ಐದು ವರ್ಷಗಳ ಬಳಿಕ ‘ಸರಳ ಶಬ್ದಮಣಿದರ್ಪಣ’ದ ದ್ವಿತೀಯ ಆವೃತ್ತಿ ಬೆಳಕಿಗೆ ಬಂದಿತು. ಸಹಜವಾಗಿ ನನಗೆ ತುಂಬ ಸಂತೋಷವಾಗಿದೆ. ಆ ಪುಸ್ತಕವನ್ನು ಓದಿದ ಅನೇಕ ವಿದ್ಯಾರ್ಥಿಗಳು ಮತ್ತು ವಿದ್ವಾಂಸರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಇನ್ನೊಂದು ಮುದ್ರಣದ ಅಗತ್ಯವಿಲ್ಲವೆಂದು ಭಾವಿಸಿದ್ದ ನಾನು, ಅದಕ್ಕೆ ಒಪ್ಪಿಗೆ ಕೊಟ್ಟಿದ್ದಕ್ಕೆ ಕಾರಣ ಅವರ ಪ್ರೋತ್ಸಾಹವೇ ಆಗಿದೆ. ಪ್ರಥಮ ಆವೃತ್ತಿಯಲ್ಲಿ ಉಳಿದುಕೊಂಡಿದ್ದ ಕೆಲವು ದೋಷಗಳನ್ನು ಸರಿಪಡಿಸಲಾಗಿದೆ. ಈ ಆವೃತ್ತಿಯನ್ನು ಪ್ರಕಟಿಸಲು ಒಪ್ಪಿಗೆಯಿತ್ತು, ಪ್ರೋಕುಲಪತಿಗಳಾದ ಡಾ. ಎ. ಮುರಿಗೆಪ್ಪ ಅವರಿಗೆ, ಕುಲಸಚಿವರಾದ ಡಾ. ಮಂಜುನಾಥ ಬೇವಿನಕಟ್ಟಿ ಅವರಿಗೆ ನನ್ನ ಅನಂತ ಕೃತಜ್ಞತೆಗಳು. ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್ ಅವರನ್ನು ಸಂತೋಷದಿಂದ ಸ್ಮರಿಸುತ್ತೇನೆ. ಪುಸ್ತಕವಿನ್ಯಾಸದಲ್ಲಿ ನೆರವು ನೀಡಿದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ, ಹೊದಿಕೆ ಚಿತ್ರ ರಚಿಸಿದ ಶ್ರೀ ಕೆ.ಕೆ. ಮಕಾಳಿ ಅವರಿಗೆ, ಕರಡು ಅಳವಡಿಸಿ ಪುಟವಿನ್ಯಾಸ ಮಾಡಿದ ವಿದ್ಯಾರಣ್ಯ ಗಣಕ ಕೇಂದ್ರದ ಶ್ರೀ ಜೆ. ಶಿವಕುಮಾರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಡಾ. ಎಸ್.ಎಸ್. ಅಂಗಡಿ