ಕೆ.ಎಸ್. ನರಸಿಂಹಸ್ವಾಮಿ

Home/Birthday/ಕೆ.ಎಸ್. ನರಸಿಂಹಸ್ವಾಮಿ
Loading Events
This event has passed.

೨೬-೧-೧೯೧೫ ಕಾವ್ಯಪಂಡಿತರಿಗಷ್ಟೇ ಅಲ್ಲ ಪಾಮರರನ್ನೂ ರಂಜಿಸ ಬಲ್ಲದು. ಇದಕ್ಕೆ ನಿದರ್ಶನ ಕೆ.ಎಸ್.ನ. ಸಾಮಾನ್ಯರನ್ನು ತನ್ನತ್ತ ಎಳೆದದ್ದೇ ಇವರ ಪದ್ಯಗಳು. ಯುವ ಪ್ರೇಮಿಗಳಿಗೆ, ದಂಪತಿಗಳಿಗೆ ಹರ್ಷೋತ್ಪತ್ತಿ ಮಾಡಿದ್ದೇ ಮೈಸೂರು ಮಲ್ಲಿಗೆ. ೨೬ ಮುದ್ರಣ (೨೦೦೩) ಇವರ ಪ್ರಖ್ಯಾತಿಗೆ ಸಾಕ್ಷಿ. ಕನ್ನಡ ನಾಡಿಗೇ ಪಸರಿಸಿತು ಮಲ್ಲಿಗೆಯ ಕಂಪು. ಕೆ.ಎಸ್.ನ. ಹುಟ್ಟಿದ್ದು ಮಂಡ್ಯ ಜಿಲ್ಲೆಯ ಕಿಕ್ಕೇರಿ. ತಂದೆ ಸುಬ್ಬರಾಯರು, ತಾಯಿ ನಾಗಮ್ಮ. ಆರಂಭದ ಶಿಕ್ಷಣ ಮೈಸೂರು ಟ್ರೈನಿಂಗ್ ಕಾಲೇಜಿನ ಶಿಕ್ಷಣ ಸಂಸ್ಥೆಯಲ್ಲಿ. ಮಹಾರಾಜ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಜ್ಯೂನಿಯರ್ ಬಿ.ಎ. ತಂದೆಯ ನಿಧನ. ಓದು ಅಪೂರ್ಣ. ೧೯೩೬ರಲ್ಲಿ ತಿಪಟೂರಿನಲ್ಲಿ ವೆಂಕಮ್ಮನೊಂದಿಗೆ ವಿವಾಹ. ಮೈಸೂರಿನಲ್ಲಿ ಸರ್ಕಾರಿ ನೌಕರಿ. ನಂಜನಗೂಡು ಬೆಂಗಳೂರಿನಲ್ಲಿ ಸೇವಾವಧಿ. ೧೯೭೦ರಲ್ಲಿ ನಿವೃತ್ತಿ. ಕೆ.ಎಸ್.ನ. ಪ್ರಧಾನವಾಗಿ ಕವಿ. ಮೌಲಿಕ ಕೃತಿಗಳ ಅನುವಾದವೂ ಸೇರಿವೆ. ಎ.ಆರ್.ಕೃಷ್ಣಶಾಸ್ತ್ರಿ, ಕುವೆಂಪು, ತೀ.ನಂ.ಶ್ರೀ., ವಿ.ಸೀ. ಗೋಪಾಲಕೃಷ್ಣ ಅಡಿಗ ಮೊದಲಾದವರ ನಿಕಟ ಸಂಪರ್ಕ-ಪ್ರಭಾವ. ಮೊದಲ ಕವನ ಸಂಗ್ರಹ ಮೈಸೂರು ಮಲ್ಲಿಗೆ ೧೯೪೨ರಲ್ಲಿ ಪ್ರಕಟ. ಐರಾವತ, ದೀಪದಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ಮನೆಯಿಂದ ಮನೆಗೆ, ತೆರೆದ ಬಾಗಿಲು, ನವಪಲ್ಲವ, ದುಂಡುಮಲ್ಲಿಗೆ, ನವಿಲದನಿ, ಸಂಜೆಹಾಡು, ಕೈಮರದ ಬಾಗಿಲು, ದೀಪ ಸಾಲುಗಳ ನಡುವೆ ಮುಂತಾದ ಕವನ ಸಂಗ್ರಹಗಳು. ಬಣ್ಣದ ಚಿಟ್ಟೆ, ಬೆಟ್ಟದ ಗೌರಿ, ಕಂಬನಿ, ನಿನ್ನ ಹೆಸರು, ಚಿತ್ರವಳ್ಳಿಯ ಚೆಲುವೆಯರು ಮುಂತಾದ ಕವನಗಳ ಅನುವಾದ. ಅಬ್ಬರವಿರದ, ಆಡುಮಾತಿನ, ಲಯಕ್ಕೆ ಹತ್ತಿರದ, ಭಾಷೆಯ ಸೂಕ್ಷ್ಮ ಸಂವೇದನೆಯ ಅಭಿವ್ಯಕ್ತವೇ ಕೆ.ಎಸ್.ನ. ಪದ್ಯದ ಪ್ರಮುಖ ಅಂಶ, ಪಡೆದ ಜನಪ್ರಿಯತೆ. ಅರಸಿ ಬಂದ ಪ್ರಶಸ್ತಿಗಳು ಹಲವಾರು. ದೇವರಾಜ ಬಹದ್ದೂರ್ ಬಹುಮಾನ, ರಾಜ್ಯ ಸಂಸ್ಕೃತಿ ಶಾಖೆ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ, ೧೯೯೦ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಮಾಸ್ತಿ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿಗಳಿಗೆ ಭಾಜನರಾದವರು. ೧೯೭೦ರಲ್ಲಿ ಪ್ರೀತಿಯಿಂದ ಅರ್ಪಿಸಿದ ಗೌರವ ಗ್ರಂಥ ‘ಚಂದನ.’ ನಿಧನರಾದದ್ದು ೨೮.೧೨.೨೦೦೩ರಲ್ಲಿ.   ಇದೇ ದಿನ ಹುಟ್ಟಿದ ಸಾಹಿತಿಗಳು : ಅ.ರಾ. ಸೇತೂರಾಂ ರಾವ್ – ೧೯೩೧ ಶಂಕರ ಪಾಟೀಲ – ೧೯೨೪ ಮಹಮದ್ ಶೌಕತ್ ಅಲಿ – ೧೯೩೩

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top