯುತ್ತಿದೆ. ಜನರು ತಾವಾಗಿಯೇ ಮುಂದೆ ಬಂದು ತಮ್ಮ ತಮ್ಮ ಊರುಗಳಲ್ಲಿ ಈ ಉಪನ್ಯಾಸಗಳನ್ನು ಏರ್ಪಡಿಸಲು ವಿಶ್ವವಿದ್ಯಾಲಯಕ್ಕೆ ಬರೆದು ಬಿನ್ನವಿಸಿಕೊಳ್ಳುತ್ತಿರುವುದು ನಿಜವಾಗಿಯೂ ಸಂತೋಷದ ಸಂಗತಿಯಾಗಿದೆ.

ಈ ಜ್ಞಾನಪ್ರಸಾರದ ಕಾರ್ಯದಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಹಾಗೂ ಕಾಲೇಜುಗಳ ಅಧ್ಯಾಪಕರಿಗೆ ಅಯಾ ಪ್ರದೇಶದ ಜನತೆಯೊಡನೆ ಹೆಚ್ಚಿನ ಸಂಪರ್ಕ ಒದಗುವದಲ್ಲದೆ ಎಂತಹ ವಿಷಯವನ್ನಾದರೂ ಕನ್ನಡದಲ್ಲಿ ತಿಳಿಸಿ ಹೇಳುವ ಹಾಗೂ ಅದನ್ನು ಸುಲಭ ಶೈಲಿಯಲ್ಲಿ ಬರವಣಿಗೆಯಲ್ಲಿಳಿಸುವ ಅವಕಾಶ ದೊರೆಯುತ್ತದೆ. ಈ ಕಾರ್ಯದಲ್ಲಿ ಅವರೆಲ್ಲರೂ ಮನಮುಟ್ಟಿ ಸಹಕರಿಸುತ್ತಿರುವುದು ಶ್ಲಾಘನೀಯ.

ಈ ಮಾಲೆಯಲ್ಲಿ ಈಗಾಗಲೇ ೪೬೬ ಪುಸ್ತಿಕೆಗಳು ಪ್ರಕಟವಾಗಿವೆ. ಅವು ಅಚ್ಚಾಗಿ ಹೊರ ಓದುತ್ತಾರೆ. ಅನೇಕ ಪುಸ್ತಿಕೆಗಳು ನಾಲ್ಕುಐದು ಮುದ್ರಣಗಳನ್ನು ಕಂಡಿರುವದು ಈ ಮಾಲೆಯ ಉಪಯುಕ್ತತೆಯನ್ನೂ, ಜನಪ್ರಿಯತೆಯನ್ನೂ ವ್ಯಕ್ತಗೊಳಿಸುತ್ತದೆ. ಇದು ನಾಡಿನ ಪ್ರಗತಿಯ ಚಿಹ್ನೆಯೆಂದು ಭಾವಿಸುತ್ತೇನೆ.

ವಿಶ್ವವಿದ್ಯಾಲಯದ ಈ ಸೇವೆಯ ಸಂಪೂರ್ಣ ಪ್ರಯೋಜನ ಪಡೆದು ಸಾಮಾನ್ಯ ಜನತೆ ಸರ್ವತೋಮುಖ ಪ್ರಗತಿಯಲ್ಲಿ ಪಾಲುಗೊಳ್ಳಲೆಂದು ಹಾರೈಸುತ್ತೇನೆ.

ಡಾ. .ಎಮ್. ಪಠಾನ
ಕುಲಪತಿಗಳು
ಕರ್ನಾಟಕ ವಿಶ್ವವಿದ್ಯಾಲಯ
ಧಾರವಾಡ