Categories
ಲೇಖನಗಳು ಸರೋಜಾ ಪ್ರಕಾಶ

ಕ್ಷುದ್ರಗ್ರಹಗಳ ಅಧ್ಯಯನ

‘ನಾವಿಂದು ವೆಸ್ತಾದ ಕಕ್ಷೆಯನ್ನು ಸೇರಲಿದ್ದೇವೆ!!’ ಸೆಕ್ಯುರಿಟಿ ಚೆಕ್ ಮಾಡಲು ಬಂದವನಿಗೆ ಮುಖದ ತುಂಬಾ ನಗು ತುಂಬಿದ ಇಂಜಿನಿಯರ್ ಮಾರ್ಕ್ ರೇಮಂಡ್ ಹೇಳಿದ. ಆ ನಗು ಸಾಂಕ್ರಾಮಿಕವಾಗಿ ಬಿಗುಮುಖದ ಗಾರ್ಡ್‌ನನ್ನೂ ಆವರಿಸಿಕೊಂಡುಬಿಟ್ಟಿತು. ಆತನಿಗೆಷ್ಟು ಅರ್ಥವಾಯಿತೋ ಬಿಟ್ಟಿತೋ, ‘ಹೌದೇ ಸರ್?’ ಎಂದು ಆತನೂ ಸಂಭ್ರಮಿಸುತ್ತ ತಪಾಸಣೆ ನಡೆಸತೊಡಗಿದ.

ಅಂದು ಜುಲೈ ೧೬, ೨೦೧೧. ಮುಂಜಾನೆಯೇ ತಂತ್ರಜ್ಞರು ನಾಸಾದ ಜೆಟ್ ಪ್ರೊಪಲ್ಶನ್ ಲ್ಯಾಬೊರೇಟರಿಯ ಕಚೇರಿಯೊಳಗೆ ನುಗ್ಗುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಹಾರಿಬಿಟ್ಟ ‘ಡಾನ್’ ಅಂದು ತನ್ನ ಗುರಿಯನ್ನು ತಲುಪಲಿದೆ.

Categories
ಲೇಖನಗಳು ಸರೋಜಾ ಪ್ರಕಾಶ

ಬಾನಕಸ (ಸ್ಪೇಸ್ ಜಂಕ್)

ಬಾನಕಸ ಅಥವಾ ಸ್ಪೇಸ್ ಜಂಕ್ ಎಂದರೆ ಭೂಮಿಯ ಸುತ್ತಲೂ ತಿರುಗುತ್ತಿರುವ ವಿವಿಧ ಆಕಾರ, ಗಾತ್ರಗಳ ಅಸಂಖ್ಯಾತ ಕಸ ಮತ್ತು ಲೋಹದ ಚೂರುಗಳು. ಬೇರೆ ಬೇರೆ ಎತ್ತರಗಳಲ್ಲಿ, ಬೇರೆ ಬೇರೆ ವೇಗಗಳಲ್ಲಿ ತಿರುಗುತ್ತಿರುವ ಇವುಗಳಲ್ಲಿ ಹೆಚ್ಚಿನವು ಮಾನವ ನಿರ್ಮಿತ ಉಪಗ್ರಹಗಳ ಭಗ್ನಾವಶೇಷಗಳು. ಮೊದಮೊದಲು ಅಗಾಧವಾದ ಭೂಸುತ್ತಲ ಅವಕಾಶದಲ್ಲಿ ಈ ಚಿಕ್ಕ, ಪುಟ್ಟ ಕಸಗಳು ಏನೂ ಮಾಡಲಾರವು ಎಂಬ ಭಾವನೆ ಇತ್ತು. ಆದರೆ ಯಾವುದೇ ಗುರಿಯಿಲ್ಲದೆ ಬಾಹ್ಯಾಕಾಶದಲ್ಲಿ ಗಿರಕಿ ಹೊಡೆಯುತ್ತಿರುವ ಬಾನಕಸ ಭೂಮಿಯಿಂದ ಉಡಾವಣೆಯಾಗುತ್ತಿರುವ ಈಗಿನ ಕೃತಕ ಉಪಗ್ರಹಗಳಿಗೆ ಅಪಾಯಕಾರಿ ಎಂಬುದು ಸಾಬೀತಾಗಿದೆ. ಬಾಹ್ಯಾಕಾಶ ಸಂಶೋಧನೆ, ಭೂ ಮತ್ತು ಹವಾಮಾನ ಅಧ್ಯಯನ, ದೂರಸಂಪರ್ಕ ಇತ್ಯಾದಿ ಹಲವಾರು ಕ್ಷೇತ್ರಗಳ ಪ್ರಗತಿಯಿಂದಾಗಿ ದಿನದಿಂದ ದಿನಕ್ಕೆ ಉಪಗ್ರಹಗಳ  ಹಾರಾಟ ಹೆಚ್ಚುತ್ತಿದೆ, ಮಾನವಸಹಿತ ಮತ್ತು ಮಾನವರಹಿತ ಬಾನನೌಕೆಗಳು ಬಾಹ್ಯ ಜಗತ್ತಿನ ಶೋಧಕ್ಕೆ ಮುನ್ನುಗ್ಗುತ್ತಿವೆ, ಹಾಗೆಯೇ ಹಳೆಯ, ಆಯಸ್ಸು ಮುಗಿದ ಉಪಗ್ರಹಗಳನ್ನು ಕೈಬಿಡುವುದು ಕೂಡ ಅನಿವಾರ್ಯವಾಗಿದೆ. ಅವು ಭೂಸಂಪರ್ಕ ಕಳೆದುಕೊಂಡರೂ, ಅವುಗಳ ಬಿಡಿಭಾಗಗಳು ಕಳಚಿ ಚೂರಾಗಿ, ಅತಿನೇರಳೆ ಕಿರಣಗಳಿಗೆ ಸತತ ಸಿಕ್ಕು ಸವೆದರೂ ಲಕ್ಷಗಟ್ಟಲೆ ವರ್ಷಗಳವರೆಗೆ ಭೂಮಿಯ ಸುತ್ತ ತಮ್ಮ ಕಕ್ಷೆಯಲ್ಲಿ ಸುತುತ್ತಲೇ ಇರುತ್ತವೆ.

Categories
ಲೇಖನಗಳು ಸರೋಜಾ ಪ್ರಕಾಶ

ಬಾನಲ್ಲಿನ ಇನ್ನೊಂದು ಚಂದ್ರ

ಈಗಿರುವ ನಮ್ಮ ಚಂದ್ರನ ಹೊರತಾಗಿ ಇನ್ನೊಂದು ಚಂದ್ರನೂ ಭೂಮಿಯನ್ನು ಸುತ್ತುತ್ತಿರುವನೆಂದರೆ ನಿಮಗೆ ಆಶ್ಚರ್ಯವಾದೀತು! ಆದರಿದು ನಿಜ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಈ ಕೃತಕ ಚಂದ್ರನನ್ನು ಆಕಾಶಕ್ಕೆ ಹಾರಿಬಿಟ್ಟಿದೆ . ಕಳೆದ ವರ್ಷದ ಜುಲೈ ತಿಂಗಳಲ್ಲಿ ಈ ಚಂದ್ರ ಒಂದು ದಶಕದ ಸಾರ್ಥಕ ಸೇವೆಯನ್ನು ಪೂರೈಸಿತೆಂದು ಸಂತೋಷದ ಆಚರಣೆಯೂ ನಾಸಾದಲ್ಲಿ ನಡೆಯಿತು. (ದಾಖಲೆಗಳ ಪ್ರಕಾರ ಗೆಲಿಲಿಯೋ ಎಂಬ ವಿಜ್ಞಾನಿ ೧೬೦೯ರಲ್ಲಿ ಮೊಟ್ಟಮೊದಲಬಾರಿ ದೂರದರ್ಶಕದ ಮೂಲಕ ಬಾಹ್ಯ ಆಕಾಶವನ್ನು ವೀಕ್ಷಿಸಿದ್ದ. ಆದ್ದರಿಂದ ೨೦೦೯ ‘ಅಂತಾರಾಷ್ಟ್ರೀಯ ಬಾಹ್ಯಾಕಾಶ ಆಚರಣಾ ವರ್ಷ’ ಎಂದು ಆಚರಿಸಲಾಯಿತು. ಭೂಮಿಯ ಮೇಲ್ಮೈನಿಂದ ನೂರು ಕಿಮೀ ಆಚೆಯ ಆಕಾಶವನ್ನು ಬಾಹ್ಯ ಆಕಾಶ ಎಂದು ಗುರುತಿಸಲಾಗುತ್ತಿದೆ. ಹಾಗಾಗಿ ಬಾಹ್ಯ ಆಕಾಶದ ವೈಚಿತ್ರ್ಯಗಳ ಬಗ್ಗೆ ಹೆಚ್ಚೆಚ್ಚು ಜನರಲ್ಲಿ ಅರಿವು ಮೂಡಿಸುವುದೇ ಈ ಆಚರಣೆಯ ಗುರಿ.)