Categories
ರಾಜ್ಯೋತ್ಸವ 2003 ರಾಜ್ಯೋತ್ಸವ ಪ್ರಶಸ್ತಿ ವಿಜ್ಞಾನ

ಶ್ರೀ ಐ.ವಿ. ಜಗದೀಶ್

ಮಾಹಿತಿ ತಂತ್ರಜ್ಞಾನ ಉದ್ಯಮಿ ಮತ್ತು ಬ್ಲೂಚಿಪ್ ತಂತ್ರಜ್ಞಾನ ಉದ್ದಿಮೆಯಲ್ಲಿ ದೂರದರ್ಶಿತ್ವವುಳ್ಳ ತಂತ್ರಜ್ಞರು ಶ್ರೀ ಬಿ.ವಿ. ಜಗದೀಶ್ ಅವರು.
ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಎಲೆಕ್ನಿಕಲ್ ಇಂಜಿನಿಯರಿಂಗ್ ಪದವಿ, ಮುಂಬಯಿ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ತಂತ್ರಜ್ಞರು ನೆಟ್‌ಲರ್‌ನ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಂಸ್ಥೆಗೆ ಉತ್ತಮ ದರ್ಜೆಯ ಪ್ರತಿಭಾನ್ವಿತ ಇಂಜಿನಿಯರ್‌ಗಳನ್ನು ಸೇರಿಸಿಕೊಳ್ಳುವ ಮೂಲಕ ಕಂಪೆನಿಯು ಪ್ರಗತಿಪಥದಲ್ಲಿ ನಡೆಯಲು ಅನುಭವಿ ಮಾರ್ಗದರ್ಶನ ನೀಡಿದ್ದಾರೆ. ಇಂದು ಸ್ಪರ್ಧಾತ್ಮಕವಾಗಿರುವ ಬ್ಲೂಚಿಪ್ ಸೆಂಟರ್‌ನಲ್ಲಿ ಬಂಡವಾಳ ಹೂಡಿಕೆಗಾಗಿ ಬಂಡವಾಳದಾರರನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶ್ರೀಯುತರು ನೆಟ್‌ಸ್ಕಲರ್‌ಗೆ ಮೊದಲು ಎಡಸ್ ಕಮ್ಯುನಿಕೇಷನ್ಸ್‌ನ ಸಹಸ್ಥಾಪಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರು ಅಂತರ್‌ಜಾಲ ಮಾರುಕಟ್ಟೆಯಲ್ಲಿ ಕಂಪನಿ ಬೆಳೆಯಲು ಸಹಕಾರ ನೀಡಿದ್ದಾರೆ. ಎನ್ನೊಡನ್‌ಗೆ ಮೊದಲು ಫೌರೆಸ್ ಎಂಬ ಸಾಫ್ಟ್‌ವೇರ್ ಸಲಹಾ ಕಂಪನಿಯ ಸಹಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ನಾವೆಲ್ ಮತ್ತು ತ್ರಿಕಾಮ್ ಕಾರ್ಪೊರೇಷನ್ ಅಲ್ಲದೆ ವ್ಯವಸ್ಥಾಪನೆ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವಾರು ಮಾಹಿತಿ ತಂತ್ರಜ್ಞಾನ ಮತ್ತು ವಾಣಿಜ್ಯ ಸಮ್ಮೇಳನಗಳಲ್ಲಿ ಪ್ರಬಂಧ ಮಂಡಿಸಿರುವ ಶ್ರೀ ಜಗದೀಶ ಅವರು ಭಾರತ ಮತ್ತು ಅಮೆರಿಕ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿರುವ ಮಾನವತಾವಾದಿ.
ತಂತ್ರಜ್ಞಾನ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿರುವ ಪ್ರತಿಭಾವಂತ ಮಾಹಿತಿ ತಂತ್ರಜ್ಞಾನ ತಜ್ಞ ಶ್ರೀ ಬಿ.ವಿ. ಜಗದೀಶ್ ಅವರು.