Loading Events

« All Events

ಕೆ.ಟಿ. ಗಟ್ಟಿ

July 22

೨೨..೧೯೩೮ ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಹುಟ್ಟಿದ್ದು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ೧೯೩೮ ರ ಜುಲೈ ೨೨ ರಂದು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಕ್ರಮಬದ್ಧವಾಗಿ ಕಲಿತದ್ದು ಎಂಟನೆಯ ತರಗತಿಯವರೆಗೆ ಮಾತ್ರ. ಎಸ್‌.ಎಸ್‌.ಎಲ್‌.ಸಿ.ಯಲ್ಲಿ ಉತ್ತೀರ್ಣರಾದ ನಂತರ ಕಾಸರಗೋಡಿನ ಚಳುವಳಿಯಲ್ಲಿ ಬಾಗಿ. ನಂತರ ಪಿ.ಯು. ಹಾಗೂ ಬಿ.ಎ. ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದರು. ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದದ್ದು ಮಾಯಿಪ್ಪಾಡಿಯ ಸರಕಾರಿ ಬೇಸಿಕ್‌ ಟ್ರೈನಿಂಗ್‌ ಶಾಲೆಯಿಂದ ಮತ್ತು ತಲಚೇರಿಯ ಸರಕಾರಿ ಟ್ರೈನಿಂಗ್‌ ಕಾಲೇಜಿನಿಂದ ಒಂದು ವರ್ಷದ ಬಿ.ಎಡ್‌. ಪದವಿ. ಶಿಕ್ಷಕರಾಗಿ ಸೇರಿದ್ದು ಕಾಸರಗೋಡಿದ ಸರಕಾರಿ ಪ್ರೌಢಶಾಲೆಯಲ್ಲಿ. ಬಿಡುವಿನ ವೇಳೆಯಲ್ಲಿ ಖಾಸಗಿಯಾಗಿ ಕುಳಿತು ಕೇರಳ ವಿಶ್ವವಿದ್ಯಾಲಯದಿಂದ ಪಡೆದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ. ೧೯೬೮ ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆಯಲ್ಲಿ ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ನಂತರ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ನಿಯುಕ್ತರಾಗಿ ಇಥಿಯೋಪಿಯಾದಲ್ಲಿರುವಾಗಲೇ ಲಂಡನ್ನಿನ ಟ್ರಿನಿಟಿ ಕಾಲೇಜಿನಿಂದ ಇಂಗ್ಲಿಷ್‌ ಕಲಿಕೆಯಲ್ಲಿ ಡಿಪ್ಲೊಮ ಮತ್ತು ಆಕ್ಸ್‌ಫರ್ಡಿನ ಕಾಲೇಜ್‌ ಆಫ್‌ ಪ್ರಿಸೆಪ್ಟರ್ಸ್‌ನಿಂದ ಪಡೆದ ಡಿಪ್ಲೊಮ. ೧೯೫೭ ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ಯಕ್ಷಗಾನ ಪ್ರಿಯರಾದ ಧೂಮಪ್ಪನವರು ಕೂಡ್ಲು ಯಕ್ಷಗಾನ ನಾಟಕ ಮಂಡಲಿ (ಮಂಗಳೂರು)ಯೊಡನೆ ಊರೂರು ಸುತ್ತುತ್ತಿದ್ದು, ಸಿಕ್ಕಿದ ಪುಸ್ತಕಗಳನ್ನು ಮನೆಗೆ ತಂದಿಡುತ್ತಿದ್ದುದು ಗಟ್ಟಿಯವರಿಗೆ ಓದಲು ಪ್ರಚೋದನೆ ನೀಡಿತು. ಮತ್ತು