ಕೃಷಿ ವಿಶ್ವವಿದ್ಯಾನಿಲಯದಲ್ಲಿ ೧೯೭೦ ರಲ್ಲಿ ಪ್ರಾರಂಭವಾಗಿರುವ ಕನ್ನಡ ಅಧ್ಯಯನ ವಿಭಾಗ, ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಪ್ರಕಟಣೆಯ ಹೊಣೆಗಾರಿಕೆಯನ್ನು ಹೊತ್ತಿದ್ದು, ಈಗಾಗಲೇ ೨೪೦ ಕ್ಕೂ ಮಿಗಿಲಾಗಿ ಕೃಷಿ ವಿಜ್ಞಾನದ ವಿವಿಧ ವಿಷಯಗಳಲ್ಲಿ ಪಠ್ಯ ಹಾಗೂ ಪರಾಮರ್ಶನ ಗ್ರಂಥಗಳನ್ನು ಪ್ರಕಟಿಸಿದೆ. ಶಿಕ್ಷಣ ಮಾಧ್ಯಮ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಬೇಕೆಂಬ ೧೯೬೪ರ ಸಂಸತ್ತಿನ  ತೀರ್ಮಾನದಂತೆ, ಕನ್ನಡವನ್ನು ಕೃಷಿ ಮಾಧ್ಯಮವಾಗುವಂತೆ ಮಾಡುವ ಪ್ರಥಮ ಹೆಜ್ಜೆಯಾಗಿ ಕೃಷಿ ವಿಜ್ಞಾನದ ವಿವಿಧ ವಿಷಯಗಳಲ್ಲಿ ಕನ್ನಡ ಪುಸ್ತಕಗಳ ಪ್ರಕಟಣಾ ಕಾರ್ಯ ನಡೆದಿದೆ. ಪಠ್ಯ ವಿಷಯವಾಗಿ ಅಲ್ಲದೆ ಈ ಪುಸ್ತಕಗಳು ಕೃಷಿ ವಿಜ್ಞಾನದ ವಿವಿಧ ವಿಷಯಗಳಲ್ಲಿ ಕನ್ನಡ ಪುಸ್ತಕಗಳ ಪ್ರಕಟಣಾ ಕಾರ್ಯ ನಡೆದಿದೆ. ಪಠ್ಯ ವಿಷಯವಾಗಿ ಅಲ್ಲದೆ ಈ ಪುಸ್ತಕಗಳು ಕೃಷಿ ವಿಜ್ಞಾನ ಪ್ರಸರಣೆಯ ಮಾಧ್ಯಮವೂ ಆಗಿವೆ. ವಿದ್ಯಾರ್ಥಿಗಳಿಗೆ, ರೈತರಿಗೆ, ಬೋಧಕರಿಗೆ ಹಾಗೂ ವಿಜ್ಞಾನಿಗಳಿಗೂ ಇವು ಅರಿವಿನ ಕೈಪಿಡಿಗಳು.

ಪಠ್ಯಪುಸ್ತಕ ಪ್ರಕಟಣಾ ಕಾರ್ಯದ ಜೊತೆಯಲ್ಲಿಯೇ ಕನ್ನಡದಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ, ಲೇಕಕರಿಗೆ ಹಾಗೂ ಬೋಧಕರಿಗೆ ಅನುವಾಗಲೆಂದು ಸಂಶೋಧನಾ ಕಾರ್ಯಕ್ರಮದ ಅಂಗವಾಗಿ ಕೃಷಿ ವಿಜ್ಞಾನದ ವಿವಿಧ ವಿಷಯಗಳಲ್ಲಿ ಪಾರಬಾಷಿಕ ಶಬ್ದಕೋಶಗಳನ್ನು ಪ್ರಕಟಿಸಲಾಗಿದೆ. ಅಲ್ಲದೆ, ಕೃಷಿ ವಿಜ್ಞಾನ ಲೇಖಕರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತಿವರ್ಷ ಆಯ್ದ ವಿಷಯಗಳಲ್ಲಿ ಪುಸ್ತಕ ರಚನಾ ಸ್ಪರ್ಧೆಯನ್ನು ನಡೆಸಿ ಅತ್ಯುತ್ತಮ ಪುಸ್ತಕಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಲಾಗುತ್ತಿದೆ.

ಆದರೂ ಹೆಚ್ಚು ಹೆಚ್ಚು ಶಿಕ್ಷಕರು, ವಿಜ್ಞಾನಿಗಳು ಹಾಗೂ ಲೇಕಕರು ತಮ್ಮ ತಜ್ಞತೆಯ ವಿಷಯದಲ್ಲಿ ಕನ್ನಡ ಕೃತಿಗಳನ್ನು ರಚಿಸಿ, ಕೃಷಿ ವಿಜ್ಞಾನದ ಆಧುನಿಕ ಆವಿಷ್ಕಾರ, ತಂತ್ರಜ್ಞಾನ ಹಾಗೂ ಆಲೋಚನೆಗಳನ್ನು ಕನ್ನಡ ನಾಡಿನ ಪ್ರತಿ ಮೂಲೆಗೂ ತಲುಪಿಸಲು ಸಹಕರಿಸಬೇಕಾಗಿದೆ. ಕರ್ನಾಟಕದಲ್ಲಿ ಕೃಷಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಪ್ರತಿಯೊಬ್ಬರೂ ರೈತನ ಆಡುಭಾಷೆಯಾದ ಕನ್ನಡದಲ್ಲೇ ವ್ಯವಹರಿಸಬೇಕಾಗುತ್ತದೆ. ಈ ದೃಷ್ಟಿಯಿಂದ ನಮ್ಮ  ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಕಟಣೆಗಳಿಗೆ ಮಹತ್ತರ ಜವಾಬ್ದಾರಿಯಿದೆ.

ಪ್ರಸ್ತುತ ಪ್ರಕಟವಾಗುತ್ತಿರುವ ಹಣ್ಣು ಮತ್ತು ತರಕಾರಿಗಳ ಸಂರಕ್ಷಣೆ ಪುಸ್ತಕ ಎಲ್ಲ ವಿದ್ಯಾರ್ಥಿಗಳು, ಬೋಧಕರು, ರೈತರು, ವಿಜ್ಞಾನಿಗಳು ಹಾಗೂ ವಿಸ್ತರಣ ಕಾರ್ಯಕರ್ತರಿಗೆ ಉಪಯುಕ್ತವಾಗುವುದೆಂದು ಆಶಿಸಲಾಗಿದೆ.

ಡಾ. .ಎಂ. ಕೃಷ್ಣಪ್ಪ
ಕುಲಪತಿಗಳು
ಕೃಷಿ ವಿಶ್ವವಿದ್ಯಾನಿಲಯ
ಗಾಂಧಿ ಕೃಷಿ ವಿಜ್ಞಾನ ಕೇಂದ್ರ
ಬೆಂಗಳೂರು – ೫೬೦೦೬೫