ಡಿ.ಕೆ. ಭೀಮಸೇನರಾವ್

Home/Birthday/ಡಿ.ಕೆ. ಭೀಮಸೇನರಾವ್
Loading Events
This event has passed.

೮.೪.೧೯೦೪ ೨೯.೧೧.೧೯೬೯ ಹುಟ್ಟಿದ್ದು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದಿದ್ದಿಗಿ ಗ್ರಾಮದಲ್ಲಿ. ತಂದೆ ಕೇಶವರಾವ್, ತಾಯಿ ಲಕ್ಷ್ಮೀಬಾಯಿ. ಪ್ರಾರಂಭಿಕ ಶಿಕ್ಷಣ ಅಯ್ಯನವರ ಮಠದಲ್ಲಿ. ನಿಜಾಮರ ಆಡಳಿತಕ್ಕೊಳಪಟ್ಟಿದ್ದರಿಂದ ನಿರ್ವಾಹವಿಲ್ಲದೆ ಉರ್ದುಭಾಷೆ ಕಲಿಕೆ. ೧೯೨೨ರಲ್ಲಿ ಉರ್ದು ಮಾಧ್ಯಮದಲ್ಲಿ ಮೆಟ್ರಿಕ್ಯುಲೇಷನ್ ಪಾಸು. ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿ. ಕನ್ನಡದಲ್ಲಿ ಪ್ರಥಮ ಸ್ಥಾನ. ಇದರಿಂದ ಉತ್ತೇಜಿತರಾಗಿ ಸ್ನಾತಕೋತ್ತರ ಪದವಿ ಪಡೆಯಲು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇರುವ ಬಯಕೆ. ೧೯೨೭ರಲ್ಲಿ ಮೈಸೂರು ವಿ.ವಿ.ದಲ್ಲಿ ಕನ್ನಡ ಎಂ.ಎ. ತರಗತಿ ಪ್ರಾರಂಭ. ೧೯೨೯ರಲ್ಲಿ ಎಂ.ಎ. ಪದವಿ. ಇವರ ಸಹಪಾಠಿಗಳು ಕುವೆಂಪು, ಡಿ.ಎಲ್.ಎನ್. ಕೆ. ವೆಂಕಟರಾಮಪ್ಪ, ಎನ್. ಅನಂತರಂಗಾಚಾರ್ ಮುಂತಾದವರು. ಪದವಿ ಗಳಿಸಿದ ನಂತರ ಉದ್ಯೋಗಕ್ಕಾಗಿ ಪುನಃ ಉಸ್ಮಾನಿಯ ವಿ.ವಿ.ದ ಕನ್ನಡ ವಿಭಾಗದಲ್ಲಿ ಬೋಧಕರಾಗಿ, ಸಂಶೋಧಕರಾಗಿ ವೃತ್ತಿ ಆರಂಭ. ಮುಂದೆ ಅಲ್ಲೇ ಪ್ರಾಧ್ಯಾಪಕರಾಗಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ. ತಮ್ಮ ಅಕಾರಾವಯಲ್ಲಿ ಕನ್ನಡ ವಿಭಾಗವನ್ನು ಅಭಿವೃದ್ಧಿ ಪಡಿಸಿದ್ದಲ್ಲದೆ ಹೈದರಾಬಾದಿನ ಆರೇಳು ಕಾಲೇಜುಗಳಲ್ಲಿ ಕನ್ನಡ ಅಧ್ಯಯನಕ್ಕಾಗಿ ಮಾಡಿದ ವ್ಯವಸ್ಥೆ. ಗುಲಬರ್ಗಾ, ಯಾದಗಿರಿ, ರಾಯಚೂರು ಪ್ರದೇಶಗಳಲ್ಲಿ ಕನ್ನಡ ವ್ಯಾಸಂಗಕ್ಕಾಗಿ ಏರ್ಪಾಡು, ಹಳೆಯ ಹೈದ್ರಾಬಾದು ಕರ್ನಾಟಕದಲ್ಲಿ  ಕನ್ನಡ ಕೀರ್ತಿಯನ್ನು ಬೆಳಗಿಸಲು ಭಾಷಾ ಸೇವಕರಾಗಿ ದುಡಿಮೆ. ಕನ್ನಡ ಸಾಹಿತ್ಯವನ್ನು ಬೆಳೆಸಲು ಹೈದರಾಬಾದ್ ಕರ್ನಾಟಕ ಸಾಹಿತ್ಯ ಮಂದಿರದ ಅಧ್ಯಕ್ಷರಾಗಿ ಸೇವೆ. ಇದಕ್ಕೊಂದು ಸ್ವಂತ ಕಟ್ಟಡ ಕಟ್ಟಿಸುವಲ್ಲಿ ಶ್ರಮ ಸಫಲ. ಸಂಘದ ಆಶ್ರಯದಲ್ಲಿ ಹಲವಾರು ಕೃತಿ ಪ್ರಕಟಣೆ. ಪ್ರತಿವರ್ಷ ನಾಡಹಬ್ಬದ ಆಚರಣೆ. ನೃಪತುಂಗ ಶಾಲೆ, ಶಾರದಾ ಕನ್ಯಾಶಾಲೆಗಳನ್ನು ಒಂದೇ ಆಡಳಿತಕ್ಕೊಳಪಡಿಸಿ ಅಧ್ಯಕ್ಷರಾದರು. ನಿಘಂಟು ಸಂಪಾದಕ ಮಂಡಲಿಯಲ್ಲಿ ಕೊನೆವರೆಗೂ ದುಡಿತ, ಕನ್ನಡ ವಿಶ್ವಕೋಶದ ಪ್ರಥಮ ಸಂಪಾದಕ ಮಂಡಲಿಯ ಸದಸ್ಯರು. ರಾಯಚೂರಿನಲ್ಲಿ ನಡೆದ ಹೈದರಾಬಾದ್ ಕರ್ನಾಟಕ ಪ್ರಾಂತದ ಸಾಹಿತ್ಯ ಸಮ್ಮೇಳನದ ಪ್ರಥಮಾಧ್ಯಕ್ಷರು. ಇವರ ಸೇವೆಗೆ ಮೈಸೂರು ಸರ್ಕಾರದಿಂದ ರಾಜ್ಯಪ್ರಶಸ್ತಿ, ಇವರ ಮತ್ತೊಂದು ಆಸಕ್ತಿಯ ಕಾರ‍್ಯಕ್ಷೇತ್ರವೆಂದರೆ ಹಸ್ತಪ್ರತಿ ಸಂಗ್ರಹಣೆ ಮತ್ತು ಶಾಸನ ಸಂಗ್ರಹಣೆ. ಇವರು ಸಂಗ್ರಹಿಸಿದ ಹಸ್ತಪ್ರತಿಗಳನ್ನು ಉಸ್ಮಾನಿಯ ವಿಶ್ವವಿದ್ಯಾಲಯದ ಗ್ರಂಥ ಭಂಡಾರದಲ್ಲಿ ಇಂದಿಗೂ ನೋಡಬಹುದು. ಕನ್ನಡಕ್ಕಾಗಿ ದುಡಿಯುತ್ತಲೇ ನಿಧನರಾದದ್ದು ೨೯.೧೧.೧೯೬೯ರಲ್ಲಿ.   ಇದೇ ದಿನ ಹುಟ್ಟಿದ ಸಾಹಿತಿಗಳು : ಅಂಕಪ್ಪ ಚೆನ್ನಬಸಪ್ಪ – ೧೯೨೧ ಸಿ.ಪಿ.ಕೆ. – ೧೯೩೯ ಎಚ್. ಮುನಿಶಾಮಪ್ಪ – ೧೯೬೨

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top