ತಾಯಿಯವರು ಮನೆಯಲ್ಲಿ ಹಾಡುತ್ತಿದ್ದ ತುಳು-ಮಲಯಾಳಂ ಪಾಡ್ದನಗಳು ಸಾಹಿತ್ಯದಲ್ಲಿ ಮತ್ತಷ್ಟು ಆಸಕ್ತಿ ಬೆಳೆಯುವಂತೆ ಮಾಡಿದವು. ಇವರ ಮೊದಲ ಕಾದಂಬರಿ ‘ಶಬ್ದಗಳು’ ಧಾರಾವಾಹಿಯಾಗಿ ಸುಧಾವಾರ ಪತ್ರಿಕೆಯಲ್ಲಿ ಪ್ರಕಟವಾದುದು ೧೯೭೬ ರಲ್ಲಿ. ಸುಧಾ ವಾರಪತ್ರಿಕೆಯ ಪ್ರಸಾರದ ಸಂಖ್ಯೆಯನ್ನೂ ಹೆಚ್ಚುಮಾಡಿದ್ದಲ್ಲದೆ ಜನಪ್ರಿಯ ಕಾದಂಬರಿ ಎನಿಸಿ ನಾಲ್ಕು ಮುದ್ರಣಗಳನ್ನೂ ಕಂಡ ಖ್ಯಾತಿಗೂ ಪಾತ್ರವಾಯಿತು.ನಂತರ ೧೯೭೮ ರಲ್ಲಿ ಬರೆದ ‘ಸಾಫಲ್ಯ’ ಕಾದಂಬರಿಯೂ ಸೇರಿ ೨೦೦೪ ರ ವರೆಗೆ ಸುಮಾರು ೧೪ ಕಾದಂಬರಿಗಳು ಸುಧಾ ವಾರಪತ್ರಿಕೆಯೊಂದರಲ್ಲಿಯೇ ಧಾರಾವಾಹಿಯಾಗಿ ಪ್ರಕಟಗೊಂಡಿವೆ. ಬಹುಶಃ ಒಬ್ಬ ಲೇಖಕರದ್ದೇ ಇಷ್ಟೊಂದು ಕಾದಂಬರಿಗಳು ಧಾರಾವಾಹಿಯಾಗಿ ಒಂದೇ ಪತ್ರಿಕೆಯಲ್ಲಿ ಪ್ರಕಟವಾಗಿರುವುದೂ ದಾಖಲೆಯೇ. ಇದಲ್ಲದೆ ತುಷಾರ ಮಾಸ ಪತ್ರಿಕೆಯಲ್ಲಿ ‘ಮನೆ’, ಕಾಮಯಜ್ಞ ಕಾದಂಬರಿಗಳು, ಗೆಳತಿ ಪತ್ರಿಕೆಯಲ್ಲಿ ‘ಪೂಜಾರಿ’, ಕಾದಂಬರಿ ಪತ್ರಿಕೆಯಲ್ಲಿ ‘ಅವಿಭಕ್ತರು’, ತರಂಗ ವಾರ ಪತ್ರಿಕೆಯಲ್ಲಿ ‘ನಿರಂತರ’, ಮಲ್ಲಿಗೆ ಮಾಸಪತ್ರಿಕೆಯಲ್ಲಿ ‘ನವಂಬರ್ ೧೦’, ಕರ್ಮವೀರ ವಾರಪತ್ರಿಕೆಯಲ್ಲಿ ‘ಸನ್ನಿವೇಶ’, ಪ್ರಜಾವಾಣಿ ದಿನಪತ್ರಿಕೆಯಲ್ಲಿ ‘ಕಾರ್ಮುಗಿಲು’, ಮಂಗಳ ವಾರಪತ್ರಿಕೆಯಲ್ಲಿ ‘ರಸಾತಳ’ ಮುಂತಾದವುಗಳು ವಿವಿಧ ಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿದ್ದೂ ಸೇರಿ ರಚಿಸಿದ ಕಾದಂಬರಿಗಳು ಸುಮಾರು ೪೬. ವಿದೇಶಕ್ಕೆ ಹೊರಡುವ ಮುನ್ನ ಬರೆದ ಕಾದಂಬರಿ ‘ಶಬ್ದಗಳು’. ಇಥಿಯೋಪಿಯಾದಲ್ಲಿದ್ದಾಗ ಒಮ್ಮೆ ನಡೆದ ಘಟನೆ ಇವರ ಮನಸ್ಸಿನ ಮೇಲೆ ಅಚ್ಚೊತ್ತಿತು. ಇವರು ಪ್ರೀತಿಯಿಂದ ಬೆಳೆಸಿದ ನಿಂಬೆಗಿಡವನ್ನೂ ಕುರಿಯೊಂದು ಬಂದು ತಿನ್ನತೊಡಗಿದಾಗ ಕೋಪಗೊಂಡು ಓಡಿಸಿದ ಮೇಲೆ ಗಟ್ಟಿಯವರೆಗೆ ಕಾಡಿದ ಪ್ರಶ್ನೆ. ಬೇರೆಯವರ ದೇಶ, ಅವರ ಮಣ್ಣು, ಅವರ ಗಿಡ, ಅವರ ಕುರಿ-ನಾನು ಓಡಿಸಿದ್ದು ಸರಿಯಾ? ಅನುಭವಿಸಿದ ಈ ಗೊಂದಲದಿಂದ ಹುಟ್ಟಿ ಬಂದದ್ದೇ ‘ಅರಗಿನ ಅರಮನೆ’ ಕಾದಂಬರಿ. ಸ್ವದೇಶಕ್ಕೆ ಮರಳಿಬಂದ ಗಟ್ಟಿಯವರು (೧೯೮೨) ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ, ದ.ಕ. ಜಿಲ್ಲೆಯ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡಿದ್ದಾರೆ. ಆಗಾಗ್ಗೆ ಪತ್ರಿಕೆಗೆ ಬರೆದ ಕಥೆಗಳು ‘ಮನುಷ್ಯನ ವಾಸನೆ ಮತ್ತು ಇತರ ಕಥೆಗಳು’, ‘ನೀಲಿ ಗುಲಾಬಿ ಮತ್ತು ಇತರ ಕಥೆಗಳು’, ‘ಭೂಗತ ಮತ್ತು ಇತರ ಕಥೆಗಳು’,‘ವಿಶ್ವ ಸುಂದರಿ ಮತ್ತು ಇತರ ಕಥೆಗಳು’ ಹಾಗೂ ‘ಪ್ರೀತಿ ಎಂಬ ಮಾಯೆ ಮತ್ತು ಇತರ ಕಥೆಗಳು’ ಎಂಬ ಸಂಕಲನಗಳಲ್ಲಿ ಸೇರಿವೆ. ಶಿಕ್ಷಣ, ಸಾಹಿತ್ಯ, ಸಾಮಾಜಿಕ ಈ ವಿಷಯಗಳ ಬಗ್ಗೆ ಚಿಂತನೆಗೆ ಹಚ್ಚುವ ಹಲವಾರು ಮೌಲಿಕ ಲೇಖನಗಳು ಆಗಾಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ‘ಮೂರನೆಯ ಧ್ವನಿ’ (ಸಾಹಿತ್ಯ ಚಿಂತನ), ‘ನಿನ್ನೆ ನಾಳೆಗಳ ನಡುವೆ’ (ಸಾಮಾಜಿಕ ಚಿಂತನ), ‘ನಮ್ಮ ಬದುಕಿನ ಪುಟಗಳು’, ನಮ್ಮೊಳಗಿನ ಆಕಾಶ, ನಾಲ್ಕುದಿಕ್ಕು ಮತ್ತು ಅಂತರಾಳದ ತಂತಿ (ವೈಚಾರಿಕ ಲೇಖನಗಳ ಕೃತಿಗಳು) ಪ್ರಕಟಗೊಂಡಿವೆ. ‘ಝೇಂಕಾರದ ಹಕ್ಕಿ’ ಇವರ ಕವನಗಳ ಸಂಗ್ರಹವು ೧೯೯೪ ರಲ್ಲಿ ಪ್ರಕಟಗೊಂಡಿದ್ದು ಇಂಗ್ಲಿಷ್‌ ಗೀತೆಗಳ ಅನುವಾದ ‘ನನ್ನ ಪ್ರೇಮದ ಹುಡುಗಿ’ (೨೦೦೧) ರಲ್ಲಿ ಪ್ರಕಟವಾಗಿದೆ. ತಂದೆತಾಯಿಯಿಂದ ಬಂದ ಬಳುವಳಿಯಾಗಿ ರಂಗಭೂಮಿಯ ಬಗ್ಗೆ ವಿಶೇಷ ಒಲವಿದ್ದು ರಚಿಸಿದ ನಾಟಕ ಕೃತಿಗಳೆಂದರೆ ನಾಟ್ಕ, ಕೆಂಪುಕಾಗೆ, ಸತ್ಯಕ್ಕೆ ಜಯ, ಕುರುಡರು, ನಗರ ಪರ್ವ, ಬೊಂಬೆಯಾಟ, ಜುಜುಬಿದೇವರ ಜುಗಾರಿ ಮುಂತಾದ ೧೮ ನಾಟಕಗಳು ಪ್ರಕಟವಾಗಿದ್ದು ಇವುಗಳಲ್ಲಿ ಕೆಲವು ಬಾನುಲಿಯಲ್ಲೂ ಪ್ರಸಾರಗೊಂಡು ಜನಪ್ರಿಯ ನಾಟಕಗಳೆನಿಸಿವೆ. ಪ್ರೌಢರಿಗಷ್ಟೇ ಅಲ್ಲದೆ ಮಕ್ಕಳಿಗಾಗಿಯೂ ೩೦ ನಾಟಕಗಳನ್ನೂ ರಚಿಸಿದ್ದು ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಪಂಜಾಬಿ ಮುಂತಾದ ಭಾಷೆಗಳಿಗೂ ಅನುವಾದಗೊಂಡಿವೆ. ಹಲವಾರು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ದುಡಿದಿದ್ದರ ಅನುಭವದಿಂದ ಭಾಷಾಶಾಸ್ತ್ರಕ್ಕೆ ಸಂಬಂಧಿಸಿದಂತೆ ಭಾಷ್ಯಾಧ್ಯಯನ, ವ್ಯಾಕರಣ, ಇಂ%B

Details

Date:
July 22
Event Category: