Loading Events

« All Events

  • This event has passed.

ಪ್ರೊ. ಜಿ. ವೆಂಕಟಸುಬ್ಬಯ್ಯ

August 23, 2023

೨೩-೮-೧೯೧೩ ನಿಘಂಟು ತಜ್ಞರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಕೈಗೋನಹಳ್ಳಿ. ತಂದೆ ಗಂಜಾಂ ತಿಮ್ಮಣ್ಣಯ್ಯ, ಅರಮನೆಯ ವಿದ್ವಾಂಸರು. ತಾಯಿ ಸುಬ್ಬಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟಿದೂರಿನಲ್ಲಿ. ಹೈಸ್ಕೂಲಿಗೆ ಸೇರಿದ್ದು ಮಧುಗಿರಿ. ಇಂಟರ್ ಮೀಡಿಯೆಟ್ ಮತ್ತು ಆನರ್ಸ್ ಓದಿದ್ದು ಮೈಸೂರು ಮಹಾರಾಜ ಕಾಲೇಜು. ೧೯೩೭ರಲ್ಲಿ ಎಂ.ಎ., ೧೯೩೯ರಲ್ಲಿ ಬಿ.ಟಿ. ಪದವಿ. ಉದ್ಯೋಗಕ್ಕಾಗಿ ಸೇರಿದ್ದು ಮಂಡ್ಯದ ಪುರಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ. ನಂತರ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಬೆಂಗಳೂರಿನ ಹೈಸ್ಕೂಲಿನಲ್ಲಿ ಕೆಲಕಾಲ ಅಧ್ಯಾಪಕರಾಗಿ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಉಪಪ್ರಾಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ೧೯೭೨ರಲ್ಲಿ ಸಂಜೆ ಕಾಲೇಜಿನ ಪ್ರಿನ್ಸಿಪಾಲರಾಗಿ ೧೯೭೩ರಲ್ಲಿ ನಿವೃತ್ತಿ. ಜಿ. ವೆಂ.ಗೆ ಸಾಹಿತ್ಯಾಭಿರುಚಿ ಬಳುವಳಿಯಾಗಿ ಬಂದುದು ಅವರ ತಂದೆಯಿಂದಲೇ. ತಿಮ್ಮಣ್ಣಯ್ಯನವರು ವೇದ ಉಪನಿಷತ್ತುಗಳಲ್ಲಿ ಪಾರಂಗತರು-ಅಷ್ಟಾದಶ ಪುರಾಣಗಳ ಅನುವಾದ ಕಾರ‍್ಯದಲ್ಲಿ ಇವರು ನೀಡಿದ ಸಹಾಯ ಹಸ್ತ. ಆದರೆ ಜಿ. ವೆಂ.ರವರು ಕನ್ನಡ ಸಾಹಿತ್ಯವನ್ನು ಬೆಳೆಸುವ ಕೈಂಕರ್ಯದಲ್ಲಿ ಎಂದೂ ಮುಂದು. ಮಹಾರಾಜಾ ಕಾಲೇಜಿನ ಪ್ರಚಾರೋಪನ್ಯಾಸ ಪುಸ್ತಕ ಮಾಲೆಯಲ್ಲಿ ಹಲವಾರು ಕೃತಿ ರಚನೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ನೀಡಿದ ಸಹಾಯ. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿ. ೧೯೫೪-೫೬ರವರೆಗೆ ಸಾಹಿತ್ಯ ಪರಿಷತ್ತಿನ ಕಾರ‍್ಯದರ್ಶಿ, ೧೯೬೫-೬೯ರವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, ೧೯೬೫-೬೭ರವರೆಗೆ ವಿಶ್ವಕೋಶದ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ಕೌನ್ಸಿಲ್, ಸೆನೆಟ್, ಪಠ್ಯಪುಸ್ತಕ ಸಮಿತಿ, ಪರೀಕ್ಷಾ ಸಮಿತಿಯ ಸದಸ್ಯರಾಗಿ ಸಲ್ಲಿಸಿದ ಸೇವೆ. ರಚಿಸಿದ ಕೃತಿಗಳು, ವಿಮರ್ಶೆ-ನಯಸೇನ, ಅನುಕಲ್ಪನೆ. ಸಂಪಾದಿತ (ಇತರರೊಡನೆ)- ವಿಕಾಸ, ಕಾವ್ಯಲಹರಿ, ಕಾವ್ಯಸಂಪುಟ. ಅನುವಾದ-ಶಂಕರಾಚಾರ‍್ಯ, ಕಬೀರ, ಲಿಂಡನ್ ಜಾನ್ಸನ್. ಮಕ್ಕಳಿಗಾಗಿ-ರಾಬಿನ್‌ಸನ್ ಕ್ರೂಸೋ, ಕವಿಜನ್ನ, ಚಾವುಂಡರಾಯ. ಕಾವ್ಯಕೃತಿಗಳು-ನಳಚಂಪು ಸಂಗ್ರಹ, ಅಕ್ರೂರ ಚರಿತ್ರೆ ಸಂಗ್ರಹ, ಕರ್ಣ ಕರ್ಣಾಮೃತ. ಇತರ-ಕನ್ನಡ ಶಾಸನ ಪರಿಚಯ, ಭಾಷಾಂತರ ಪಾಠಗಳು, ಕಾಲೇಜು ಭಾಷಾಂತರ, ಇಗೋ ಕನ್ನಡ ಸಾಮಾಜಿಕ ನಿಘಂಟು, ೬೦ಕ್ಕೂ ಹೆಚ್ಚು ಕೃತಿ ರಚನೆ. ಹಲವಾರು ಪ್ರಶಸ್ತಿಗಳು-ರಾಜ್ಯೋತ್ಸವ ಪ್ರಶಸ್ತಿ, ಸಾಹಿತ್ಯ ಅಕಾಡಮಿ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಮುದ್ದಣ ಪುರಸ್ಕಾರ, ರಾಜ್ಯ ಪತ್ರಿಕಾ ಅಕಾಡಮಿ ವಿಶೇಷ ಪ್ರಶಸ್ತಿ, ಅಂಕಣಶ್ರೀ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಗೊರೂರು ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಅ.ನ.ಕೃ. ಪ್ರತಿಷ್ಠಾನ ಪ್ರಶಸ್ತಿ ಮುಂತಾದುವು.   ಇದೇ ದಿನ ಹುಟ್ಟಿದ ಸಾಹಿತಿಗಳು : ಜ್ಯೋತಿ. ಹ.ಗ. – ೧೯೨೦ ಲಲಿತಾ ವೃಷಭೇಂದ್ರಸ್ವಾಮಿ – ೧೯೩೦ ಕೆ.ಎಸ್. ಆಮೂರ – ೧೯೩೧ ಎಂ.ವಿ. ಶರ್ಮ ತದ್ದಲಸೆ – ೧೯೪೯

Details

Date:
August 23, 2023
Event Category: