ಡಾ. ಜಿ.ಎಸ್. ಶಿವರುದ್ರಪ್ಪ

Home/Birthday/ಡಾ. ಜಿ.ಎಸ್. ಶಿವರುದ್ರಪ್ಪ
Loading Events
This event has passed.

೭-೨-೧೯೨೬ ಶಿವಮೊಗ್ಗ ಜಿಲ್ಲೆಯ ಈಸೂರಿನಲ್ಲಿ ಜನಿಸಿದರು. ತಂದೆ ಶಾಂತವೀರಪ್ಪ, ತಾಯಿ ವೀರಮ್ಮ. ಪ್ರಾರಂಭಿಕ ಶಿಕ್ಷಣ ಹೊನ್ನಾಳಿ, ರಾಮಗಿರಿ, ಬೆಲಗೂರು. ಪ್ರೌಢಶಾಲೆಗೆ ಸೇರಿದ್ದು ದಾವಣಗೆರೆ. ಕಾಲೇಜು ವಿದ್ಯಾಭ್ಯಾಸ ಮೈಸೂರು. ಬಿ.ಎ. ಆನರ್ಸ್‌ ಮತ್ತು ಎಂ.ಎ. ಪದವಿಯಲ್ಲಿ ಮೂರು ಸುವರ್ಣ ಪದಕ. ೧೯೪೯ರಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕ ವೃತ್ತಿ ಆರಂಭ. ೧೯೬೩-೬೬ರವರೆಗೆ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರ ಹುದ್ದೆ. ೧೯೬೬ರಿಂದ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿ ೧೯೮೬ರಲ್ಲಿ ನಿವೃತ್ತರಾದರು. ನಿವೃತ್ತಿಯ ನಂತರವೂ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಪೀಠದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ. ಕೇಂದ್ರ ಸಾಹಿತ್ಯ ಅಕಾಡಮಿ ಸದಸ್ಯರಾಗಿ, ರಾಜ್ಯಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ ರಾಷ್ಟ್ರೀಯ ಕವಿ ಸಮ್ಮೇಳನ, ತುಮಕೂರಿನ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿ, ಮದರಾಸಿನ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ, ೧೯೯೨ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ. ಇವರು ರಚಿಸಿದ ಸಾಹಿತ್ಯದ ನಾನಾ ಪ್ರಕಾರದ ಕೃತಿಗಳು ಮಹತ್ವಪೂರ್ಣ. ಕವನಸಂಕಲನ- ಸಾಮಗಾನ, ಚೆಲುವು-ಒಲವು, ದೇವಶಿಲ್ಪ, ತೀರ್ಥವಾಣಿ, ಕಾರ್ತೀಕ, ದೀಪದ ಹೆಜ್ಜೆ, ಅನಾವರಣ, ತೆರೆದ ದಾರಿ, ಗೋಡೆ, ಕಾಡಿನ ಕತ್ತಲಲ್ಲಿ, ಪ್ರೀತಿ ಇಲ್ಲದ ಮೇಲೆ. ವ್ಯಕ್ತಿಚಿತ್ರ-ಶಿವಯೋಗಿ ಸಿದ್ಧರಾಮ; ಪ್ರವಾಸಕಥನ-ಮಾಸ್ಕೋದಲ್ಲಿ ೨೨ ದಿನ, ಗಂಗೆಯ ಶಿಖರಗಳಲ್ಲಿ, ಅಮೆರಿಕದಲ್ಲಿ ಕನ್ನಡಿಗ. ಸಾಹಿತ್ಯ ವಿಮರ್ಶೆ/ಕಾವ್ಯ ಮೀಮಾಂಸೆ-ವಿಮರ್ಶೆಯ ಪೂರ್ವ ಪಶ್ಚಿಮ, ಪರಿಶೀಲನ, ಗತಿಬಿಂಬ, ಪ್ರತಿಕ್ರಿಯೆ, ನವೋದಯ, ಅನುರಣನ, ಸೌಂದರ‍್ಯ ಸಮೀಕ್ಷೆ, ಮಹಾಕಾವ್ಯದ ಸ್ವರೂಪ, ಕಾವ್ಯಾರ್ಥ ಚಿಂತನ ಮುಂತಾದುವು. ಸಂದ ಪ್ರಶಸ್ತಿಗಳು-ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಜ್ಯಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ನಾಡೋಜ ಪ್ರಶಸ್ತಿ, ರಾಷ್ಟ್ರಕವಿ ಪ್ರಶಸ್ತಿ ಮುಂತಾದುವು. ಸ್ನೇಹಕಾರ್ತೀಕ, ಹಣತೆ ಇವರಿಗೆ ಅರ್ಪಿಸಿದ ಅಭಿನಂದನ ಗ್ರಂಥಗಳು.   ಇದೇ ದಿನ ಹುಟ್ಟಿದ ಸಾಹಿತಿಗಳು : ಶಿ.ಗು. ಶಾಂತವೀರಪ್ಪ – ೧೯೨೬ ನಾರಾಯಣ ಬಲ್ಲಾಳ – ೧೯೩೭ ಗೋವಿಂದರಾಜು ಸಿ.ಎ. – ೧೯೪೩ ನಾ.ಬ. ಗೋರೋಜನ – ೧೯೪೩ ದೊಡ್ಡ ರಂಗೇಗೌಡ – ೧೯೪೬ ಜಿ.ಎನ್. ಉಪಾಧ್ಯೆ – ೧೯೬೭

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top