Warning: mysqli_query(): MySQL server has gone away in E:\kanaja_new\wp-includes\wp-db.php on line 2056

Warning: mysqli_query(): Error reading result set's header in E:\kanaja_new\wp-includes\wp-db.php on line 2056

ಕಿಕ್ಕೇರಿ ಕೃಷ್ಣಮೂರ್ತಿ – ಕಣಜ

ಕಿಕ್ಕೇರಿ ಕೃಷ್ಣಮೂರ್ತಿ

Home/Birthday/ಕಿಕ್ಕೇರಿ ಕೃಷ್ಣಮೂರ್ತಿ
Loading Events
This event has passed.

೨೧.೦೨.೧೯೬೪ ಜಾನಪದ, ಸುಗಮ ಸಂಗೀತ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಸಂಘಟನೆಗಳ ರೂವಾರಿ, ಗಾಯಕ ಕೃಷ್ಣಮೂರ್ತಿಯವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಕಿಕ್ಕೇರಿ. ತಂದೆ ಬಿ.ಎಸ್. ನಾರಾಯಣ ಭಟ್, ತಾಯಿ ರುಕ್ಮಿಣಮ್ಮ. ಓದಿದ್ದು ವಾಣಿಜ್ಯ ಡಿಪ್ಲೊಮ. ಬಿ.ಕಾಂ. ಪದವಿಯ ಜೊತೆಗೆ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಪದವಿ. ಶಾಲಾ ಕಾಲೇಜು ದಿನಗಳಿಂದಲೂ ಹಾಡಿನ ಬಗ್ಗೆ ಮೂಡಿದ ವಿಶೇಷ ಒಲವು, ಹಲವಾರು ವರ್ಷ ಜಾನಪದ ತಜ್ಞ ಎಸ್.ಕೆ. ಕರೀಂ ಖಾನರ ಸಹವರ್ತಿ. ಕರೀಂಖಾನರ ಸಾಹಿತ್ಯಕ್ಕೆ ಸಂಗೀತ ನೀಡಿ ಮೊಟ್ಟಮೊದಲ ಧ್ವನಿಸುರಳಿಯನ್ನು ಹೊರತಂದ ಹೆಗ್ಗಳಿಕೆ. ಆಕಾಶವಾಣಿ, ದೂರದರ್ಶನದಲ್ಲಿ ಮನ್ನಣೆ ಪಡೆದ ಗಾಯಕರಾಗಿ ನಡೆಸಿಕೊಟ್ಟ ಕಾರ್ಯಕ್ರಮಗಳು ಹಲವಾರು. ದಸರಾ ಸಾಂಸ್ಕೃತಿಕ ಉತ್ಸವ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಹಂಪಿ ಉತ್ಸವ, ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಮುಂತಾದ ಉತ್ಸವಗಳಲ್ಲಿ ನಡೆಸಿಕೊಟ್ಟ ಪ್ರಮುಖ ಕಾರ್ಯಕ್ರಮಗಳು. ರಂಗಭೂಮಿ ನಟರಾಗಿ, ನಿರ್ದೇಶಕರಾಗಿ, ಗಾಯಕರಾಗಿಯೂ ಸಲ್ಲಿಸಿದ ಸೇವೆ. ಮೈಲಿಗಲ್ಲುಗಳು, ವೇದ ಸುಳ್ಳಾದರೂ ಗಾದೆ ಸುಳ್ಳಾಗದು, ಸಂಬಂಧಮಾಲೆ, ಗಲಿಬಿಲಿ ಕಲ್ಲೇಶಿ ಮುಂತಾದ ಧಾರಾವಾಹಿಗಳ ನಟ, ಎಲ್ಲರೂ ನಮ್ಮವ್ರೇ, ಸಮಕ್ಷಮ, ಅಂತರ ನಿರಂತರ ನಾಟಕಗಳಿಗೆ, ದೂರದರ್ಶನ ಧಾರಾವಾಹಿಗಳಿಗೆ ನೀಡಿದ ಸಂಗೀತ. ಸುಗಮ ಸಂಗೀತದ ಸರ್ವತೋಮುಖ ಬೆಳವಣಿಗೆಗಾಗಿ ಪ್ರಾರಂಭಿಸಿದ್ದು ‘ಆದರ್ಶ ಸುಗಮ ಸಂಗೀತ ಅಕಾಡಮಿ ಟ್ರಸ್ಟ್’. ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ತರಬೇತಿ. ಉಚಿತ ವಾದ್ಯ ಪರಿಕರಗಳ ಕೊಡುಗೆ ಟ್ರಸ್ಟ್‌ನ ಪ್ರಮುಖ ಕಾರ್ಯಗಳಲ್ಲೊಂದು. ವಿದ್ಯಾರ್ಥಿಗಳ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ರೂಪಿಸಿದ ‘ನವಸುಮ-ವನಸುಮ’ ವೇದಿಕೆ. ಸಂದ ಪ್ರಶಸ್ತಿ ಗೌರವಗಳು ಹಲವಾರು. ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ, ಗಾಯನಶ್ರೀ ಪ್ರಶಸ್ತಿ, ಪಿ. ಕಾಳಿಂಗರಾವ್ ಪ್ರಶಸ್ತಿ, ಕರ್ನಾಟಕ ಚೇತನ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಗೌತಮ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಭೂಪಾಲ್‌ನ ಅಖಿಲ ಭಾರತ ಭಾಷಾ ಸಮ್ಮೇಳನದ ರಾಷ್ಟ್ರೀಯ ಸಾಹಿತ್ಯಶ್ರೀ ಪ್ರಶಸ್ತಿ, ಸುಗಮ ಸಂಗೀತ ರತ್ನ, ಗಾನಕಲಾ ರತ್ನ, ಪ್ರಜಾಸೇವಾ ರತ್ನ, ಸುಗಮ ಸಂಗೀತ ಸಂಘಟಕ ಮುಂತಾದ ಬಿರುದು ಗೌರವಗಳು.   ಇದೇ ದಿನ ಹುಟ್ಟಿದ ಕಲಾವಿದರು : ಮಂಜುಮಯ್ಯ ಜೆ. – ೧೯೬೧ ಋತ್ವಿಕ್ ಸಿಂಹ – ೧೯೭೪

* * *

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

ಕೇಂದ್ರ ಸರ್ಕಾರದ ಜಾಲತಾಣಗಳು

ತಾಂತ್ರಿಕ‌ ಜಾಲತಾಣಗಳು

ಕನ್ನಡ ಸಂಬಂಧಿ ಜಾಲತಾಣಗಳು

ಆಯೋಗಗಳು

ನ್ಯಾಯಾಲಯಗಳು

ಡೌನ್‌ಲೋಡ್‌ಗಳು

Go to Top