ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ
ಸುಟ್ಟರೆ ನೊಸಲ ವಿಭೂತಿಯಾದೆ
ತಟ್ಟದೇ ಹಾಕಿದರೆ ಒಳ್ಳೆ ಗೊಬ್ಬರವಾದೆ
ನೀನಾರಿಗಾದೆಯೋ
ಹಾಲಾದೆ ಕರೆದರೆ, ಮೊಸರಾದೆ ಹೆತ್ತರೆ
ಮೇಲ್ಗೆನೆಯ ಕಡೆದರೆ ಬೆಣ್ಣೆಯಾದೆ
ಮೇಲಾದ ತುಪ್ಪವು ನಾನಾದೆ ಕಾಸಿದರೆ
ನೀನಾರಿಗಾದೆಯೋ
ಹಾದಿಬೀದಿಯಲಿರುವ ಕಸದ ಹುಲ್ಲನುಮೇದು
ಬಂದು ಮನೆಗೆ ನಾನು ಅಮೃತವೀವೆ
ಅದನುಂಡು ನನಗೆರಡ ಬಗೆವ ಮಾನವ ನೀನು
ನೀನಾರಿಗಾದೆಯೋ
ಉಳುವೆ ನಾ ಭೂಮಿಯನು ಹೊರುವೆ ನಾ ಹೇರನ್ನು
ತುಳಿದು ಕಡ್ಡಿಯ ಕಾಳ ವಿಂಗಡಿಸುವೆ!
ಕಳಪೆಯಾಗಿಹ ನೆಲವ ನಗುವ ತೋಪನು ಮಾಳ್ಪೆ!
ನೀನಾರಿಗಾದೆಯೋ ಎಲೆ ಮಾನವಾ
ಹರಿ ಹರಿ, ಗೋವು ನಾನು.
– ಎಸ್.ಜಿ.ನರಸಿಂಹಾಚಾರ್
Leave A Comment