ಮೋಹದ ಹೆಂಡತಿ ತೀರಿದ ಬಳಿಕ
ಮಾವನ ಮನೆಯ ಹಂಗಿನ್ಯಾಕೋ
ಸಾವು ನೋವಿಗೆ ಸಾರದ ಬೀಗನ
ಮಾತಿನ ಹಂಗೊಂದೆನಗ್ಯಾಕೋ?

ಖಂಡವನದಿ ಸೋಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವುದು ಭಯವ್ಯಾಕೋ?
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವುದ್ಯಾಕೋ?

ತಂದೆ ಗೋವಿಂದ ಗುರುವಿನ ಸೇವಕ
ಕುಂದಗೋಳಕೆ ಬಂದು ನಿಂತನ್ಯಾಕೋ ?
ಬಂಧುರ ಶಿಶುನಾಳಾಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನವು ಸಾಕೋ.