ಗುಣಮಟ್ಟದ ಶಿಕ್ಷಣವು ನಮ್ಮ ಶಾಲಾ ಶಿಕ್ಷಣದ ಗುರಿಯಾಗಿದೆ. ಕೇವಲ ತರಗತಿಯ ನಾಲ್ಕು ಗೋಡೆಗಳ ಮಧ್ಯೆ ನೀಡಲಾಗುವ ಶಿಕ್ಷಣವು ವಿದ್ಯಾರ್ಥಿಗಳ ವ್ಯಕ್ತಿತ್ವದಲ್ಲಿ ಅಪೇಕ್ಷಿತ ಬದಲಾವಣೆ ತರಲು ಸಾಧ್ಯವಿಲ್ಲವೆಂಬುದನ್ನು ನಮ್ಮ ಇಲಾಖೆಯು ಮನಗಂಡಿದೆ.

ಈ ಹಿನ್ನೆಲೆಯಲ್ಲಿ ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಲ್ಲಿ ಕಳೆದ ವರ್ಷಗಳವರೆಗೆ ಕೆ.ಜಿ.ಬಿ.ವಿ. ಶಾಲೆಗಳನ್ನು ಒಳಗೊಂಡಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಪ್ರತಿಭಾನ್ವಿತ ಮಕ್ಕಳಿಗಾಗಿ ವಿಭಾಗವಾಗಿ ರಾಜ್ಯಮಟ್ಟದಲ್ಲಿ ಪ್ರವಾಸವನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಶೈಕ್ಷಣಿಕ ವಿಷಯ ಮಕ್ಕಳಿಗಾಗಿ ಜಿಲ್ಲಾ ಮಟ್ಟದಲ್ಲಿ ಪ್ರವಾಸ ಕೈಗೊಳ್ಳಲಾಗುತ್ತಿದೆ.

ತಾವು ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುವುದರ ಮೂಲಕ ಸ್ಥಳೀಯ ಐತಿಹಾಸಿಕ, ಸಾಂಸ್ಕೃತಿಕ, ಭೌಗೋಳಿಕ, ವೈಜ್ಞಾನಿಕ ವಿಚಾರಗಳನ್ನು ತಿಳಿಯುವುದರೊಂದಿಗೆ ಜಿಲ್ಲೆಯಲ್ಲಿ ಲಭ್ಯವಿರುವ ಉದ್ಯಾನವನ, ಮ್ಯೂಸಿಯಂ ಮುಂತಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಜ್ಞಾನಾರ್ಜನೆಯನ್ನು ಮಾಡಿಕೊಳ್ಳುವುದರ ಜೊತೆಗೆ ತಮ್ಮ ಭವಿಷ್ಯದ ಬಗ್ಗೆ ಕನಸುಗಳನ್ನು ಮತ್ತು ಧನಾತ್ಮಕ ಮನೋಭಾವನೆಯನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಸಕ್ತಿ, ಸಂತಸ ಹಾಗೂ ಉತ್ಸಾಹದಿಂದ ಪಾಲ್ಗೊಂಡು ಈ ಪ್ರವಾಸದಿಂದ ಲಾಭವನ್ನು ಹೊಂದಿ ಕಾರ್ಯಕ್ರಮವನ್ನು ಸಂಪೂರ್ಣ ಯಶಸ್ವಿಗೊಳಿಸಲೆಂದು ಹಾರೈಸುತ್ತೇವೆ.

ಉಪನಿರ್ದೇಶಕರು (ಅಭಿವೃದ್ಧಿ)
ಜಿಲ್ಲಾ ಶಿಕ್ಷಣ ಮತ್ತು  ತರಬೇತಿ ಸಂಸ್ಥೆ, ಹಾವೇರಿ

ಉಪನಿರ್ದೇಶಕರು
ಸಾರ್ವಜನಿಕ ಶಿಕ್ಷಣ ಮತ್ತು  ಇಲಾಖೆ, ಹಾವೇರಿ

ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳು
ಜಿಲ್ಲಾ ಪಂಚಾಯತ್,  ಹಾವೇರಿ