ಸದಾಶಿವ ಒಡೆಯರ

Home/Birthday/ಸದಾಶಿವ ಒಡೆಯರ
Loading Events

೭-೮-೧೯೨೪ ೧೧-೯-೧೯೯೬ ಶಿಕ್ಷಣ ಕ್ಷೇತ್ರದ ದಕ್ಷ, ಪ್ರಾಮಾಣಿಕ ಆಡಳಿತಾಕಾರಿ, ವಿಶ್ವವಿದ್ಯಾಲಯದ ಕುಲಸಚಿವ, ಸಾಹಿತಿ, ಸದಾಶಿವ ಒಡೆಯರರವರು ಹುಟ್ಟಿದ್ದು ಧಾರವಾಡದ ಮರೇವಾಡ ಗ್ರಾಮದಲ್ಲಿ. ತಂದೆ ಶಿವದೇವ ಒಡೆಯರ, ತಾಯಿ ಗಿರಿಜಾದೇವಿ. ಪ್ರಾರಂಭಿಕ ಶಿಕ್ಷಣ ಹಾವೇರಿ. ಆಟದಲ್ಲಿ ಸದಾಮುಂದು. ಬ್ಯಾಡಮಿಂಟನ್, ಟೇಬಲ್ ಟೆನಿಸ್ ಪ್ರಿಯವಾದ ಆಟಗಳು. ಕಾಲೇಜು ವಿದ್ಯಾಭ್ಯಾಸ ಧಾರವಾಡ. ೧೯೪೫ರಲ್ಲಿ ಬಿ.ಎ. (ಆನರ್ಸ್) ಪದವಿ. ೧೯೪೭ರಲ್ಲಿ ಬೆಳಗಾವಿಯ ಲಾ ಕಾಲೇಜಿನಿಂದ ಎಲ್.ಎಲ್.ಬಿ. ಪದವಿ. ೧೯೪೮ರಲ್ಲಿ ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ. ಉದ್ಯೋಗಕ್ಕಾಗಿ ಸೇರಿದ್ದು ಅಹಮದಾಬಾದಿನ ಗುಜರಾತ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಎರಡು ವರ್ಷ ಸೇವೆ. ೧೯೪೯ರಲ್ಲಿ ಸ್ಥಾಪಿತವಾದ ಕರ್ನಾಟಕ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ರಿಜಿಸ್ಟ್ರರ್ ಆಗಿ ನೇಮಕ. ೧೯೫೧ರಲ್ಲಿ ಸಹಾಯಕ ಕುಲಸಚಿವ, ೧೯೫೭ರಲ್ಲಿ ಕುಲಸಚಿವರ ಹುದ್ದೆ. ೧೯೬೭-೬೮ರಲ್ಲಿ ಉಪಕುಲಪತಿಗಳಾಗಿ ಕಾರ‍್ಯನಿರ್ವಹಣೆ. ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾದ ಮೇಲೆ ಅಮೆರಿಕಾ ಸರಕಾರದ ಆಹ್ವಾನದ ಮೇರೆಗೆ ಶೈಕ್ಷಣಿಕ, ಸಾಂಸ್ಕೃತಿಕ ಸಂಸ್ಥೆಗಳ ಭೇಟಿ. ಬ್ರಿಟಿಷ್ ಕೌನ್ಸಿಲ್ ಆಹ್ವಾನದ ಮೇರೆಗೆ ಇಂಗ್ಲೆಂಡ್ ಭೇಟಿ. ಇದಲ್ಲದೆ ಫ್ರಾನ್ಸ್, ಜರ್ಮನಿ, ಇಟಲಿ, ಸ್ವಿಡ್ಜರ್‌ಲ್ಯಾಂಡ್, ಈಜಿಪ್ಟ್ ದೇಶಗಳಿಗೂ ಭೇಟಿ. ಅಲ್ಲಿನ ಆಡಳಿತ ಪದ್ಧತಿ, ವಿಧಾನಗಳ ಅಳವಡಿಕೆ. ವಿಶ್ವವಿದ್ಯಾಲಯದ ಉನ್ನತಿಗೆ ಪಟ್ಟ ಶ್ರಮ. ಆಡಳಿತ ಮಧ್ಯೆ ರಚಿಸಿದ ಕೆಲವು ಕೃತಿಗಳು. ‘ಜೀವನ ಕಲೆ’ ಪ್ರಬಂಧ ಸಂಕಲನ, ರವೀಂದ್ರ ದರ್ಶನ, ಇದು ಜೀವನ ಮತ್ತೆರಡು ಚಿಂತನ ಶೀಲ ಸಂಕಲನಗಳಿಂದ ಬರವಣಿಗೆಗೆ ತಂದ ಕಾಂತಿ. ನಾಟಕಗಳು-ಜೋನ್ ಆಫ್ ಆರ್ಕ್ ಮತ್ತು ಇತರ ನಾಟಕಗಳು. ಇಂಗ್ಲಿಷ್‌ನಲ್ಲಿ THE LIGHT OF OTHER DAYS, TRAILING CLOUD. ಸಂಪಾದಿತ- BASAVESHWARA COMMEMORATION VOLUME. ರವೀಂದ್ರ ದರ್ಶನ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಐವತ್ತನೇ ಹುಟ್ಟುಹಬ್ಬಕ್ಕೆ ಹಿತೈಷಿಗಳು ಅರ್ಪಿಸಿದ ಗೌರವಗ್ರಂಥ ‘ಸವಿಸಂಚಯ.’   ಇದೇ ದಿನ ಹುಟ್ಟಿದ ಸಾಹಿತಿಗಳು : ಗಮಕಿ ಎಂ. ರಾಘವೇಂದ್ರರಾವ್ – ೧೯೧೪-೩೦.೧೧.೯೯ ಹ.ಕ. ರಾಜೇಗೌಡ – ೧೯೩೮ ಆನೇಕಲ್ ಕೃಷ್ಣಮೂರ್ತಿ – ೧೯೪೯ ಗಾಯತ್ರಿನಾವಡ – ೧೯೫೪ ಲೋಕೇಶ ಅಗಸನ ಕಟ್ಟೆ – ೧೯೫೮ ಲತಾ ರಾಜಶೇಖರ್ – ೧೯೫೪ ವಿಜಯಲಕ್ಷ್ಮಿ ಶ್ಯಾನ್‌ಭೋಗ್ – ೧೯೬೩

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

Go to Top