Loading Events

« All Events

  • This event has passed.

ಸುರೇಂದ್ರದಾನಿ

August 17, 2023

೧೭-೮-೧೯೨೫ ಸಾಹಿತಿ, ಪತ್ರಕರ್ತ ಸುರೇಂದ್ರದಾನಿಯವರು ಹುಟ್ಟಿದ್ದು ಧಾರವಾಡ. ತಂದೆ ಭೀಮರಾವ್, ತಾಯಿ ಗಂಗಾಬಾಯಿ. ಪ್ರಾರಂಭಿಕ ಶಿಕ್ಷಣ ಧಾರವಾಡ, ಬಾಗಲಕೋಟೆ, ಬಿಜಾಪುರ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಅರ್ಥಶಾಸ್ತ್ರದಲ್ಲಿ ಬಿ.ಎ. ಪದವಿ. ಬ್ರಿಟಿಷರ ಗುಲಾಮಗಿರಿಯೊಳಗೆ ನೌಕರಿ ಮಾಡಬಾರದೆಂಬ ಛಲ. ಮೊಹರೆ ಹನುಮಂತ ರಾಯರು ಕರೆದುಕೊಟ್ಟ ಉದ್ಯೋಗ-ಸೇರಿದ್ದು ಪತ್ರಿಕೋದ್ಯಮ. ಇದಕ್ಕೆ ಸೇರಲು ಗಾಂಜಿಯವರ ‘ಹರಿಜನ’ ಪತ್ರಿಕೆಯ ಪ್ರೇರಣೆ. ೧೯೪೭ರಲ್ಲಿ ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ವರದಿಗಾರರಾಗಿ ನೇಮಕ. ನಂತರ ಉಪಸಂಪಾದಕರ ಹುದ್ದೆ. ಬೆಂಗಳೂರಿನಲ್ಲಿ ಸಂಯುಕ್ತ ಕರ್ನಾಟಕ ಆವೃತ್ತಿ ಪ್ರಾರಂಭವಾದಾಗ ಅಲ್ಲಿಗೆ ವರ್ಗ. ಸಂಪಾದಕೀಯ ಲೇಖಕ. ಸಾಪ್ತಾಹಿಕ ವಿಭಾಗದ ಸಂಪಾದಕ. ಮತ್ತೆ ಹುಬ್ಬಳ್ಳಿಗೆ-ಸ್ಥಾನಿಕ ಸಂಪಾದಕರ ಹುದ್ದೆ. ಹುಬ್ಬಳ್ಳಿ-ಬೆಂಗಳೂರು ಎರಡೂ ಮುದ್ರಣಗಳ ಸಂಪಾದಕರ ಹೊಣೆ. ೧೯೮೩ರಲ್ಲಿ ನಿವೃತ್ತಿ. ನಿವೃತ್ತಿಯ ನಂತರವೂ ಒಂದೆಡೆ ಕೂಡದ ಜೀವ. ಗುಲಬರ್ಗಾದಿಂದ ಪ್ರಕಟವಾಗುತ್ತಿದ್ದ ‘ಕೇಸರಿಗರ್ಜನೆ’ ದಿನಪತ್ರಿಕೆಯ ಸಂಪಾದಕರಾಗಿ, ಹುಬ್ಬಳ್ಳಿಯ ಖಾದಿಜಗತ್ತು ಪತ್ರಿಕೆಯ ಸಂಪಾದಕರಾಗಿ, ‘ಪರಿವಾರ’ ದ್ವೈಮಾಸಿಕ ಪತ್ರಿಕೆಯ ಸಂಪಾದಕರಾಗಿ, ಇದೀಗಲೂ ಸುರಾಜ್ಯಪಥ ಪಾಕ್ಷಿಕ ಪತ್ರಿಕೆಯ ಸಂಪಾದಕರ ಜವಾಬ್ದಾರಿ. ಪತ್ರಕರ್ತರ ಹುದ್ದೆಯ ನಡುವೆಯೂ ಸಾಹಿತ್ಯ ಕೃತಿಗಳ ರಚನೆ. ಪತ್ರಿಕಾ ಕ್ಷೇತ್ರಕ್ಕೆ ಸಂಬಂಸಿದ ಹಲವಾರು ಸ್ಮರಣ ಸಂಚಿಕೆಗಳ ಸಂಪಾದಕತ್ವ. ಜೀವನ ಚರಿತ್ರೆ-ಕೌಜಲಗಿ ಹನುಮಂತ ರಾಯರು, ಮೊಹರೆ ಹನುಮಂತರಾಯರು, ಅಮೆರಿಕದ ಪುಲಿಟ್ಜರ್ ಪಾರಿತೋಷಕ ಸ್ಥಾಪಕ ಜೋಸೆಫ್ ಪುಲಿಟ್ಜರ್ ಜೀವನ ಚರಿತ್ರೆ ಕನ್ನಡಾನುವಾದ. ಪ್ರಬಂಧ-ಪತ್ರಿಕಾ ಪ್ರಬಂಧಗಳು. ಇತರ-ಸ್ವಯಂ ಸೇವಕರ ನೆನಪುಗಳು, ಸ್ವಾತಂತ್ರ್ಯಸೇನಾನಿ, ಸಾಧನೆ-ಸವಾಲು, ಧಾರವಾಡ ಜಿಲ್ಲಾ ಸ್ವಾತಂತ್ರ್ಯ ಸಂಗ್ರಾಮ, ವ್ಯಾಸಸೃಷ್ಟಿ-ಕುಮಾರವ್ಯಾಸ ದೃಷ್ಟಿ ಸೇರಿ ೧೫ ಕೃತಿ ಪ್ರಕಟಿತ. ಹಲವು ಸಂಘ ಸಂಸ್ಥೆಗಳೊಡನೆ ಒಡನಾಟ. ಮೊಹರೆ ಹನುಮಂತರಾವ್ ಸ್ಮಾರಕ ಪ್ರತಿಷ್ಠಾನ ಕಾರ‍್ಯದರ್ಶಿ, ಹುಬ್ಬಳ್ಳಿಯ ಕುಮಾರವ್ಯಾಸ ಸೇವಾ ಸಂಘದ ಗೌರವ ಕಾರ‍್ಯದರ್ಶಿ, ಗಾಂ ವಿಚಾರವೇದಿಕೆ ಸ್ಥಾಪಕ ಅಧ್ಯಕ್ಷ, ಗಮಕ ಸಂಗೀತೋತ್ಸವಗಳ ರೂವಾರಿ, ಕುಮಾರವ್ಯಾಸ ಕೃತಿಯ ಬಗ್ಗೆ ವಿಶೇಷ ಆಸಕ್ತಿ, ಭಾರತ ವಾಚನ ವ್ಯಾಖ್ಯಾನ ನಿಪುಣರು. ಹಲವಾರು ಪ್ರಶಸ್ತಿ ಪುರಸ್ಕಾರ-ಕರ್ನಾಟಕ ಪತ್ರಿಕಾ ಅಕಾಡಮಿ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಚ್.ಆರ್. ಕುಲಕರ್ಣಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಜಗನ್ನಾಥರಾವ್ ಟಂಕಸಾಲಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಕರ್ನಾಟಕ ಗಮಕ ಕಲಾಪರಿಷತ್ತಿನ ಗಮಕ ವ್ಯಾಖ್ಯಾನ ಪ್ರಶಸ್ತಿ, ಈ ವರ್ಷದ (೨೦೦೬) ಟಿ.ಎಸ್.ಆರ್. ಪತ್ರಿಕಾ ಪ್ರಶಸ್ತಿ ಮುಂತಾದುವು. ನಿಧನರಾದದ್ದು ೨೮.೩.೨೦೧೦ರಲ್ಲಿ.   ಇದೇ ದಿನ ಹುಟ್ಟಿದ ಸಾಹಿತಿಗಳು : ಜೆ.ಕೆ. ಜಯಮ್ಮ – ೧೯೪೮ ವಿರೂಪಾಕ್ಷ ಪೂಜಾರಯ್ಯ – ೧೯೭೦

Details

Date:
August 17, 2023
Event Category: