ಎಂ.ಎಸ್.ಉಮೇಶ್

Home/Birthday/ಎಂ.ಎಸ್.ಉಮೇಶ್
Loading Events
This event has passed.

೨೨.೦೪.೧೯೪೫ ಹಾಸ್ಯನಟರಾಗಿ ಪ್ರಖ್ಯಾತರಾಗಿರುವ ಉಮೇಶ್‌ರವರು ಹುಟ್ಟಿದ್ದು ಮೈಸೂರಿನಲ್ಲಿ. ತಂದೆ ಎ.ಎಲ್. ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಬೆಳೆದ ಒಲವು. ಬಾಲ ಪಾತ್ರಗಳಲ್ಲಿ ತನ್ಮಯತೆಯ ಅಭಿನಯ. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅಭಿನಯಿಸಲು ಪ್ರಚೋದನೆ. ಕೆ.  ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರಧಾರಿಯಾಗಿ ರಂಗಪ್ರವೇಶ. ಇದ್ದು ಬುದ್ಧಿ ಬಂದ ನಂತರದ ಮೊದಲ ಅನುಭವ. ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರ. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ದೊರೆತ ಬಾಲನಟನ ಪಾತ್ರಗಳು. ದಶಾವತಾರ ನಾಟಕದಲ್ಲಿ ಪ್ರಹ್ಲಾದನ ಪಾತ್ರವನ್ನು ಮೆಚ್ಚಿದ ಮಾಸ್ತಿಯವರಿಂದ ಪಡೆದ ಹತ್ತು ರೂಪಾಯಿ ಬಹುಮಾನ. ಗುಬ್ಬಿ ವೀರಣ್ಣನವರು ಬಾಲಕರಿಗೆ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಪ್ರೈ.ಲಿ. ಕಂಪನಿಯಲ್ಲೂ ಬಾಲನಟ ಪಾತ್ರಗಳು. ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತ. ಮಾಸ್ಟರ್‌ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಗಳಿಸಿದ ಖ್ಯಾತಿ. ೧೯೫೯ ರಲ್ಲಿ ಅಭಿನಯಿಸಿದ್ದ ಚಂದ್ರಹಾಸನ ಪಾತ್ರ ಮೆಚ್ಚಿ, ಬಿ,ಆರ್‌.ಪಂತುಲು ರವರ ಮಕ್ಕಳ ರಾಜ್ಯ ಚಲನ ಚಿತ್ರಕ್ಕಾಗಿ ನಾಯಕ ನಟನಾಗಿ ಪುಟ್ಟಣ್ಣ ಕಣಗಾಲರಿಂದ ಆಯ್ಕೆ. ನಾಟಕಕಾರ ಎಚ್.ಕೆ. ಯೋಗಣ್ಣವರ ಉದಯ ಕಲಾ ನಾಟಕ ಮಂಡಲಿಯಲ್ಲಿ ಕೆಲ ಕಾಲ ನಟನಾ ವೃತ್ತಿ. ೧೯೭೪ ರಲ್ಲಿ ಪುಟ್ಟಣ್ಣ ಕಣಗಾಲರ ಕಥಾ ಸಂಗಮ ಚಲನ ಚಿತ್ರದ ತಿಮ್ಮರಾಯಿ ಪಾತ್ರಕ್ಕಾಗಿ ಆಯ್ಕೆ. ನಂತರ ಬೆಳೆದ ಚಿತ್ರರಂಗದ ನಂಟು. ಸುಮಾರು ೩೦೦ ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯ. ತಿಮ್ಮರಾಯಿ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, ೧೯೯೪ ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, ೧೯೯೭ ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ಬಣ್ಣದ ಘಂಟೆಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ, ಹಲವಾರು ಪತ್ರಿಕೆಗಳ ಅಂಕಣ ಬರಹಗಾರರು. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು ನಮ್ಮೂರಲ್ಲೊಂದು ನಾಟಕ, ಸಮಸ್ಯೆಯ ಸರಮಾಲೆ, ರಿಜಿಸ್ಟರ್‌ ಫೋಸ್ಟ್, ಅಂಚು-ಸಂಚು, ಗೌಡತಿ ಗೌರಮ್ಮ, ಸಂಸಾರದಲ್ಲಿ SOMEಕ್ರಾಂತಿ, ಜೋಕ್ಸ್‌ಫಾಲ್ಸ್, ಗಲಿಬಿಲಿ ಸಂಸಾರ ಮುಂತಾದುವು.   ಇದೇದಿನಹುಟ್ಟಿದಕಲಾವಿದರು: ದೇವಪ್ಪಯ್ಯ ಅಪ್ಪಯ್ಯ – ೧೯೨೧ ವಸಂತಲಕ್ಷ್ಮೀ ಬೇಲೂರ್‌ – ೧೯೪೯ ಗಂಗಾಧರ್‌ ಸ್ವಾಮಿ – ೧೯೫೦ ಶಾಂತಲಕ್ಷ್ಮೀ – ೧೯೬೫ ರವೀಂದ್ರ.ಎಲ್- ೧೯೬೭

* * *

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top