ದೇವಲಕುಂದ ವಾದಿರಾಜ್

Home/Birthday/ದೇವಲಕುಂದ ವಾದಿರಾಜ್
Loading Events
This event has passed.

೨೦-೩-೧೯೨೦ ೨೨-೨-೧೯೯೩ ಸಾಂಪ್ರದಾಯಕ ಶಿಲ್ಪಕಲೆಗೆ ವಿದೇಶದಲ್ಲೂ ಗೌರವ ತಂದುಕೊಟ್ಟ ವಾದಿರಾಜರು ಹುಟ್ಟಿದ್ದು ಕುಂದಾಪುರ ತಾಲ್ಲೂಕಿನ ದೇವಲಕುಂದದಲ್ಲಿ. ತಂದೆ ಸುಬ್ಬರಾಯಭಟ್ಟರದು ಅರ್ಚಕ ವೃತ್ತಿ, ತಾಯಿ ಲಕ್ಷ್ಮಮ್ಮ. ತಂದೆಯ ಅಕಾಲ ಮರಣ. ಹರಿದು ತಿನ್ನುವ ಬಡತನ. ಮಗನೊಡನೆ ಸೇರಿದ್ದು ಮೈಸೂರು. ಶಾಲೆಗೆ ಚಕ್ಕರ್ ಹಾಕಿ ಚಿತ್ರ ಬಿಡುಸುವಲ್ಲಿ ಆಸಕ್ತಿ. ನಂಜನಗೂಡಿಗೆ ಸ್ಥಳಾಂತರ. ಅಲ್ಲೂ ದೇವಸ್ಥಾನದ ಚಿತ್ರಕಲೆಯಿಂದ ಆಕರ್ಷಿತ. ಮೈಸೂರಿನ ಚಾಮರಾಜೇಂದ್ರ ಚಿತ್ರಕಲಾ ಶಾಲೆಗೆ ಸೇರಿಸಲು ಸಲಹೆ. ಕೆತ್ತನೆ ಕೆಲಸದಲ್ಲಿ ದೊರೆತ ತರಬೇತಿ. ಮಲೇರಿಯಾ ಜ್ವರದಿಂದ ತಾಯಿಯ ಮರಣ. ೧೨ರ ವಯಸ್ಸಿನ ಹುಡುಗನಿಗೆ ಹೇಳತೀರದ ಬವಣೆ. ಶಿವಮೊಗ್ಗ ಹೊಟೇಲೊಂದರ ಮಾಣಿ ಕೆಲಸ. ಧಾರವಾಡ, ಗದಗು, ಹುಬ್ಬಳ್ಳಿ ಸುತ್ತಿ ಮತ್ತೆ ಮೈಸೂರಿಗೆ. ಅನಾರೋಗ್ಯ, ಆಸ್ಪತ್ರೆವಾಸ, ತೊಳೆಯಲು ಕೊಟ್ಟ ಸಾಬೂನಿನಲ್ಲೂ ತೋರಿದ ಕೆತ್ತನೆ ಕೆಲಸ, ಡಾ. ಸಂಪತ್ತೈಂಗಾರ್ ರಿಂದ ದೊರೆತ ಪ್ರೋತ್ಸಾಹ. ಡಾಕ್ಟರಿಗೆ ಬೆಂಗಳೂರಿಗೆ ವರ್ಗ, ಅವರ ಜೊತೆ ಬೆಂಗಳೂರಿಗೆ. ಕೆತ್ತನೆ ಕೆಲಸದಂಗಡಿಯಲ್ಲಿ ದೊರೆತ ಉದ್ಯೋಗ, ಸಂಗೀತಗಾರ ಎ. ಸುಬ್ಬರಾವ್ ಪರಿಚಯ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಕೃತಿ ರಚನೆ. ಅಖಿಲ ಭಾರತ ಕರಕುಶಲ ಮಂಡಲಿ ವಿನ್ಯಾಸ ಕೇಂದ್ರದಲ್ಲಿ ಮರದ ಕೆತ್ತನೆ ವಿಭಾಗದಲ್ಲಿ ದೊರೆತ ಕೆಲಸ. ಹಲವಾರು ಕೃತಿ ರಚನೆ. ಆನಂದಮಯಿ ಆಶ್ರಮಕ್ಕೆ ಗಂಧದ ಮಂಟಪ, ಕೈಗಾರಿಕೋದ್ಯಮಿ ನವಲ್ ಕಿಶೋರ್ ರವರಿಗೆ ದಂತದ ಕೃಷ್ಣನ ವಿಗ್ರಹ, ಕೋಲ್ಕತ್ತಾದ ಬಿರ್ಲಾ ಆಸ್ಪತ್ರೆಗೆ ವಿಷ್ಣು ವಿಗ್ರಹ. ಎಂ.ವೈ. ಘೋರ್ಪಡೆಯವರ ಅರಮನೆಯ ದೇವಸ್ಥಾನಕ್ಕೆ ಹಲವಾರು ವಿಗ್ರಹ. ಗ್ರೇಟ್ ಬ್ರಿಟನ್ ನಿಂದ ಭಾರತ್ ಉತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ. ವಿದೇಶಿ ಪತ್ರಿಕೆಗಳಿಂದ ಪ್ರಶಂಸೆ. ಇಂಗ್ಲೆಂಡ್, ಸ್ಕಾಟ್ಲೆಂಡ್, ವೇಲ್ಸ್, ಗ್ಲಾಸ್ಗೋ ಮುಂತಾದೆಡೆ ಕೃತಿ ಪ್ರದರ್ಶನ. ರಾಷ್ಟ್ರದ ಅನೇಕ ದೇವಸ್ಥಾನ, ವಸ್ತು ಸಂಗ್ರಹಾಲಯಗಳಲ್ಲಿ ಖಾಸಗಿ ಗೃಹಗಳಲ್ಲಿ ನೂರಾರು ಶಿಲ್ಪಕಲಾಕೃತಿಗಳು, ಕರಕುಶಲ ಮಂಡಲಿ ಉಪಾಧ್ಯಕ್ಷರಾಗಿ ನೇಮಕ, ಕರಕುಶಲ ಕೇಂದ್ರದ ರೂವಾರಿ, ಕರ್ನಾಟಕ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ರಾಷ್ಟ್ರಾಧ್ಯಕ್ಷರ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು.   ಇದೇ ದಿನ ಹುಟ್ಟಿದ ಕಲಾವಿದರು : ಕೆಂಪೇಗೌಡ – ೧೯೫೧ ಪ್ರೇಂ ಕುಮಾರ್ ಟಿ.ಎಚ್. – ೧೯೬೮

* * *

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top