ನ್ಯಾ.ಕೋ. ಚನ್ನಬಸಪ್ಪ

Home/Birthday/ನ್ಯಾ.ಕೋ. ಚನ್ನಬಸಪ್ಪ
Loading Events
This event has passed.

೨೭-೨-೧೯೨೨ ನಿವೃತ್ತ ನ್ಯಾಯಾಧಿಶರಾದ ಕೋ. ಚೆನ್ನಬಸಪ್ಪನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಆಲೂರಿನ ಸಮೀಪದ ಕಾನಮಡುಗು. ತಂದೆ ವೀರಣ್ಣ. ತಾಯಿ ಬಸಮ್ಮ. ಪ್ರೈಮರಿ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ ಕಾನಮಡುಗು ಹಳ್ಳಿಯಲ್ಲಿ. ನಂತರ ಪ್ರೌಢಶಾಲೆಗೆ ಬಳ್ಳಾರಿ. ಕಾಲೇಜು ವಿದ್ಯಾಭ್ಯಾಸ ಅನಂತಪುರ. ಆಗ ದೇಶಕ್ಕೆ ಹಬ್ಬಿದ್ದ ಸ್ವಾತಂತ್ರ್ಯದ ಬಿಸಿ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ  ವಿದ್ಯಾರ್ಥಿ ಮುಖಂಡರಾಗಿ ಭಾಗಿ. ಬಂಧನ, ಸೆರೆಮನೆವಾಸ. ಬಿಡುಗಡೆಯ ನಂತರ ಬಿ.ಎ. ಪದವಿ. ಬೆಳಗಾವಿ ಕಾಲೇಜಿನಿಂದ ಲಾ ಪದವಿ. ಚರಿತ್ರೆ ಮತ್ತು ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ. ೧೯೪೬ರಲ್ಲಿ ಮುಂಬಯಿ ಹೈಕೋರ್ಟಿನಲ್ಲಿ ವಕೀಲರಾಗಿ ನೋಂದಣಿ. ಬಳ್ಳಾರಿ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲಿ ವೃತ್ತಿ ಆರಂಭ. ೧೯೬೫ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ನೇಮಕ. ನಿವೃತ್ತಿಯ ನಂತರ ಪುನಃ ಕರ್ನಾಟಕ ಹೈಕೋರ್ಟಿನಲ್ಲಿ  ವಕೀಲಿ ವೃತ್ತಿ. ಹಲವಾರು ಕಾರ್ಮಿಕ ಸಂಘಗಳ, ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಅಧ್ಯಕ್ಷರ ಜವಾಬ್ದಾರಿ. ೧೯೭೧ರ ಸುಮಾರಿನಲ್ಲೆ ಅರವಿಂದಾಶ್ರಮದ ಒಡನಾಟ. ಕರ್ನಾಟಕ ವಿಭಾಗದ ಅರವಿಂದಾಶ್ರಮ ಪ್ರಾರಂಭ. ಅಮೆರಿಕದಲ್ಲಿ ನಡೆದ ವೀರಶೈವ ವಾರ್ಷಿಕ ಅವೇಶನ, ಅರವಿಂದಾಶ್ರಮದ ಕಾರ‍್ಯಕ್ರಮಗಳಲ್ಲಿ ಪ್ರಮುಖ ಪಾತ್ರ. ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ನಾಡಿನ ಪ್ರಮುಖ ಪತ್ರಿಕೆಗಳಿಗೆಲ್ಲಾ ಬರೆದ ಅಪಾರ ಬರಹ. ಕನ್ನಡಪ್ರಭ ಪತ್ರಿಕೆಯಲ್ಲಿ ನ್ಯಾಯಾಧಿಶರ ನೆನಪುಗಳು ಮತ್ತು ಪ್ರಜಾಮತ ವಾರಪತ್ರಿಕೆಯಲ್ಲಿ ನ್ಯಾಯಾಲಯದಲ್ಲಿ  ಸತ್ಯ ಕಥೆಗಳು ಪ್ರಕಟಿತ. ಪ್ರಕಟಿತ ಕೃತಿಗಳೇ ಸುಮಾರು ೮೦ಕ್ಕೂ ಮಿಕ್ಕು. ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಮೊದಲಾದ ೫ ಕವನ ಸಂಕಲನಗಳು. ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಮುಂತಾದ ೬ ಕಥಾ ಸಂಕಲನಗಳು. ಹಿಂದಿರುಗಿ ಬರಲಿಲ್ಲ, ನೊಗದ ನೇಣು, ರಕ್ತತರ್ಪಣ, ಬೇಡಿ ಕಳಚಿತು-ದೇಶ ಒಡೆಯಿತು ಮೊದಲಾದ ೯ ಕಾದಂಬರಿಗಳು. ಶ್ರೀ ಅರವಿಂದರು, ಶ್ರೀ ಮಾತಾಜಿ, ಶ್ರೀ ಮೃತ್ಯುಂಜಯಸ್ವಾಮಿಗಳು ಮೊದಲಾದ ೮ ಜೀವನಚರಿತ್ರೆಗಳು. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ದೃಢಪ್ರತಿಜ್ಞೆ, ಕುವೆಂಪು ವೈಚಾರಿಕತೆ ಮೊದಲಾದ ವಿಮರ್ಶಾ ಗ್ರಂಥಗಳು. ರಕ್ಷಾಶತಕಂ, ಶ್ರೀ ಕುವೆಂಪು ಭಾಷಣಗಳು, ಬಿನ್ನವತ್ತಳೆಗಳು ಸಂಪಾದಿತ ಕೃತಿಗಳು. ಸಂದ ಪ್ರಶಸ್ತಿಗಳು-ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಸ.ಸ.ಮಾಳವಾಡ ಪ್ರಶಸ್ತಿ, ಚಿಂತನಶ್ರೀ ಪ್ರಶಸ್ತಿ, ಸಂ.ಶಿ. ಭೂಸನೂರ ಮಠ ಪ್ರಶಸ್ತಿ, ಕನ್ನಡಶ್ರೀ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ ಮುಂತಾದವು.   ಇದೇ ದಿನ ಹುಟ್ಟಿದ ಸಾಹಿತಿಗಳು : ಎಸ್.ಎಂ. ಅಂಗಡಿ – ೧೯೧೫ ವಿಶ್ವಂಭರ ಉಪಾಧ್ಯ – ೧೯೨೭ ಶಾಂತಾ ಪ್ರಭುಶಂಕರ – ೧೯೩೩ ರೋಹಿಣಿ ಹರಿಹರೇಶ್ವರ – ೧೯೪೮ ಗಜಾನನ ಶರ್ಮ – ೧೯೫೪ ಲಲಿತಾ ಸಿದ್ಧಬಸವಯ್ಯ – ೧೯೫೫ ಟಿ.ಎಸ್. ಅಂಬುಜಾ – ೧೯೫೫

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top