
ಡಾ. ಪಿ.ವಿ. ನಾರಾಯಣ
December 18
೧೮-೧೨-೧೯೪೨ ವಚನ ಸಾಹಿತ್ಯದಲ್ಲಿ ಆಳವಾದ ಅಧ್ಯಯನ ನಡೆಸಿ ವೈಜ್ಞಾನಿಕ ದೃಷ್ಟಿಕೋನವನ್ನು ರೂಢಿಸಿಕೊಂಡು ಕೃತಿ ರಚಿಸಿರುವ ಪಿ.ವಿ. ನಾರಾಯಣರವರು ಹುಟ್ಟಿದ್ದು ಬೆಂಗಳೂರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಪ್ರಾರಂಭಿಕ ಶಿಕ್ಷಣ ಬೆಂಗಳೂರು. ತುಮಕೂರಿನ ಸರಕಾರಿ ಕಾಲೇಜಿನಿಂದ ಬಿ.ಎ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧ ಮಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ. ರೂರಲ್ ಇನ್‌ಸ್ಟಿಟ್ಯೂಟ್ ಹನುಮನಮಟ್ಟಿ, ವಿದ್ಯೋದಯ ಹೈಸ್ಕೂಲ್ ಟಿ. ನರಸೀಪುರ, ಆದೋನಿಯ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ಬನುಮಯ್ಯ ಕಾಲೇಜು, ಮುಂತಾದುವುಗಳಲ್ಲಿ ಪಡೆದ ಬೋಧನಾನುಭವ. ಬೆಂಗಳೂರು ವಿಶ್ವವಿದ್ಯಾಲಯದ ಎಂ.ಎ. (ಸಂಜೆ) ತರಗತಿ, ಶೇಷಾದ್ರಿಪುರಂ ಕಾಲೇಜಿನಲ್ಲಿ ಎಂ.ಎ. ತರಗತಿಗಳಿಗೆ ಬೋಧನೆ. ವಿಜಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತಿ. ಹಲವಾರು ಸಂಘ ಸಂಸ್ಥೆಗಳೊಡನೆ ಒಡನಾಟ. ಕನ್ನಡ ಶಕ್ತಿ ಕೇಂದ್ರದ ಪ್ರಧಾನ ಸಂಚಾಲಕರಾಗಿ, ಸಾಹಿತಿ ಕಲಾವಿದರ ಬಳಗದ ಸಂಚಾಲಕರಾಗಿ, ಕನ್ನಡ ಚಳವಳಿಯಲ್ಲಿ ಪ್ರಮುಖ ಪಾತ್ರ, ಬಿ.ಎಂ.ಶ್ರೀ ಪ್ರತಿಷ್ಠಾನದೊಡನೆ ಸಕ್ರಿಯ ಸಂಬಂಧ. ಸಾಹಿತ್ಯ ಸಂಬಂ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ. ಏಳು ಮಂದಿ ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಮಾರ್ಗದರ್ಶನ, ಯಶಸ್ವಿ ಪದವಿ. ಹಲವಾರು ಕೃತಿಗಳ ರಚನೆ. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ ೧೬ ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ ೫ ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ ೧೨ ಕೃತಿಗಳು. ಕಾದಂಬರಿಗಳು-ಸಾಮಾನ್ಯ, ಅಂತರ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಸೇರಿ ಒಟ್ಟು ೪೫ಕ್ಕೂ ಹೆಚ್ಚು ಪ್ರಕಟಿತ. ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ‘ಶೋಧನೆ’ ಸುಧಾ ವಾರ ಪತ್ರಿಕೆಯ ಕಾದಂಬರಿ ಸ್ಪರ್ಧೆ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು. ಇದೇ ದಿನ ಹುಟ್ಟಿದ ಸಾಹಿತಿಗಳು : ರಾಜಲಕ್ಷ್ಮಿ ಎನ್.ರಾವ್ – ೧೯೩೪ ರತ್ನಾಕರ ಶೆಟ್ಟಿ – ೧೯೪೫ ಎಂ. ಕೃಷ್ಣೇಗೌಡ – ೧೯೫೮