ದೊಡ್ಡವರೆಲ್ಲರ ಹೃದಯದಿ ಕಟ್ಟಿಹ

ತೊಟ್ಟಿಲ ಲೋಕದಲಿ
ನಿತ್ಯ ಕಿಶೋರತೆ ನಿದ್ರಿಸುತಿರುವುದು

ವಿಸ್ಕ್ರತನಾಕದಲಿ:
ಮಕ್ಕಳ ಸಂಗದೊಳೆಚ್ಚರಗೊಳ್ಳಲಿ
ಆನಂದದ ಆ ದಿವ್ಯಶಿಶು;
ಹಾಡಲಿ; ಕುಣಿಯಲಿ; ಹಾರಲಿ; ಏರಲಿ
ದಿವಿಜತ್ವಕೆ ಈ ಮನುಜ ಪಶು !