ಬೆನಗಲ್ ರಾಮರಾವ್

Home/Birthday/ಬೆನಗಲ್ ರಾಮರಾವ್
Loading Events
This event has passed.

೩.೪.೧೮೭೬ ೮.೫.೧೯೪೩ ಬಹುಭಾಷಾ ಕೋವಿದ ಬೆನಗಲ್ ರಾಮರಾಯರು ಜನಿಸಿದ್ದು ಮಂಗಳೂರಿನಲ್ಲಿ. ತಂದೆ ವಕೀಲಿ ವೃತ್ತಿ ಮಾಡುತ್ತಿದ್ದ ಮಂಜುನಾಥಯ್ಯನವರು. ಪ್ರಾಥಮಿಕ ಶಿಕ್ಷಣ ಮೂಲ್ಕಿ, ಮಂಗಳೂರು ಮತ್ತು ಪುತ್ತೂರಿನಲ್ಲಿ. ಮಂಗಳೂರಿನ ಸರ್ಕಾರಿ ಕಾಲೇಜು ಮತ್ತು ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೮೯೬ರಲ್ಲಿ ಬಿ.ಎ. ಪದವಿ ಗಳಿಸಿದರು. ಕನ್ನಡದ ಬಗ್ಗೆ ಅಪಾರ ಒಲವು. ಪದವಿ ಗಳಿಸಿದ ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿ ೧೮೯೭-೧೯೦೦ರವರೆಗೆ. ಮದರಾಸಿನಲ್ಲಿದ್ದಾಗಲೇ ತೆಲುಗು ಮತ್ತು ಕನ್ನಡವನ್ನು ಪ್ರಮುಖ ವಿಷಯವನ್ನಾಗಿ ಆರಿಸಿಕೊಂಡು ಮದರಾಸು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ. ನಂತರ ಮೈಸೂರಿನ ನಾರ್ಮಲ್ ಸ್ಕೂಲಿನಲ್ಲಿ ಕನ್ನಡ ಅಧ್ಯಾಪಕರಾಗಿ ಎರಡು ವರ್ಷ. ೧೯೦೨ರಿಂದ ಎಂಟು ವರ್ಷಕಾಲ ಮುಂಬಯಿ ಸರಕಾರದ ಭಾಷಾಂತರ ಇಲಾಖೆಯಲ್ಲಿ ಕೆಲಸ. ಬೆನಗಲ್ ರಾಮರಾಯರದು ಬಹುಮುಖ ಪ್ರತಿಭೆ. ಹಲವಾರು ಭಾಷೆಗಳಲ್ಲಿ ಪ್ರಾವೀಣ್ಯತೆ. ತೆಲುಗು, ಸಂಸ್ಕೃತ, ಬಂಗಾಳಿ, ಮರಾಠಿ ಭಾಷೆಗಳ ಪರಿಚಯ-ಆ ಭಾಷೆಗಳಿಂದ ಕನ್ನಡಕ್ಕೆ ಹಲವಾರು ಕೃತಿಗಳ ಭಾಷಾಂತರ. ತೆಲುಗಿನಿಂದ ‘ಕಲಹ ಪ್ರಿಯ’ ಎಂಬ ನಾಟಕ. ಸತ್ಯರಾಜನ ಪೂರ್ವದೇಶದ ಯಾತ್ರೆಗಳು ಎಂಬ ಕಾದಂಬರಿ, ಮರಾಠಿಯಿಂದ ‘ರಮಾ ಮಾಧವ’ ಎಂಬ ಕಾದಂಬರಿ, ಸಂಸ್ಕೃತದಿಂದ ‘ದೂತಾಂಗ’ ಎಂಬ ನಾಟಕ, ಬಂಗಾಳಿಯಿಂದ ‘ಕೃಷ್ಣಕುಮಾರಿ’ ಎಂಬ ಕಾದಂಬರಿ ಮುಂತಾದುವುಗಳು ಅವರ ಭಾಷಾಂತರದ ಪ್ರಮುಖ ಕೃತಿಗಳು. ಸ್ವತಂತ್ರ ಕೃತಿಗಳು-ಇರಾವತಿ, ಚಿಕ್ಕ ಕಥೆಗಳು, ಮಹನೀಯರ ಚರಿತ್ರೆಮಾಲೆ. ಇತಿಹಾಸದ ಬಗ್ಗೆಯೂ ಇವರಿಗೆ ಅಪಾರ ಒಲವು. ತಂಜಾವೂರು ಮನೆತನದ ಕೈಫಿಯತ್ತು, ಹಳೇಬೀಡು ಕೈಫಿಯತ್ತು, ಹೊಳೆ ಹೊನ್ನೂರು ಕೈಫಿಯತ್ತು ಮುಂತಾದ ಅನೇಕ ಕೈಫಿಯತ್ತುಗಳ ರಚನೆ. ಕೈಫಿಯತ್ತುಗಳ ರಾಮರಾಯರೆಂದೇ ಪ್ರಸಿದ್ಧಿ ಪಡೆದವರು. ಇತರರೊಡನೆಯೂ ಸೇರಿ ಹಲವಾರು ಗ್ರಂಥಗಳನ್ನು ಸಂಪಾದಿಸಿದ್ದಾರೆ. ಪಾನ್ಯಂ ಸುಂದರ ಶಾಸ್ತ್ರಿಯವರೊಡಗೂಡಿ ಸಿದ್ಧಪಡಿಸಿದ ‘ಪುರಾಣನಾಮ ಚೂಡಾಮಣಿ’ ಒಂದು ಉತ್ಕೃಷ್ಟ ಆಕರ ಗ್ರಂಥ. ಬೆಳಗಾವಿಯಲ್ಲಿ ೧೯೨೫ರಲ್ಲಿ ನಡೆದ ಹನ್ನೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿ ಕನ್ನಡ ಜನತೆ ಗೌರವ ತೋರಿತು. ಇವರು ನಿಧನರಾದದ್ದು ಮೇ ೮, ೧೯೪೩ರಲ್ಲಿ.   ಇದೇ ದಿನ ಹುಟ್ಟಿದ ಸಾಹಿತಿಗಳು : ಜಿನದತ್ತ ದೇಸಾಯಿ – ೧೯೩೩ ಕಲ್ಲನಗೌಡ ಫಕೀರಗೌಡ ಪಾಟೀಲ – ೧೯೦೫ ಗುರುಲಿಂಗ ಕಾಪಸೆ – ೧೯೨೮ ರಾ.ಗೌ – ೧೯೪೨ ಕೃಷ್ಣ ಆಲನ ಹಳ್ಳಿ – ೧೯೪೭-೪.೧.೧೯೮೯ ಬಾನು ಮುಷ್ತಾಕ್ – ೧೯೪೮

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top